Connect with us

ಸಿನಿ ಸುದ್ದಿ

ನಟ ಸಾರ್ವಭೌಮ ಚಿತ್ರದಲ್ಲಿ ಸುದೀಪ್ ಗೆಸ್ಟ್ ರೋಲ್?

Published

on

ಸುದ್ದಿದಿನ ಡೆಸ್ಕ್: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ನಟ ಸಾರ್ವಭೌಮ ಚಿತ್ರದ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಾ?

ಹೀಗೊಂದು ಪ್ರಶ್ನೆ ಗಾಂಧಿನಗರದಲ್ಲಿ ಓಡಾಡುತ್ತಿದೆ. ನಿರ್ದೇಶಕ ಪವನ್ ಒಡೆಯರ್ ಅವರು ನಿನ್ನೆಯಷ್ಟೆ ಸುದೀಪ್ ಅವರನ್ನು ಭೇಟಿಯಾಗಿದ್ದು, ಈ ಚರ್ಚೆಗೆ ಕಾರಣವಾಗಿದೆ.ಸುದೀಪ್ ಅವರು ಪವನ್ ಅವರಿಗಾಗಿ ಅಡುಗೆ ಮಾಡಿ ಬಡಿಸಿದ್ದು, ಒಟ್ಟಿಗೆ ಇರುವ ಚಿತ್ರವನ್ನು ಪವನ್ ಅವರು ಇನ್ಸ ಟಾಗ್ರಾಂ ನಲ್ಲಿ ಹಂಚಿಕೊಂಡಿದ್ದಾರೆ.ಸುದೀಪ್ ಅವರು ನಟ ಸಾರ್ವಭೌಮ ಚಿತ್ರದಲ್ಲಿ ಅತಿಥಿ ಪಾತ್ರದಲ್ಲಿ ನಟಿಸಲಿದ್ದಾರೊ ಅಥವಾ ಹಿನ್ನೆಲೆ ಧ್ವನಿ ನೀಡಲಿದ್ದಾರೊ ಇನ್ನು ಸ್ಪಷ್ಟವಾಗಿಲ್ಲ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಕ್ರೀಡೆ

ಈ ಕ್ಷಣದ ಪ್ರಮುಖ ಸುದ್ದಿಗಳು

Published

on

ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ)

  1. ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು ಕಲುಷಿತಗೊಳ್ಳುವ ಪ್ರಕರಣ ಹೆಚ್ಚಾಗುವ ಸಾಧ್ಯತೆಯಿದೆ. ಹಾಗಾಗಿ ಗ್ರಾಮೀಣ ನೀರು ಸರಬರಾಜು ಇಲಾಖೆಯ ಇಂಜಿನಿಯರ್‌ಗಳು ಕಟ್ಟೆಚ್ಚರ ವಹಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಸೂಚಿಸಿದ್ದಾರೆ.
  2. ಪೆಟ್ರೋಲ್ ಹಾಗೂ ಡೀಸೆಲ್ ಮಾರಾಟ ತೆರಿಗೆ ಏರಿಕೆ ಹಾಗೂ ಇತರ ಬೆಲೆ ಏರಿಕೆ ನೀತಿ ವಿರೋಧಿಸಿ ಬಿಜೆಪಿ ಬೆಂಗಳೂರಿನಲ್ಲಿಂದು ವಿಧಾನಸೌಧದವರೆಗೆ ಸೈಕಲ್ ಜಾಥಾ ನಡೆಸಿತು. ಪಕ್ಷದ ಕಚೇರಿಯಿಂದ ವಿಧಾನಸೌಧದವರೆಗೆ ಜಾಥಾದಲ್ಲಿ ಹೊರಟ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.
  3. ಪ್ರತಿಯೊಂದು ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿ ನಮೂದಿಸಿರುವ ಮಾನದಂಡದಂತೆ ಎಲ್‌ಇಡಿ ದೀಪಗಳನ್ನು ಅಳವಡಿಸದಿದ್ದರೆ ವಾಹನಗಳ ಸವಾರರುಗಳ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ.
  4. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಶುಭ ಕೋರಿದ್ದಾರೆ. ಪ್ರಧಾನಿ ತಮ್ಮ ಸಾಮಾಜಿಕ ಮಾಧ್ಯಮ ಪೋಸ್ಟ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ದೇಶಕ್ಕಾಗಿ ಅಪ್ರತಿಮ ಸೇವೆಯನ್ನು ಸಲ್ಲಿಸುತ್ತಿದ್ದು, ನಮಗೆಲ್ಲರಿಗೂ ಸ್ಫೂರ್ತಿಯಾಗಿದ್ದಾರೆ ಎಂದು ಹೇಳಿದ್ದಾರೆ.
  5. ತಮಿಳುನಾಡಿನ ಕಲ್ಲಕುರಿಚಿಯಲ್ಲಿ ನಡೆದ ಕಳ್ಳಬಟ್ಟಿ ಸರಾಯಿ ದುರಂತದಲ್ಲಿ 33 ಮಂದಿ ಮೃತಪಟ್ಟಿದ್ದು, 60ಕ್ಕೂ ಅಧಿಕ ಮಂದಿ ನಾನಾ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಬಟ್ಟಿ ಸರಾಯಿ ಸೇವಿಸಿ ಅಸ್ವಸ್ಥರಾಗಿದ್ದ ಜನರನ್ನು ಕಲ್ಲಕುರಿಚಿ, ಸೆಲಂ ಮತ್ತು ಪುದುಚೇರಿಯ ಜೆಐಪಿಎಂಇಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ.
  6. ಕೇಂದ್ರ ಸರ್ಕಾರದ ಆದೇಶದಂತೆ 2019ರ ಏಪ್ರಿಲ್‌ಗಿಂತ ಮುಂಚಿತವಾಗಿ ನೋಂದಣಿಯಾಗಿರುವ ವಾಹನಗಳಿಗೆ ಹೈಸೆಕ್ಯೂರಿಟಿ ನೋಂದಣಿ ಫಲಕ ಅಳವಡಿಕೆ ಗಡುವನ್ನು ರಾಜ್ಯ ಸರ್ಕಾರ ಸೆಪ್ಟೆಂಬರ್ 15ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊಲೆಕೇಸ್ | ನಟ ಚಿಕ್ಕಣ್ಣ ಆಯ್ತು ; ಈಗ ಮತ್ತೊಬ್ಬ ನಟ..!

Published

on

ಸುದ್ದಿದಿನಡೆಸ್ಕ್:ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಪ್ರಮುಖ ಆರೋಪಿ ಆಗಿದ್ದಾರೆ. ಈ ಕೇಸ್‌ನ ಆರೋಪಿಗಳು ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ.

ರೇಣುಕಾಸ್ವಾಮಿ ಕೊಲೆ ಮಾಡುವುದಕ್ಕೂ ಮುನ್ನ ಆರ್‌ಆರ್‌ ನಗರದಲ್ಲಿರುವ ರೆಸ್ಟೋರೆಂಟ್‌ನಲ್ಲಿ ಇವರು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ದರ್ಶನ್‌ ಜೊತೆ ಚಿಕ್ಕಣ್ಣ ಕೂಡ ಇದ್ದರು. ಹಾಗೆಯೇ ಚಿಕ್ಕಣ್ಣ ಜೊತೆಗೆ ಮತ್ತೋರ್ವ ಸ್ಯಾಂಡಲ್‌ವುಡ್‌ ನಟ ಇದ್ದರು ಎನ್ನಲಾಗಿದೆ. ದರ್ಶನ್‌ ಆಪ್ತ ಕೂಡ ಇದ್ದರು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ

Published

on

ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.

ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ಇಂದು ಅಂತಾರಾಷ್ಟ್ರೀಯ ಯೋಗ ದಿನ; ಭಾರತ ಸೇರಿ ವಿಶ್ವಾದ್ಯಂತ ಆಚರಣೆ

ಸುದ್ದಿದಿನಡೆಸ್ಕ್:ಅಂತಾರಾಷ್ಟ್ರೀಯ ಯೋಗ ದಿನವನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿನ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಮುಖ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ದಾಲ್ ಸರೋವರದ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ...

ದಿನದ ಸುದ್ದಿ17 hours ago

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ; 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೆ ಸಿಎಂಗೆ ಅಧಿಕಾರ

ಸುದ್ದಿದಿನಡೆಸ್ಕ್:ರಾಜ್ಯ ಸರ್ಕಾರಿ ನೌಕರರ ಬಹು ನಿರೀಕ್ಷಿತ 7ನೇ ವೇತನ ಆಯೋಗದ ಶಿಫಾರಸ್ಸು ಜಾರಿಗೊಳಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಇಂದು ನಡೆದ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ....

ದಿನದ ಸುದ್ದಿ19 hours ago

ಭದ್ರಾ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆ

ಸುದ್ದಿದಿನ,ದಾವಣಗೆರೆ : ದೊಡ್ಡಬಾತಿಯ ಭದ್ರಾ ಸಹಕಾರಿ ಸಕ್ಕರೆ ಕಾರ್ಖಾನೆ ನಿ. ಇದರ ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಯು ಜುಲೈ 4 ರಂದು ಬೆಳಿಗ್ಗೆ 9 ರಿಂದ ಸಂಜೆ...

ದಿನದ ಸುದ್ದಿ20 hours ago

ವಾಹನಗಳಿಗೆ ಕಣ್ಣು ಕುಕ್ಕುವ ಎಲ್‌ಇಡಿ ಬಲ್ಪ್ ಅಳವಡಿಸಿದರೆ ಸೂಕ್ತಕ್ರಮ ; ಪೊಲೀಸ್ ಇಲಾಖೆ

ಸುದ್ದಿದಿನಡೆಸ್ಕ್:ಹೆಚ್ಚು ಬೆಳಕು ಹೊರಹಾಕುವ ಎಲ್‌ಇಡಿ (LED) ದೀಪಗಳನ್ನು ವಾಹನಗಳಿಗೆ ಅಳವಡಿಸಿದರೆ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಆಲೋಕ್ ಕುಮಾರ್, ಐ.ಪಿ.ಎಸ್ , ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು...

ದಿನದ ಸುದ್ದಿ21 hours ago

ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯ ವೇತನ ; ಅರ್ಜಿ ಆಹ್ವಾನ

ಸುದ್ದಿದಿನಡೆಸ್ಕ್: 2024-25 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಗೆ ವೃತ್ತಿ ತರಬೇತಿ ಅವಧಿಯಲ್ಲಿ ಶಿಷ್ಯ ವೇತನ ಪಾವತಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 31...

ದಿನದ ಸುದ್ದಿ21 hours ago

ಪಹಣಿಗೆ ಆಧಾರ್ ಜೋಡಣೆ ; ದಾವಣಗೆರೆ ಜಿಲ್ಲೆಗೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ: ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ ಶೇ...

ದಿನದ ಸುದ್ದಿ1 day ago

ದುಬಾರಿ ಆಯ್ತು ಟೊಮೆಟೋ ; ಕೆಜಿಗೆಷ್ಟು ರೂಪಾಯಿ..?

ಸುದ್ದಿದಿನಡೆಸ್ಕ್:ರಾಜ್ಯದ ಜನರಿಗೆ ಬೆಲೆ ಏರಿಕೆಗಳ ಬಿಸಿ ಈಗಾಗಲೇ ತಟ್ಟಿದೆ. ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತರಕಾರಿ ಬೆಲೆ ಮುಗಿಲು ಮುಟ್ಟಿದ್ದು, ಸಾಮಾನ್ಯ ಜನರು ತರಕಾರಿ ಖರೀದಿ ಮಾಡಲು ಯೋಚನೆ...

ಕ್ರೀಡೆ1 day ago

ಈ ಕ್ಷಣದ ಪ್ರಮುಖ ಸುದ್ದಿಗಳು

ರಾಜ್ಯದಲ್ಲಿ ಜರುಗಿದ ಈ ಕ್ಷಣದ ಕೆಲವು ಸುದ್ದಿಗಳ ಪ್ರಮುಖಾಂಶಗಳು ( ಕನ್ನಡ ನ್ಯೂಸ್; ಕನ್ನಡ ಸುದ್ದಿ) ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆ ವಹಿಸದಿದ್ದರೆ ಕುಡಿಯುವ ನೀರು...

ದಿನದ ಸುದ್ದಿ1 day ago

ದಾವಣಗೆರೆಯಲ್ಲಿ ಹೊಸ ಕೆರೆಗಳ ನಿರ್ಮಾಣ : ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ

ಸುದ್ದಿದಿನ,ದಾವಣಗೆರೆ:ಜಿಲ್ಲೆಯಲ್ಲಿ ಎಲ್ಲಾ ಕೆರೆಗಳು ಸೇರಿ 595 ಕೆರೆಗಳಿದ್ದು ಇನ್ನೂ ಹೊಸದಾಗಿ ಕೆರೆಗಳ ನಿರ್ಮಾಣ ಮಾಡುವ ಮೂಲಕ ಮಳೆಗಾಲದಲ್ಲಿ ನೀರು ನಿಲ್ಲಿಸಿ, ಇಂಗಿಸುವ ಕೆಲಸ ಮಾಡಬೇಕಾಗಿದೆ ಎಂದು ಜಿಲ್ಲಾಧಿಕಾರಿ...

ದಿನದ ಸುದ್ದಿ2 days ago

ನಿನ್ನೆ ನಡೆದ NET ಪರೀಕ್ಷೆ ರದ್ದು..!

ಸುದ್ದಿದಿನಡೆಸ್ಕ್: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA ) ಜೂನ್ 18 (ಮಂಗಳವಾರ) ರಂದು ನಡೆಸಿದ UGC-NET (ಅರ್ಹತಾ ಪರೀಕ್ಷೆ) ಪರೀಕ್ಷೆಯನ್ನು ರದ್ದುಗೊಳಿಸಿದೆ.ರಾಷ್ಟ್ರೀಯ ಸೈಬರ್ ಅಪರಾಧ ಸಮನ್ವಯ ಸಮಿತಿಯಿಂದ...

Trending