ದಿನದ ಸುದ್ದಿ
SUPERhuMAN..! ‘ಸೋನು ಸೂದ್’ ಈತ ಅದೆಂತಹ ಹೃದಯವಂತ..!
- ಪಂಜು ಗಂಗೊಳ್ಳಿ
ಪೂರ್ವ ಸಿದ್ಧತೆಯಿಲ್ಲದ ಲಾಕ್ ಡೌನ್ ನಿಂದಾಗಿ ಎಲ್ಲೆಲ್ಲೋ ಸಿಕ್ಕಿ ಹಾಕಿಕೊಂಡಿರುವ ವಲಸೆ ಕಾರ್ಮಿಕರಿಗೆ ಆಪತ್ಬಾಂಧವರಾಗಿ ಬಂದ ಹಿಂದಿ ಚಿತ್ರ ನಟ ಸೋನು ಸೂದ್ ಈಗಾಗಲೇ ಕರ್ನಾಟಕ, ಉತ್ತರಪ್ರದೇಶ, ಬಿಹಾರ್, ಜಾರ್ಖಾಂಡ್, ಒಡಿಶಾ ಮೂಲದ ಇಂತಹ ಸಾವಿರಾರು ಬಡಪಾಯಿಗಳನ್ನು ಬಸ್ಸುಗಳ ಮೂಲಕ ಅವರವರ ಊರುಗಳಿಗೆ ಕಳಿಸಿ ಕೊಟ್ಟಿದ್ದಾರೆ. ಮುಂಬೈಯಲ್ಲಿ ಕೊರೋನಾ ಪೀಡಿತರ ಚಿಕಿತ್ಸೆಗೆ ನಿಂತ ಡಾಕ್ಟರು, ನರ್ಸ್ ಗಳಿಗೆ ತನ್ನ ಐಷರಾಮಿ ಹೋಟೆಲನ್ನೂ ಬಿಟ್ಟು ಕೊಟ್ಟಿರುವ ಸೂದ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲದೆ ಈ ಕಾರ್ಮಿಕರನ್ನು ಬೀದಿ ಪಾಲಾಗಿಸಿದ ಉದ್ಯಮಪತಿಗಳನ್ನೂ ನಾಚಿ ತಲೆ ತಗ್ಗಿಸುವಂತೆ ಈ ನತದೃಷ್ಟರಿಗೆ ಒದಗಿ ಬರುತ್ತಿದ್ದಾರೆ.
ಕೇರಳದ ಎರ್ನಾಕುಲಂ ಜಿಲ್ಲೆಯ ಕಿಝಕ್ಕಂಭಾಳಂ ಎಂಬಲ್ಲಿನ ಕೀಟೇಕ್ಸ್ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದ ಒಡಿಸ್ಸಾದ 169 ಜನ ವಲಸೆ ಕಾರ್ಮಿಕರು ತಮ್ಮೂರಿಗೆ ವಾಪಾಸಾಗಲು ಸಹಾಯಕ್ಕೆ ಮೊರೆಯಿಡುವ ವೀಡಿಯೋ ಒಂದನ್ನು ಯಾರೋ ಇವರಿಗೆ ಟ್ವೀಟ್ ಮಾಡಿದರು. ಈ 169 ಜನರಲ್ಲಿ 148 ಜನ ಹೆಣ್ಣು ಮಕ್ಕಳಿದ್ದರು. ಅದನ್ನು ನೋಡಿ ತಕ್ಷಣವೇ ಕಾರ್ಯಪ್ರವೃತ್ತರಾದ ಸೂದ್ ಅವರನ್ನೂ ಬಸ್ಸುಗಳಲ್ಲಿ ಕಳುಹಿಸಿ ಕೊಡಲು ಆಲೋಚಿಸಿದರು. ಆದರೆ ಎರ್ನಾಕುಲಂ ನಿಂದ ಒಡಿಸ್ಸಾಗೆ 2000 ಕಿಮಿ ಗೂ ಹೆಚ್ಚು ದೂರ. ಮತ್ತು ಬಸ್ಸುಗಳು ಹಲವು ರಾಜ್ಯಗಳ ಗಡಿಗಳನ್ನು ದಾಟಿ ಹೋಗಾಬೇಕಾಗುವುದರಿಂದ ಆಯಾಯ ರಾಜ್ಯ ಸರ್ಕಾರಗಳ ಅನುಮತಿ ಪಡೆಯಬೇಕಾಗುತ್ತದೆ.
ಇದು ತೀರಾ ಜಂಜಾಟದ ಮತ್ತು ಸಮಯ ಬೇಡುವ ಕೆಲಸವಾದುದರಿಂದ ಸೂದ್ ಅವರಿಗಾಗಿ ಏರ್ ಏಷಿಯಾ ವಿಮಾನವೊಂದನ್ನು ಬುಕ್ ಮಾಡಿ, ಬಸ್ಸುಗಳ ಮೂಲಕ ಅವರನ್ನು ಎರ್ನಾಕುಲಂ ನಿಂದ ಕೊಚಿನ್ ವಿಮಾನ ನಿಲ್ದಾಣಕ್ಕೆ ತಂದು, ವಿಮಾನ ಹತ್ತಿಸಿ, ಒಡಿಸ್ಸಾದ ಭುವನೇಶ್ವರ ವಿಮಾನ ನಿಲ್ದಾಣದಲ್ಲಿ ಇಳಿಸಿ, ಅಲ್ಲಿಂದ ಬಸ್ಸುಗಳಲ್ಲಿ ಅವರಿಗೆ ಮೊದಲೇ ನಿಗದಿಯಾದ ಕ್ವಾರಂಟೈನ್ ಕೇಂದ್ರಗಳಿಗೆ ಗೌರವ ಪೂರ್ವಕವಾಗಿ ಕಳಿಸಿ ಕೊಟ್ಟರು!
ಈತ ಅದೆಂತಹ ಹೃದಯವಂತ!
(ವ್ಯಂಗ್ಯಚಿತ್ರಕಾರ ‘ಪಂಜು ಗಂಗೊಳ್ಳಿ‘ ಅವರ ಫೇಸ್ ಬುಕ್ ವಾಲ್ ನಿಂದ ತೆಗೆದುಕೊಂಡ ಬರಹ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ9 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ9 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

