ದಿನದ ಸುದ್ದಿ

ವಿಶ್ವದ ಅತೀ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆ ಅನಾವರಣ

Published

on

ಸುದ್ದಿದಿನ,ಉಡುಪಿ: ವಿಶ್ವದ ಅತೀ ಎತ್ತರದ ಸ್ವಾಮಿ ವಿವೇಕಾನಂದ ಪ್ರತಿಮೆಯನ್ನು ಉಡುಪಿ ಜಿಲ್ಲೆ ಕೋಟದ ಮೂಡುಗಿಳಿಯಾರಿನಲ್ಲಿ ಸ್ಥಾಪಿಸಲಾಗಿದೆ. ಪ್ರತಿಮೆ 35 ಅಡಿ ಎತ್ತರವಿದ್ದು ಕನ್ಯಾಕುಮಾರಿಯಲ್ಲಿ ಇರುವ ವಿವೇಕಾನಂದ ಮೂರ್ತಿಯ ಎತ್ತರದ ದಾಖಲೆಯನ್ನು ಮೀರಿದೆ.

ಉಡುಪಿಯ ಕೋಟದಲ್ಲಿರುವ ಡಿವೈನ್ ಪಾರ್ಕ್ ಟ್ರಸ್ಟ್ ಸರ್ವ ಕ್ಷೇಮ ಆಸ್ಪತ್ರೆ ನಿರ್ಮಿಸಿದೆ. ಚಿಕಿತ್ಸಾಕೇಂದ್ರ- ಧ್ಯಾನಕೇಂದ್ರದ ಆವರಣದಲ್ಲಿ ಅತೀ ಎತ್ತರದ ವಿವೇಕಾನಂದ ಮೂರ್ತಿ ನಿರ್ಮಾಣ ಮಾಡಲಾಗಿದೆ. ಆಸ್ಪತ್ರೆ ಪ್ರಾಚೀನ ದೇಗುಲದ ವಾಸ್ತು ವಿನ್ಯಾಸವನ್ನು ಹೊಂದಿದ್ದು, ಆಯುಷ್ ವಿಭಾಗ ಕೂಡ ಬಹಳ ವಿಶಿಷ್ಟವಾಗಿದೆ.

ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯನ್ನು ಕರಾವಳಿಯ ಪ್ರಾಚೀನ ಶೈಲಿಯಲ್ಲಿ ನಿರ್ಮಾಣಗೊಂಡಿದೆ. ಪ್ರಕೃತಿ, ಯೋಗ, ಆಹಾರ, ಆಧ್ಯಾತ್ಮಿಕ, ಸಂಗೀತ, ಹಸಿರು, ಹಾಸ್ಯ, ಮೌನ ಚಿಕಿತ್ಸೆ ಹೀಗೆ ಬೇರೆ ಬೇರೆ ವಿಭಾಗಗಳನ್ನು ಮಾಡಿ ಎಲ್ಲಾ ಚಿಕಿತ್ಸೆಯನ್ನು ಒದಗಿಸುವ ಉದ್ದೇಶವನ್ನು ಆಸ್ಪತ್ರೆ ಇಟ್ಟುಕೊಂಡಿದೆ. ಪರಿಸರ ಸ್ನೇಹಿ ಆಸ್ಪತ್ರೆ ಇದಾಗಿದ್ದು, ಸೋಲಾರ್ ವ್ಯವಸ್ಥೆ ಇದೆ. ಸೈಕಲ್ ಟ್ರ್ಯಾಕ್ ಕೂಡ ನಿರ್ಮಾಣಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version