ದಿನದ ಸುದ್ದಿ
ರಾಜ್ಯಮಟ್ಟದ ಕವಿಗೋಷ್ಠಿಗೆ ಸ್ವ ರಚಿತ ಕವನಗಳ ಆಹ್ವಾನ
ಸುದ್ದಿದಿನ ಡೆಸ್ಕ್ : ಕನ್ನಡ ಸಾಂಸ್ಕೃತಿಕ ಗತವೈಭವ ಅಕಾಡೆಮಿ (ರಿ )ದಾವಣಗೆರೆ ಇವರ ವತಿಯಿಂದಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆಯವರಿಂದ ‘ಯುಗದ ಕವಿ ಜಗದ ಕವಿ’ ಎನಿಸಿಕೊಂಡು ವಿಶ್ವಮಾನವ ಸಂದೇಶ ನೀಡಿದ. ಕನ್ನಡದ ಮೊಟ್ಟ ಮೊದಲ ಜ್ಞಾನ ಪೀಠ ಪ್ರಶಸ್ತಿ ವಿಜೇತರು , ‘ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಎರಡನೇ ರಾಷ್ಟ ಕವಿ ಎಂಬ ಖ್ಯಾತಿಯನ್ನು ಮುಕುಟ್ಟಕ್ಕೆರಿಸಿಕೊಂಡ ವೈಚಾರಿಕ ಕವಿಯಾದ ಕುಂವೆಂಪುರವರ 118ನೇ ವಿಶ್ವಮಾನವ ಜನ್ಮ ದಿನಾಚರಣೆಯನ್ನು ಆಚರಿಸುವುದು ಪ್ರತಿಯೊಬ್ಬ ಕನ್ನಡಿಗನ ಆದ್ಯ ಕರ್ತವ್ಯವಾಗಿರುತ್ತದೆ.
ಇವರ ಸ್ಮರಣೆಯ ಅಂಗವಾಗಿ ಕುಂವೆಂಪು ಸಾಹಿತ್ಯವನ್ನು ಕುರಿತು ಪ್ರಾಧ್ಯಾಪಕರುಗಳಾದ ಡಾ. ವಿಜಯ್ ಕುಮಾರ್ ಹೆಚ್. ಜಿ ದಾವಣಗೆರೆ ವಿಶ್ವವಿದ್ಯಾನಿಲಯ ಮತ್ತು ಡಾ. ಶುಭ ಮರವಂತೆ ಸಹ್ಯಾದ್ರಿ ಕಾಲೇಜ್ ಶಿವಮೊಗ್ಗ ಇವರುಗಳ ವಿಶೇಷ ಉಪನ್ಯಾಸ ಮತ್ತು ರಾಜ್ಯ ಮಟ್ಟದ ಕವಿಗೋಷ್ಠಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ಆಸಕ್ತ ಬರಹಗಾರರು ಮತ್ತು ಕವಿಗಳು ಸ್ವ ರಚಿತ ಕವನಗಳನ್ನು ದಿನಾಂಕ 25.12.22ರ ಒಳಗಾಗಿ ಕಳಿಸುವುದು ಕವನಗಳ ಪರಿಶೀಲನಾ ಸಮಿತಿಯಲ್ಲಿ ಆಯ್ಕೆಯಾದ ಕವನಗಳ ಕವಿಗಳನ್ನು ಮಾತ್ರ ಆಹ್ವಾನಿಸಲಾಗುವುದು. ಆಯ್ಕೆಗೊಂಡ ಕವನಗಳು ISBN ಸಂಖ್ಯೆಯೊಂದಿಗೆ ಪುಸ್ತಕ ರೂಪದಲ್ಲಿ ತಂದು ಕಳಿಸಿಕೊಡಲಾಗುವುದು.ಕೊನೆ ದಿನಾಂಕದ ನಂತರ ಬಂದ ಕವನಗಳನ್ನು ತಿರಸ್ಕರಿಸಲಾಗುವುದು.ಕವನಗಳನ್ನು ನುಡಿ ತಂತ್ರಾಂಶ (4.0)ಪಿಡಿ.ಎಫ್ ಮೂಲಕ ಕಳಿಸುವುದು.
ಸ್ವ ರಚಿತ ಕವಿತೆಗಳು ಈ ಕೆಳಕಂಡ ಆಶಯಗಳನ್ನು ಹೊಂದಿರಲಿ…
ಕನ್ನಡ ನಾಡು ನುಡಿ ಭಾಷೆ ದೇಶಪ್ರೇಮ, ಪ್ರಕೃತಿ, ವೈಚಾರಿಕತೆ, ಆಧ್ಯಾತ್ಮ , ಮೂಢನಂಬಿಕೆ, ಡಂಬಾಚಾರ ಜಾತಿ ಪದ್ಧತಿ, ಮತ್ತು ಪ್ರಸ್ತುತ ವಿದ್ಯಾಮಾನಗಳ ಕುರಿತು ಇರಲಿ
ಕವಿತೆಗಳನ್ನು ಕಳಿಸಬೇಕಾದ ವಿಳಾಸ
ಡಾ. ಷಕೀಬ್ ಎಸ್ ಕಣದ್ಮನೆ
ಅಧ್ಯಕ್ಷರು
ಕನ್ನಡ ಸಾಂಸ್ಕೃತಿಕ ಗತ ವೈಭವ ಅಕಾಡೆಮಿ ದಾವಣಗೆರೆ.
ಮೊ ಸಂಖ್ಯೆ :(ವಾಟ್ಸಪ್ )
9743930178
9980421671
8880006939
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ
ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..
ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.
ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.
ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ
ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.
ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ಕ್ರೀಡೆ
ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ
ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಸ್ಟಾಫ್ ನರ್ಸ್ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days ago
ಹೊಸಪೇಟೆ |10 ಲಕ್ಷ ರೂ ಅನುದಾನ ದುರ್ಬಳಕೆ ; ಶ್ರೀಶಂಕರ್ ಆನಂದ್ ಸಿಂಗ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಕೆ.ಶಿವಪ್ಪ ಮೇಲೆ ವಂಚನೆ ಆರೋಪ ; ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days ago
ಗ್ಯಾರಂಟಿ ಯೋಜನೆಗಳು ನಿಲ್ಲೋದಿಲ್ಲ : ಗೃಹ ಸಚಿವ ಡಾ.ಜಿ.ಪರಮೇಶ್ವರ್
-
ದಿನದ ಸುದ್ದಿ6 days ago
ಮುಖ್ಯಮಂತ್ರಿ ಪರಿಹಾರ ನಿಧಿಗೆ 9 ಕೋಟಿ ರೂಪಾಯಿ ನೀಡಿದ ಕರ್ನಾಟಕ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮ
-
ದಿನದ ಸುದ್ದಿ6 days ago
ದಾವಣಗೆರೆ | ವಾಹನ ಬಳಕೆದಾರರಲ್ಲಿ ರಸ್ತೆ ಸುರಕ್ಷತೆಯ ಜಾಗೃತಿ ಕಾರ್ಯಕ್ರಮ
-
ದಿನದ ಸುದ್ದಿ4 days ago
ದೊಡ್ಡಘಟ್ಟ | ಶ್ರೀ ಲಕ್ಷ್ಮಿ ವೆಂಕಟೇಶ್ವರ ಸ್ವಾಮಿ ವಸತಿಯುತ ಪ್ರೌಢಶಾಲೆಯಲ್ಲಿ ಗುರುವಂದನಾ ಕಾರ್ಯಕ್ರಮ
-
ದಿನದ ಸುದ್ದಿ3 days ago
ವಹಿವಾಟುಗಳಲ್ಲಿ ಅಮೆರಿಕ ಡಾಲರ್ ಬದಲಾಯಿಸದಂತೆ ಬ್ರಿಕ್ಸ್ ರಾಷ್ಟ್ರಗಳಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಒತ್ತಾಯ
-
ದಿನದ ಸುದ್ದಿ4 days ago
ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ; ರಾಷ್ಟ್ರೀಯ ಲೋಕ್ ಅದಾಲತ್