Connect with us

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಮಣ್ಣು ಉಳಿಸಿ ಸಂರಕ್ಷಿಸುವ ಕುರಿತು ಇಶಾ ಫೌಂಡೇಶನ್ ಬೆಂಗಳೂರಿನ ಅರಮನೆ ಆವರಣದಲ್ಲಿ ಇಂದು ಕಾರ್ಯಕ್ರಮವನ್ನು ಆಯೋಜಿಸಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಆನಂತರ ಅವರು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
  2. ಸೂರಿಲ್ಲದವರಿಗೆ ಸೂರು ಕಲ್ಪಿಸಬೇಕೆಂಬ ಉದ್ದೇಶದಿಂದ ಗ್ರಾಮೀಣ ಭಾಗಕ್ಕೆ ಹೋಗಿ ಸಮೀಕ್ಷೆ ಮಾಡಿ ಸೂರಿಲ್ಲದ ಬಡ ಕುಟುಂಬಗಳಿಗೆ ಸ್ಥಳದಲ್ಲಿಯೇ ಕಾರ್ಯಾದೇಶ ನೀಡುವ ಪ್ರಾಯೋಗಿಕ ವಸತಿ ಯೋಜನೆಯನ್ನು ಕಲಬುರಗಿಯಲ್ಲಿಯೂ ಜಾರಿ ಮಾಡಲಾಗುವುದು ಎಂದು ರಾಜ್ಯದ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ವಿ. ಸೋಮಣ್ಣ ಅವರು ತಿಳಿಸಿದ್ದಾರೆ. ಜುಲೈ 31 ರೊಳಗೆ ಸಮೀಕ್ಷೆ ಕಾರ್ಯ ಮುಗಿಸಿ ಆಗಸ್ಟ್ 15 ರೊಳಗೆ ಕೆಲಸ ಪ್ರಾರಂಭಿಸಲಾಗುವುದು ಎಂದು ಕಲಬುರಗಿಯಲ್ಲಿ ಹೇಳಿದ್ದಾರೆ.
  3. ಯಾದಗಿರಿ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದ ಅಭಿವೃದ್ಧಿಯ ದೃಷ್ಟಿಯಿಂದ ನರೇಗಾ ಯೋಜನೆ ಅನು?ನ ಮಾಡುವ ಕೃಷಿ, ತೋಟಗಾರಿಕೆ, ಅರಣ್ಯ ಹಾಗೂ ರೇ? ಇಲಾಖೆಗಳು ನರೇಗಾ ಯೋಜನೆಯ ಒಗ್ಗೂಡಿಸುವಿಕೆ ಅಡಿಯಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ್ ದಿಡ್ಡಿಮನಿ ಹೇಳಿದ್ದಾರೆ.
  4. ಕಳೆದ ಏಪ್ರ್ರಿಲ್-ಮೇ ತಿಂಗಳಲ್ಲಿ ಜರುಗಿದ ದ್ವಿತೀಯ ಪಿಯು ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಶೇಕಡ 61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಶೇಕಡ 68.72ಬಾಲಕಿಯರು, ಶೇಕಡ 55.22 ಬಾಲಕರು ಉತ್ತೀರ್ಣಗೊಂಡಿದ್ದು, ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈಸಾಧಿಸಿದ್ದಾರೆ.
  5. ಕೇಂದ್ರ ಸರಕಾರದಿಂದ ಗ್ರಾಮೀಣ ಅಭಿವೃಧ್ಧಿಗಾಗಿ ಕೋಟ್ಯಾಂತರ ರೂಪಾಯಿಗಳನ್ನು ವಿನಿಯೋಗಿಸಲಾಗುತ್ತಿದೆ. ಒಂದು ಲಕ್ಷಕ್ಕೂ ಹೆಚ್ಚಿನ ಗ್ರಾಮ ಪಂಚಾಯತಿಗಳಿಗೆ ಇಂಟರ್‌ನೆಟ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಚಿತ್ರದುರ್ಗದಲ್ಲಿ ನಿನ್ನೆ ಹೇಳಿದ್ದಾರೆ.
  6. ದಕ್ಷಿಣ ಆಫ್ರಿಕಾ ಹಾಗೂ ಭಾರತದ ನಡುವಿನ 5ನೇ ಹಾಗೂ ಅಂತಿಮ ಟ್ವೆಂಟಿ-20ಕ್ರಿಕೆಟ್ ಟೂರ್ನಿಯ ಅಂತಿಮ ಪಂದ್ಯಾವಳಿ ಇಂದು ಸಂಜೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಕ್ರೀಡಾಂಗಣದ ಸುತ್ತಲೂ ವಾಹನಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿದೆ. ಕ್ರೀಡಾಂಗಣಕ್ಕೆ ಬರುವ ಪ್ರೇಕ್ಷಕರ ವಾಹನಗಳನ್ನು ಕಬ್ಬನ್‌ಪಾರ್ಕ್ ಸುತ್ತಮುತ್ತ ನಿಲುಗಡೆಗೆ ಸಂಚಾರಿ ಪೊಲೀಸರು ಅವಕಾಶ ಕಲ್ಪಿಸಿದ್ದಾರೆ.
  7. ಸ್ಥಳೀಯ ಸಮಸ್ಯೆಗಳು, ಸ್ಥಳೀಯವಾಗಿಯೇ ಬಗೆಹರಿಯಬೇಕು ಇದಕ್ಕಾಗಿ ಸ್ಥಳೀಯ ಸಂಸ್ಥೆಗಳು ಹೆಚ್ಚು ಶಕ್ತಿಯತವಾಗಬೇಕು. ಈ ಉದ್ದೇಶಕ್ಕಾಗಿ ಅಮೃತ ಮಹೋತ್ಸವ ಯೋಜನೆಯಡಿ ಪ್ರತೀ ಗ್ರಾಮ ಪಂಚಾಯತಿಗೆ 2 ಕೋಟಿ ರೂಪಾಯಿ ನೀಡಲಾಗಿದೆ ಮತ್ತು ನಗರೋತ್ಥಾನ ಯೋಜನೆ ಅನುಷ್ಠಾನಕ್ಕಾಗಿ 3 ಸಾವಿರದ 885ಕೋಟಿ ರೂಪಾಯಿ ಮೀಸಲಿಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿತ್ರದುರ್ಗದಲ್ಲಿ ನಿನ್ನೆ ತಿಳಿಸಿದ್ದಾರೆ.
  8. ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಮಂಗಳವಾರದಂದು ನಡೆಯಲಿರುವ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭಾಗವಹಿಸಲಿರುವ ಯೋಗ ಪ್ರದರ್ಶನದಲ್ಲಿ ಪಾಲ್ಗೊಳ್ಳುವಂತೆ ಮೈಸೂರು ರಾಜವಂಶಸ್ಥ ಯಧುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಜಿಲ್ಲಾಡಳಿತ ವಿದ್ಯುಕ್ತವಾಗಿ ಆಹ್ವಾನ ನೀಡಿದೆ.
  9. ಭಾರತೀಯ ಸಂಸ್ಕೃತಿಯು ಸರ್ವಧರ್ಮ ಸಮಭಾವ ಮತ್ತು ವಸುಧೈವ ಕುಟುಂಬಕಂ ಎಂಬ ಮನೋಭಾವದಿಂದ ಪ್ರೇರಿತವಾಗಿದೆ. ವಿಶ್ವಶಾಂತಿ, ಸಮಾನತೆ ಮತ್ತು ಸಹೋದರತ್ವ ಸಾಮರಸ್ಯವನ್ನು ಪ್ರೇರೇಪಿಸುತ್ತದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಪ್ರತಿಪಾದಿಸಿದ್ದಾರೆ.
  10. ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು ಮತ್ತು ನಾಳೆ, ಎರಡು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮುನ್ಸೂಚನೆ ನೀಡಿದೆ.
  11. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ನ ನೇಮಕಾತಿಯಲ್ಲಿ ಅಗ್ನಿವೀರರಿಗೆ ಶೇಕಡ 10ರಷ್ಟು ಮೀಸಲಾತಿ ಕಲ್ಪಿಸಲು ಕೇಂದ್ರ ಗೃಹ ಸಚಿವಾಲಯ ತೀರ್ಮಾನಿಸಿದೆ. ಈ ಕುರಿತು ಕೇಂದ್ರ ಗೃಹ ಸಚಿವಾಲಯ ಟ್ವೀಟ್ ಸಂದೇಶದಲ್ಲಿ ತಿಳಿಸಿದೆ. ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು ಮತ್ತು ಅಸ್ಸಾಂ ರೈಫಲ್ಸ್‌ನ ನೇಮಕಾತಿಯಲ್ಲಿ ಅಗ್ನಿವೀರರ ನೇಮಕಾತಿಗೆ ನಿಗದಿಪಡಿಸಿರುವ ವಯೋಮಿತಿಯಲ್ಲಿ 3 ವರ್ಷಗಳ ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವಾಲಯ ಹೇಳಿದೆ.
  12. ಅಮರನಾಥ ಯಾತ್ರೆಗೆ ಇನ್ನು ಕೇವಲ 15 ದಿನಗಳಿರುವಂತೆಯೇ ಜಮ್ಮು-ಶ್ರೀನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುವ ಯಾತ್ರಾರ್ಥಿಗಳ ಭದ್ರತೆ ಮತ್ತು ಇತರ ವ್ಯವಸ್ಥೆ ಕುರಿತು ಅಧಿಕಾರಿಗಳು ನಿನ್ನೆ ಪರಿಶೀಲಿಸಿದರು. ಯಾತ್ರಾರ್ಥಿಗಳು ಸಾಗುವ ಜಮ್ಮು, ಉದ್ದಾಂಪುರ್ ಮತ್ತು ರಂಬನ್ ಜಿಲ್ಲೆಗಳಲ್ಲಿನ ಭದ್ರತಾ ವ್ಯವಸ್ಥೆ ಸೇರಿದಂತೆ ಇತರ ಸೌಲಭ್ಯಗಳ ಕುರಿತು ಹಿರಿಯ ಅಧಿಕಾರಿಗಳು ಪೊಲೀಸರ ಜತೆಗೂಡಿ ಪರಿಶೀಲನಾ ಕಾರ್ಯ ನಡೆಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

Published

on

ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ‌ಪ್ರಮುಖ ಸುದ್ದಿಗಳು

1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.

4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.

5. ಕತಾರ್‌ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.

6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್‌ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending