ದಿನದ ಸುದ್ದಿ
ಸುಳ್ವಾಡಿ ವಿಷ ಪ್ರಸಾದ ಸೇವನೆ ಪ್ರಕರಣ : ತಪ್ಪು ಯಾರೆ ಮಾಡಿದ್ರು ಅಂತವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆಯಾಗಿದೆ : ಸಿದ್ದರಾಮಯ್ಯ
ಸುದ್ದಿದಿನ,ಮೈಸೂರು :ಸುಳ್ವಾಡಿಯ ವಿಷ ಪ್ರಸಾದ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಘಟನೆ ಪುಡ್ ಪಾಯಿಸನ್ ನಿಂದ ಅಗಿಲ್ಲ. ಯಾರೋ ಪಾತಕಿಗಳು ಪ್ರಸಾದದಲ್ಲಿ ವಿಷ ಬೆರೆಸಿದ್ದಾರೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಯಾಗಬೇಕು. ಈಗಾಗಲೇ ಸಿ.ಎಂ.ತನಿಖೆಗೆ ಆದೇಶ ಮಾಡಿದ್ದಾರೆ. ನಾನು ಕೂಡ ಸಿ.ಎಂ.ಬಳಿ ಮಾತನಾಡಿ ಉನ್ನತಮಟ್ಟದ ತನಿಖೆಗೆ ಆಗ್ರಹಿಸ್ತೇನೆ. ಈ ಘೋರ ದುರಂತದ ಘಟನೆಗೆ ಕಾರಣತಾದ ಪಾತಕಿಗಳಿಗೆ ಶಿಕ್ಷೆಯಾಗಬೇಕು ಎಂದು ಮೈಸೂರಿನಲ್ಲಿ ಮಾಜಿ ಸಿ.ಎಂ. ಸಿದ್ರಾಮಯ್ಯ ಹೇಳಿದರು.
ವಿಷದ ಅಂಶ ಹೊಟ್ಟೆಯೊಳಗೆ ಸೇರಿರೋ ಕಾರಣ. ರೋಗಿಗಳು ಹೊರಳಾಡೋದು, ನರಳಾಡೋದು ಮಾಡ್ತಿದ್ದಾರೆ.
ಆದ್ರೆ ದೇವರ ಪ್ರಸಾದದಲ್ಲಿ ವಿಷ ಹಾಕೋದು ಅಂದ್ರೆ ಇದು ದುರಂತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದರು.
ಘಟನೆ ನಡೆದಿರೋದು ದೊಡ್ಡ ದುರಂತ.ಈಗಾಗಲೇ ಮೃತಪಟ್ಟ ಕುಟುಂಬಕ್ಕೆ ಸರ್ಕಾರದಿಂದ 5ಲಕ್ಷ ಘೋಷಣೆ ಆಗಿದೆ.ಏನೂ ತಪ್ಪು ಮಾಡದ ಅಮಾಯಕರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ತಪ್ಪು ಯಾರೆ ಮಾಡಿದ್ರು ಅಂತವರ ವಿರುದ್ಧ ಕಠಿಣ ಕ್ರಮಕ್ಕೆ ಸೂಚನೆಯಾಗಿದೆ. ಪಂಚಾಮೃತ ಹಾಗೂ ಬಾತ್ನಲ್ಲಿ ವಿಷ ಹಾಕಲಾಗಿದೆ. ಇದು ಫುಡ್ ಪಾಯಿಸನ್ನಿಂದ ಆಗಿರೋದಲ್ಲ.
ಹಾಗಾಗಿ ಎಲ್ಲ ಮಾಹಿತಿಯನ್ನ ವೈದ್ಯರ ಬಳಿ ಪಡೆದುಕೊಂಡಿದ್ದೇನೆ. ಮೃತರ ಕುಟುಂಬಕ್ಕೆ ದೇವರ ದುಖ ಭರಿಸುವ ಶಕ್ತಿ ನೀಡಲಿ ಎಂದರು
ಕುಟುಂಬದಲ್ಲಿನ ಮಕ್ಕಳ ಭವಿಷ್ಯದ ಬಗ್ಗೆ ಸರ್ಕಾರ ಕ್ರಮ ಕೈಗೊಳ್ಳಲಿದೆ. ವಿದ್ಯಾಭ್ಯಾಸ ಹಾಗೂ ಜೀವನ ನಿರ್ವಹಣೆಗೆ ಸರ್ಕಾರದಿಂದ ಸಹಾಯ ಮಾಡಲಾಗುವುದು. ಕೆಆರ್ ಆಸ್ಪತ್ರೆಯಲ್ಲಿ ಉತ್ತಮ ಸೌಲಭ್ಯವಿದೆ. ವೈದ್ಯರು ಅಸ್ವಸ್ಥರ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ ಎಂದರು.
ಮೈಸೂರಿನ ಕೆ.ಆರ್. ಆಸ್ಪತ್ರೆಗೆ ಭೇಟಿ ನೀಡಿ ವಿಷಾಹಾರ ಸೇವನೆಯಿಂದ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿರುವವರ ಯೋಗಕ್ಷೇಮ ವಿಚಾರಿಸಿದೆ. ಅಸ್ವಸ್ಥರಿಗೆ ನೀಡುತ್ತಿರುವ ಚಿಕಿತ್ಸಾ ಸೌಲಭ್ಯದ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದೇನೆ ಹಾಗೂ ಎಲ್ಲಾ ಅಗತ್ಯ ಸೌಲಭ್ಯಗಳನ್ನು ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚಿಸಿದ್ದೇನೆ. pic.twitter.com/FbD3Hwm7MW
— Siddaramaiah (@siddaramaiah) December 15, 2018
ಚಾಮರಾಜನಗರ ಜಿಲ್ಲೆಯಲ್ಲಿ ವಿಷಾಹಾರ ಸೇವನೆಯಿಂದ ಹಲವರು ಮೃತಪಟ್ಟಿರುವ ಸುದ್ದಿ ಆಘಾತವನ್ನುಂಟು ಮಾಡಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಪುಟ್ಟರಂಗ ಶೆಟ್ಟಿ, ಹನೂರು ಕ್ಷೇತ್ರದ ಶಾಸಕರಾದ ನರೇಂದ್ರ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ.
— Siddaramaiah (@siddaramaiah) December 14, 2018
ದುರಂತದಲ್ಲಿ ಮೃತರಾದವರ ಕುಟುಂಬದವರಿಗೆ ಪರಿಹಾರ, ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿರುವವರಿಗೆ ಸೂಕ್ತ ಚಿಕಿತ್ಸೆ ಒದಗಿಸುವಂತೆ ಸಚಿವರು ಹಾಗೂ ಶಾಸಕರಿಗೆ ಸೂಚಿಸಿದ್ದೇನೆ.
ಚಾಮರಾಜನಗರ ಜಿಲ್ಲಾಧಿಕಾರಿಗಳ ಜೊತೆಗೂ ಮಾತನಾಡಿ ಘಟನೆ ಕುರಿತು ಮಾಹಿತಿ ಪಡೆದುಕೊಂಡಿದ್ದೇನೆ ಹಾಗೂ ಪ್ರಕರಣದ ಬಗ್ಗೆ ಕೂಡಲೇ ತನಿಖೆ ನಡೆಸುವಂತೆ ಸೂಚಿಸಿದ್ದೇನೆ.— Siddaramaiah (@siddaramaiah) December 14, 2018
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಡಿಎಸ್ಟಿ/ಪಿಹೆಚ್ಡಿ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಈ ಯೋಜನೆಯಡಿ ಶಿಷ್ಯವೇತನ ಪಡೆಯಲು ವಿಜ್ಞಾನ ಮತ್ತು ಇಂಜಿನಿಯರಿಂಗ್ ವಿಷಯಗಳಲ್ಲಿ ಕರ್ನಾಟಕದಲ್ಲಿರುವ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆ /ಕಾಲೇಜುಗಳಲ್ಲಿ ಈಗಾಗಲೇ ಪಿಹೆಚ್ಡಿ ಪದವಿಗೆ ನೋಂದಾಯಿತರಾಗಿರುವ ಅರ್ಹ ಸಂಶೋಧನಾ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯು (ಡಿ.ಎಸ್.ಟಿ) 2018-19ನೇ ಸಾಲಿನಿಂದ ಕರ್ನಾಟಕ ಡಿ.ಎಸ್.ಟಿ-ಪಿಹೆಚ್ಡಿ ಶಿಷ್ಯವೇತನ ಎಂಬ ಕಾರ್ಯಕ್ರಮವನ್ನು ಇಲಾಖೆಯ ಸ್ವಯತ್ತ ಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹಕ ಸೊಸೈಟಿಯ ಮುಖಾಂತರ ಅನುಷ್ಠಾನಗೊಳಿಸಿದ್ದು, ಅರ್ಜಿಯನ್ನು ಆನ್ಲೈನ್ http://ksteps.karnataka.gov.in ಮುಖಾಂತರ ಫೆಬ್ರವರಿ 10, 2021 ರೊಳಗಾಗಿ ಸಲ್ಲಿಸಬೆಕೆಂದು ವ್ಯವಸ್ಥಾಪಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಪ.ಜಾತಿ/ಪ.ಪಂಗಡಕ್ಕೆ ಸಹಾಯಧನ ಮತ್ತು ಕ್ರೀಡಾಗಂಟಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : 2020-21ನೇ ಸಾಲಿನಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಯುವಜನ ಸಂಘ ಸಂಸ್ಥೆಗಳಿಗೆ ನೋಂದಾವಣೆ ಮಾಡಲು ಸಹಾಯಧನ ಮತ್ತು ಕ್ರೀಡಾಗಂಟನ್ನು ನೀಡುವ ಹೊಸ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರತಿ ತಾಲ್ಲೂಕಿನಲ್ಲಿ 02 ಪರಿಶಿಷ್ಟ ಜಾತಿ ಮತ್ತು 01 ಪರಿಶಿಷ್ಟ ಪಂಗಡದ ಯುವಜನ ಸಂಘವನ್ನು ನೋಂದಾಯಿಸಲು ಸಹಾಯಧನ ಹಾಗೂ ಕ್ರೀಡಾಗಂಟನ್ನು ನೀಡಲಾಗುವುದು. ಜಿಲ್ಲೆಯ 15 ರಿಂದ 35 ವರ್ಷ ವಯೋಮಾನದೊಳಗಿನ ಪ.ಜಾತಿ/ಪ.ಪಂಗಡಕ್ಕೆ ಸೇರಿರುವ ಯುವಕ/ಯುವತಿಯರು ಯುವಜನ ಸಂಘವನ್ನು ರಚಿಸಿಕೊಳ್ಳಲು ಸದವಕಾಶವಿರುವದರಿಂದ ಕರ್ನಾಟಕ ರಾಜ್ಯ ಸಂಘ ಸಂಸ್ಥೆಗಳ ನೋಂದಾವಣೆ ಕಾಯಿದೆ 1960 ರ ಅಡಿಯಲ್ಲಿ ಯುವಜನ ಸಂಘಗಳ ನೋಂದಣಿ ಮಾಡಿಸಿ, ಜ.28 ರೊಳಗಾಗಿ ಮಾನ್ಯತೆಗಾಗಿ ಈ ಕಚೇರಿಗೆ ಸಲ್ಲಿಸಲು ಕೋರಿದೆ. ನಂತರ ಬಂದ ಪ್ರಸ್ತಾವನೆಗಳನ್ನು ಸ್ವೀಕರಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಚೇರಿ ವೇಳೆಯಲ್ಲಿ ಮೊ.ಸಂ: 9620796970 ನ್ನು ಸಂಪರ್ಕಿಸಬಹುದೆಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಬಿ.ಶ್ರೀನಿವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ರೈತರು- ಕೇಂದ್ರ ಸರ್ಕಾರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ

ಸುದ್ದಿದಿನ,ನವದೆಹಲಿ : ಇಂದು ನಡೆಯಬೇಕಾಗಿದ್ದ ರೈತ ಮುಖಂಡರು ಮತ್ತು ಕೇಂದ್ರದ ಮಂತ್ರಿಗಳ ನಡುವಿನ 10ನೇ ಸುತ್ತಿನ ಮಾತುಕತೆ ಜ. 20ರ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿದೆ.
ಕೃಷಿ ಸಚಿವ ನರೇಂದ್ರ ಸಿಂಗ್ ತಡರಾತ್ರಿ ರೈತ ಮುಖಂಡರಿಗೆ ಬರೆದಿರುವ ಪತ್ರದಲ್ಲಿ, ತಳ್ಳಿ ಹಾಕಲಾದ ಕಾರಣಗಳಿಂದಾಗಿ ಇಂದು ಸಭೆ ನಡೆಸಲಾಗುತ್ತಿಲ್ಲ ಎಂದು,’ ಜ. 20ರಂದು ಮಧ್ಯಾಹ್ನ 2 ಗಂಟೆಗೆ ವಿಜ್ಞಾನ್ ಭವನದಲ್ಲಿ ಸಭೆ ನಡೆಸಲಾಗುವುದು” ಎಂದು ತಿಳಿಸಲಾಗಿದೆ.
ಮಧ್ಯಪ್ರದೇಶದ ತಮ್ಮ ಕ್ಷೇತ್ರದ ವೀಕ್ಷಣೆಗೆ ತೆರಳಿದ್ದ ಕೃಷಿ ಸಚಿವ ನರೇಂದ್ರ ಸಿಮಗ್ ತೋಮರ್ ಸೋಮವಾರ ತಡರಾತ್ರಿ ದೆಹಲಿಗೆ ಮರಳಿದರು. ಗ್ವಾಲಿಯರ್ನಲ್ಲಿ ಪತ್ರಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ರೈತ ಸಂಘಟನೆಗಳು ಕಾಯ್ದೆಗಳಲ್ಲಿರುವ ನಿರ್ದಿಷ್ಟ ರಿಯಾಯಿತಿಗಳ ಕುರಿತು ಚರ್ಚಿಸುವುದಕ್ಕೆ ಮನಸ್ಸು ಮಾಡುತ್ತಿಲ್ಲ. ಪಟ್ಟು ಸಡಿಸಲು ಸಿದ್ಧರೇ ಇಲ್ಲ. ನಾಳೆ ಸಭೆ ಇದೆ. ಅಲ್ಲಿ ರೈತ ಸಂಘಟನೆಗಳು ಪರ್ಯಾಯ ಸಾಧ್ಯತೆಗಳ ಕುರಿತು ಚರ್ಚಿಸುವ ನಂಬಿಕೆ ಇದೆ. ಹಾಗಾದರೆ ನಾವು ಪರಿಹಾರ ಕಂಡುಕೊಳ್ಳಲು ಸಾಧ್ಯ” ಎಂದಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಬೆಳಗ್ಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ರು, ಸಂಜೆ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ್ರು ನಾಗೇಶ್..!
-
ದಿನದ ಸುದ್ದಿ6 days ago
ಕೋವಿದ್ ಪ್ರಭಾವಳಿಯಲ್ಲಿ ಪ್ರಭುತ್ವದ ಕ್ರೌರ್ಯ
-
ಲೈಫ್ ಸ್ಟೈಲ್6 days ago
ಪಕ್ಷಿ ಪರಿಚಯ | ಬೆಳ್ಗಣ್ಣ
-
ದಿನದ ಸುದ್ದಿ6 days ago
“ನೀನು ಅಪ್ಪನಿಗೆ ಹುಟ್ಟಿದಿಯಾ ಅನ್ನೋದಕ್ಕೆ ಸಾಕ್ಷಿ ಏನು..?” : ಸಚಿವ ಈಶ್ವರಪ್ಪ
-
ದಿನದ ಸುದ್ದಿ7 days ago
ಸಚಿವ ಸಂಪುಟ ವಿಸ್ತರಣೆ : ಏಳು ಹೊಸ ಸಚಿವರ ಹೆಸರು ಫೈನಲ್ ಗೊಳಿಸಿದ ಯಡಿಯೂರಪ್ಪ
-
ಲೈಫ್ ಸ್ಟೈಲ್6 days ago
ಗ್ಯಾಸ್ಟ್ರಿಕ್ ಸಮಸ್ಯೆಗೆ ಇಲ್ಲಿದೆ ಪರಿಹಾರ ; ಮಿಸ್ ಮಾಡ್ದೆ ಓದಿ..!
-
ದಿನದ ಸುದ್ದಿ6 days ago
ದಲಿತರಿಗೆ ಪರ್ಯಾಯ ಸಂಸ್ಕೃತಿ ಇಲ್ಲವೆ..?
-
ದಿನದ ಸುದ್ದಿ6 days ago
ರೈತರ ಹೋರಾಟದಲ್ಲಿ ರೈತರೊಂದಿಗೆ ನಿಂತ ವಾಷಿಂಗ್ ಮಷಿನ್ಗಳು..!