ದಿನದ ಸುದ್ದಿ
ಮಂಡ್ಯದ ಮೈಷುಗರ್ ಕಾರ್ಖಾನೆಯಲ್ಲಿ ಕಬ್ಬು ಅರೆಯುವಿಕೆಗೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಚಾಲನೆ
ಸುದ್ದಿದಿನಡೆಸ್ಕ್:ರಾಜ್ಯದ ಸರ್ಕಾರಿ ಒಡೆತನದ ಏಕೈಕ ಸಕ್ಕರೆ ಕಾರ್ಖಾನೆಯಾದ ಮಂಡ್ಯದ ಮೈಷುಗರ್ ಕಾರ್ಖಾನೆಯ ಪ್ರಸಕ್ತ ಸಾಲಿನ ಕಬ್ಬು ಅರೆಯುವಿಕೆಗೆ ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಇಂದು ಚಾಲನೆ ನೀಡಿದರು.
ಬಾಯ್ಲರ್‌ಗೆ ಅಗ್ನಿ ಸ್ಪರ್ಶ ಮಾಡುವ ಮೂಲಕ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ಸ್ಥಗಿತವಾಗಿದ್ದ ಮೈಷುಗರ್ ಕಾರ್ಖಾನೆಯನ್ನು ಪುನರಾರಂಭಗೊಳಿಸಲು ಸರ್ಕಾರದಿಂದ ಕಳೆದ ಸಾಲಿನಲ್ಲಿ 50 ಕೋಟಿ ರೂಪಾಯಿ ನೀಡಲಾಗಿದೆ ಎಂದರು.
2023-24ನೇ ಸಾಲಿನಲ್ಲಿ 2 ಲಕ್ಷದ 41 ಸಾವಿರದ 305 ಮೆಟ್ರಿಕ್ ಟನ್ ಕಬ್ಬು ನುರಿಸಲಾಗಿತ್ತು. ಕಬ್ಬು ಸರಬರಾಜು ಮಾಡಿದ ರೈತರಿಗೆ ಸಂಪೂರ್ಣವಾಗಿ ಹಣವನ್ನು ಪಾವತಿಸಲಾಗಿದೆ. ಈ ಬಾರಿ 2 ಲಕ್ಷ 50 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಹೊಂದಿದ್ದು, ಸದ್ಯ 1 ಲಕ್ಷ 90 ಸಾವಿರ ಮೆಟ್ರಿಕ್ ಟನ್ ಕಬ್ಬು ನುರಿಯಲು ಒಪ್ಪಿಗೆ ದೊರೆತಿದೆ ಎಂದು ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243