ದಿನದ ಸುದ್ದಿ
ಟಾಕಿಂಗ್ ಲ್ಯಾಪ್‍ಟಾಪ್‍ಗಾಗಿ ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ
ಸುದ್ದಿದಿನ,ಕಲಬುರಗಿ : ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ. ಹಾಗೂ ನಂತರದ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ಉಚಿತವಾಗಿ ಟಾಕಿಂಗ್ ಲ್ಯಾಪ್‍ಟಾಪ್‍ನ್ನು ನೀಡಲಾಗುತ್ತಿದೆ.
ಇದಕ್ಕಾಗಿ ಜಿಲ್ಲೆಯ ಅಂಧ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿ ವಿಕಲಚೇತನರ ಹಾಗೂ ಹಿರಿಯ ನಗರಿಕರ ಸಬಲೀಕರಣ ಇಲಾಖೆಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
- ಅಂಧ ವಿದ್ಯಾರ್ಥಿಯು ಭಾರತದ ಪ್ರಜೆಯಾಗಿರಬೇಕು. ಕರ್ನಾಟಕದಲ್ಲಿ ಕನಿಷ್ಠ ಹಿಂದಿನ 10 ವರ್ಷಗಳ ವಾಸವಾಗಿರುವ ಕುರಿತು ತಹಶೀಲ್ದಾರರಿಂದ ಪಡೆದ ಪ್ರಮಾಣಪತ್ರ ಸಲ್ಲಿಸಬೇಕು.
- ಲ್ಯಾಪ್‍ಟಾಪ್ ಪಡೆಯಲಿಚ್ಛಿಸುವ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಕಾಲೇಜು/ಸಂಸ್ಥೆಯ ಮುಖ್ಯಸ್ಥರಿಂದ ಧೃಢಿಕರಣ ಶಿಫಾರಸ್ಸಿನೊಂದಿಗೆ ನಿಗದಿತ ನಮೂನೆಯಲ್ಲಿ ಅರ್ಜಿ ಸಲ್ಲಿಸಬೇಕು.
- ಈ ಸೌಲಭ್ಯವನ್ನು ಪಡೆಯುವ ಅಂಧ ವಿದ್ಯಾರ್ಥಿಗಳು ಶೇ.40 ಕ್ಕಿಂತ ಹೆಚ್ಚು ದೃಷ್ಠಿದೋಷವುಳ್ಳವರಾಗಿರಬೇಕು.
- ವೈದ್ಯಕೀಯ ಪ್ರಾಧಿಕಾರಿಗಳಿಂದ ನೀಡಿರುವ ಅಂಗವಿಕಲರ ಗುರುತಿನ ಚೀಟಿ ಸಲ್ಲಿಸಬೇಕು. ಈ ಯೋಜನೆಯಡಿ ಸೌಲಭ್ಯ ಪಡೆಯಲು ಯಾವುದೇ ಆದಾಯ ಮಿತಿ ಇರುವುದಿಲ್ಲ.
ಅರ್ಹ ಅಂಧ ವಿದ್ಯಾರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕಲಬುರಗಿ ಚಂದ್ರಶೇಖರ ಪಾಟೀಲ ಕ್ರೀಡಾಂಗಣ ಎದುರಿಗೆಯಿರುವ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ 2021ರ ಜನವರಿ 25 ರೊಳಗಾಗಿ ಸಲ್ಲಿಸಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಸದರಿ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-235222ಗೆ ಸಂಪರ್ಕಿಸಲು ಕೋರಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243