ದಿನದ ಸುದ್ದಿ
ನಾಡಹಬ್ಬ ದಸರಾಗೆ ಚಾಲನೆ ನೀಡಿದ ಸುಧಾಮೂರ್ತಿ
ಸುದ್ದಿದಿನ ಮೈಸೂರು: ಚಾಮುಂಡಿ ಬೆಟ್ಟದ ಮೇಲೆ ಚಾಮುಂಡೇಶ್ವರಿ ದೇವಿಗೆ ಇಂದು ಬೆಳಗ್ಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಇನ್ಫೋಸಿಸ್ ಅಧ್ಯಕ್ಷೆ ಸುಧಾಮೂರ್ತಿ ದಸರಾ ಹಬ್ಬಕ್ಕೆ ಚಾಲನೆ ನೀಡಿದರು.
ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಕುಮಾರಸ್ವಾಮಿ, ಸುಧಾಮೂರ್ತಿ ಅವರಿಗೆ ಮೈಸೂರಿನ ಪೇಟಾ ತೊಡಿಸಿ ಸನ್ಮಾನಿಸಿದರು. ಆ ಬಳಿಕ ಮಾತನಾಡಿದ ಸುಧಾಮೂರ್ತಿ, ಹಬ್ಬದ ಚಾಲನೆಗಾಗಿ ತಮ್ಮನ್ನು ಆಯ್ಕೆ ಮಾಡಿದ್ದಕ್ಕೆ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ ಅವರು, ವಿಶ್ವಾಸಕ್ಕೆ ಸಮನಾದ ಕೆಲಸ ಮಾಡಲು ಪ್ರಯತ್ನಿಸುತ್ತೇನೆ ಎಂದು ಹೇಳಿದರು.
ದಸರಾ ಸಂಭ್ರಮಕ್ಕಾಗಿ ಮೈಸೂರಿನ ಅರಮನೆ ಭರ್ಜರಿಯಾಗಿ ಅಲಂಕೃತಗೊಂಡಿದ್ದು, ಇಂದು ಬೆಳಗ್ಗೆ ತುಲಾ ಲಗ್ನದ ಶುಭ ಮುಹೂರ್ತದ ವೇಳೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಪೂಜೆ ನೆರವೇರಿದೆ.