Connect with us

ಲೈಫ್ ಸ್ಟೈಲ್

ಭಾನುವಾರದ ಭವಿಷ್ಯ | ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ

Published

on

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆ ಮಾಡುತ್ತಾ ಈ ದಿನದ ದ್ವಾದಶ ರಾಶಿ ಫಲಗಳನ್ನು ತಿಳಿಯೋಣ.

ಖ್ಯಾತ ಜ್ಯೋತಿಷ್ಯರು ಗಿರಿಧರಭಟ್
ನಿಮ್ಮ ಸರ್ವ ಸಮಸ್ಯೆಗಳ ಪರಿಹಾರ ಮತ್ತು ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ:
9945410150

ಮೇಷ ರಾಶಿ

ಈ ದಿನ ಹೆಚ್ಚಿನ ಶ್ರಮ ಕಾಣಬಹುದಾಗಿದೆ. ಕೆಲಸವನ್ನು ಪೂರ್ತಿಗೊಳಿಸುವ ಜವಾಬ್ದಾರಿ ನಿಮ್ಮ ಮೇಲೆ ಬೀಳಬಹುದು. ನಿಮ್ಮ ವ್ಯಕ್ತಿತ್ವವನ್ನು ವಿಶ್ವಾಸ ಹಾಗೂ ದೃಢತೆಯತ್ತ ರೂಪಿಸಿಕೊಳ್ಳಬೇಕಾಗಿದೆ. ವ್ಯವಹಾರದಲ್ಲಿ ಬುದ್ಧಿವಂತಿಕೆಯಿಂದ ಲಾಭಗಳಿಸುವ ಪ್ರಯತ್ನಮಾಡಿ. ಯೋಜನೆಗಳಲ್ಲಿ ನಿರೀಕ್ಷಿತ ಗೆಲುವು ಸಾಧಿಸಲು ನೀವು ನಿಮ್ಮದೇ ಆದ ರೂಪರೇಷೆಗಳನ್ನು ಸಿದ್ಧಪಡಿಸಿಕೊಳ್ಳಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಷಭ ರಾಶಿ

ಅನಗತ್ಯವಾಗಿ ಬೇರೆಯವರ ಮಾತುಗಳಿಗೆ ಕಟ್ಟು ಬೀಳಬೇಡಿ. ಜನಗಳೊಂದಿಗೆ ಬೆರೆಯಲು ಪ್ರಯತ್ನಿಸಿ. ನಿಮ್ಮಲ್ಲಿನ ಸಂಕೋಚ ಸ್ವಭಾವನ್ನು ತೆಗೆದುಹಾಕಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ದೊರೆಯಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಿಥುನ ರಾಶಿ

ನಿಮ್ಮ ಭೋಗವಿಲಾಸತನ ಜೀವನವನ್ನು ಹಾಗೂ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಮುನ್ನಡೆಯಿರಿ. ಭವಿಷ್ಯದ ಬಗೆಗಿನ ನಿಮ್ಮ ದೃಷ್ಟಿಕೋನ ವಿಶಾಲ ವಾಗಿರಲಿ. ನೀವು ನಡೆಸುತ್ತಿರುವ ಯೋಜನೆ ಬಗೆಗಿನ ಕಾರ್ಯವೈಖರಿಯೂ ಉತ್ತಮವಾಗಿದ್ದು ಅದನ್ನೇ ಮುಂದುವರಿಸುವುದು ಒಳ್ಳೆಯದು, ಕೆಲವು ಜನಗಳು ನಿಮ್ಮ ದಿಕ್ಕುತಪ್ಪಿಸುವ ಸಾಧ್ಯತೆ ಕಂಡುಬರುವುದು.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕರ್ಕಾಟಕ ರಾಶಿ

ಬಂಡವಾಳ ಕ್ರೂಢೀಕರಣ ಮಾಡುವ ವಿಷಯದಲ್ಲಿ ಹಲವರು ನಿಮ್ಮ ನೆರವಿಗೆ ಬರುವ ಸಾಧ್ಯತೆ ಇದೆ. ಆಲಸ್ಯತನ ಅಥವಾ ಕೆಲವು ಗೊಂದಲಗಳು ನಿಮ್ಮ ಆರ್ಥಿಕ ಪರಿಸ್ಥಿತಿಯನ್ನು ಕೆಳಹಂತಕ್ಕೆ ತಳ್ಳಲ್ಪಡುತ್ತದೆ ಎಚ್ಚರವಿರಲಿ. ಉದ್ಯೋಗದ ಸ್ಥಳದಲ್ಲಿ ಸುಖಾಸುಮ್ಮನೆ ಸಮಸ್ಯೆಗಳು ಸೃಷ್ಟಿಯಾಗಬಹುದು ಅಥವಾ ಕೆಲವು ದೋಷಾರೋಪಣೆಗಳು ನಿಮ್ಮ ಮೇಲೆ ಬರುವ ಸಾಧ್ಯತೆ ಇದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಸಿಂಹ ರಾಶಿ

ನೀವು ಇಂದು ತೆಗೆದುಕೊಳ್ಳುವ ನಿರ್ಧಾರಗಳು ಭವಿಷ್ಯದ ಬುನಾದಿಗೆ ಉತ್ತಮ ಮಾರ್ಗ ಆಗಲಿದೆ. ಹಿರಿಯರ ಸಲಹೆಗಳಿಂದ ನಿಮ್ಮ ಆರ್ಥಿಕ ವ್ಯವಸ್ಥೆ ಸದೃಢವಾಗುತ್ತದೆ, ಹಾಗೂ ಉಳಿತಾಯ, ಹೂಡಿಕೆಗಳಲ್ಲಿ ಆಸಕ್ತಿ ಬೆಳೆಯಲಿದೆ. ನಿಮ್ಮ ಕೆಲಸದಲ್ಲಿ ಸಂಪೂರ್ಣ ಯಶಸ್ಸು ಪಡೆಯುತ್ತೀರಿ ಆದರೆ ಅದರ ಶ್ರೇಯಸ್ಸು ಪರರ ಪಾಲಾಗುವ ಸಾಧ್ಯತೆ ಇರಲಿದೆ ಎಚ್ಚರವಹಿಸಿ. ದೈಹಿಕ ಕಾರ್ಯಕ್ಷಮತೆಯಲ್ಲಿ ಸಮಸ್ಯೆಗಳು ತಲೆದೋರಬಹುದು ಆದಷ್ಟು ಆರೋಗ್ಯದ ಕಡೆ ಗಮನ ನೀಡಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕನ್ಯಾ ರಾಶಿ

ರಾಜಿ ಪಂಚಾಯಿತಿಗಳಲ್ಲಿ ಇಂದು ಪಾಲ್ಗೊಳ್ಳದಿರುವುದು ಒಳ್ಳೆಯದು ಏಕೆಂದರೆ ನಿಮ್ಮ ಬಗ್ಗೆ ಅಪಾರ್ಥ ಸೃಷ್ಟಿಯಾಗಲಿದೆ. ನಿಮಗೆ ಆಸಕ್ತಿಯಿರುವ ವಿಷಯಗಳಲ್ಲಿ ಮುಂದುವರೆಯುವುದು ಒಳ್ಳೆಯದು, ಇನ್ನೊಬ್ಬರ ಬಲವಂತವನ್ನು ಕಡೆಗಣಿಸಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ತುಲಾ ರಾಶಿ

ಅವಿಸ್ಮರಣೀಯ ಎನಿಸುವ ಘಟನೆಗಳು ಜರುಗುವುದ್ದನ್ನು ಈ ದಿನ ನೋಡಬಹುದಾಗಿದೆ. ಕುಟುಂಬದ ಜೊತೆಗೆ ಸ್ವಲ್ಪಮಟ್ಟಿಗೆ ಕಾಲಕಳೆಯಲು ಪ್ರಯತ್ನಿಸಿ ಇದರಿಂದ ನಿಮ್ಮ ಒತ್ತಡಗಳು ದೂರವಾಗಲಿದೆ. ಆಕಸ್ಮಿಕವಾದ ಪ್ರಯಾಣ ಮಾಡಬೇಕಾದ ಸಂದರ್ಭಗಳು ಎದುರಾಗಬಹುದು ಆದಷ್ಟು ಈದಿನ ಮುಂದೂಡುವುದು ಒಳಿತು. ಕುಟುಂಬದಲ್ಲಿ ಶುಭ ಸುದ್ದಿಯನ್ನು ಕೇಳುವ ಸಾಧ್ಯತೆಗಳು ಕಾಣಬಹುದು. ಇತರರ ಒತ್ತಾಯಕ್ಕೆ ನೀವು ಹೆಚ್ಚಿನ ಪ್ರಾಶಸ್ತ್ಯ ನೀಡುವುದು ಬೇಡ, ನಿಮಗೆ ಸರಿ ಕಂಡದ್ದನ್ನು ಮಾಡಲು ಮುಂದಾಗಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ವೃಶ್ಚಿಕ ರಾಶಿ

ಚಟುವಟಿಕೆ ಶೀಲರಾಗಿ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಕುಟುಂಬದಲ್ಲಿನ ವೈಯಕ್ತಿಕ ಸಮಸ್ಯೆಗಳು ಇತ್ಯರ್ತ ವಾಗಲಿದೆ. ಇಂದು ನಿಮ್ಮನ್ನು ಭೇಟಿಯಾಗಲು ಆತ್ಮೀಯರು ಬರಬಹುದು ಅವರೊಡನೆ ಉತ್ತಮ ಬಾಂಧವ್ಯ ರೂಢಿಸಿಕೊಳ್ಳಿ. ಉದ್ಯೋಗದಲ್ಲಿನ ಸಮಸ್ಯೆಗಳನ್ನು ತಕ್ಷಣವೇ ಪರಿಹಾರ ಮಾಡುವುದು ಒಳಿತು. ಸಂಗಾತಿಯ ಹಿತಾಸಕ್ತಿಯಿಂದ ನಿಮ್ಮೆಲ್ಲಾ ಕಾರ್ಯಗಳು ಪ್ರಗತಿಯತ್ತ ಸಾಗಲಿದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಧನಸ್ಸು ರಾಶಿ

ಶುಭ ಸುದ್ದಿಗಳಿಂದ ಮನೆಯಲ್ಲಿ ಸಂತಸದ ವಾತಾವರಣ ಕಂಡುಬರುತ್ತದೆ. ಮನಸ್ಥಿತಿಯು ಯಾವುದೋ ಒಂದು ವಿಷಯದಲ್ಲಿ ಕೊರಗುತ್ತಿರುವುದು ಇದನ್ನು ಸರಿಪಡಿಸಿಕೊಳ್ಳಿ. ಹೂಡಿಕೆಗಳಲ್ಲಿ ಅತ್ಯಂತ ಜಾಗ್ರತೆವಹಿಸಿ. ನಯವಂಚಕರ ಹಾವಳಿಯಿಂದ ಪಾರಾಗಲು ಸೂಕ್ಷ್ಮ ಬುದ್ಧಿಯನ್ನು ಉಪಯೋಗಿಸಿ. ಹಿಡಿದ ಕೆಲಸವು ಈ ದಿನ ಸಂಪೂರ್ಣ ಮಾಡಿ ಮುಗಿಸುವಿರಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮಕರ ರಾಶಿ

ಉದ್ಯೋಗದಲ್ಲಿನ ಸಮಸ್ಯೆಯನ್ನು ನಿವಾರಣೆಗೆ ಆದ್ಯತೆ ನೀಡಿ. ನಿಮ್ಮ ಮನಸ್ಥಿತಿಯನ್ನು ಆದಷ್ಟು ಸುಧಾರಿಸಿಕೊಳ್ಳುವುದು ಒಳಿತು. ಆರೋಗ್ಯದ ಕಡೆಗೆ ಗಮನವಿರಲಿ. ಈ ದಿನ ನವೀನ ಕಲ್ಪನೆಗಳಿಂದ ಆರ್ಥಿಕ ಸಂಪತ್ತು ವೃದ್ಧಿಯಾಗುವುದು. ನಿಮ್ಮ ಬಹು ಯೋಜಿತ ಕೆಲಸವು ಕಾರ್ಯರೂಪಕ್ಕೆ ಬರುವುದನ್ನು ಈ ದಿನ ಕಾತರದಿಂದ ನೀವು ಕಾಯುವಿರಿ. ಹಿರಿಯರೊಡನೆ ನಿಮ್ಮ ಮಹತ್ವದ ವಿಷಯಗಳನ್ನು ಚರ್ಚೆ ನಡೆಸುವ ಸಾಧ್ಯತೆ ಇದೆ. ಬಹುದಿನದ ಸಮಸ್ಯೆಗಳಿಗೆ ಅಥವಾ ವ್ಯಾಜ್ಯಗಳಿಗೆ ಪರಿಹಾರ ದೊರಕುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಕುಂಭ ರಾಶಿ

ಉದ್ಯೋಗದಲ್ಲಿ ಅಸ್ತಿತ್ವಕ್ಕಾಗಿ ಹೋರಾಡಬೇಕಾದ ಹೊಣೆಗಾರಿಕೆ ನಿಮ್ಮದಾಗಿದೆ. ಹೂಡಿಕೆಗಳು ಲಾಭಾಂಶದಿಂದ ಕೂಡಿರುತ್ತದೆ. ಮಧ್ಯವರ್ತಿ ಕೆಲಸಗಾರರಲ್ಲಿ ಉತ್ತಮ ಆದಾಯ ನಿರೀಕ್ಷಿಸಬಹುದು. ಮಕ್ಕಳಿಂದ ಸಂತಸದ ವಾತಾವರಣ ಕಂಡುಬರುತ್ತದೆ. ಪ್ರೇಮಿಗಳಲ್ಲಿ ಪರಸ್ಪರ ಭಿನ್ನಾಭಿಪ್ರಾಯ ತಲೆದೋರಬಹುದು ಆದಷ್ಟು ಲಘುವಾಗಿ ಮಾತನಾಡಿ ಪೇಚಿಗೆ ಸಿಲುಕಬೇಡಿ. ಸೋಲುಗಳು ನಿಮ್ಮ ಜೀವನದ ಬಹುದೊಡ್ಡ ಪಾಠ ಕಲಿಸಿಕೊಡುತ್ತದೆ ಆದಷ್ಟು ದರ್ಪ ಸ್ವಭಾವವನ್ನು ತ್ಯಜಿಸುವುದು ಸೂಕ್ತ. ಚರ್ಚಾ ಕೋಟಗಳಲ್ಲಿ ವಾದ-ವಿವಾದಗಳು ವಿವಾದ ಸ್ವರೂಪ ಪಡೆಯಬಹುದು ಎಚ್ಚರವಿರಲಿ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಮೀನ ರಾಶಿ

ಸಂಗಾತಿಯ ಮನೋಭಿಲಾಷೆಯನ್ನು ಪೂರ್ಣಗೊಳಿಸುವಿರಿ, ಅವರ ಕಠಿಣ ಸ್ವಭಾವವು ನಿಮ್ಮ ಒಳಿತಿಗಾಗಿ ಇರವುದು. ಉದ್ಯೋಗ ಸ್ಥಳದಲ್ಲಿ ನಿಮ್ಮ ಕೆಲವು ವರ್ತನೆಗಳು ಇರುಸುಮುರುಸು ತಂದುಕೊಡಬಹುದು ಎಚ್ಚರವಿರಲಿ. ಸಹವರ್ತಿಗಳಿಂದ ಕಿರಿಕಿರಿ ಬರಬಹುದು ಆದಷ್ಟು ಈ ದಿನ ತಾಳ್ಮೆಯಿಂದ ಮಾತನಾಡಿ. ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಿ. ಆತುರದಿಂದ ಮಾಡಿದ ಹೂಡಿಕೆಗಳು ನಷ್ಟ ತರಬಹುದಾದ ಸಾಧ್ಯತೆ ಇದೆ. ಸಮಗ್ರ ದೃಷ್ಟಿಕೋನದಿಂದ ಬಂಡವಾಳ ಹೂಡಿಕೆ ಮಾಡಿ. ಕ್ರೀಡಾ ಚಟುವಟಿಕೆಗಳಲ್ಲಿ ಉತ್ತಮ ಜಯ ಸಂಪಾದನೆ ಆಗುತ್ತದೆ.

ಗಿರಿಧರ ಭಟ್
9945410150
ಮಾಹಿತಿಗಾಗಿ ಕರೆ ಮಾಡಿ

ಜ್ಯೋತಿಷ್ಯರು ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಹಣಕಾಸು, ಸಾಲಬಾದೆ, ಪ್ರೇಮ ವಿಚಾರ, ದಾಂಪತ್ಯ, ಶತ್ರುಬಾಧೆ, ಕೌಟುಂಬಿಕ ಸಮಸ್ಯೆ ಇನ್ನೂ ಹತ್ತು ಹಲವಾರು ಸಮಸ್ಯೆಗಳ ಪರಿಹಾರಕ್ಕಾಗಿ ಇಂದೇ ಕರೆ ಮಾಡಿ.
9945410150

ದಿನದ ಸುದ್ದಿ

ತಾಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣ | ಭದ್ರಾ ನಾಲೆ ನೀರು ನಿರ್ವಹಣೆ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಕನ್ನಡ ಭವನ ನಿರ್ಮಾಣಕ್ಕಾಗಿ ಸ್ಥಳ ಗುರುತಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ತಿಳಿಸಿದರು.

ಗುರುವಾರ(ಫೆ.19) ರಂದು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ನಾಲೆಯ ಕೊನೆಯ ಭಾಗದ ರೈತರಿಗೆ ನೀರು ತಲುಪಿಸಲು ನಾಲೆಯುದ್ದಕ್ಕೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಅನಧಿಕೃತವಾಗಿ ನೀರು ಎತ್ತುವವರ ಮೋಟಾರ್‌ಗಳನ್ನು ವಶಪಡಿಸಿಕೊಳ್ಳಲಾಗುವುದು.

ಪ್ರಿಪೇಯ್ಡ್ ಆಟೋಗಳನ್ನು ಚಾಲ್ತಿಗೊಳಿಸಿದ್ದು, ಇದಕ್ಕೆ ರೂ.38/-ಶುಲ್ಕ ನಿಗದಿಪಡಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ರಕ್ಷಣಾಧಿಕಾರಿ ಶೇಖರ್ ಹೆಚ್.ಟಿ, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

Trending