ದಿನದ ಸುದ್ದಿ

ಸ್ವ ಸಹಾಯ ಸಂಘ ಆರಂಭಕ್ಕೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್: ಸ್ವ ಸಹಾಯ ಸಂಘಗಳನ್ನು ರಚಿಸಲು ಆಸಕ್ತ ಅರ್ಹ ಫಲಾನುಭವಿ, ಗುಂಪುಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ಜುಲೈ 11 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸುವ ಫಲಾನುಭವಿಗಳು ಮಲೆಬೆನ್ನೂರು ಪಟ್ಟಣ ನಿವಾಸಿಗಳಾಗಿರಬೇಕು, ಬಡತನ ರೇಖೆ ಕೆಳಗಿನ ಕುಟುಂಬದವರಾಗಿರಬೇಕು.

ಹಾಗೂ ಅರ್ಜಿಯೊಂದಿಗೆ ರೇಷನ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ನಿವಾಸಿ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅನುಭವ ಪ್ರಮಾಣ ಪತ್ರ, ಹುಟ್ಟಿದ ತಾರೀಖು ದೃಢೀಕರಣ ಪತ್ರ ಲಗತ್ತಿಸಿ. ಅರ್ಜಿಯನ್ನು ದ್ವಿ ಪ್ರತಿಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಪಟ್ಟಣ ಪಂಚಾಯಿತಿ ಕಚೇರಿ ಸಂಪರ್ಕಿಸಲು ಮಲೇಬೆನ್ನೂರು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version