ದಿನದ ಸುದ್ದಿ
15 ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ; ಆದೇಶ ಪಾಲಿಸಲು ಕ್ರಮ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು 15 ದಿನಗಳಲ್ಲಿ ನಡೆಸುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ನಂತರ, ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶವನ್ನು ಚರ್ಚಿಸಿ ಅದರಂತೆ ಅನುಸರಿಸಲಾಗುವುದು ಎಂದು ಹೇಳಿದ್ದಾರೆ.
ನವದೆಹಲಿಯಲ್ಲಿ ನಿನ್ನೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲ ಹಂತದ ಚುನಾವಣೆಗಳಿಗೂ ಬಿಜೆಪಿ ಸದಾ ಸಿದ್ಧವಿದ್ದು, ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಗೂ ಪಕ್ಷ ಸನ್ನದ್ಧವಾಗಿದೆ ಎಂದು ತಿಳಿಸಿದರು.
ರಾಜ್ಯ ಚುನಾವಣಾ ಆಯೋಗದೊಂದಿಗೆ ಶೀಘ್ರದಲ್ಲೇ ಸಭೆ ನಡೆಸಲಾಗುವುದು ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆ ನಡೆಸಲು ಅವರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ಸರ್ಕಾರ ಬದ್ಧವಾಗಿರುತ್ತದೆ ಎಂದು ಮುಖ್ಯಮಂತ್ರಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243