ದಿನದ ಸುದ್ದಿ
ಕೃಷಿ ಉತ್ಪನ್ನ ಆಮದು ತಡೆಗೆ ಕ್ರಮ; ಸಚಿವ ಬಂಡೆಪ್ಪ ಕಾಶೆಂಪುರ್ ಹೇಳಿಕೆ
ಸುದ್ದಿದಿನ ಡೆಸ್ಕ್: ಹೊರರಾಜ್ಯದಿಂದ ಆಮದಾಗುವ ಉತ್ಪನ್ನಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುವುದು. ರೈತ ನೇರವಾಗಿ ಮಾರಾಟ ಮಾಡಿದರೆ ಸರಿ ಆದರೆ ವರ್ತಕರು ಬೇರೆ ರಾಜ್ಯದಿಂದ ಬಂದು ಮಾರಿದರೆ ಅದನ್ನು ಒಪ್ಪಲು ಸಾಧ್ಯವಿಲ್ಲ. ಈ ಬಗ್ಗೆ ಕೂಲಂಕುಷವಾಗಿ ಚರ್ಚೆ ನಡೆಸಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ತಿಳಿಸಿದರು.
ಜಿಲ್ಲೆಯಲ್ಲಿ ಮೆಕ್ಕೆಜೋಳ ಹಾಗೂ ಭತ್ತ ಹೆಚ್ಚಿನ ಉತ್ಪಾದನೆಯಾಗುತ್ತಿದ್ದು ಮೆಕ್ಕಜೋಳಕ್ಕೆ ರೂ.1700 ಬೆಂಬಲ ಇದೆ. ಆದರೆ ಬಿಹಾರದಿಂದ ರೂ. 1200 ಕ್ಕೆ ಮೆಕ್ಕೆಜೋಳ ಬರುತ್ತಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ತಿಳಿಸಿದರು.
ಹೊರರಾಜ್ಯದಿಂದ ರಪ್ತಾಗುವ ಪದಾರ್ಥಗಳಿಗೆ ನಿಯಂತ್ರಣಾವಿಲ್ಲವಾ ಎಂದು ಸಚಿವರು ಪ್ರಶ್ನಿಸಿದರು. ಯಾವುದೇ ರಾಜ್ಯದಿಂದ ಬರುವ ಆಹಾರಧಾನ್ಯಗಳನ್ನು ರಾಜ್ಯ ನಿರ್ಬಂಧಿಸಲು ಸಾಧ್ಯವಿಲ್ಲ ಆದರೆ ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳು ತಿಳಿಸಿದರು.
ಮೊದಲು ನಮ್ಮ ರೈತರು ಉಳಿಯಬೇಕು. ರಾಜ್ಯ ರಾಜ್ಯ ನಡುವಿನ ವ್ಯಾಪಾರದ ಕಾನೂನುಗಳು ಏನು ಹೇಳುತ್ತವೆ. ಎ.ಪಿ.ಎಂಸಿ ಕಾನೂನು ಏನು ಹೇಳುತ್ತದೆ ಎಂಬುದನ್ನು ಪರಾಮರ್ಶಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಉಣ್ಣೆ ಮಾರಾಟ ಸಹಕಾರ ಸಂಘಗಳ ಆಧುನಿಕತೆಗೆ ತಕ್ಕಂತೆ ವಸ್ತ್ರಗಳನ್ನು ವಿನ್ಯಾಸಗೊಳಿಸಬೇಕು. ನಾವು ಕೇವಲ ಹಳೇ ಕಾಲದ ಕಂಬಳಿ ನೇಯ್ದು ಕೊಂಡಿದ್ದರೆ ಸಾಲದು ಎಂದು ಕುರಿ ಉಣ್ಣೆ ಸಹಕಾರಿ ಸಂಘದ ಅಧಿಕಾರಿಗಳಿಗೆ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


