Connect with us

ದಿನದ ಸುದ್ದಿ

ಉಚ್ಛ ನ್ಯಾಯಾಲಯದ ಆದೇಶಗಳಿಗೆ ಬೆಲೆ ಕೊಡದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಿ : ಎಸ್.ನಾಗರಾಜ್ ಮನವಿ

Published

on

ಸುದ್ದಿದಿನ,ಹೊಳಲ್ಕೆರೆ:ಪೊಲೀಸ್ ಇಲಾಖೆ ಸಿಬ್ಬಂದಿ ತಪಾಸಣೆ ನೆಪದಲ್ಲಿ ನಮ್ಮ ಸಂಸ್ಥೆ ‘ಕರ್ನಾಟಕ ಫ್ಯಾಮಿಲಿ ಅಸೋಸಿಯೇಷನ್’ ಮೇಲೆ ಆಗಾಗ ದಾಳಿ ನಡೆಸುತ್ತಿದ್ದು, ನಮ್ಮ ಸದಸ್ಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದಾರೆ. ಉಚ್ಛ ನ್ಯಾಯಾಲಯದ ಆದೇಶಗಳಿಗೆ ಬೆಲೆ ಕೊಡದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸಂಸ್ಥೆಯ ಅಧ್ಯಕ್ಷ ಎಸ್.ನಾಗರಾಜ್ ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಉಚ್ಚ ನ್ಯಾಯಾಲಯದ ಆದೇಶದಂತೆ ನಮ್ಮ ಸಂಸ್ಥೆ ಮೂರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದೆ. ಆದರೂ ಪೊಲೀಸರು ನಮ್ಮ ಸಂಸ್ಥೆಯ ಸದಸ್ಯರ ವಾಹನಗಳನ್ನು ಜಪ್ತಿ ಮಾಡುವುದು, ಹಾಗೂ ಅನವಶ್ಯಕವಾಗಿ ನಮ್ಮ ಸದಸ್ಯರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ದು ಗಾಂಜಾ ಸೇವನೆ ಪರೀಕ್ಷೆ (ಎನ್ ಡಿಪಿಎಸ್) ಮಾಡಿಸಿ ಅವಮಾನಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸಂಬಂಧ ಜುಲೈ 4ರಂದು ಚಿತ್ರದುರ್ಗದ ಪತ್ರಿಕಾ ಭವನದಲ್ಲಿ ಪತ್ರಿಕಾ ಗೋಷ್ಠಿ ನಡೆಸಿದ್ದು, ಅದೇ ದಿನ ಪೊಲೀಸರು ನನ್ನ ಮೇಲೆ ಸುಳ್ಳು ಪ್ರಕರಣ 199/2025 ದಾಖಲಿಸಿ ಬಂಧಿಸಿದ್ದರು. ನಂತರ ನ್ಯಾಯಾಲಯ ನನಗೆ ಜಾಮೀನು ಮಂಜೂರು ಮಾಡಿತ್ತು. ಈ ಕುರಿತು ನಾನು ಜುಲೈ 10 ರಂದು ಮಾನ್ಯ ಉಚ್ಛ ನ್ಯಾಯಾಲಯಕ್ಕೆ ಪ್ರಕರಣದ ತಡೆ ಕೋರಿ ಅರ್ಜಿ ಸಲ್ಲಿಸಿದ್ದೆ. ನ್ಯಾಯಾಲಯ ಜೂನ್ 23 ರಂದು ಸಿಆರ್ ಎಲ್ ಪಿ-9994/2025 ರಂತೆ ಸದರಿ ಪ್ರಕರಣವನ್ನು ರದ್ದುಗೊಳಿಸಿರುತ್ತದೆ ಎಂದಿದ್ದಾರೆ.

ಪೊಲೀಸರು ಜಿಲ್ಲೆಯಲ್ಲಿರುವ ಎಲ್ಲಾ ಮನರಂಜನಾ ಕೇಂದ್ರಗಳನ್ನು ಸುಗಮವಾಗಿ ನಡೆಯಲು ಬಿಟ್ಟು, ನಮ್ಮ ಸಂಸ್ಥೆಗೆ ಮಾತ್ರ ದುರುದ್ದೇಶಪೂರ್ವಕವಾಗಿ ತಪಾಸಣೆ ನೆಪದಲ್ಲಿ ನಮ್ಮ ಸದಸ್ಯರಿಗೆ ಮಾನಸಿಕವಾಗಿ ಕಿರುಕುಳ ಕೊಡುತ್ತಿದ್ದಾರೆ. ಇದು ಮಾನವ ಹಕ್ಕುಗಳ ಸ್ಪಷ್ಠ ಉಲ್ಲಂಘನೆ ಆಗಿರುತ್ತದೆ. ಈ ಕುರಿತು ಮಾನವ ಹಕ್ಕುಗಳ ಆಯೋಗಕ್ಕೂ ದೂರು 3222/10/7/2025 ಸಲ್ಲಿಸಿದ್ದೇನೆ. ಈ ಕುರಿತು ವಿಚಾರಣೆ ಪ್ರಗತಿಯಲ್ಲಿದೆ ಎಂದು ಮಾಹಿತಿ‌ ನೀಡಿದ್ದಾರೆ.

ಈ ಕುರಿತು ಸರ್ಕಾರ ಮನರಂಜನಾ ಕೇಂದ್ರಗಳ ವಿಷಯದಲ್ಲಿ ಸ್ಪಷ್ಟ ನಿಲುವು ತಾಳಬೇಕು. ಮಾನ್ಯ ಉಚ್ಛ ನ್ಯಾಯಾಲಯದ ಆದೇಶಗಳನ್ನು ಚಿತ್ರದುರ್ಗ ಜಿಲ್ಲಾ ಪೊಲೀಸರು ಪಾಲಿಸುವಂತೆ ಸಾಮಾಜಿಕ ನ್ಯಾಯ ಒದಗಿಸುವಂತೆ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ನಿರ್ದೇಶನ ಮಾಡಬೇಕೆಂದು ಪ್ರಕಟಣೆ ಮೂಲಕ ಮನವಿ ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

Published

on

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಹಲವಾರು ತಂಡಗಳು ಉತ್ಸಾಹದಿಂದ ಭಾಗವಹಿಸಿ ತಮ್ಮ ಕೌಶಲ್ಯವನ್ನು ಪ್ರದರ್ಶಿಸಿದರು. ಕಾರ್ಯಕ್ರಮದ ಅಂಗವಾಗಿ ಆಹಾರ ಮೇಳವೂ ಏರ್ಪಡಿಸಲಾಯಿತು. ವಿದ್ಯಾರ್ಥಿನಿಯರು ಕಾರಟ್ ಹಲ್ವಾ, ಫ್ರೂಟ್ ಸಲಾಡ್, ಚುರಿ ಮುರಿ, ಮೊಸರು ಅವಲಕ್ಕಿ, ವಿವಿಧ ರುಚಿಯ ಜ್ಯೂಸ್‌ಗಳು, ಕೊಕೊನೆಟ್ ಬರ್ಫಿ, ಕುಕುಂಬರ್ ಬೋಟ್, ಟೊಮೇಟೊ ಚಾಟ್, ಆಪಲ್ ಪೇಡ ಮತ್ತು ಅವಲಕ್ಕಿ ಚಿತ್ರಾನ್ನ ಸೇರಿದಂತೆ ಹಲವಾರು ಪೌಷ್ಟಿಕ ಹಾಗೂ ರುಚಿಕರ ಆಹಾರಗಳನ್ನು ತಯಾರಿಸಿ ಪ್ರದರ್ಶನೆ ಮತ್ತು ಮಾರಾಟ ಮಾಡಿದರು.

ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ಯಶಸ್ವಿ ಕಾರ್ಯಕ್ರಮವನ್ನಾಗಿ ಮಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

Published

on

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು ಜಿಲ್ಲಾಡಳಿತವು ವಿಶೇಷ ಅವಕಾಶ ಕಲ್ಪಿಸಿದೆ. ಜಿಲ್ಲೆಯ ಎಲ್ಲಾ ಆಧಾರ್ ಕೇಂದ್ರಗಳಲ್ಲಿ ಸೆಪ್ಟೆಂಬರ್ 30, 2026 ರವರೆಗೆ ಈ ಸೇವೆಯು ಸಂಪೂರ್ಣ ಉಚಿತವಾಗಿ ಲಭ್ಯವಿರಲಿದೆ.

ಆಧಾರ್ ನಿಯಮಗಳ ಪ್ರಕಾರ, ಮಕ್ಕಳಿಗೆ 5 ಮತ್ತು 15 ವರ್ಷ ತುಂಬಿದಾಗ ಬಯೋಮೆಟ್ರಿಕ್ ವಿವರಗಳನ್ನು ನವೀಕರಿಸುವುದು ಕಡ್ಡಾಯವಾಗಿದೆ. ಈ ನವೀಕರಣದಿಂದ ಶಾಲಾ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ವಿದ್ಯಾರ್ಥಿ ವೇತನ ಹಾಗೂ ಸರ್ಕಾರದ ವಿವಿಧ ಜನಕಲ್ಯಾಣ ಯೋಜನೆಗಳ ಸೌಲಭ್ಯ ಪಡೆಯಲು ಅನುಕೂಲವಾಗಲಿದೆ.

ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಮತ್ತು ಪೂರಕ ದಾಖಲೆಗಳೊಂದಿಗೆ ಹತ್ತಿರದ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಜಿಲ್ಲೆಯ ಎಲ್ಲಾ ಪೋಷಕರು ಈ ಜವಾಬ್ದಾರಿಯನ್ನು ಅರಿತು, ನಿಗದಿತ ಅವಧಿಯೊಳಗೆ ತಮ್ಮ ಮಕ್ಕಳ ಆಧಾರ್ ನವೀಕರಿಸುವ ಮೂಲಕ ಸರ್ಕಾರದ ಯೋಜನೆಗಳು ತಲುಪಲು ಸಹಕರಿಸಬೇಕೆಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಹಿರಿಯ ಕ್ರಿಕೆಟ್ ಪಟು ಎನ್ಆರ್‌ಎಚ್ ರಮೇಶ್ ನಿಧನ

Published

on

ಸುದ್ದಿದಿನ,ದಾವಣಗೆರೆ: ನಗರದ ಎನ್ಆರ್‌ಎಚ್‌ ಸೈಕಲ್ ಮಾರ್ಟ್ ಮಾಲೀಕ, ದಾವಣಗೆರೆ ಫ್ರೆಂಡ್ಸ್ ಕ್ರಿಕೆಟ್ ಕ್ಲಬ್‌ನ ನಾಯಕನಾಗಿದ್ದ ಎನ್.ಆರ್‌.ಎಚ್‌.ರಮೇಶ ಇಲ್ಲಿನ ಕೆಟಿಜೆ ನಗರದ 15ನೇ ಕ್ರಾಸ್‌, 2ನೇ ಮೇನ್‌ನಲ್ಲಿರುವ ತಮ್ಮ ನಿವಾಸದಲ್ಲಿ ಬುಧವಾರ ಸಂಜನೆ ನಿಧನರಾಗಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು, ಓರ್ವ ಸಹೋದರ, ಮೂವರು ಸಹೋದರಿಯರು ಸೇರಿದಂತೆ ಬಂಧು-ಬಳಗ ಅಗಲಿದ್ದಾರೆ. ದಾವಣಗೆರೆ ಗಾಂಧಿ ನಗರ ಸಮೀಪದ ವೀರಶೈವ ರುದ್ರಭೂಮಿಯಲ್ಲಿ ಮೇ.7ರಂದು ಮಧ್ಯಾಹ್ನ 2 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ.

90ರ ದಶಕದಲ್ಲಿ ದಾವಣಗೆರೆ ಸೇರಿದಂತೆ ನೆರೆ ಹೊರೆಯ ಜಿಲ್ಲೆಗಳಲ್ಲಿ ಟೆನ್ನಿಸ್‌ ಬಾಲ್‌ ಕ್ರಿಕೆಟ್‌ ಪಂದ್ಯ, ಪಂದ್ಯಾವಳಿಗಳಲ್ಲಿ ಭರ್ಜರಿ ಸಿಕ್ಸರ್ ಭಾರಿಸುವ ಮೂಲಕ ಕ್ರಿಕೆಟ್ ಪ್ರೇಮಿಗಳ ನೆಚ್ಚಿನ ಆಟಗಾರನಾಗಿ ರಮೇಶ ಸಾಧನೆ ಮಾಡಿದ್ದರು. ಎನ್ಆರ್‌ಎಚ್‌ ರಮೇಶ ನಿಧನಕ್ಕೆ ಎಫ್‌ಸಿಸಿ ತಂಡದ ಹಿರಿಯ ಆಟಗಾರರು, ದಾವಣಗೆರೆ ಕ್ರಿಕೆಟ್ ಕ್ಲಬ್‌ ಸೇರಿದಂತೆ ವಿವಿಧ ಕ್ರಿಕೆಟ್ ಕ್ಲಬ್‌ಗಳ ಹಿರಿಯ ಆಟಗಾರರು ತೀವ್ರ ಸಂತಾಪ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending