Connect with us

ಲೈಫ್ ಸ್ಟೈಲ್

ಭಾನುವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ

Published

on

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:9945410150

ಮೇಷ ರಾಶಿ

ಪತ್ನಿಯ ಸಂಗಡ ಕಿರಿಕಿರಿ ಮಾಡಿಕೊಳ್ಳುವ ಸಾಧ್ಯತೆ ಕಂಡುಬರುತ್ತದೆ. ಆರ್ಥಿಕವಾಗಿ ಲಾಭ ಗಳಿಸುವ ಉದ್ದೇಶದಿಂದ ನಾನಾ ರೀತಿಯ ಯೋಜನೆಗಳನ್ನು ರೂಪಿಸುವಿರಿ. ನಿಮ್ಮಲ್ಲಿ ಯೋಜನೆ ಉತ್ತಮವಾಗಿದ್ದರೂ ಅದನ್ನು ನೆರವೇರಿಸುವರು ಶಿಸ್ತು ಕಡಿಮೆಯಾಗಬಹುದು ಆದಷ್ಟು ಯಾವುದೇ ಕೆಲಸ ಮಾಡುವ ಮುನ್ನ ಶ್ರದ್ಧೆಯನ್ನು ಬೆಳೆಸಿಕೊಳ್ಳಿ. ಉದ್ಯೋಗದಲ್ಲಿನ ನಿಯಮಗಳನ್ನು ಮೀರುವ ಅಭ್ಯಾಸವನ್ನು ತೆಗೆದುಹಾಕಿ. ಕೊಟ್ಟಿರುವ ಕಾರ್ಯಗಳನ್ನು ಮೊದಲೇ ಮಾಡಲು ಸೂಕ್ತ ರೀತಿಯಾಗಿ ತಯಾರಿ ನಡೆಸುವುದು ಒಳಿತು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಸಂಗಾತಿಯು ಪ್ರೀತಿಯ ಭಾವನೆಯಿಂದ ಬರುವರು ನೀವು ಕೆಲಸದ ಒತ್ತಡದಿಂದ ಕಡೆಗಣಿಸುವುದು ಅವರ ಮನಸ್ಸಿಗೆ ಬೇಸರವಾಗಬಹುದು. ಕೆಟ್ಟ ಸ್ವಪ್ನ ಗಳಿಂದ ಮತ್ತು ಶಕುನ ಗಳಿಂದ ಮನಸ್ಸಿನಲ್ಲಿ ಅಶಾಂತಿ ಆಗಬಹುದು ಆದಷ್ಟು ಇಂದು ಶಕ್ತಿ ದೇವತೆಗಳಿಗೆ ಭೇಟಿ ನೀಡುವುದು ಒಳ್ಳೆಯದು. ಹಿರಿಯರು ಕೊಟ್ಟಿರುವ ವ್ಯವಹಾರ ಅಥವಾ ಬಳುವಳಿಗಳು ಮುಂದುವರಿಸಿ ಕಳೆದುಕೊಳ್ಳುವುದು ಬೇಡ. ವ್ಯವಹಾರದಲ್ಲಿ ಗ್ರಾಹಕರನ್ನು ಸೆಳೆಯುವ ಪ್ರಯತ್ನ ನಡೆಸಿ. ಕಟು ಮಾತುಗಳು ನಿಮ್ಮ ವ್ಯಕ್ತಿತ್ವಕ್ಕೆ ಶೋಭೆ ತರುವುದಿಲ್ಲ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ಕುಟುಂಬದ ಹಿತಾಸಕ್ತಿಯನ್ನು ಕಡೆಗಣಿಸದೆ ಅವರ ಪ್ರತಿಯೊಂದು ಆಕಾಂಕ್ಷೆಗಳಿಗೆ ಜವಾಬ್ದಾರಿಯುತ ಸ್ಥಾನದಲ್ಲಿ ನಿಂತು ಕಾರ್ಯ ಮಾಡಿಕೊಡುವುದು ನಿಮ್ಮ ಮೇಲಿನ ಗೌರವ ಹೆಚ್ಚಾಗುತ್ತದೆ. ದೈಹಿಕ ಕಸರತ್ತು ತೋರ್ಪಡಿಕೆಗಲ್ಲ, ಶ್ರಮದ ಕೆಲಸಕ್ಕೆ ಮಾತ್ರ ವಿನಿಯೋಗಿಸಿ. ಕಷ್ಟದ ಕಾರ್ಯಗಳನ್ನು ಈ ದಿನ ಅನಾಯಾಸವಾಗಿ ಮಾಡಿ ಮುಗಿಸುತ್ತೀರಿ. ಕೋಪಿಷ್ಟ ಸ್ವಭಾವವನ್ನು ಪ್ರದರ್ಶನ ಮಾಡುವುದು ಬೇಡ. ಬೇಡದ ವಿಚಾರಗಳಿಗೆ ಮಾನಸಿಕ ಚಿಂತೆ ತೆಗೆದುಕೊಳ್ಳುವುದು ಸಮಂಜಸ ಕಾಣುವದಿಲ್ಲ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಸಂಗಾತಿಯಿಂದ ನಿಮ್ಮ ಯೋಜನೆಗಳಿಗೆ ಅಗತ್ಯ ನೆರವು ದೊರೆಯುತ್ತದೆ. ಮಕ್ಕಳು ನಿಮ್ಮ ಕೆಲಸದಲ್ಲಿ ಭಾಗಿಯಾಗಿ ಸಹಕಾರ ನೀಡಲಿದ್ದಾರೆ. ಶೈಕ್ಷಣಿಕ ಸಾಧನೆ ಉತ್ತಮವಾಗಿ ರೂಪುಗೊಳ್ಳಲಿದೆ. ಈ ದಿನ ಕೆಲವರು ನಿಮ್ಮನ್ನು ಸಾಧನೆಗೆ ಪ್ರೇರೇಪಿಸುವ ಮಾರ್ಗಗಳನ್ನು ತೋರಿಸಲಿದ್ದಾರೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ಕದನಕ್ಕೆ ಪ್ರೇರೇಪಣೆ ನೀಡುವ ಜನಗಳಿಂದ ಆದಷ್ಟು ದೂರವಿದ್ದು ಬಿಡಿ. ಅನ್ಯರ ಕೆಲಸದಲ್ಲಿ ನೀವು ಪ್ರವೇಶಿಸುತ್ತಿರುವುದು ಒಳ್ಳೆಯದಲ್ಲ. ಇನ್ನೊಬ್ಬರ ಬಗ್ಗೆ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಆರ್ಥಿಕ ಮತ್ತು ಭೂ ಸಂಬಂಧಿತ ವ್ಯಾಜ್ಯಗಳನ್ನು ಹಿರಿಯರ ಸಮ್ಮುಖದಲ್ಲಿ ಸರಿಪಡಿಸಿಕೊಳ್ಳಿ. ನಿಮ್ಮ ಕೆಲಸಕಾರ್ಯಗಳು ನಿರೀಕ್ಷಿತ ಯಶಸ್ಸು ದೊರೆಯಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ಮಾತುಗಳು ಮತ್ತು ವ್ಯವಹಾರದ ಶೈಲಿಯು ನೇರವಾಗಿರಲಿ. ನಿಮ್ಮಲ್ಲಿ ಮೂಡಿರುವ ಸೋಮಾರಿತನವನ್ನು ಆದಷ್ಟು ತ್ಯಜಿಸುವುದು ಸೂಕ್ತ. ಸಂಗಾತಿ ಮತ್ತು ಕುಟುಂಬದವರು ನಿಮಗೆ ಉತ್ಸಾಹ ತರಲಿದ್ದಾರೆ. ನಿರ್ದಿಷ್ಟ ಗುರಿಯನ್ನು ತಲುಪಲು ನಿಮ್ಮ ಪರಿಶ್ರಮ ಇನ್ನಷ್ಟು ಬೇಕಾಗಿದೆ. ದೈವ ದೇವಸ್ಥಾನಗಳಿಗೆ ಭೇಟಿ ನೀಡುವ ಸಾಧ್ಯತೆ ಕಂಡು ಬರಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಕೆಲಸದ ಒತ್ತಡ ಹೆಚ್ಚಾಗಲಿದೆ. ನಿಮ್ಮ ಆರೋಗ್ಯಕರ ಚಟುವಟಿಕೆಗಳಿಂದ ಉತ್ತಮ ದಿನವನ್ನಾಗಿ ರೂಪಿಸುವಿರಿ. ಕೆಲವು ವರ್ತನೆಗಳು ಅಪ್ರಯೋಜಕ ಎನಿಸಬಹುದು ಆದಷ್ಟು ನಿಮ್ಮ ವರ್ಚಸ್ಸನ್ನು ನೀವು ಕಾಯ್ದುಕೊಳ್ಳಿ. ಕುಟುಂಬದಲ್ಲಿ ಬರುವ ಶುಭ ಸುದ್ದಿಗಳು ಮನೆಯ ವಾತಾವರಣವನ್ನು ಸಂತೋಷಮಯ ಗೊಳಿಸುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ನಿಮ್ಮ ಪ್ರೀತಿಯ ಸಂಗಾತಿಯು ನಿಮ್ಮ ಇಷ್ಟದ ಭೋಜನ ವ್ಯವಸ್ಥೆಯನ್ನು ಮಾಡಿ ನಿಮಗೆ ಆಶ್ಚರ್ಯ ನೀಡುವರು. ವ್ಯವಹಾರದಲ್ಲಿ ಕುಶಲತೆ ಪಡೆಯುವ ಸಮಗ್ರ ದೃಷ್ಟಿಕೋನ ಕಾಣಬಹುದಾಗಿದೆ. ಭೂ ಸಂಬಂಧಿತ ವ್ಯಾಜ್ಯಗಳನ್ನು ಪರಿಹಾರದ ನಿಟ್ಟಿನಲ್ಲಿ ಯೋಚಿಸಬೇಕಾದ ಅನಿವಾರ್ಯತೆ ಇದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಮನರಂಜನೆ ಮತ್ತು ಮೋಜಿನ ಒಂದು ದಿನ. ಯಾವುದೇ ಸಮಯದಲ್ಲಿ ಹಣದ ಅಗತ್ಯವಿರುತ್ತದೆ ಆದ್ದರಿಂದ ಇಂದು ಸಾಧ್ಯವಾದಷ್ಟು ನಿಮ್ಮ ಹಣವನ್ನು ಸಂಗ್ರಹಿಸುವ ಬಗ್ಗೆ ಆಲೋಚಿಸಿ. ಜನರು ನಿಮಗೆ ಹೊಸ ಭರವಸೆ ಹಾಗೂ ಕನಸುಗಳನ್ನು ನೀಡುತ್ತಾರೆ –ಇದು ನಿಮ್ಮ ಸ್ವಸಾಮರ್ಥ್ಯವನ್ನು ಅವಲಂಬಿಸಿರುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಕನಸಿನ ಚಿಂತೆಗಳನ್ನು ಬಿಟ್ಟು ನಿಮ್ಮ ಪ್ರೀತಿಪಾತ್ರ ಸಂಗಾತಿಯ ಜೊತೆಯಿರಿ. ಸ್ನೇಹಿತರೊಂದಿಗೆ ಈ ಅಮೂಲ್ಯ ಕ್ಷಣಗಳನ್ನು ಹಾಳುಮಾಡಬೇಡಿ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಲಾಗಿದೆ. ಸ್ನೇಹಿತರು ಮುಂಬರುವ ಸಮಯದಲ್ಲೂ ಸಿಗಬಹುದು ಆದರೆ ಅಧ್ಯಯನಕ್ಕಾಗಿ ಇದೆ ಸಮಯ ಅತ್ಯುತ್ತಮವಾಗಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ನಿಮ್ಮ ಸಂಗಾತಿಯು ಇಂದು ನಿಮ್ಮ ಬಗೆಗಿನ ಎಲ್ಲಾ ಒಳ್ಳೆಯ ಗುಣಗಳನ್ನು ಹೊಗಳುತ್ತಾರೆ ಹಾಗೂ ಮತ್ತೆ ನಿಮ್ಮನ್ನು ಪ್ರೀತಿಸುತ್ತಾರೆ. ನಿಮ್ಮ ಆಪ್ತರು ವಾರಾಂತ್ಯದಲ್ಲಿ ನಿಮ್ಮನ್ನು ಏನನ್ನಾದರೂ ಮಾಡಲು ಒತ್ತಾಯಿಸುತ್ತಿದ್ದರೆ, ನಿಮಗೆ ಕೋಪ ಬರುವುದು ಸಹಜ. ಆದರೆ ಶಾಂತವಾಗಿರುವುದು ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಸಾಲದ ಬಾದೆ ನಿಮಗೆ ಹೆಚ್ಚಾಗಿ ಕಾಡಾಟ ನೀಡುತ್ತದೆ. ಕೆಲವು ಆತ್ಮೀಯರು ನಿಮ್ಮ ವಿರುದ್ಧ ತಿರುಗಿ ಬೀಳಬಹುದು. ಅನಗತ್ಯವಾದ ಹೂಡಿಕೆಗಳು ಸಂಕಷ್ಟ ತಂದುಕೊಡಲಿದೆ ಎಚ್ಚರ. ಮನೋ ವ್ಯಾಧಿಗೆ ಆದಷ್ಟು ಕ್ರಿಯಾಶೀಲತೆಯಿಂದ ನಡೆದುಕೊಳ್ಳಿ. ಕುಟುಂಬಸ್ಥರ ಸಹಕಾರವನ್ನು ಕೇಳಿ ಪಡೆಯುವುದು ಉತ್ತಮ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

Published

on

3 ವರ್ಷದ ನಂತರ ಬಡ್ಡಿ ನಿಲ್ಲುತ್ತದೆ ಎಂಬುದು ಹಳೆಯ ನಿಯಮ; 58 ವರ್ಷದವರೆಗೆ ಬಡ್ಡಿ ಗ್ಯಾರಂಟಿ, ಆದರೆ ಈ ತೆರಿಗೆ ನಿಯಮ ಗೊತ್ತಿರಲಿ

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ ಹಣ ಜಮೆಯಾಗಿಲ್ಲ, ಹಾಗಾದರೆ ನನ್ನ ಖಾತೆಗೆ ಇನ್ನೂ ಬಡ್ಡಿ ಸಿಗುತ್ತದೆಯೇ ಅಥವಾ ನನ್ನ ಹಣ ಹಾಗೆಯೇ ಉಳಿದುಕೊಳ್ಳುತ್ತದೆಯೇ?’ ಎಂಬುದು ಆ ಪ್ರಶ್ನೆ. ಈ ಪ್ರಶ್ನೆಗೆ ಇಪಿಎಫ್‌ಒ ನೇರವಾಗಿ ನೀಡಿರುವ ಉತ್ತರ – ಹೌದು, ಖಂಡಿತವಾಗಿಯೂ ಬಡ್ಡಿ ಸಿಗುತ್ತದೆ’.ಪಿಎಫ್‌ಗೆ ಹಣ ಜಮಾ ಮಾಡುವುದು ನಿಂತ ತಕ್ಷಣವೇ ಬಡ್ಡಿ ಬರುವುದು ನಿಂತುಹೋಗುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ವಾಸ್ತವವೇ ಬೇರೆ.

http://Visit : www.suddidina.com

3 ವರ್ಷಗಳ ಹಳೆಯ ನಿಯಮದ ಅಸಲಿ ಸತ್ಯವೇನು?

ಈ ಗೊಂದಲಕ್ಕೆ ಕಾರಣ 2016ಕ್ಕಿಂತ ಮೊದಲು ಇದ್ದ ನಿಯಮ. ಹಳೆಯ ನಿಯಮದ ಪ್ರಕಾರ, ಒಂದು ಪಿಎಫ್ ಖಾತೆಗೆ ಸತತ 36 ತಿಂಗಳು (3 ವರ್ಷ) ಯಾವುದೇ ವಂತಿಗೆ ಜಮೆಯಾಗದಿದ್ದರೆ, ಅದನ್ನು `ನಿಷ್ಕ್ರಿಯ ಖಾತೆ’ (Inoperative Account) ಎಂದು ಪರಿಗಣಿಸಲಾಗುತ್ತಿತ್ತು ಮತ್ತು ಅಂತಹ ಖಾತೆಗೆ ಬಡ್ಡಿ ನೀಡುವುದನ್ನು ತಡೆಹಿಡಿಯಲಾಗುತ್ತಿತ್ತು. ಇದರಿಂದಾಗಿ ಲಕ್ಷಾಂತರ ಖಾತೆದಾರರ ಹಣಕ್ಕೆ ಬಡ್ಡಿ ಸಿಗದೆ ನಷ್ಟವಾಗುತ್ತಿತ್ತು.ಆದರೆ ಚಂದಾದಾರರ ಹಿತದೃಷ್ಟಿಯಿಂದ ಇಪಿಎಫ್‌ಒ 2016 ರಲ್ಲಿ ಈ ನಿಯಮಕ್ಕೆ ಮಹತ್ವದ ತಿದ್ದುಪಡಿ ತಂದಿದೆ. ಹೊಸ ಮತ್ತು ಪ್ರಸ್ತುತ ಜಾರಿಯಲ್ಲಿರುವ ನಿಯಮದ ಪ್ರಕಾರ, ಖಾತೆದಾರನಿಗೆ 58 ವರ್ಷ ವಯಸ್ಸಾಗುವವರೆಗೆ ಪಿಎಫ್ ಖಾತೆಯಲ್ಲಿರುವ ಹಣಕ್ಕೆ ನಿಯಮಿತವಾಗಿ ಚಕ್ರಬಡ್ಡಿ (Compounding Interest) ಜಮೆಯಾಗುತ್ತಲೇ ಇರುತ್ತದೆ. ನೀವು ಕೆಲಸದಲ್ಲಿದ್ದರೂ, ಇಲ್ಲದಿದ್ದರೂ ಇದು ಅನ್ವಯಿಸುತ್ತದೆ.

ಉದಾಹರಣೆ:

ಇದನ್ನು ಒಂದು ಉದಾಹರಣೆಯೊಂದಿಗೆ ನೋಡೋಣ. ಒಬ್ಬ ವ್ಯಕ್ತಿ ತಮ್ಮ 40ನೇ ವಯಸ್ಸಿನಲ್ಲಿ ಕೆಲಸಕ್ಕೆ ರಾಜೀನಾಮೆ ನೀಡಿ, ತಮ್ಮ ಪಿಎಫ್ ಖಾತೆಯಲ್ಲಿದ್ದ 10 ಲಕ್ಷ ರೂಪಾಯಿಯನ್ನು ಹಿಂಪಡೆಯದೆ ಹಾಗೆಯೇ ಬಿಡುತ್ತಾರೆ ಎಂದುಕೊಳ್ಳಿ. ಅವರು ಮುಂದಿನ 5 ವರ್ಷಗಳ ಕಾಲ ಅಂದರೆ 45ನೇ ವಯಸ್ಸಿನವರೆಗೆ ಯಾವುದೇ ಹಣವನ್ನು ಜಮೆ ಮಾಡದಿದ್ದರೂ, ಅವರ ಖಾತೆಯಲ್ಲಿರುವ ಆ 10 ಲಕ್ಷ ರೂಪಾಯಿಗೆ ಇಪಿಎಫ್‌ಒ ಪ್ರತಿ ವರ್ಷ ಘೋಷಿಸುವ ಬಡ್ಡಿ ದರದಂತೆ (ಪ್ರಸ್ತುತ 8.25%) ಬಡ್ಡಿ ಸೇರ್ಪಡೆಯಾಗುತ್ತಲೇ ಹೋಗುತ್ತದೆ. ಇದು ಅವರಿಗೆ 58 ವರ್ಷ ತುಂಬುವವರೆಗೆ ಅಂದರೆ ಇನ್ನೂ 13 ವರ್ಷಗಳ ಕಾಲ ನಿರಂತರವಾಗಿ ಸಿಗುತ್ತದೆ. ಅದೇ ರೀತಿ 50ನೇ ವಯಸ್ಸಿನಲ್ಲಿ ಕೆಲಸ ಬಿಟ್ಟವರಿಗೆ 58 ವರ್ಷದವರೆಗೆ 8 ವರ್ಷಗಳ ಕಾಲ ಬಡ್ಡಿ ಸಿಗುತ್ತದೆ.

ಈ ಒಂದು ತೆರಿಗೆ ನಿಯಮವನ್ನು ಮಾತ್ರ ಮರೆಯಬೇಡಿ!

ನಿಮ್ಮ ಹಣಕ್ಕೆ ಬಡ್ಡಿ ಸಿಗುತ್ತದೆ ಎಂಬುದು ಖುಷಿಯ ವಿಚಾರವೇ, ಆದರೆ ಇಲ್ಲಿ ಒಂದು ಪ್ರಮುಖ ತೆರಿಗೆ ಎಚ್ಚರಿಕೆಯಿದೆ. ನೀವು ಕೆಲಸ ಮಾಡುತ್ತಿರುವಾಗ ನಿಮ್ಮ ಪಿಎಫ್ ಬಡ್ಡಿಗೆ ಸಂಪೂರ್ಣ ತೆರಿಗೆ ವಿನಾಯಿತಿ ಇರುತ್ತದೆ. ಆದರೆ ನೀವು ಕೆಲಸ ಬಿಟ್ಟ ನಂತರ ನಿಮ್ಮ ಖಾತೆಗೆ ಜಮೆಯಾಗುವ ಬಡ್ಡಿಯನ್ನು ಆದಾಯ ತೆರಿಗೆ ಇಲಾಖೆಯು `ಇತರ ಮೂಲಗಳಿಂದ ಬಂದ ಆದಾಯ’ (Income from Other Sources) ಎಂದು ಪರಿಗಣಿಸುತ್ತದೆ. ಆದ್ದರಿಂದ ಆ ಬಡ್ಡಿಯ ಮೊತ್ತವನ್ನು ನೀವು ನಿಮ್ಮ ವಾರ್ಷಿಕ ಆದಾಯದಲ್ಲಿ ತೋರಿಸಿ, ನಿಮ್ಮ ತೆರಿಗೆ ಸ್ಲ್ಯಾಬ್‌ಗೆ ಅನುಗುಣವಾಗಿ ತೆರಿಗೆ ಪಾವತಿಸಬೇಕಾಗುತ್ತದೆ.

ಖಾತೆದಾರರು ಏನು ಮಾಡಬೇಕು?

1. ಕೆಲಸ ಬದಲಾಯಿಸಿದ್ದರೆ: ಹಳೆಯ ಕಂಪನಿಯ ಪಿಎಫ್ ಹಣವನ್ನು ವಿತ್‌ಡ್ರಾ ಮಾಡುವ ಬದಲು, ನಿಮ್ಮ ಯುಎಎನ್ (UAN) ಮೂಲಕ ಹೊಸ ಕಂಪನಿಯ ಖಾತೆಗೆ ವರ್ಗಾವಣೆ (Transfer) ಮಾಡಿಕೊಳ್ಳಿ. ಇದರಿಂದ ನಿಮ್ಮ ಸೇವಾ ಅವಧಿ ನಿರಂತರವಾಗಿರುತ್ತದೆ.

2. ವೃತ್ತಿ ವಿರಾಮದಲ್ಲಿದ್ದರೆ: 58 ವರ್ಷದವರೆಗೆ ಹಣ ಸುರಕ್ಷಿತವಾಗಿ ಬೆಳೆಯುತ್ತದೆ. ಆದರೆ ನಿಮಗೆ ತುರ್ತು ಅಗತ್ಯವಿಲ್ಲದಿದ್ದರೆ, ಹೆಚ್ಚಿನ ಆದಾಯಕ್ಕಾಗಿ ಬೇರೆಡೆ ಹೂಡಿಕೆ ಮಾಡುವ ಬಗ್ಗೆಯೂ ಯೋಚಿಸಬಹುದು.

3. 58 ವರ್ಷದ ನಂತರ: ಖಾತೆದಾರನಿಗೆ 58 ವರ್ಷ ತುಂಬಿದ ನಂತರವೂ ಹಣವನ್ನು ಹಿಂಪಡೆಯದಿದ್ದರೆ ಮಾತ್ರ ಆ ಖಾತೆಯನ್ನು ಮತ್ತೆ `ನಿಷ್ಕ್ರಿಯ’ ಎಂದು ಪರಿಗಣಿಸಿ ಬಡ್ಡಿ ನೀಡುವುದನ್ನು ಶಾಶ್ವತವಾಗಿ ನಿಲ್ಲಿಸಲಾಗುತ್ತದೆ.ಆದ್ದರಿಂದ 5 ವರ್ಷದಿಂದ ಹಣ ಜಮೆಯಾಗದಿದ್ದರೂ ಚಿಂತಿಸಬೇಕಿಲ್ಲ, ನಿಮ್ಮ ಪಿಎಫ್ ಹಣ ಇಪಿಎಫ್‌ಒ ನಲ್ಲಿ ಸುರಕ್ಷಿತವಾಗಿ ಬಡ್ಡಿಯೊಂದಿಗೆ ಬೆಳೆಯುತ್ತಿದೆ.

Continue Reading

ದಿನದ ಸುದ್ದಿ

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

Published

on

ಸೆಪ್ಟೆಂಬರ್ ಅಂತ್ಯಕ್ಕೆ ಹೊಸ ಸೇವೆ ಜಾರಿ; ಮುಂದಿನ ವಾರವೇ `ನಮ್ಮ ಬಿಎಂಟಿಸಿ 2.0' ಆ್ಯಪ್ ಲೋಕಾರ್ಪಣೆ, 200 ಹೊಸ ಮಿನಿ ಡೀಸೆಲ್ ಬಸ್ ಖರೀದಿಗೆ ಸಿದ್ಧತೆ

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ ಕಾಯುವಂತಹ ಪರಿಸ್ಥಿತಿ ಇರುವುದಿಲ್ಲ. ಖಾಸಗಿ ರೈಡ್-ಹೇಲಿಂಗ್ ಆ್ಯಪ್‌ಗಳಾದ ಓಲಾ, ಉಬರ್, ರ‍್ಯಾಪಿಡೋ ನಂತಹ ಆ್ಯಪ್‌ಗಳಲ್ಲೇ ನೇರವಾಗಿ ಬಿಎಂಟಿಸಿ ಬಸ್‌ಗಳ ಲೈವ್ ಲೋಕೇಶನ್ ಟ್ರ್ಯಾಕ್ ಮಾಡಲು ಮತ್ತು ಟಿಕೆಟ್ ಬುಕ್ ಮಾಡಲು ಅವಕಾಶ ಕಲ್ಪಿಸಲಾಗುತ್ತಿದೆ. ಈ ಮಹತ್ವದ ಸೇವೆಯು ಇದೇ ಸೆಪ್ಟೆಂಬರ್ ಅಂತ್ಯದ ವೇಳೆಗೆ ಸಾರ್ವಜನಿಕರಿಗೆ ಲಭ್ಯವಾಗಲಿದೆ ಎಂದು ಬಿಎಂಟಿಸಿ ಹಿರಿಯ ಅಧಿಕಾರಿಗಳು ಖಚಿತಪಡಿಸಿದ್ದಾರೆ.

http://Visit : www.suddidina.com

ಈ ಕುರಿತು ಮಾಹಿತಿ ನೀಡಿದ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಘುನಂದನ್ ಮೂರ್ತಿ, ನಾವು ಹಲವು ಖಾಸಗಿ ರೈಡ್ ಅಗ್ರಿಗೇಟರ್ ಕಂಪನಿಗಳ ಜೊತೆ ನಿರಂತರ ಮಾತುಕತೆ ನಡೆಸುತ್ತಿದ್ದೇವೆ. ಇದಕ್ಕಾಗಿ ಶೀಘ್ರದಲ್ಲೇ ಒಂದು ಸಾಮಾನ್ಯ ಮಾನದಂಡದ ಒಪ್ಪಂದವನ್ನು (Standard Agreement) ಜಾರಿಗೆ ತರಲಿದ್ದೇವೆ. ಈ ಒಪ್ಪಂದದ ನಿಯಮಗಳಿಗೆ ಬದ್ಧರಾಗುವ ಯಾವುದೇ ಖಾಸಗಿ ಕಂಪನಿಯು ಬಿಎಂಟಿಸಿಯ ಲೈವ್ ಡೇಟಾವನ್ನು ಉಚಿತವಾಗಿ ಬಳಸಿಕೊಳ್ಳಬಹುದು. ಇದರಿಂದ ಪ್ರಯಾಣಿಕರಿಗೆ ಯಾವುದೇ ಹೆಚ್ಚುವರಿ ಆರ್ಥಿಕ ಹೊರೆಯಾಗುವುದಿಲ್ಲ. ಕ್ಯಾಬ್ ಅಥವಾ ಆಟೋಗಳಿಂದ ಇಳಿದು ಮುಂದಿನ ಪ್ರಯಾಣಕ್ಕೆ ಬಸ್ ಹಿಡಿಯುವವರಿಗೆ ಇದು ಅತ್ಯಂತ ಸಹಕಾರಿಯಾಗಲಿದೆ ಎಂದು ಹೇಳಿದರು.

ನಮ್ಮ ಬಿಎಂಟಿಸಿ 2.0′ ಆ್ಯಪ್‌ನಲ್ಲಿ ಏನಿದೆ ಹೊಸತು?

ಖಾಸಗಿ ಆ್ಯಪ್‌ಗಳ ಜೊತೆ ಡೇಟಾ ಹಂಚಿಕೊಳ್ಳುವುದರ ಜೊತೆಗೆ, ಬಿಎಂಟಿಸಿ ತನ್ನ ಸ್ವಂತ ಮೊಬೈಲ್ ಅಪ್ಲಿಕೇಶನ್ ಅನ್ನು ಸಂಪೂರ್ಣವಾಗಿ ಮೇಲ್ದರ್ಜೆಗೇರಿಸುತ್ತಿದೆ. ನಮ್ಮ ಬಿಎಂಟಿಸಿ ಮೊಬೈಲ್ ಆ್ಯಪ್ 2.0′ ಅನ್ನು ಮುಂದಿನ ವಾರದ ಅಂತ್ಯದೊಳಗೆ ಲೋಕಾರ್ಪಣೆಗೊಳಿಸಲಾಗುವುದು. ಈ ಹಿಂದೆ ಆ್ಯಪ್ ಕುರಿತು ಪ್ರಯಾಣಿಕರು ನೀಡಿದ್ದ ದೂರುಗಳು ಮತ್ತು ತಾಂತ್ರಿಕ ದೋಷಗಳನ್ನು ಸಂಪೂರ್ಣವಾಗಿ ಸರಿಪಡಿಸಲಾಗಿದೆ. ಹೊಸ ಆ್ಯಪ್‌ನಲ್ಲಿ ಬಿಎಂಟಿಸಿ ನೆಟ್‌ವರ್ಕ್‌ನಲ್ಲಿ ಸಂಚರಿಸುವ ಪ್ರತಿಯೊಂದು ಬಸ್‌ನ ಲೈವ್ ಲೋಕೇಶನ್ ಅತ್ಯಂತ ನಿಖರವಾಗಿ ಲಭ್ಯವಾಗಲಿದೆ. ಪ್ರಸ್ತುತ ಬಿಎಂಟಿಸಿ ಬಳಿ 1,771 ಎಲೆಕ್ಟ್ರಿಕ್ ಬಸ್‌ಗಳು ಸೇರಿದಂತೆ ಒಟ್ಟು 6,938 ಬಸ್‌ಗಳಿವೆ. ಪ್ರತಿದಿನ ಸರಾಸರಿ 6,200 ಬಸ್‌ಗಳು ನಗರದಾದ್ಯಂತ ಕಾರ್ಯಾಚರಣೆ ನಡೆಸುತ್ತಿವೆ.

ಸಾರಿಗೆ ಸಚಿವರ ಮಹತ್ವದ ಸಭೆ ಮತ್ತು ನಿರ್ದೇಶನ: 

ವಿಧಾನಸೌಧದಲ್ಲಿ ಸಾರಿಗೆ ಸಚಿವ ಬೈರತಿ ಸುರೇಶ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾರಿಗೆ ಇಲಾಖೆ, ಬಿಎಂಟಿಸಿ ಹಾಗೂ ಕೆಎಸ್‌ಆರ್‌ಟಿಸಿ ಹಿರಿಯ ಅಧಿಕಾರಿಗಳ ಉನ್ನತ ಮಟ್ಟದ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

200 ಹೊಸ ಮಿನಿ ಬಸ್‌ಗಳ ಖರೀದಿ:

ಮೆಟ್ರೋ ಫೀಡರ್ ಸೇವೆ ಹಾಗೂ ನಗರದ ಕಿರಿದಾದ ರಸ್ತೆಗಳ ಸಂಪರ್ಕಕ್ಕಾಗಿ 200 ಹೊಸ 7 ಮೀಟರ್ ಉದ್ದದ ಮಿನಿ ಡೀಸೆಲ್ ಬಸ್‌ಗಳನ್ನು ಖರೀದಿಸಲು ಬಿಎಂಟಿಸಿ ನಿರ್ಧರಿಸಿದೆ. ಮೆಟ್ರೋ ನಿಲ್ದಾಣಗಳ ಸುತ್ತಮುತ್ತಲಿನ ಕಿರಿದಾದ ರಸ್ತೆಗಳಲ್ಲಿ ಈ ಚಿಕ್ಕ ಬಸ್‌ಗಳು ಸುಲಭವಾಗಿ ಸಂಚರಿಸಬಲ್ಲವು. ಸದ್ಯ 9 ಮತ್ತು 12 ಮೀಟರ್ ಉದ್ದದ 255 ಬಸ್‌ಗಳು ಮೆಟ್ರೋ ಫೀಡರ್ ಆಗಿ ಕಾರ್ಯನಿರ್ವಹಿಸುತ್ತಿವೆ. ರಾಜ್ಯ ಬಜೆಟ್‌ನಲ್ಲಿ ಘೋಷಿಸಲಾದ ನಾಲ್ಕು ನಿಗಮಗಳಿಗೆ 1,000 ಬಸ್ ಖರೀದಿ ಯೋಜನೆಯ ಭಾಗವಾಗಿ ಈ ಖರೀದಿ ನಡೆಯಲಿದೆ. ಮುಂದಿನ 6 ತಿಂಗಳಲ್ಲಿ ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.ಬನ್ನೇರುಘಟ್ಟ ರಸ್ತೆಯಲ್ಲಿ ನಿರ್ಮಾಣವಾಗುತ್ತಿರುವ ಪಿಂಕ್ ಲೈನ್‌ನ 6 ನಿಲ್ದಾಣಗಳು ಸೇರಿದಂತೆ ಎಲ್ಲಾ ಮೆಟ್ರೋ ನಿಲ್ದಾಣಗಳಿಗೆ ಫೀಡರ್ ಸೇವೆ ವಿಸ್ತರಿಸಲು ಬಿಎಂಆರ್‌ಸಿಎಲ್ ಮತ್ತು ಸಂಚಾರ ಪೊಲೀಸರ ಜೊತೆ ಜಂಟಿ ಸಮೀಕ್ಷೆ ನಡೆಸಲಾಗುತ್ತಿದೆ.

ಎಸಿ ಬಸ್ ಸೇವೆ ಹೆಚ್ಚಳಕ್ಕೆ ಸೂಚನೆ:

ಪಿಎಂ ಇ-ಡ್ರೈವ್ ಯೋಜನೆಯಡಿ ಬರಲಿರುವ 4,500 ಎಲೆಕ್ಟ್ರಿಕ್ ಬಸ್‌ಗಳ ಪೈಕಿ 200 ಮಿನಿ ಎಸಿ ಇ-ಬಸ್‌ಗಳನ್ನು ಎಲ್ಲಾ ಮೆಟ್ರೋ ನಿಲ್ದಾಣಗಳ 5 ಕಿ.ಮೀ ವ್ಯಾಪ್ತಿಯಲ್ಲಿ ಓಡಿಸುವಂತೆ ಸಚಿವರು ಸೂಚಿಸಿದ್ದಾರೆ. ಐಟಿ ಕಂಪನಿ ಉದ್ಯೋಗಿಗಳು ಖಾಸಗಿ ವಾಹನ ಬಳಕೆ ಕಡಿಮೆ ಮಾಡಿ ಸಾರ್ವಜನಿಕ ಸಾರಿಗೆ ಬಳಸುವಂತೆ ಪ್ರೇರೇಪಿಸಲು ಐಟಿ ಪಾರ್ಕ್‌ಗಳ ಮಾರ್ಗಗಳಲ್ಲಿ ಎಸಿ ಬಸ್ ಸೇವೆ ಹೆಚ್ಚಿಸಲು ಮತ್ತು ಐಟಿ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಜೊತೆಗೆ ಎಲ್ಲಾ ನಿಗಮಗಳಲ್ಲಿ ಆದಾಯ ಸೋರಿಕೆ ತಡೆದು ಅನಗತ್ಯ ವೆಚ್ಚ ಕಡಿತಗೊಳಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಸಚಿವರು ಸೂಚಿಸಿದ್ದಾರೆ.

Continue Reading

ದಿನದ ಸುದ್ದಿ

EV ನೋಂದಣಿಯಲ್ಲಿ ಕರ್ನಾಟಕದ ಸಾಧನೆ – ಶುದ್ಧ ಚಲನೆಗೆ ಬೆಸ್ಕಾಂ ಮುನ್ನಡೆ

Published

on

ಕರ್ನಾಟಕ – ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ

ಸುದ್ದಿದಿನ,ಬೆಂಗಳೂರು: ರಾಜ್ಯವು ಇವಿ ನೋಂದಣಿಯಲ್ಲಿ ದೇಶದಲ್ಲೇ ಪ್ರಮುಖ ಸ್ಥಾನ ಪಡೆದಿದ್ದು, ಶುದ್ಧ ಚಲನೆಗೆ ತಂತ್ರಜ್ಞಾನ ಮತ್ತು ಮೂಲಸೌಕರ್ಯವನ್ನು ಒದಗಿಸುವಲ್ಲಿ ಮುಂಚೂಣಿಯಲ್ಲಿದೆ ಹಾಗೂ ವಿಶ್ವ ಇವಿ ದಿನದ ಸಂದರ್ಭದಲ್ಲಿ ಭಾರತದ ಎಲೆಕ್ಟ್ರಿಕ್ ವಾಹನ ಕ್ರಾಂತಿಗೆ ಮುನ್ನಡೆ ಸಾಧಿಸಿರುವುದು ಶ್ಲಾಘನೀಯ.

http://Visit : www.suddidina.com

ಕರ್ನಾಟಕವು ಒಟ್ಟು ಇವಿ ನೋಂದಣಿಯಲ್ಲಿ 3ನೇ ಸ್ಥಾನ ಪಡೆದಿದ್ದು, e-2W (ಎಲೆಕ್ಟ್ರಿಕ್ ಎರಡು ಚಕ್ರ ವಾಹನ) ಮತ್ತು e-4W (ಎಲೆಕ್ಟ್ರಿಕ್ ನಾಲ್ಕು ಚಕ್ರ ವಾಹನ) ನೋಂದಣಿಯಲ್ಲಿ 2ನೇ ಸ್ಥಾನ ಪಡೆದಿದೆ. ಇದು ರಾಜ್ಯದ ಜನರು ಎಲೆಕ್ಟ್ರಿಕ್ ವಾಹನಗಳನ್ನು ಸ್ವೀಕರಿಸುವ ಪ್ರಮಾಣ ಹೆಚ್ಚುತ್ತಿರುವುದನ್ನು ತೋರಿಸುತ್ತದೆ. 2027 ಹಣಕಾಸು ವರ್ಷದಲ್ಲಿ EV ಪ್ರವೇಶ ಪ್ರಮಾಣ 14.67% ಆಗಿದ್ದು, ಇದು ದೇಶದ ಮಟ್ಟದಲ್ಲಿ ಗಮನಾರ್ಹ ಸಾಧನೆಯಾಗಿದೆ.

ರಾಜ್ಯದ ಇವಿ ಮೂಲಸೌಕರ್ಯ ಅಭಿವೃದ್ಧಿಗೆ ಬೆಸ್ಕಾಂ ನೊಡಲ್ ಏಜೆನ್ಸಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆ, ಸಾರ್ವಜನಿಕರಿಗೆ ಸುಲಭವಾಗಿ ಲಭ್ಯವಾಗುವ ಚಾರ್ಜಿಂಗ್ ಸೌಲಭ್ಯ, ಹಾಗೂ ಶುದ್ಧ ಚಲನೆಗೆ ಅಗತ್ಯವಾದ ತಂತ್ರಜ್ಞಾನವನ್ನು ಒದಗಿಸುವಲ್ಲಿ ಬೆಸ್ಕಾಂ ಪ್ರಮುಖ ಪಾತ್ರವಹಿಸಿದೆ.

ಕರ್ನಾಟಕ ಸರ್ಕಾರವು ಶುದ್ಧ ಚಲನೆಗೆ ಉತ್ತೇಜನ ನೀಡಲು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇವಿ ಖರೀದಿಗೆ ಪ್ರೋತ್ಸಾಹಕ ಯೋಜನೆಗಳು, ಚಾರ್ಜಿಂಗ್ ಮೂಲಸೌಕರ್ಯ ವಿಸ್ತರಣೆ, ಹಾಗೂ ಹಸಿರು ತಂತ್ರಜ್ಞಾನವನ್ನು ಉತ್ತೇಜಿಸುವ ಕ್ರಮಗಳು ಇವಿ ಕ್ರಾಂತಿಗೆ ಬಲ ನೀಡಿವೆ.

ಇವಿ ಬಳಕೆಯ ಹೆಚ್ಚಳದಿಂದ ಪರಿಸರ ಮಾಲಿನ್ಯ ಕಡಿಮೆಯಾಗುವುದು, ಇಂಧನ ಅವಲಂಬನೆ ಕಡಿಮೆಯಾಗುವುದು ಹಾಗೂ ಶುದ್ಧ ಶಕ್ತಿಯ ಬಳಕೆ ಹೆಚ್ಚಾಗುವುದು. ಇದು ಕರ್ನಾಟಕವನ್ನು ಹಸಿರು ರಾಜ್ಯವಾಗಿ ರೂಪಿಸುವತ್ತ ಪ್ರಮುಖ ಹೆಜ್ಜೆಯಾಗಿದೆ.

ವಿಶ್ವ ಇವಿ ದಿನದ ಅಂಗವಾಗಿ, ಕರ್ನಾಟಕವು ತನ್ನ ಸಾಧನೆಗಳನ್ನು ಹಂಚಿಕೊಂಡು, ಮುಂದಿನ ದಿನಗಳಲ್ಲಿ ಶುದ್ಧ ಚಲನೆಗೆ ಇನ್ನಷ್ಟು ಬಲ ನೀಡಲು ಬದ್ಧವಾಗಿದೆ. ಇವಿ ಕ್ರಾಂತಿಯ ಮೂಲಕ ಕರ್ನಾಟಕವು ಭಾರತದ ಭವಿಷ್ಯವನ್ನು ಹಸಿರು ಮತ್ತು ಶಾಶ್ವತ ದಿಕ್ಕಿನಲ್ಲಿ ಮುನ್ನಡೆಸುತ್ತಿದೆ.

Continue Reading

Trending