Connect with us

ಭಾವ ಭೈರಾಗಿ

ಕವಿತೆ | ನಿರರ್ಥಕರಣ

Published

on

 

ನಿರರ್ಥಕರಣವೆಂದವರಾರು
ಯಾವುದೂ ನಿರರ್ಥವಲ್ಲ
ಆ ಕಾಲದ ಅನರ್ಥಗಳ ತೇಪೆಹಾಕು, ಸಾಕು.
ಅರ್ಥಕ್ಕೆ ಹೊಸ ಅರ್ಥವ ಕೊಡು ನೊಚ್ಚಗೆನಿಸಬೇಕು ಅಷ್ಟೇ

ಸಾವು ನೋವು ಅನ್ನ ಹಸಿವುಗಳ ಹೆಗಲಿಗೆ
ತ್ಯಾಗ ಯೋಗಗಳ ನೊಗವ ಬಿಗಿದುಬಿಡು ಬಿಡು
ಅದು ಹಾಗೆ ಸಾಗುತ್ತಿರಲಿ ಬದುಕ ಬಂಡಿ
ಭ್ರಮೆಯ ಕಂತೆಗಳ ಹೊತ್ತು

ಆ ಗಂಧರ್ವನ ಹೆಡೆಮುರುಗಿ ಕಟ್ಟು ಬಿಚ್ಚಲು
ಎಷ್ಟೊಂದು ಜನ ಗರತಿಯರಿಲ್ಲಿ ಗೊತ್ತೇನು?
ಬೇಕಿದ್ದರೆ ಪೆಂಡಾಲಿಗೆ ಬಂದು ಮೈ
ರೋಮಾಂಚನ ಗೊಳ್ಳುವ ಮಾತಕೇಳು
ನಿನ್ನ ಖಾತೆಗೆ ಲಕ್ಷ ಲಕ್ಷವೇಕೆ ಕೋಟಿಕೋಟಿ ಪುಣ್ಯ
ಜಮೆಯಾದರೆ ಸಾಕಲ್ಲವೇ?
ಈಗಿದು ಶುಶೃಷಾಕಾಲ ..ಹುಣ್ಣುಗಳು..?
ವಾಸಿಯಾಗಬೇಕೆಂದರೆ ಒಂದಿಷ್ಟು ನೋವೂ ಸಹಿಸಿಕೋ

ಅದೋ..ಅಲ್ಲಿ ನೋಡು!
ಕಮ್ಮಾರ, ಕುಂಬಾರ, ಚಮ್ಮಾರ, ಲೋಹಾರ,
ಮಡಿಕೆ ಕುಡಿಕೆ ಪೊರಕೆ ಕುಡುಗೋಲು ಕಡಗೋಲು
ಮತ್ತೆ ಅವಳು ನ್ಯಾಪ್ಕಿನ್ ಹಿಡಿದು
ಇದುವರೆಗೂ ಆದ ಅರ್ಥ ಅನರ್ಥ
ನಿರರ್ಥಕರಣಗಳೆಲ್ಲವ ಸಮರ್ಥಗೊಳಿಸುತಿದ್ದಾರೆ
ಒಂದಷ್ಟು ದಿನ ಮಾತ್ರ ಬಾಕಿ
ಇನ್ನೇನು ನೀನು ದೇವಲೋಕದಂತ ಆ ರಾಜ್ಯದ
ಅತಿ ಹತ್ತಿರದಲ್ಲಿರುವೆ
ಪ್ಲೀಸ್….
ನಿರರ್ಥಕರಣವೆನಬೇಡ

ಹಜರತ್ ಅಲಿ ಉಜ್ಜಿನಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಕವಿತೆ | ಮತ್ತಿನ ಕುಣಿಕೆ

Published

on

  • ಗುರು ಸುಳ್ಯ

ನಿದೆರೆಗೆ ದೂಡದ ಮದಿರೆಯ
ಅನುಭವ
ಸದಾ ಸಂಕಟಗಳ ಹೆರುವ
ಮತ್ತಿನ ಕುಣಿಕೆ

ನನ್ನ ಮಡಿಲ ಮೇಲೆ ನನ್ನದೇ
ಒಡಲು ಮಲಗಿರಲು
ಮಲಗಲು ಹಂಬಲಿಸುವ
ಮಗುವಿನ ಮನದೊಳಗೆ
ಚಾದರವಿಲ್ಲದೆ ಅಳುವ ರಸ್ತೆಯ
ಬದಿಗಳು ಚಲಿಸುತ್ತಿದೆ

ಅಪ್ಪನ ಕೈ ಹಿಡಿದು
ಅಮ್ಮನ ಕೆನ್ನೆಯ ಮೇಲೆ
ನಡೆದ ನೆನಪುಗಳು
ಆದ ಅಪಘಾತಗಳ ಆಳ
ಅಳೆಯುತ್ತಿವೆ…

ಶತ ಪ್ರಯತ್ನ ಪಟ್ಟರೂ
ತಪ್ಪದ ದಾರಿಗೆ
ಡಾಂಬರು ಹಾಕಿಸಿದವರ
ರಾಜಕೀಯವನ್ನು ಎದುರಿಸುತ್ತಲೇ
ಹಡೆಯಬೇಕಿದೆ ಮುಂದಿನ ದಾರಿಯ

ತಿರುವುಗಳಲ್ಲಿ ಕೈ ಹಿಡಿದು
ಮೆಲ್ಲನೆ ಕರೆದೊಯ್ಯುವ
ಕವಿತೆಗಳನ್ನು
ಎಲ್ಲೆಂದರಲ್ಲಿ ಬಿಟ್ಟು ಬಿಡಲು
ಸಾಧ್ಯವಾಗುತ್ತಿಲ್ಲ

ಉಸಿರ ನಾದದಲ್ಲಿ
ತೇಯ್ದ ಗಂಧ,
ಆಟ ನಿಲ್ಲಲು ಬಿಡದೆ
ಗಮಗಮಿಸುತ್ತಿದೆ..
ಪ್ರವಾಹದಲ್ಲಿ ಕೊಚ್ಚಿಹೋಗುವ
ಮುನ್ಸೂಚನೆಯಿಲ್ಲದೇ
ಮೊದಲ ಮಳೆಯಲ್ಲಿ ನೆನೆದು
ಚಪ್ಪಲಿಗೆ ಅಂಟಿದ ಮಣ್ಣಿನ ಘಮದಂತೆ.
(ಕವಿತೆ – ಗುರು ಸುಳ್ಯ)

ಕವಿ : ಗುರು ಸುಳ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಮ್ಮ‌ ಪೂರ್ವಿಕ ಶಿವನೂ ; ಅವರ ಡುಬಾಕು ಸನಾತನವೂ..

Published

on

  • ಹರ್ಷಕುಮಾರ್ ಕುಗ್ವೆ

ಲಿಂಗವು ದೇವರಲ್ಲ ಶಿವನು ದೇವರಲ್ಲ
ಶಕ್ತಿಯೂ ದೇವರಲ್ಲ. ಮನುಷ್ಯನ ಕಲ್ಪನೆಯ ಆಳವನ್ನು ಮೀರಿದ ಯಾವ ದೇವರೂ ಇಲ್ಲ. ಅಸಲಿಗೆ ಇಡೀ ಜಗತ್ತನ್ನು ನಡೆಸುವ ದೇವರೆಂಬುದೇ ಇಲ್ಲ.

ಶಿವನು ನಮ್ಮ ಪೂರ್ವಿಕ, ಗೌರಿ ಅತವಾ ಶಕ್ತಿ ನಮ್ಮ ಪೂರ್ವಿಕಳು. ಗಂಗೆ ನಮ್ಮ ಬದುಕು. ಶಿವನ ಕೊರಳಿನ ನಾಗ ನಮ್ಮ ಕುಲ. ಲಿಂಗ ಫಲವಂತಿಕೆಯ ಸಂಕೇತವೂ ಹೌದು, ಶಿವ ಶಕ್ತಿಯರ ಸಮಾಗಮದ ಸಂಕೇತವೂ ಹೌದು. ನಮ್ಮ ಜನರಿಗೆ ಸಂಕೇತಗಳು ಶಕ್ತಿಯಾಗಿದ್ದವು, ಪ್ರೇರಣೆಯಾಗಿದ್ದವು. ಡೊಳ್ಳು ಹೊಡೆದು ಕೇಕೆ ಹಾಕಿದಾಗ ಮಳೆ ಬಂದರೆ, ನಮ್ಮ ಡೊಳ್ಳಿನ ಸದ್ದಿನ ಶಕ್ತಿಯಿಂದಲೇ, ನಮ್ಮ ಕೇಕೆಯಿಂದಲೇ ಮಳೆ ಬಂತು ಎಂದು ನಂಬಿದರು. ಇದನ್ನು primitive magic ಪರಿಕಲ್ಪನೆ ಎನ್ನಲಾಗಿದೆ.‌ ನಮ್ಮ ಬಳ್ಳಾರಿಯ ಸಂಗನಕಲ್ಲಿನಲ್ಲಿ 3000 ವರ್ಷಗಳ ಹಿಂದೆ ಕಲ್ಲು ಬಂಡೆಗಳ ಮೇಲೆ ಕೆತ್ತಿದ ಹೋರಿ ಮತ್ತು ಉದ್ದ ಕೊಂಬಿನ ಕೆತ್ತನೆಗಳು ಸಹ ಇಂತಹ ಒಂದು ಆದಿಮ ಮಾಂತ್ರಿಕ ಶಕ್ತಿಯ ಆಚರಣೆಯಾಗಿದೆ.

ನಂಬಿಕೆಗಳನ್ನು ಸಂಸ್ಕೃತಿಯಾಗಿ, ಪರಂಪರೆಯಾಗಿ ಗ್ರಹಿಸಬೇಕೇ ಹೊರತು ದೇವರಾಗಿ ಅಲ್ಲ. ದೇವ ಎಂಬ ಕಲ್ಪನೆಯೇ ದ್ರಾವಿಡರಲ್ಲಿ ಇರಲಿಲ್ಲ. 50 ಸಾವಿರ ವರ್ಷಗಳಿಂದ ಬಂದ ಲಿಂಗ- ಯೋನಿ ಪೂಜೆ, ಗೌರಿ ಪೂಜೆ, 9,000 ವರ್ಷಗಳಿಂದ ಬಂದ ಬೂಮ್ತಾಯಿ ಪೂಜೆ, ಅರಳಿ ಮರದ ಪೂಜೆ, ಐದು ಸಾವಿರ ವರ್ಷಗಳಿಂದ ಬಂದ ಶಿವನ ಪೂಜೆ, ಗಣಪತಿ ಪೂಜೆ, ನಾಗನ ಪೂಜೆ, 4000 ವರ್ಷಗಳಿಂದ ಬಂದ ಗತಿಸಿದ ಹಿರೀಕರ ಪೂಜೆ, ಇದರ ಮುಂದುವರಿಕೆಯಾಗಿಯೇ 2600 ವರ್ಷಗಳ ಹಿಂದೆ ಬುದ್ದ ಗುರುವು ತೀರಿದ ಬಳಿಕ ಅವನ ಅಸ್ತಿಯನ್ನು ಇಟ್ಟ ಸ್ತೂಪಗಳನ್ನು ಪೂಜಿಸಿದೆವು, ದೂಪ ಹಾಕಿದೆವು..‌. ಇದುವೇ ಈ ನೆಲದ ಪೂಜನ ಸಂಸ್ಕತಿಯಾಗಿತ್ತು.

‘ದೇವ’ ಮತ್ತು ಅಸುರ ಇಬ್ಬರೂ ಬಂದಿದ್ದು ಮಧ್ಯ ಏಷ್ಯಾದಿಂದ ಹೊರಟಿದ್ದ ಆರ್ಯರಿಂದಲೇ. ಅವರಿಗೆ ಪೂಜೆ ಗೊತ್ತಿರಲಿಲ್ಲ. ಯಜ್ಞ ಗೊತ್ತಿತ್ತು, ಹೋಮ ಗೊತ್ತಿತ್ತು. ‘ದೇವ’ ಅತವಾ “ದ-ಏವ” ಕೂಡಾ ಮೂಲದಲ್ಲಿ ಆರ್ಯರ ಪೂರ್ವಿಕ ಕುಲ ನಾಯಕರೇ ಆಗಿದ್ದಾರು.‌.. ಹೀಗಾಗಿಯೇ ಆರ್ಯ ವೈದಿಕರ ದೇವ ಎಂದರೆ ಅವರ ದಾಯಾದಿಗಳಾಗಿದ್ದ ಪಾರ್ಸಿಯನ್ (ಜೊರಾಸ್ಟ್ರಿಯನ್) ಆರ್ಯ ಅವೆಸ್ತನ್ನರಿಗೆ ಕೆಡುಕಿನ ಸಂಕೇತ‌ವಾಗಿತ್ತು. ಹಾಗೇ ಆರ್ಯ ವೈದಿಕರು ಕೆಡುಕು ಎಂದ ಅಸುರ (ಅಹುರ) ಆರ್ಯ ಅವೆಸ್ತನ್ನರ ಪಾಲಿಗೆ “ನಾಯಕ”ನಾಗಿದ್ದ. ಅವರನ್ನು ಅಹುರ ಮಜ್ದಾ ಎಂದು ಕರೆದು ಆರಾದಿಸಿದರು.

ಭಾರತಕ್ಕೆ ಪ್ರವೇಶಿಸಿದ ಬಳಿಕ ಆರ್ಯ ವೈದಿಕರಿಗೆ ಈ ನೆಲದ ಮೊದಲ ನಿವಾಸಿಗಳ ಮೇಲೆ ಯಜಮಾನಿಕೆ ಸ್ತಾಪಿಸಬೇಕಿತ್ತು. ಅದಕ್ಕಾಗಿ ನಮ್ಮಿಂದ ಪೂಜೆಗೊಳ್ಳುತ್ತಿದ್ದ ಪೂರ್ವಿಕರನ್ನು ತಮ್ಮ “ದೇವರು” ಮಾಡಿದರು. ಆ ದೇವರ ಪೂಜೆಗೆ ಅವರೇ ನಿಂತರು. ತಮ್ಮ ಜುಟ್ಟು ಬಿಟ್ಟುಕೊಂಡು ನಮ್ಮ ಜುಟ್ಟು ಹಿಡಿದರು. ನಾವು ಪೂರ್ವಿಕರನ್ನು ಬಿಟ್ಟು ಕೊಟ್ಟು, ಅವರ ಕೈಯಲ್ಲಿ ದೇವರುಗಳ ಪೂಜೆ ನಡೆಯುವಾಗ ನಮ್ಮ ಪೂರ್ವಿಕರಿಗೆ ಗೊತ್ತೇ ಇರದಿದ್ದ ವೇದ ಮಂತ್ರಗಳನ್ನ ಕೇಳಿ ಪುನೀತರಾದೆವು. ಈ ಮಂತ್ರ ಭಾಷೆಯೇ ದೇವರಿಗೆ ಅರ್ಥವಾಗುವುದು ಎಂದು ಪುಂಗಿದ್ದಕ್ಕೆ ತಲೆಯಾಡಿಸಿ ಕೈಮುಗಿದು ಗರ್ಭಗುಡಿಯ ಹೊರಗೆ ಸಾಲಿನಲ್ಲಿ ನಿಂತೆವು.‌ ಮುಂದಿನ 2000 ವರ್ಷಗಳ ಕಾಲ ಗುಲಾಮರಾದೆವು.‌ ಪುರಾಣಗಳನ್ನು ಕೇಳಿದೆವು, ನಂಬಿದೆವು ಮತಿಗೆಟ್ಟೆವು, ಗತಿಗೆಟ್ಟೆವು.

ಇನ್ನೂ ಉಳಿದಿರುವುದೇನು?
ನಾವು ಶಿವನ ವಕ್ಕಲು, ಗೌರಿ- ಗಂಗೆಯರ ಒಕ್ಕಲು. ಅವರು ಇಂದ್ರ ಅಗ್ನಿಯರ ವಕ್ಕಲಾಗಿದ್ದವರು ತಮ್ಮ ದೇವರಿಗೆ ಕಿಮ್ಮತ್ತಿಲ್ಲ ಎಂದರಿತು ಅವರನ್ನೇ ಬಿಟ್ಟರು. ಈಗ ಹೇಳುತ್ತಾರೆ ನಾವೇ ಸನಾತನರು ಎಂದು! ಅವರ ಡುಬಾಕು ಸನಾತನದಲ್ಲಿ ನಮ್ಮತನ ಕಳೆದುಕೊಂಡ “ಶೂದ್ರ ಮುಂಡೇಮಕ್ಕಳಾಗಿ”, ಅವರಿಗಾಗಿ ಬಾಳು ಬದುಕು ಹಾಳುಮಾಡಿಕೊಂಡು, ಅವರ ಹೋಮ ಹವನ ಮಾಡಿಸಿ, ನಮ್ಮ ಉಳಿಕೆ ಕಾಸು ಕಳೆದುಕೊಂಡು, ಗೌರವ ಗನತೆ ಕಳೆದುಕೊಳ್ಳುವುದೇ ಇವತ್ತಿನ ಸನಾತನ!

– ಹರ್ಷಕುಮಾರ್ ಕುಗ್ವೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕವಿತೆ | ಗಾಯದ ಬೆಳಕು

Published

on

  • ಕಾವ್ಯ ಎಂ ಎನ್, ಶಿವಮೊಗ್ಗ

ನೋವ ಹಾಡುವುದನ್ನೇ ಕಲಿತೆ
ಬದುಕು ಬಿಕ್ಕಿತು..

ಗಾಯದ ಬೆಳಕು
ಹೊತ್ತಿ ಉರಿದು
ತಮವೆಲ್ಲ ತಣ್ಣಗಾದಾಗ
ಚುಕ್ಕಿಬೆರಳಿಗೆ ಮುಗಿಲು ತೋರಿದೆ
ಕೆಂಡದಂತ ಹಗಲು ನೆತ್ತಿಪೊರೆಯಿತು.

ಅದ್ಯಾವ ಕಾಡು ಮಲ್ಲಿಗೆಯ
ಹಾಡು ಕರೆಯಿತೊ ಏನೊ
ಎದೆ ಹಾದಿಯ ತುಂಬೆಲ್ಲಾ ಬೇಸಿಗೆ.

ಒಡಲು ತುಂಬಿ ಕಡಲು
ಜೀಕಿ ದಡ ಮುಟ್ಟಿದ
ಕಪ್ಪೆಚಿಪ್ಪಿನೊಳಗೆಲ್ಲಾ
ಸ್ವಾತಿ ಮುತ್ತು…

ಓಡುವ ಆಮೆಯಂತ ಗಡಿಯಾರ
ಮೈತುಂಬ ಮುಳ್ಳ ಹೊತ್ತು
ಸಾಗಿಸುತ್ತಿದೆ ಭವದ ಭಾರ.

ನನ್ನ ನಿನ್ನ ರೂಹು ತಿಳಿದ
ಕಾಡು ಗಿಡ ಮರ ಬೆಟ್ಟ ಬಯಲೆಲ್ಲಾ
ಕಥೆ ಕಟ್ಟಿ ಪಿಸುಗುಡುತ್ತಿವೆ
ಉಟ್ಟ ಉಸಿರಿನ ಬಟ್ಟೆ ಕಳಚಿದ ಮೇಲೆ
ಎಲ್ಲವೂ ಬೆತ್ತಲೆ…

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಆರಂಭಿಸಿ : ಶಾಸಕ ಕೆ.ಎಸ್.ಬಸವಂತಪ್ಪ ಒತ್ತಾಯ

ಸುದ್ದಿದಿನ,ದಾವಣಗೆರೆ: ಕ್ಷೇತ್ರದ ವ್ಯಾಪ್ತಿಯ ಕಲ್ಪನಹಳ್ಳಿ ಬಳಿ ಪ್ರತ್ಯೇಕ ದಾವಣಗೆರೆ-ಚಿತ್ರದುರ್ಗ ಮೆಗಾ ಡೈರಿ ಸ್ಥಾಪಿಸಲು ಭೂಮಿ ಖರೀದಿಸಿದ್ದು, ಈ ಬಗ್ಗೆ ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ. ಕೂಡಲೇ ಅನುದಾನ...

ದಿನದ ಸುದ್ದಿ12 hours ago

ಕೆರೆಬಿಳಚಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ; 6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

ಸುದ್ದಿದಿನ,ಚನ್ನಗಿರಿ:ತಾಲೂಕಿನ ಕೆರೆಬಿಳಚಿಯಲ್ಲಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 6ನೇ ತರಗತಿಗೆ ಪ್ರವೇಶ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯದ ಮುಸ್ಲಿಂ ,ಕ್ರಿಶ್ಚಿಯನ್, ಜೈನ್ ,ಬೌದ್ಧ ಸಿಖ್...

ದಿನದ ಸುದ್ದಿ12 hours ago

ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ : ಹೊಸ ಸದಸ್ಯರ ನೊಂದಣಿ, ನೊಂದಣಿಯಾದ ಸದಸ್ಯರನ್ನು ನವೀಕರಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ಹಾಗೂ ಸಹಕಾರ ಸಂಘಗಳ ನಿಯಮ 1960ರಡಿ ಜಿಲ್ಲೆಯಲ್ಲಿ ನೊಂದಣಿಯಾಗಿರುವ ಎಲ್ಲಾ ವಿಧದ ಸಹಕಾರ ಸಂಘಗಳ ಸದಸ್ಯರು ಮಾರ್ಚ್ 31ರೊಳಗಾಗಿ ಯಶಸ್ವಿನಿ...

ದಿನದ ಸುದ್ದಿ13 hours ago

ಮಾಸಾಶನ ಪಡೆಯುತ್ತಿರುವ ಕಲಾವಿದರು ಜೀವಿತಾವಧಿ ಪ್ರಮಾಣ ಪತ್ರ ಸಲ್ಲಿಸಲು ಸೂಚನೆ

ಸುದ್ದಿದಿನ,ದಾವಣಗೆರೆ:ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಾಸಾಶನ ಪಡೆಯುತ್ತಿರುವ ಸಾಹಿತಿ, ಕಲಾವಿದರು ತಮ್ಮ ಆಧಾರ್ ಕಾರ್ಡ್, ಪಿಂಚಣಿ ಪುಸ್ತಕದ ಪ್ರತಿ, ಬ್ಯಾಂಕ್ ಪಾಸ್ ಪುಸ್ತಕದೊಂದಿಗೆ ಜೀವಿತಾವಧಿ ಪ್ರಮಾಣ...

ದಿನದ ಸುದ್ದಿ14 hours ago

ಯುನೆಸ್ಕೋ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ ರಾಜ್ಯದ ಶಿಲಾ ಶಾಸನಗಳು ಸೇರ್ಪಡೆ

ಸುದ್ದಿದಿನಡೆಸ್ಕ್:ಭಾರತದ 6 ಮಹತ್ವದ ಐತಿಹಾಸಿಕ ಸ್ಥಳಗಳು ಹಾಗೂ ಹೆಗ್ಗುರುತುಗಳು ಯುನೆಸ್ಕೋದ ವಿಶ್ವ ಪಾರಂಪರಿಕ ತಾಣಗಳ ತಾತ್ಕಾಲಿಕ ಪಟ್ಟಿಗೆ, ಸೇರ್ಪಡೆಗೊಂಡಿವೆ. ಇತ್ತೀಚೆಗೆ ಚಕ್ರವರ್ತಿ ಅಶೋಕನ ಶಿಲಾ ಶಾಸನಗಳು ಈ...

ದಿನದ ಸುದ್ದಿ1 day ago

ನೆಲಮಂಗಲ ಸಮೀಪದ ದಾಸನಪುರದಲ್ಲಿ 306 ಕೋಟಿ ರೂಪಾಯಿ ವೆಚ್ಚದಲ್ಲಿ ಸುಸಜ್ಜಿತ ಕೃಷಿ ಮಾರುಕಟ್ಟೆ ನಿರ್ಮಾಣ : ಸಚಿವ ಶಿವಾನಂದಪಾಟೀಲ್

ಸುದ್ದಿದಿನ,ಬೆಂಗಳೂರು:ರಾಜ್ಯದಲ್ಲಿ ಪ್ರಸ್ತುತ 171 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳು ಹಾಗೂ 410 ಉಪ ಮಾರುಕಟ್ಟೆಗಳು ಕಾರ್ಯ ನಿರ್ವಹಿಸುತ್ತಿವೆ ಎಂದು ಸಚಿವ ಶಿವಾನಂದ ಪಾಟೀಲ್ ವಿಧಾನಪರಿಷತ್ತಿಗೆ ಇಂದು ತಿಳಿಸಿದರು....

ದಿನದ ಸುದ್ದಿ3 days ago

ಕವಿತೆ | ಮತ್ತಿನ ಕುಣಿಕೆ

ಗುರು ಸುಳ್ಯ ನಿದೆರೆಗೆ ದೂಡದ ಮದಿರೆಯ ಅನುಭವ ಸದಾ ಸಂಕಟಗಳ ಹೆರುವ ಮತ್ತಿನ ಕುಣಿಕೆ ನನ್ನ ಮಡಿಲ ಮೇಲೆ ನನ್ನದೇ ಒಡಲು ಮಲಗಿರಲು ಮಲಗಲು ಹಂಬಲಿಸುವ ಮಗುವಿನ...

ದಿನದ ಸುದ್ದಿ4 days ago

ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ವಿತರಿಸಿದ ಶಾಸಕ ಕೆ.ಎಸ್.ಬಸವಂತಪ್ಪ

ಸುದ್ದಿದಿನ,ದಾವಣಗೆರೆ:2024ರ ಮಾರ್ಚ್ ತಿಂಗಳಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಉಚಿತ ಲ್ಯಾಪ್‌ಟಾಪ್ ವಿತರಿಸಿದರು. ಶಾಸಕ ನಿವಾಸದಲ್ಲಿ ಶನಿವಾರ...

ದಿನದ ಸುದ್ದಿ4 days ago

ಬೆಂವಿವಿ | ಸಂವಹನ ವಿದ್ಯಾರ್ಥಿಗಳಿಂದ ಹೋಳಿ ಸಂಭ್ರಮ

ಸುದ್ದಿದಿನ,ಬೆಂಗಳೂರು:ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗದಿಂದ ಆಯೋಜಿಸಿದ್ದ ಹೋಳಿ ಹಬ್ಬದ ಅಂಗವಾಗಿ ವಿಭಾಗದ ಮುಂಭಾಗದಲ್ಲಿ ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಕಲರ್‌ ಹಚ್ಚುವ ಮೂಲಕ ಹೋಳಿ ಸಂಭ್ರಮ ಮಾಡಲಾಯಿತು....

ದಿನದ ಸುದ್ದಿ6 days ago

2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ : ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಸುದ್ದಿದಿನಡೆಸ್ಕ್:ದೇಶಾದ್ಯಂತ 2 ಕೋಟಿ 20 ಲಕ್ಷ ಜನ, ಪಡಿತರ ಚೀಟಿಯ ಪ್ರಯೋಜನ ಪಡೆಯುತ್ತಿಲ್ಲ; ಅಂದಾಜು 34 ಲಕ್ಷ 60 ಸಾವಿರ ಚೀಟಿಗಳು ನಕಲಿ ಎಂಬ ಆರೋಪವಿದೆ. ಅರ್ಹರನ್ನು...

Trending