ದಿನದ ಸುದ್ದಿ
ತಾಂಡಾ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ; ಸಿಎಂಗೆ ಮನವಿ : ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಸುದ್ದಿದಿನ, ದಾವಣಗೆರೆ : ತಾಂಡಾ ಅಭಿವೃದ್ಧಿ ನಿಗಮಕ್ಕೆ ಹೆಚ್ಚಿನ ಅನುದಾನ ಹೆಚ್ಚಿಸುವ ಕುರಿತು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದು ತೋಟಗಾರಿಕೆ, ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆಯಲ್ಲಿ ಭಾನುವಾರ ಸಮಾಜ ಕಲ್ಯಾಣ ಇಲಾಖೆ ಮತ್ತು ರಾಜ್ಯ ತಾಂಡಾ ಅಭಿವೃದ್ಧಿ ನಿಗಮದಿಂದ 2 ಕೋಟಿ 12ಲಕ್ಷ ರೂಪಾಯಿ ವೆಚ್ವದಲ್ಲಿ ನಿರ್ಮಾಣ ಮಾಡಿರುವ ಬಂಜಾರ ಸಮುದಾಯ ಭವನ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ವೇಳೆ ತಾಂಡಾ ಹಟ್ಟಿ, ಹಾಡಿಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡುವ ಮಹತ್ವದ ಮಸೂದೆ ಜಾರಿ ಮಾಡಿ ಬಂಜಾರ ಸಮುದಾಯದ ಅಭಿವೃದ್ಧಿಗೆ ಕ್ರಮ ಕೈಗೊಂಡಿದ್ದರು ಎಂದರು. ಕಾರ್ಯಕ್ರಮದಲ್ಲಿ ವಿಧಾನಸಭಾ ಉಪಸಭಾಪತಿ ರುದ್ರಪ್ಪ ಲಮಾಣಿ, ಶಾಸಕರಾದ ಕೆ.ಎಸ್.ಬಸವಂತಪ್ಪ, ಬಿ.ದೇವೆಂದ್ರಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243