Connect with us

ದಿನದ ಸುದ್ದಿ

ಅಜಯ್ ದೇವಗನ್ ಅಧಿಕ ಪ್ರಸಂಗ ; ಸುದೀಪ್ ಹೇಳಿದ್ದು ಸರಿ : ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಖದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರ್ ಸ್ವಾಮಿ ಕಿಡಿಕಾರಿದ್ದಾರೆ.

ಕಿಚ್ಚ ಸುದೀಪ ಮತ್ತು ಅಜಯ್ ದೇವಗನ್ ಅವರ ಸರಣಿ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಅವರು, ದೇಶ ಭಾಷೆಗಳಲ್ಲಿ ಹಿಂದಿಯೂ ಒಂದಷ್ಟೇ. ಕನ್ನಡ, ತೆಲುಗು, ತಮಿಳು, ಮಲೆಯಾಳಂ, ಮರಾಠಿಯಂತೆ ಅದೂ ಒಂದು ಭಾಷೆ ಮಾತ್ರ. ಭಾರತ ಬಹು ಭಾಷೆಗಳ ತೋಟ. ಬಹು ಧರ್ಮ, ಬಹು ಭಾಷೆ, ಬಹು ಸಂಸ್ಕೃತಿಗಳ ಬೀಡು. ಇದನ್ನು ಕದಡುವ ಪ್ರಯತ್ನ ಬೇಡ ಎಂದಿದ್ದಾರೆ.

ಹೆಚ್ಚು ಜನ ಮಾತನಾಡುತ್ತಾರೆ ಎಂದ ಮಾತ್ರಕ್ಕೆ ಹಿಂದಿ ಎಲ್ಲರ ಭಾಷೆಯಲ್ಲ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ಕೇವಲ 9ಕ್ಕಿಂತ ಕಡಿಮೆ ರಾಜ್ಯಗಳಲ್ಲಿ ಹಿಂದಿ 2ನೇ ಭಾಷೆ, ಇಲ್ಲವೇ 3ನೇ ಭಾಷೆ ಅಥವಾ ಅದೂ ಆಗಿಲ್ಲ. ಹೀಗಿದ್ದ ಮೇಲೆ ಅಜಯ್ ದೇವಗನ್ ಮಾತುಗಳು ಎಷ್ಟು ಸರಿ. ಡಬ್ ಮಾಡಬೇಡಿ ಎಂದರೆ ಏನರ್ಥ?

ಮೊದಲಿನಿಂದಲೂ ಕೇಂದ್ರದಲ್ಲಿ ಆಡಳಿತ ನಡೆಸಿದ ‘ ಹಿಂದಿ ರಾಜಕೀಯ ಪಕ್ಷಗಳು ‘ ಪ್ರಾದೇಶಿಕ ಭಾಷೆಗಳನ್ನು ಹೊಸಕಿ ಹಾಕುವ ದುಷ್ಟ ಪ್ರಯತ್ನ ಮಾಡುತ್ತಿವೆ. ಕಾಂಗ್ರೆಸ್ ಆರಂಭ ಮಾಡಿದ ಅನ್ಯಭಾಷೆಗಳ ಹತ್ತಿಕ್ಕುವ ಕೃತ್ಯಗಳನ್ನು ಈಗ ಬಿಜೆಪಿ ಅತಿಯಾಗಿ ಮುಂದುವರಿಸುತ್ತಿದೆ.

ಒಂದೇ ಪಕ್ಷ, ಒಂದೇ ತೆರಿಗೆ, ಒಂದೇ ಭಾಷೆ, ಒಂದೇ ಸರಕಾರ ಎನ್ನುವ ಸರ್ವಾಧಿಕಾರಿ ಮನಃಸ್ಥಿತಿಯ ಬಿಜೆಪಿ ಮತ್ತು ಅದರ ಹಿಂದಿ ರಾಷ್ಟ್ರೀಯವಾದದ ಮುಖವಾಣಿ ರೀತಿಯಲ್ಲಿ ದೇವಗನ್ ಬಡಬಡಿಸಿದ್ದಾರೆ ಎಂದು ಹೇಳಿದ್ದಾರೆ.

ದೇವಗನ್ ಅರ್ಥ ಮಾಡಿಕೊಳ್ಳಬೇಕು. ಕನ್ನಡ ಚಿತ್ರರಂಗ ಇವತ್ತು ಹಿಂದಿ ಚಿತ್ರರಂಗವನ್ನು ಮೀರಿ ಬೆಳೆಯುತ್ತಿದೆ. ಕನ್ನಡಿಗರು ಕೂಡ ಪ್ರೋತ್ಸಾಹಿಸಿದ ಪರಿಣಾಮ ಹಿಂದಿ ಚಿತ್ರರಂಗ ಬೆಳೆದಿದೆ. ಅವರ ‘ಫೂಲ್ ಔರ್ ಕಾಂಟೆ’ ಸಿನಿಮಾ ಬೆಂಗಳೂರಿನಲ್ಲಿ ಒಂದು ವರ್ಷ ಪ್ರದರ್ಶನ ಆಗಿದ್ದನ್ನು ದೇವಗನ್ ಮರೆಯಬಾರದು.

ಶ್ರೇಷ್ಠತೆಯ ವ್ಯಸನ ಭಾರತವನ್ನು ಒಡೆಯುತ್ತಿದೆ. ಬಿಜೆಪಿ ಭಿತ್ತಿದ ಈ ರೋಗ, ಅಂಟುಜಾಡ್ಯದಂತೆ ಹರಡುತ್ತಾ ದೇಶವನ್ನು ಛಿದ್ರಗೊಳಿಸುವಂತಿದೆ. ಭಾರತದ ಏಕತೆಗೆ ಇದು ಅಪಾಯಕಾರಿ. ನಾವು ಕನ್ನಡಿಗರು, ಕರ್ನಾಟಕದಲ್ಲಿ ಕನ್ನಡವೇ ಮೊದಲು ಎಂದು ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರವಾಸೋದ್ಯಮ ಇಲಾಖೆ | ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಅತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಆಹಾರ ಕರಕುಶಲ ಸಂಸ್ಥೆ ಮೈಸೂರು ( Food Craft Institute ) ಮತ್ತು ಹೋಟೆಲ್ ನಿರ್ವಹಣಾ ಸಂಸ್ಥೆ ಬೆಂಗಳೂರು (Institute Of Hotel Management ) ಇವರ ಸಹಯೋಗದಲ್ಲಿ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದ್ದು, ಈ ಸಂಬಂಧ ಅರ್ಹ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಲ್ಟಿ ಕ್ಯೂಸಿನ್ ಕುಕ್ ( Multi Cusine Cook ) ಮತ್ತು ಫುಡ್ ಅಂಡ್ ಬೇವರೇಜ್ ಸರ್ವಿಸ್ ಸ್ಟೇವಾರ್ಡ್ ( Food And Beverage Service Steward ) ನಲ್ಲಿ ತರಬೇತಿ ಪಡೆಯಲು ಇಚ್ಛಿಸುವ ಜಿಲ್ಲೆಯ ಅಭ್ಯರ್ಥಿಗಳು ಮಾ.25 ರಿಂದ ನಗರದ ಉಪವಿಭಾಗಾಧಿಕಾರಿಗಳ ಕಚೇರಿ ಆವರಣದಲ್ಲಿನ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ದ್ವಿ-ಪ್ರತಿಯಲ್ಲಿ ಏಪ್ರಿಲ್ 3 ರೊಳಗೆ ನೇರವಾಗಿ ಇಲಾಖೆಗೆ ಸಲ್ಲಿಸಬೇಕು ಎಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕಿ ಬಿ.ಕಾವ್ಯ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಜಯಲಕ್ಷ್ಮಿ ಕಾರಂತ್‌ ಅವರಿಗೆ ‘ಯಕ್ಷ ಧ್ರುವ’ ರಾಜ್ಯ ಪ್ರಶಸ್ತಿ ಪ್ರದಾನ

Published

on

ಸುದ್ದಿದಿನ,ದಾವಣಗೆರೆ:ಕಲಾಕುಂಚ ಸಾಂಸ್ಕೃತಿಕ ಸಂಸ್ಥೆಯ ಅಂಗ ಸಂಸ್ಥೆ ಕೇರಳ ಗಡಿನಾಡ ಶಾಖೆಯ ಅಧ್ಯಕ್ಷರೂ, ಹಿರಿಯ ಸಾಹಿತಿ, ಯಕ್ಷಗಾನ ವಿದ್ವಾಂಸರು, ತಾಳಮದ್ದಳೆಯ ಅರ್ಥಧಾರಿಗಳಾದ ಜಯಲಕ್ಷ್ಮಿ ಕಾರಂತ್‌ರವರಿಗೆ ಇತ್ತೀಚಿಗೆ ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್‌ನ ಭಂಟರ ಭವನದಲ್ಲಿ ಮಂಗಳೂರಿನ ಯಕ್ಷ ಧ್ರುವ ಪಟ್ಲ ಪೌಂಡೇಷನ್ ಟ್ರಸ್ಟ್ ಹಮ್ಮಿಕೊಳ್ಳಲಾದ ಮಹಿಳಾ ಘಟಕದ 8ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ “ಯಕ್ಷ ಧ್ರುವ” ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು ಎಂದು ಕಲಾಕುಂಚ ಯಕ್ಷರಂಗದ ಸಂಸ್ಥಾಪಕರಾದ ಸಾಲಿಗ್ರಾಮ ಗಣೇಶ್ ಶೆಣೈ ತಿಳಿಸಿದ್ದಾರೆ.

ಹಿರಿಯ, ಕಿರಿಯ ಮಹಿಳೆಯರಿಗೆ, ಮಕ್ಕಳಿಗೆ ಯಕ್ಷಗಾನ ಮದ್ದಳೆ ತರಬೇತಿ, ಮಹಾಭಾರತ, ರಾಮಾಯಣ ಪರಂಪರೆಯ ಪೌರಾಣಿಕ ಪ್ರಸಂಗಗಳ ರಚನೆ, ನಿವೃತ್ತಿ ಶಿಕ್ಷಕಿಯಾದರೂ ಶೈಕ್ಷಣಿಕ ಕಾಳಜಿಯ ಸ್ವಯಂ ಸೇವೆಯೊಂದಿಗೆ, ಕಲೆ, ಸಾಹಿತ್ಯ, ಸಂಗೀತ, ಭಜನೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗಳನ್ನು ಗುರುತಿಸಿ ಶ್ರೀಮತಿ ಜಯಲಕ್ಷ್ಮಿ ಕಾರಂತ್‌ರನ್ನು ಮಹತ್ವಪೂರ್ಣ ಈ ಪ್ರಶಸ್ತಿಗೆ ಭಾಜನಾಗಿದ್ದು ಕಲಾಕುಂಚ ಯಕ್ಷರಂಗ ಸೇರಿದಂತೆ ವಿವಿಧ ಸಂಘಟನೆಗಳ ಸರ್ವ ಸದಸ್ಯರು, ಪದಾಧಿಕಾರಿಗಳು ಅಭಿಮಾನದಿಂದ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ಅಲರ್ಟ್..!

Published

on

  • ಸುನೀತ ಕುಶಾಲನಗರ

ದಿಯ ನೇವರಿಸಿದ ಗಾಳಿ
ಮುದಗೊಳಿಸಿ ಸರಿಯಿತು.
ಜಡಿ ಮಳೆ ಧೋ ಎಂದು
ಸಕಾಲಿಕವಾಗಿ ಸುರಿದು
ಹೊಸ ಹುಟ್ಟು.

ಆದರೇನು?
ಹಿಂಗಾರು, ಮುಂಗಾರು
ಆಗೊಮ್ಮೆ ಈಗೊಮ್ಮೆ
ಪದೇ ಪದೇ ಅದೇ ರಾಗ .

ಸುರಿದು ತುಂತುರು
ಕಾಣಿಸಿ ನಿಂತಿತೆನ್ನುವಾಗ
ಮತ್ತೆ ನಿಲ್ಲದ ಹಠ.

ಮಳೆಗೆ ಈಗ ಮುಟ್ಟು
ನಿಲ್ಲುವ ಸಮಯವೋ?
ಗುಡುಗು,ಮಿಂಚಿನಿಂದ
ಮುಟ್ಟಿನಲ್ಲಿ ಏರುಪೇರೋ ?
ಒಟ್ಟಿನಲ್ಲಿ
ನದಿಯ ಸೋಕಿದ ಗಾಳಿ
ಸಮುದ್ರದೊಳಗೆ ವಿಲೀನ.

ಅಕಾಲಿಕ ಮಳೆ…
ಇಳೆಗೆ ಸೊಂಟ ಬೇನೆ
ನದಿಯ ತಾಕಿದ ಬೆಳದಿಂಗಳು
ಕಿವಿಯಲ್ಲಿ ಉಸುರಿತು

ಹರಿಯುತ್ತಿರುವ ನದಿಯು
ಬೀಸುವ ಗಾಳಿಯು
ತಲೆಯೆತ್ತಿ ನಿಂತ ಬೆಟ್ಟವೂ
ಸ್ಥಾನ ಬದಲಿಸಲು
ಹೊತ್ತು ಬೇಕೆ?
ನಿಲ್ಲದ ಮಳೆಯ ಮುಟ್ಟಿಗೆ
ಸಲ್ಲುವ ಘೋಷಣೆ
ಹೈ ಅಲರ್ಟ್!

ಬದುಕಿನ ಧ್ಯಾನ
ಯೆಲ್ಲೋ, ಆರೆಂಜ್, ರೆಡ್
ಬಣ್ಣಗಳ ಅಲರ್ಟ್ ನಲ್ಲೇ
ಕಳೆದು ಹೋಗುತ್ತಿದೆ.

ಕಾಮನ ಬಿಲ್ಲ ತೋರಿಸಿ
ಸರಿದು ಬಿಡು ಮಳೆಯೇ
ಇಳೆಯ ಉಸಿರು
ಹಸಿರಾಗಲಿ. (ಕವಯಿತ್ರಿ: ಸುನೀತ ಕುಶಾಲನಗರ)

ಕವಯಿತ್ರಿ: ಸುನೀತ ಕುಶಾಲನಗರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending