ದಿನದ ಸುದ್ದಿ
ಪ್ರತಿಭಾವಂತ ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
ಸುದ್ದಿದಿನ ಡೆಸ್ಕ್ : ಸಮಾಜ ಕಲ್ಯಾಣ ಇಲಾಖೆಯು ಪ್ರತಿಭಾವಂತ ಪರಿಶಿಷ್ಟ ಪಂಗಡ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಜಿಲ್ಲೆಯಲ್ಲಿರುವ ಪ್ರತಿಷ್ಠಿತ ಶಾಲೆಗಳಲ್ಲಿ 6 ನೇ ತರಗತಿಗೆ ದಾಖಲಿಸಲು 5 ನೇ ತರಗತಿಯಲ್ಲಿ ಪಾಸಾದ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ವಿದ್ಯಾರ್ಥಿಗಳಿಗೆ ಉಚಿತ ಊಟ, ವಸತಿ ಸೌಲಭ್ಯ, ಸಮವಸ್ತ್ರ, ಪಠ್ಯಪುಸ್ತಕ, ಶಿಕ್ಷಣ ಶುಲ್ಕ ಹಾಗೂ ಇನ್ನಿತರೆ ಸೌಲಭ್ಯಗಳನ್ನು ಒದಗಿಸಲಾಗುವುದು. ಆಸಕ್ತರು ಜೂನ್ 7 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ ಧಾರವಾಡ ಇವರ ಕಚೇರಿಯ ದೂರವಾಣಿ ಸಂಖ್ಯೆ-0836-2447201 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243