Connect with us

ದಿನದ ಸುದ್ದಿ

ಭಾನುವಾರದ ಭವಿಷ್ಯ| ದಾಂಪತ್ಯ, ಕೌಟುಂಬಿಕ ಕಲಹ, ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ಪರಿಹಾರ : ಕರೆಮಾಡಿ

Published

on

ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ಸ್ಮರಣೆಯನ್ನು ಮಾಡುತ್ತಾ ಈ ದಿನದ ರಾಶಿಗಳ ಶುಭಾಶುಭಫಲಗಳನ್ನು ತಿಳಿಯೋಣ.

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ವ್ಯವಹಾರ, ಪ್ರೇಮ ವಿಷಯ, ದಾಂಪತ್ಯ, ಕೌಟುಂಬಿಕ ಕಲಹ, ಇನ್ನು ಇತ್ಯಾದಿ ಗುಪ್ತ ಕಠಿಣ ಸಮಸ್ಯೆಗಳಿಗೆ ಶಾಸ್ತ್ರೋಕ್ತ ತಾಂತ್ರಿಕ್ ವಿಧಾನಗಳಿಂದ ಪರಿಹಾರ ಶತಸಿದ್ಧ.

ಇಂದೇ ಕರೆ ಮಾಡಿ: 9945410150

ಮೇಷ ರಾಶಿ

ಕೆಲವು ಮಾತುಗಳಿಂದ ಮನಸ್ಸಿಗೆ ಸಂಕಟ. ಹೂಡಿಕೆಗಳಲ್ಲಿ ಜಾಗ್ರತೆ ವಹಿಸಿ. ಕುಟುಂಬದವರ ಮಾತುಗಳನ್ನು ಪಾಲಿಸುವುದು ಲಾಭ. ಕೆಲಸದಲ್ಲಿನ ಶಿಸ್ತಿನಿಂದ ಪ್ರಮಾದಗಳು ಜರುಗಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಷಭ ರಾಶಿ

ನಿಮ್ಮ ಧೈರ್ಯ ಬಲಿಷ್ಠತೆ ಇವುಗಳು ತೋರ್ಪಡಿಕೆಗಾಗಿ ಅಲ್ಲ. ಕೆಲವು ದುಸ್ಸಾಹಸಕ್ಕೆ ಕೈ ಹಾಕುವುದು ನಿಮಗೆ ಹಿತವಲ್ಲ. ಹಣಕಾಸಿನ ಸ್ಥಿತಿಯು ಹಳೆಯ ಯೋಜನೆಗಳಿಂದ ಲಾಭದಾಯಕವಾಗಲಿದೆ. ನಿಮ್ಮ ಸಾಧನೆಯಿಂದಲೇ ಖ್ಯಾತಿ ಪಡೆಯುತ್ತೀರಿ. ಸಂಗಾತಿಯೊಡನೆ ಪ್ರೀತಿಯಿಂದ ಇರುವುದು ಒಳ್ಳೆಯ ಬೆಳವಣಿಗೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಿಥುನ ರಾಶಿ

ನಿಮ್ಮ ವಿವೇಚನಾರಹಿತ ಆರ್ಥಿಕ ಚಟುವಟಿಕೆಯು ಸಮಸ್ಯೆಯಲ್ಲಿ ಸಿಲುಕಬಹುದು. ಕುಟುಂಬದವರ ವಿಶ್ವಾಸ ಗೆಲ್ಲುವುದು ಮುಖ್ಯ. ನಿಮ್ಮ ಕಷ್ಟದ ಸಂದರ್ಭದಲ್ಲಿ ನಿಮ್ಮ ಪತ್ನಿ ನಿಮ್ಮನ್ನು ಕೈ ಹಿಡಿದು ನಡೆಸುವವರು. ಉದ್ಯಮ ವಲಯದಲ್ಲಿ ಗುಣಮಟ್ಟದ ವಸ್ತುಗಳ ತಯಾರಿಕೆಯು ನಿಮಗೆ ಲಾಭ ತಂದುಕೊಡುತ್ತದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕರ್ಕಾಟಕ ರಾಶಿ

ಇಂದು ನೀವು ಮುಕ್ತ ವಾತಾವರಣ ಬಯಸುವಿರಿ. ಪರಿಸರದ ಒಂದು ಭಾಗವಾಗಿ ಆನಂದಿಸುವಿರಿ. ಹೊಸ ಉದ್ಯೋಗ ಅವಕಾಶಗಳು ಸಿಗಲಿದೆ. ಆತ್ಮೀಯ ವರ್ಗದ ಜನಗಳ ಚುಚ್ಚು ಮಾತು ನಿಮ್ಮನ್ನು ಚಿಂತೆ ಗೊಳಿಸುತ್ತದೆ. ಪತ್ನಿಯ ಮನೆ ಕಡೆಯಿಂದ ಕಿರಿಕಿರಿ ಸಾಧ್ಯತೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಸಿಂಹ ರಾಶಿ

ಕುಟುಂಬದಲ್ಲಿನ ನಿರುದ್ಯೋಗ ಸಮಸ್ಯೆಗಳು ಬೇಸರ ತರಿಸಬಹುದು. ಅವಕಾಶಗಳು ನಿಮ್ಮ ಮುಂದೆ ಇದ್ದರು ಅದನ್ನು ಉಪಯೋಗಿಸಿಕೊಳ್ಳುವ ಸಾಮರ್ಥ್ಯ ಕಡಿಮೆ ಇದೆ. ಕೆಲವು ನಿಂದನೆ ಮಾತುಗಳಿಗೆ ಬೆಲೆ ಕೊಡದೆ ಇರುವುದು ಉತ್ತಮ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕನ್ಯಾ ರಾಶಿ

ಯಾವುದೇ ಅಡೆತಡೆಯಿಲ್ಲದೆ ಕೆಲಸ ಕಾರ್ಯದಲ್ಲಿ ಜಯ ಸಂಪಾದನೆ ಆಗಲಿದೆ. ವ್ಯವಹಾರಸ್ಥರಿಗೆ ಶುಭ ಫಲಗಳು. ಮಕ್ಕಳಿಗಾಗಿ ನೂತನ ಕ್ರಿಯಾತ್ಮಕ ಚಟುವಟಿಕೆಯಲ್ಲಿ ತೊಡಗುವಿರಿ. ಬಾಕಿ ಉಳಿದಿರುವ ಕೆಲಸವು ಪೂರ್ಣ ಮಾಡುವಿರಿ. ನಿಮ್ಮಲ್ಲಿನ ಆಲಸ್ಯತನ ಕಡಿಮೆಯಾಗ ಬೇಕಾಗಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ತುಲಾ ರಾಶಿ

ಆರ್ಥಿಕ ಮುಗ್ಗಟ್ಟಿನಿಂದ ಕೆಲಸವನ್ನು ಸ್ಥಗಿತಗೊಳಿಸ ಬೇಕಾದ ಸಂದರ್ಭ ಬರಬಹುದು. ನಿಮ್ಮ ಕೆಲವು ನಡೆಯನ್ನು ಆತ್ಮೀಯರು ಟೀಕೆ-ಟಿಪ್ಪಣಿ ಮಾಡಲಿದ್ದಾರೆ. ಇಂದು ಪ್ರವಾಸವನ್ನು ಮಾಡದಿರುವುದು ಸೂಕ್ತ. ದಾಂಪತ್ಯದಲ್ಲಿ ಉತ್ತಮ ಹೊಂದಾಣಿಕೆ ಕಾಯ್ದುಕೊಳ್ಳಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ವೃಶ್ಚಿಕ ರಾಶಿ

ನಿಮ್ಮ ವ್ಯವಸ್ಥಿತ ಕಾರ್ಯಗಳಿಗೆ ಜನರಿಂದ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಆಲೋಚನೆಗಳಿಗೆ ಮಹತ್ವದ ಸ್ಥಾನ ಸಿಗುವ ಸಾಧ್ಯತೆ ಇದೆ. ದೇವಸ್ಥಾನಗಳ ಭೇಟಿನೀಡುವ ನಿಮ್ಮ ಮನ ಇಚ್ಛೆ ಫಲಿಸಲಿದೆ. ಸಾಮಾಜಿಕ ರಾಜಕೀಯ ಕ್ಷೇತ್ರಗಳಲ್ಲಿ ಉತ್ತಮ ವಾತಾವರಣ ಕಂಡು ಬರಲಿದೆ. ನಿಮ್ಮ ಪ್ರತಿಯೊಂದು ಆಶೋತ್ತರಗಳಿಗೆ ಪತ್ನಿಯಿಂದ ಸಹಕಾರ ದೊರೆಯಲಿದೆ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಧನಸ್ಸು ರಾಶಿ

ನಿಮ್ಮ ಶಕ್ತಿ ಅನುಸಾರ ಯೋಜನೆಗಳಲ್ಲಿ ಪಾಲ್ಗೊಳ್ಳುವುದು ಒಳ್ಳೆಯದು. ಪ್ರತಿಯೊಂದು ಹೆಜ್ಜೆ ಸಹ ತಾಳ್ಮೆ ಮತ್ತು ಯೋಚಿಸಿ ಇಡುವುದನ್ನು ರೂಡಿಸಿಕೊಳ್ಳಿ. ಮಾಡಲು ಇಚ್ಚಿಸಿರುವ ಕೆಲಸವನ್ನು ಪೂರ್ಣ ಮುಗಿಸುವ ತನಕ ಬಿಡಬೇಡಿ. ನಿಮ್ಮ ಮನಸ್ಸನ್ನು ಆದಷ್ಟು ಪ್ರಶಾಂತವಾಗಿ ಇಟ್ಟುಕೊಳ್ಳಿ ವಿನಾಕಾರಣ ಗೊಂದಲ ಮಾಡಿಕೊಳ್ಳುವುದು ಬೇಡ. ಉದ್ಯೋಗದ ಆಯ್ಕೆಯಲ್ಲಿ ಪರಣಿತರ ಸಲಹೆಯನ್ನು ಪಡೆಯಿರಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮಕರ ರಾಶಿ

ಇಂದು ದೈವ ಸಂಕಲ್ಪದ ಮೊರೆ ಹೋಗುವ ಸಾಧ್ಯತೆ ಇದೆ. ಉದ್ಯೋಗದಲ್ಲಿ ಒದಗುವ ಸಂಕಷ್ಟಗಳಿಗೆ ಸೂಕ್ತ ಪರಿಹಾರವನ್ನು ಹುಡುಕಿ. ಕೌಟುಂಬಿಕ ವ್ಯಾಜ್ಯಗಳು ಹೆಚ್ಚಾಗುವ ಸಂದರ್ಭ ಬರಬಹುದು. ಹಣಕಾಸಿನ ಪರಿಸ್ಥಿತಿಯನ್ನು ನೋಡಿಕೊಂಡು ಕೆಲಸವನ್ನು ಒಪ್ಪಿಕೊಳ್ಳುವುದು ಒಳ್ಳೆಯದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕುಂಭ ರಾಶಿ

ನಿಮ್ಮಲ್ಲಿ ಹೊಳೆಯುವ ಆರ್ಥಿಕ ದಾರಿಯು ನಿಮ್ಮ ಭವಿಷ್ಯವನ್ನು ಸುಸ್ಥಿರದಲ್ಲಿ ಇಡಲಿದೆ. ನಿಮ್ಮ ಕೆಲಸಗಳಿಗೆ ಸಮಾಜದಲ್ಲಿ ಉತ್ತಮ ಸಹಕಾರ ದೊರೆಯಲಿದೆ. ನಿಮ್ಮ ಕಾರ್ಯಗಳಲ್ಲಿ ಸಮಸ್ಯೆಗಳು ಹೆಚ್ಚಾಗಬಹುದು ಆದಷ್ಟು ಅದು ಅದರ ಪರಿಹಾರಕ್ಕೆ ಮುಂದಾಗಿ. ಇನ್ನೊಬ್ಬರ ಮಾತುಗಳನ್ನು ಕೇಳಿ ಬಂಡವಾಳ ಹಾಕಿ ಸಮಸ್ಯೆ ಎದುರಿಸುವ ಸಾಧ್ಯತೆಯಿದೆ ಎಚ್ಚರವಿರಲಿ. ಇಂದು ಆರ್ಥಿಕ ಮುಗ್ಗಟ್ಟಿನಿಂದ ಸಾಲ ಪಡೆಯುವ ಪ್ರಮೇಯ ಬರಬಹುದು.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಮೀನ ರಾಶಿ

ಕುಟುಂಬದೊಡನೆ ಪ್ರವಾಸದ ಚಿಂತನೆ ಮಾಡುವಿರಿ. ಕಲಾತ್ಮಕ ಕರ್ಮಿಗಳಿಗೆ ಅವಕಾಶಗಳು ಹೆಚ್ಚಾಗಲಿದೆ. ನಿಮ್ಮ ಸ್ವಸಾಮರ್ಥ್ಯ ಬಲದಿಂದ ಕಾರ್ಯೋನ್ಮುಖರಾಗಿ ಸಾಮಾಜಿಕ ಕ್ಷೇತ್ರದಲ್ಲಿ ಮಿಂಚಲಿದ್ದೀರಿ. ನಿಮ್ಮ ಕೆಲಸಗಳಿಂದ ಜನಮನ್ನಣೆ ಹೆಚ್ಚಾಗಲಿದೆ. ಕಷ್ಟದ ಕೆಲಸವನ್ನು ಸಹ ಸುಲಭವಾಗಿ ಮಾಡಿ ಮುಗಿಸುವಿರಿ. ಹಿರಿಯರು ನೀಡಿರುವ ಜವಾಬ್ದಾರಿಯನ್ನು ಚಾಚೂ ತಪ್ಪದೇ ಪಾಲಿಸುವುದು ಒಳ್ಳೆಯದು. ನಿಮ್ಮ ಆರ್ಥಿಕ ವ್ಯವಹಾರವನ್ನು ವಿಸ್ತರಣೆ ಮಾಡಲು ಪ್ರಯತ್ನಿಸಿ.

ಪ್ರಧಾನ ತಾಂತ್ರಿಕ್ ಗಿರಿಧರ ಭಟ್
9945410150

ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂ
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಗಿರಿಧರ ಭಟ್
ನಿಮ್ಮ ಸಮಸ್ಯೆಗಳ ಸಮಾಲೋಚನೆಗಾಗಿ ಲಭ್ಯರಿದ್ದಾರೆ. ಪರಿಹಾರ ಮಾರ್ಗದರ್ಶನಕ್ಕಾಗಿ ಇಂದೇ ಕರೆ ಮಾಡಿ: 9945410150

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

Published

on

ಆಗಸ್ಟ್ 2023 ರಿಂದ ಜುಲೈ 2026 ರವರೆಗೆ ₹28,759 ಕೋಟಿ ಸಬ್ಸಿಡಿ ಬಿಡುಗಡೆ; ಪ್ರತಿ ತಿಂಗಳು 200 ಯೂನಿಟ್ ಉಚಿತ ವಿದ್ಯುತ್‌ನಿಂದ ಕೋಟ್ಯಂತರ ಕುಟುಂಬಗಳ ಆರ್ಥಿಕ ಸಬಲೀಕರಣ

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.

ಹೌದು! 2023ರ ಆಗಸ್ಟ್‌ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್‌ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.

http://Visit : www.suddidina.com

ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ: 

ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್‌ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.

ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್‌ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.

ಕುಟುಂಬದ ಬಜೆಟ್‌ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:

ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.

ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

Continue Reading

ದಿನದ ಸುದ್ದಿ

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

Published

on

ಕರ್ನಾಟಕದ ವೈಟ್‌ಫೀಲ್ಡ್-ಬಂಗಾರಪೇಟೆ, ಹೊಸೂರು-ಓಮಲೂರು ಮಾರ್ಗ ಸೇರಿ 9 ರಾಜ್ಯಗಳ 1200 ಕಿ.ಮೀ ರೈಲು ಜಾಲ ವಿಸ್ತರಣೆಗೆ ಪ್ರಧಾನಿ ಮೋದಿ ಅಧ್ಯಕ್ಷತೆಯ ಸಂಪುಟ ಸಭೆಯಲ್ಲಿ ಅನುಮೋದನೆ

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.

http://Visit : www.suddidina.com

ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್‌ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.

ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:

1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್‌ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.

2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.

3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.

4. ಖರಗ್‌ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್‌ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್‌ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.

ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್‌ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.

ಕರ್ನಾಟಕಕ್ಕೆ ಏನು ಲಾಭ?

ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್‌ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.

ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್‌ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.

ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

Continue Reading

Trending