ದಿನದ ಸುದ್ದಿ
JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ
ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.
ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.
ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243