ದಿನದ ಸುದ್ದಿ
ಶಾಕಿಂಗ್ ನ್ಯೂಸ್: ಮಹಿಳಾ ಆತ್ಮಹತ್ಯೆಯಲ್ಲಿ ಭಾರತ ಮುಂದೆ
ಸುದ್ದಿದಿನ ಡೆಸ್ಕ್: ಪ್ರಪಂಚದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಮಹಿಳೆಯರಲ್ಲಿ ಶೇ. ೩೭ರಷ್ಟು ಭಾರತೀಯ ಮಹಿಳೆಯರು ಆಗಿದ್ದು, ಭಾರತದಲ್ಲಿ 15-39 ವರ್ಷ ವಯಸ್ಸಿನವರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಕಳೆದ ಕಾಲು ಶತಮಾನದಲ್ಲಿ ಹಿರಿಯ ವಯಸ್ಸಿನವರಲ್ಲಿ ಅತಿ ಹೆಚ್ಚಾಗಿದೆ ಎಂಬ ಆತಂಕಕಾರಿ ಅಂಶ ಬೆಳಕಿಗೆ ಬಂದಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸಹಯೋಗದಲ್ಲಿ ಭಾರತೀಯ ರಾಜ್ಯ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ಐಸಿಎಂಆರ್) ಮತ್ತು ಇಂಡಿಯನ್ ಪಬ್ಲಿಕ್ ಹೆಲ್ತ್ ಫೌಂಡೇಶನ್ ಮತ್ತು ಇನ್ಸ್ಟಿಟ್ಯೂಟ್ ಫಾರ್ ಹೆಲ್ತ್ ಮೆಟ್ರಿಕ್ಸ್ ಮತ್ತು ಇವಾಲ್ಯೂಷನ್ ಸೇರಿದಂತೆ ಭಾರತೀಯ ರಾಜ್ಯ ಮಟ್ಟದ ಡಿಸೀಸ್ ಬರ್ಡನ್ ಇನಿಶಿಯೇಟಿವ್ ನಡೆಸಿದ ಜಂಟಿ ಅಧ್ಯಯನದಿಂದ ಈ ಅಂಶವು ಬೆಳಕಿಗೆ ಬಂದಿದೆ ಎಂದು ದ ಹಿಂದು ವರದಿ ಮಾಡಿದೆ.
ಜಗತ್ತಿಗೆ ಭಾರತವು ಆತ್ಮಹತ್ಯೆ ಪ್ರಕರಣಗಳ ಕೊಡುಗೆ ಹೆಚ್ಚು ಇದೆ. ಆತ್ಮಹತ್ಯೆ ಮರಣ ಪ್ರಮಾಣ (ಎಸ್ಡಿಆರ್) ಭಾರತದಲ್ಲಿ ಅದರ ಸಾಮಾಜಿಕ-ಜನಸಂಖ್ಯಾ ಸೂಚ್ಯಂಕ ಮಟ್ಟಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿದೆ. ಅದರಲ್ಲೂ ವಿಶೇಷವಾಗಿ ಮಹಿಳೆಯರ ಪ್ರಮಾಣ ಹೆಚ್ಚಾಗಿದೆ. ರಾಜ್ಯಗಳ ನಡುವಿನ ಪುರುಷ-ಮಹಿಳೆಯ ಅನುಪಾತ ಹೆಚ್ಚಿಸುತ್ತದೆ ಎಂದು ಅಧ್ಯಯನ ತಿಳಿಸಿದೆ.
ಆತ್ಮಹತ್ಯೆ ತಡೆಗಟ್ಟುವ ಕಾರ್ಯಸೂಚಿಗಳನ್ನು ಭಾರತವು ಅಭಿವೃದ್ಧಿಪಡಿಸಬೇಕಿದೆ. 2016 ರಲ್ಲಿ ವಯಸ್ಸಿನ 15-29 ವರ್ಷ ವಯಸ್ಸಿನವರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಶೇ. 71.2 ಮಹಿಳೆಯರು, ಶೇ. 57.7 ಪುರುಷರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ್ದಾರೆ. ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು, ಮತ್ತು ತೆಲಂಗಾಣ ರಾಜ್ಯಗಳಲ್ಲಿ ಆತ್ಮಹತ್ಯೆ ಪ್ರಕರಣಗಳು ಸಂಭವಿಸುತ್ತಿವೆ ಎಂದು ವರದಿ ಹೇಳಿದೆ.
ಐಸಿಎಂಆರ್ ನಿರ್ದೇಶಕ ಜನರಲ್ ಬಲರಾಮ್ ಭಾರ್ಗವ ಅವರು, 1990ರಿಂದ 2016ರ ವರೆಗೆ ಭಾರತವು ಅತಿ ಹೆಚ್ಚು ಕೊಡುಗೆ ನೀಡಿದೆ. ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರಲ್ಲಿ ಮಹಿಳೆಯರೇ ಅತಿ ಹೆಚ್ಚಾಗಿರುವುದು ಚಿಂತೆಗೀಡು ಮಾಡಿದೆ. ಮಹಿಳೆಯರ ಆತ್ಮಹತ್ಯೆಗಳ ಹಿಂದಿನ ಕಾರಣ ತಿಳಿದುಕೊಳ್ಳುವ ಅನಿರ್ವಾತೆ ಇದೆ. ಭಾರತದಲ್ಲಿ 1990ರಲ್ಲಿ ಶೇ. 25.3ರಿಂದ ಮಹಿಳೆಯರ ಆತ್ಮಹತ್ಯೆ ಪ್ರಮಾಣ 2016ರಲ್ಲಿ ಶೇ. 36.6ಕ್ಕೆ ಏರಿದೆ. ಮತ್ತು ಪುರುಷರಲ್ಲಿ ಶೇ. 18.7ರಿಂದ ಶೇ. 24.3ಕ್ಕೆ ಏರಿದೆ ಎಂದು ಅಧ್ಯಯನ ತಿಳಿಸಿದೆ.

ದಿನದ ಸುದ್ದಿ
ವಸತಿ ಯೋಜನೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.
ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.
2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.
3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.
4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.
5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.
6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.
7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.
8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.
9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್ಗಳ ಸಮತೋಲನಕ್ಕೆ ಬಹಳ ಮುಖ್ಯ.
10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.
ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.
ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.
ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.
ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಆಶ್ರಯ ಯೋಜನೆ – ಆವಧಿ ವಿಸ್ತರಣೆ
-
ದಿನದ ಸುದ್ದಿ5 days agoಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ
-
ಅಂಕಣ5 days agoಕವಿತೆ | ದೇವರ ಹೂವು
-
ದಿನದ ಸುದ್ದಿ7 days agoಗರಿಕೆ ಹುಲ್ಲಿನ ಜ್ಯೂಸ್ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ
-
ದಿನದ ಸುದ್ದಿ3 days agoರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..
-
ದಿನದ ಸುದ್ದಿ3 days agoಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoವಸತಿ ಯೋಜನೆಗೆ ಅರ್ಜಿ ಆಹ್ವಾನ

