ದಿನದ ಸುದ್ದಿ
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ನಾಳೆ ಪ್ರಮಾಣ ವಚನ
ಸುದ್ದಿದಿನ ಡೆಸ್ಕ್ : ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ (Dhananjaya Y. Chandrachud :Judge of Supreme Court of India) ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ರಾಷ್ಟ್ರಪತಿ ಭವನದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ಸೇವಾವಧಿ ಇಂದು ಪೂರ್ಣಗೊಳ್ಳಲಿದೆ. ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.
1959ರಲ್ಲಿ ಜನಿಸಿದ ಚಂದ್ರಚೂಡ್ ಅವರು, 2016ರ ಮೇ13ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ದೆಹಲಿ ಯೂನಿವರ್ಸಿಟಿಯಲ್ಲಿ ಎಲ್‌ಎಲ್‌ಬಿ ಪದವಿ ಪೂರ್ಣಗೊಳಿಸಿದ ಚಂದ್ರಚೂಡ್ ಅವರು, ಅಮೆರಿಕದ ಹಾರ್ವರ್ಡ್ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಎಂ ಪದವಿ ಮತ್ತು ನ್ಯಾಯಾಂಗ ವಿಜ್ಞಾನಗಳ ಡಾಕ್ಟರೇಟ್ ಪುರಸ್ಕಾರವನ್ನು ಪಡೆದಿದ್ದಾರೆ. ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿಯೂ ಅವರು, ಸೇವೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243