Connect with us

ಸಿನಿ ಸುದ್ದಿ

ಖ್ಯಾತ ತಮಿಳು ನಟ ವಿಶಾಲ್ ಅರೆಸ್ಟ್..!?

Published

on

ಸುದ್ದಿದಿನ,ಚೆನ್ನೈ: ಖ್ಯಾತ ತಮಿಳು ನಟ ಮತ್ತು ನಿರ್ಮಾಪಕ ವಿಶಾಲ್‌ನನ್ನು ಚೆನ್ನೈ ಪೊಲೀಸರು ಟೆನೆಂಪೆಂಟ್‌ನಲ್ಲಿ ಬಂಧಿಸಿ ಕರೆದೊಯ್ದಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಚಲನಚಿತ್ರ ನಿರ್ಮಾಪಕರ ಮಂಡಳಿಯ ಅಧ್ಯಕ್ಷರಾಗಿರುವ ವಿಶಾಲ್‌ ಅವರು ನಿನ್ನೆಯಷ್ಟೇ ಮತ್ತೊಂದು ಬಣದ ನಿರ್ಮಾಪಕರು ಬೀಗ ಹಾಕಿದ್ದ ಟೆನೆಂಪೆಟ್‌ನಲ್ಲಿನ ನಿರ್ಮಾಪಕರ ಸಂಘದ ಕಚೇರಿಯ ಬೀಗವನ್ನು ಹೊಡೆಯಲು ಯತ್ನಿಸಿರುವ ಆರೋಪದ ಮೇಲೆ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ನಿರ್ಮಾಪಕರ ಮಂಡಳಿಯ ಹಣವನ್ನು ವಿಶಾಲ್‌ ಅವರು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದು ಹಲವು ನಿರ್ಮಾಪಕರು ಆರೋಪಿಸಿದ್ದಾರೆ. ಒಂದೇ ದಿನ ಹಲವಾರು ಚಿತ್ರಗಳನ್ನು ಬಿಡುಗಡೆ ಮಾಡುವುದಕ್ಕೆ ಇದ್ದ ನಿರ್ಬಂಧವನ್ನು ತೆಗೆದುಹಾಕಿರುವುದಕ್ಕೆ ವಿಶಾಲ್‌ ವಿರುದ್ಧ ಹಲವರು ಅಸಮಾಧಾನಗೊಂಡಿದ್ದರು. ಹೀಗಾಗಿ ತಮಿಳು ಸಿನಿಮಾ ನಿರ್ಮಾಪಕರು ಬೀದಿಯಲ್ಲೇ ಜಗಳವಾಡಿಕೊಂಡಿದ್ದಾರೆ. ವಿಶಾಲ್‌ ಅವರು ತಮಿಳು ಕಲಾವಿದರ ಸಂಘಟನೆಯಾದ ನಾದಿಗರ್‌ ಸಂಗಮ್‌ನ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದು, 2015ರಲ್ಲಿ ಹುದ್ದೆಗೆ ಆಯ್ಕೆಯಾಗಿದ್ದರು.

ನಾಳೆ ತಮಿಳುನಾಡಿನಲ್ಲಿ ಕನ್ನಡದ ಕೆ.ಜಿ.ಎಫ್‌. ಸಿನಿಮಾ ಬಿಡುಗಡೆಯಾಗುತ್ತಿದ್ದು, ತಮಿಳುನಾಡಲ್ಲಿ ಯಶ್​​ಗೆ ಬೆಂಬಲವಾಗಿ ನಟ ವಿಶಾಲ್ ನಿಂತಿದ್ದರು. ಕೆ.ಜಿ.ಎಫ್.​​ ಚಿತ್ರದ ಬಿಡುಗಡೆಗೆ ವಿಶಾಲ್ ಅವರೇ ವಿತರಕರನ್ನು ಕೊಡಿಸಿದ್ದರು. ಈ ವಿಚಾರವಾಗಿಯೂ ತಮಿಳು ನಿರ್ಮಾಪಕರು ಕ್ಯಾತೆ ತೆಗೆದಿದ್ದರು. ಕೆ.ಜಿ.ಎಫ್.​​ಗೆ ಪರ್ಯಾಯವಾಗಿ ‘ಮಾರಿ-2’ ಸೇರಿ ಹಲವು ಸಿನಿಮಾ ರಿಲೀಸ್ ಮಾಡಲು ಇತರೆ ನಿಮಾರ್ಪಕರು ನಿರ್ಧರಿಸಿ ಕೆ.ಜಿ.ಎಫ್.​​ಗೆ ಥಿಯೇಟರ್​ ಸಿಗದಂತೆ ಪ್ಲ್ಯಾನ್‌ ಮಾಡಿದ್ದರು ಎನ್ನಲಾಗಿದ್ದು, ಈ ವಿಚಾರವಾಗಿಯೂ ವಿಶಾಲ್‌ ಮೇಲೆ ಅಸಮಾಧಾನಗೊಂಡಿದ್ದರು.

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

‘ಮತದಾರ ದೇವರು’ ಎಂದ‌ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ...

ದಿನದ ಸುದ್ದಿ2 days ago

ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ,...

ದಿನದ ಸುದ್ದಿ3 days ago

ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು...

ದಿನದ ಸುದ್ದಿ4 days ago

ವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ : ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ 2006 ರಿಂದ 2025ರ ಅವಧಿಯಲ್ಲಿ ಅಧ್ಯಯನ ಮಾಡಿರುವ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗಗಳ...

ದಿನದ ಸುದ್ದಿ5 days ago

ದಾವಣಗೆರೆ | ಇಂದು ಕರೆಂಟ್ ಇರಲ್ಲ

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00...

ದಿನದ ಸುದ್ದಿ1 week ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ1 week ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ1 week ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ1 week ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ1 week ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

Trending