ಕ್ರೀಡೆ

ಕ್ರಿಕೆಟಿಗ ಸುರೇಶ್ ರೈನಾ ಬಂಧನ ; ಬಿಡುಗಡೆ : ಕಾರಣ..!?

Published

on

ಸುದ್ದಿದಿನ,ಮುಂಬೈ: ಮುಂಬೈನ ವಿಮಾನ ನಿಲ್ದಾಣದ ಹತ್ತಿರ ಡ್ರಾಗನ್ ಫ್ಲೈ ಕ್ಲಬ್ ಗೆ ದಿಢೀರ್ ದಾಳಿ ನಡೆಸಿದ ಪೊಲೀಸರು ಖ್ಯಾತ ಕ್ರಿಕೆಟಿಗ ಸುರೇಶ್ ರೈನಾ ಹಾಗೂ ಗಾಯಕ ಗುರು ರಾಂಧವ ಅವರನ್ನು ಬಂಧಿಸಿದರು.

ಕೋವಿಡ್ -19 ನಿಯಾಮಾವಳಿಗಳ ಉಲ್ಲಂಘನೆ ಮಾಡಿದ ಆರೋಪದಡಿಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಗುರು ರಾಂಧವ ಸೇರಿದಂತೆ 34 ಜನರನ್ನು ಪೊಲೀಸರು ಬಂಧಿಸಿದ್ದು, ಇವರಲ್ಲಿ ಏಳು ಮಂದಿ ಕ್ಲಬ್ ನ ಉದ್ಯೋಗಿಗಳಿದ್ದಾರೆ.

ಬಂಧಿತರ ಮೇಲೆ ಮೇಲೆ ಐಪಿಸಿ ಸೆಕ್ಷನ್  188, 269, 34 ಅಡಿಯಲ್ಲಿ ಕೇಸು ದಾಖಲು ಮಾಡಿದ್ದು, ಸದ್ಯ ಬಂಧಿತ ಆರೋಪಿಗಳನ್ನು ಜಾಮೀನಿ ಮೇಲೆ ಬಿಡುಗಡೆ ಮಾಡಲಾಗಿದೆ‌ ಎಂದು ವರದಿ ಮಾಡಲಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version