ಕ್ರೀಡೆ

ಭಾನುವಾರ | ಮಧ್ಯಾಹ್ನದ ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ

Published

on


ಭಾನುವಾರ | ಮಧ್ಯಾಹ್ನದ ಪ್ರಮುಖ ಸುದ್ದಿಗಳು ; ಮಿಸ್ ಮಾಡ್ದೆ ಓದಿ


  1. ಸ್ವಿಜರ್ಲೆಂಡ್‌ನ ದಾವೋಸ್‌ನಲ್ಲಿ ಆಯೋಜನೆಗೊಂಡಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದು, ರಾಜ್ಯದಲ್ಲಿ ಬಂಡವಾಳ ಹೂಡಿಕೆ ಆಕರ್ಷಿಸುವ ನಿಟ್ಟಿನಲ್ಲಿ ವಿಶ್ವದ ಹಲವು ಪ್ರತಿನಿಧಿಗಳು ಹಾಗೂ ಕೈಗಾರಿಕೋದ್ಯಮಗಳೊಂದಿಗೆ ಚರ್ಚೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ದಾವೋಸ್‌ಗೆ ಭೇಟಿ ನೀಡುವ ಮುನ್ನ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
  2. ಇಂದಿನಿಂದ ದಾವೋಸ್‌ನಲ್ಲಿ ಆರಂಭವಾಗಲಿರುವ ವಿಶ್ವ ಆರ್ಥಿಕ ವೇದಿಕೆಯ ವಾರ್ಷಿಕ ಸಭೆಯಲ್ಲಿ ಪಾಲ್ಗೊಳ್ಳುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹಾಗೂ ಉನ್ನತ ಶೀಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಇಂದು ಸ್ವಿಟ್ಜರ್‌ಲ್ಯಾಂಡ್‌ಗೆ ಪ್ರಯಾಣ ಬೆಳೆಸಿದ್ದರು.
  3. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಇಂದು ರಾತ್ರಿ 7.30ಕ್ಕೆ ಆರಂಭವಾಗಲಿರುವ ಐಪಿಎಲ್ 15 ನೇ ಆವೃತ್ತಿಯ ಅಂತಿಮ ಲೀಗ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿವೆ. ಉಭಯ ತಂಡಗಳು ಪ್ಲೇಆಫ್ ಸ್ಪರ್ಧೆಯಿಂದ ಈಗಾಗಲೇ ಹೊರಬಿದ್ದಿದ್ದು, ಗೆಲುವಿನೊಂದಿಗೆ ಹೋರಾಟ ಮುಗಿಸುವ ಗುರಿ ಹೊಂದಿವೆ.
  4. ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟದಲ್ಲಿ ಕನ್ನಡಿಗರ ಪಾತ್ರವನ್ನು ಬಿಂಬಿಸುವ ಕಾರ್ಯಕ್ರಮಗಳು ರಾಜ್ಯದಲ್ಲಿ ಮೂರು ಹಂತದಲ್ಲಿ ಜರುಗಲಿದ್ದು, ಮೊದಲನೇ ಹಂತವಾಗಿ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆಯಲಿದ್ದು, ಈ ತಿಂಗಳ 28 ರಂದು ಚಿಕ್ಕಮಗಳೂರಿನ ಕುವೆಂಪು ಕಲಾ ಮಂದಿರದಲ್ಲಿ ‘ಅಮೃತಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮವನ್ನು ಅಮೃತಮಹೋತ್ಸವದ ಅಂಗವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ತಿಳಿಸಿದ್ದಾರೆ.
  5. ಬೆಂಗಳೂರು ಸೇರಿದಂತೆ ಬೆಸ್ಕಾಂ ವ್ಯಾಪ್ತಿಯ ದುರಸ್ಥಿ ಸ್ಥಿತಿಯಲ್ಲಿರುವ, ತಾಂತ್ರಿಕ ದೋಷದಿಂದ ಕೂಡಿರುವ 10794ಟಿಸಿಗಳ ನಿರ್ವಹಣೆಯನ್ನು ಬೆಸ್ಕಾಂ ಕಳೆದ16 ದಿನಗಳಲ್ಲಿ ಮಾಡಿದೆ. ವಿದ್ಯುತ್ ಪರಿವರ್ತಕಗಳ ನಿರ್ವಹಣೆಯನ್ನು ಎಲ್ಲ 535ಸೆಕ್ಷನ್‌ಗಳಲ್ಲಿ ಟಿಸಿಗಳ ನಿರ್ವಹಣೆ ಮಾಡಲಾಗಿದೆ. ತಾಂತ್ರಿಕ ಸಮಸ್ಯೆ ಉಂಟಾಗಿರುವ ಎಲ್ಲ ಟಿಸಿಗಳಿಗೆ ಶಾಶ್ವತ ಕಾಯಕಲ್ಪ ಒದಗಿಸಲು ಬೆಸ್ಕಾಂ ನಿರ್ಧರಿಸಿದೆ.
  6. ಪ್ರಸಕ್ತ ಶೈಕ್ಷಣಿಕ ವರ್ಷ ಈಗಾಗಲೇ ಆರಂಭವಾಗಿದ್ದು, 5ವರ್ಷ ಮೇಲ್ಪಟ್ಟ ಗ್ರಾಮೀಣ ಪ್ರದೇಶದ ಎಲ್ಲ ಮಕ್ಕಳು ಶಾಲೆಗೆ ದಾಖಲಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಶಿಕ್ಷಕರು ಕಾರ್ಯಪ್ರವೃತ್ತರಾಗಿ ಎಂದು ಯಾದಗಿರಿ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಸವರಾಜ ಶರಬೈ ಹೇಳಿದ್ದಾರೆ.
  7. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೆಚ್ಚುವರಿ ಅಬಕಾರಿ ಸುಂಕ ಇಳಿಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇನೆ. ಆದರೆ ನರೇಂದ್ರ ಮೋದಿ ಅವರು ಪ್ರಧಾನಿಯಾಗುವ ಮೊದಲಿದ್ದ ಅಬಕಾರಿ ಸುಂಕಕ್ಕೆ ಸಮನಾಗಿ ಕಡಿತ ಮಾಡಬಹುದು ಎಂಬ ನನ್ನ ನಿರೀಕ್ಷೆ ಹುಸಿಯಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
  8. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರಿಗೆ ಕ್ರಮವಾಗಿ 8 ಮತ್ತು 6 ಕಡಿತ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಗೃಹ ಸಚಿವ ಅಮಿತ್ ಶಾ ಸ್ವಾಗತಿಸಿದ್ದಾರೆ. ಸವಾಲಿನ ಜಾಗತಿಕ ಪರಿಸ್ಥಿತಿಯ ನಡುವೆಯೂ ನರೇಂದ್ರ ಮೋದಿ ಸರ್ಕಾರ ಜನರಿಗೆ ದೊಡ್ಡ ನಿರಾಳತೆ ಒದಗಿಸಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಬ್ಬರು ಸಂವೇದನಾಶೀಲ ನಾಯಕ ಎಂದು ಅವರು ಬಣ್ಣಿಸಿದ್ದಾರೆ.
  9. ವರ್ಷದ 2ನೇ ಗ್ರ್ಯಾನ್ ಸ್ಲಾಮ್ ಟೆನಿಸ್ ಟೂರ್ನಿ ಫ್ರೆಂಚ್ ಓಪನ್ ಪ್ಯಾರಿಸ್‌ನ ರೋಲ್ಯಾಂಡ್ ಗ್ಯಾರೋಸ್‌ನಲ್ಲಿ ಇಂದು ಆರಂಭವಾಗಲಿದೆ. ಮ್ಯಾಡ್ರಿಡ್ ಚಾಂಪಿಯನ್ಸ್ ಕಾರ್ಲೊಸ್ ಅಲ್ಕಾರಾಜ್ ಮತ್ತು ಒನ್ಸ್ ಜಬೇರ್ ಇಂದು ಅಭಿಯಾನ ಆರಂಭಿಸಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version