Connect with us

ದಿನದ ಸುದ್ದಿ

ಶಿಬಿರಗಳು ವ್ಯಕ್ತಿತ್ವ ಅರಳಿಸುವ ತರಬೇತಿ ತಾಣಗಳು : ಶ್ರೀಮತಿ ಸುಜಾತ ಶಿವಾನಂದಪ್ಪ

Published

on

ಸುದ್ದಿದಿನ, ಮಲೆಬೆನ್ನೂರು : ಮಲೇಬೆನ್ನೂರು ಗ್ರಾಮದ ಜಿಗಳಿ ರಸ್ತೆಯಲ್ಲಿರುವ ರಾಜ ರಾಜೇಶ್ವರಿ ವಿದ್ಯಾಸಂಸ್ಥೆಯ ಆವರಣದಲ್ಲಿ ಮಂಗಳವಾರ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಆಯೋಜಿಸಲಾಗಿತ್ತು.

ವಿದ್ಯಾಸಂಸ್ಥೆಯ ಪ್ರಾಂಶುಪಾಲರಾದ ಶ್ರೀಮತಿ ಸುಜಾತ ಶಿವಾನಂದಪ್ಪ ಮಾತನಾಡಿ, ರಜಾ ಅವಧಿಯಲ್ಲಿ ಮಕ್ಕಳಿಗಾಗಿ ಆಯೋಜಿಸಲಾಗುವ ಶಿಬಿರಗಳು ಮಕ್ಕಳ ವ್ಯಕ್ತಿತ್ವ ಅರಳಿಸುವ ತರಬೇತಿ ತಾಣಗಳಿದ್ದಂತೆ. ರಜಾ ಅವಧಿಯನ್ನು ಸಹ ಕಲಿಕೆಗೆ ಬಳಸಿಕೊಂಡಿರುವ ಈ ಶಿಬಿರದ ಮಕ್ಕಳು ವಿಭಿನ್ನ ವ್ಯಕ್ತಿತ್ವದ ಪ್ರತೀಕವಾಗಿದ್ದಾರೆ ಎಂದು ಹೇಳಿದರು.

ಮಕ್ಕಳ ಹೊಸ ಕಲಿಕೆಗೆ ಪ್ರೋತ್ಸಾಹಿಸಿ ಅವರನ್ನು ಉತ್ತೇಜಿಸಿ ಶಿಬಿರಕ್ಕೆ ಸೇರಿಸುವ ಮೂಲಕ ಅವರಲ್ಲಿ ಉತ್ತಮ ಸಂಸ್ಕಾರ ಬಿತ್ತನೆಗೆ ಕಾರಣ ರಾದ ಪೋಷಕರು ಅಭಿನಂದನಾರ್ಹರು ಎಂದು ಶ್ಲಾಘಿಸಿದರು.

ನಮೋ ಶಾರದೆ ಪ್ರಾರ್ಥನೆಯೊಂದಿಗೆ ಆರಂಭವಾದ ವೇದಿಕೆ ಕಾರ್ಯಕ್ರಮದಲ್ಲಿ ವಿವಿಧ ಶಾಲೆಯಿಂದ ಆಗಮಿಸಿ 25 ದಿನಗಳಿಂದ ಬೇಸಿಗೆ ಶಿಬಿರದಲ್ಲಿ ಪಾಲ್ಗೊಂಡಿದ್ದ ಮಕ್ಕಳು ಶಿಬಿರದಲ್ಲಿ ತಾವು ಕಲಿತ ವಿಷಯಗಳ ಕುರಿತು ಅನಿಸಿಕೆ ಹಂಚಿಕೊಂಡರು. ಪೇಪರ್ ಕ್ರಾಫ್ಟ್, ವಿವಿಧ ಅಭಿನಯ ಗೀತೆ, ಕಿರು ನಾಟಕ, ಇತ್ಯಾದಿ ಪ್ರದರ್ಶಿಸಿದರು.

ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಸುಜಾತ ಶಿವಾನಂದಪ್ಪ ಶಿಬಿರಾರ್ಥಿಗಳಿಗೆ ನೆನಪಿನ ಕಾಣಿಕೆ ನೀಡಿ ಶುಭ ಹಾರೈಕೆಯೊಂದಿಗೆ ಬೀಳ್ಕೊಟ್ಟರು.

ಮುಖ್ಯ ಶಿಕ್ಷಕರಾದ ಶ್ರೀ ಶಶಿಧರ್ ವೇದಿಕೆಯಲ್ಲಿದ್ದರು. ಶಿಕ್ಷಕಿ ಶ್ರೀಮತಿ ಕವಿತಾ ಸ್ವಾಗತಿಸಿದರು. ಪ್ರತಿಭಾ ನಿರೂಪಣೆ ಮಾಡಿದರು. ಶಿಬಿರಾರ್ಥಿಗಳ ಪೋಷಕರು, ಪ್ರೌಢ ಶಾಲಾ ವಿದ್ಯಾರ್ಥಿಗಳು, ಸಂಸ್ಥೆಯ ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending