Connect with us

ದಿನದ ಸುದ್ದಿ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಡಿ.ವೈ. ಚಂದ್ರಚೂಡ್ ನಾಳೆ ಪ್ರಮಾಣ ವಚನ

Published

on

ಸುದ್ದಿದಿನ ಡೆಸ್ಕ್ : ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ (Dhananjaya Y. Chandrachud :Judge of Supreme Court of India) ನಾಳೆ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು, ರಾಷ್ಟ್ರಪತಿ ಭವನದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಿದ್ದಾರೆ. ಹಾಲಿ ಮುಖ್ಯ ನ್ಯಾಯಮೂರ್ತಿ ಯು.ಯು. ಲಲಿತ್ ಅವರ ಸೇವಾವಧಿ ಇಂದು ಪೂರ್ಣಗೊಳ್ಳಲಿದೆ. ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ದೇಶದ 50ನೇ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.

1959ರಲ್ಲಿ ಜನಿಸಿದ ಚಂದ್ರಚೂಡ್ ಅವರು, 2016ರ ಮೇ13ರಂದು ಸುಪ್ರೀಂಕೋರ್ಟ್ ನ್ಯಾಯಮೂರ್ತಿಯಾಗಿ ನೇಮಕಗೊಂಡರು. ದೆಹಲಿ ಯೂನಿವರ್ಸಿಟಿಯಲ್ಲಿ ಎಲ್‌ಎಲ್‌ಬಿ ಪದವಿ ಪೂರ್ಣಗೊಳಿಸಿದ ಚಂದ್ರಚೂಡ್ ಅವರು, ಅಮೆರಿಕದ ಹಾರ್ವರ್ಡ್ ಕಾನೂನು ಕಾಲೇಜಿನಲ್ಲಿ ಎಲ್‌ಎಲ್‌ಎಂ ಪದವಿ ಮತ್ತು ನ್ಯಾಯಾಂಗ ವಿಜ್ಞಾನಗಳ ಡಾಕ್ಟರೇಟ್ ಪುರಸ್ಕಾರವನ್ನು ಪಡೆದಿದ್ದಾರೆ. ಅಲಹಾಬಾದ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿಯೂ ಅವರು, ಸೇವೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.

ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

Published

on

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.

Continue Reading

Trending