ದಿನದ ಸುದ್ದಿ
ತಾಂಡಾ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂಪಾಯಿ ಅನುದಾನ
ಸುದ್ದಿದಿನ ಡೆಸ್ಕ್ :ತಾಂಡಾ ಅಭಿವೃದ್ಧಿ ನಿಗಮಕ್ಕೆ ಈ ವರ್ಷ 100 ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ರಾಜ್ಯದಲ್ಲಿನ ತಾಂಡಾಗಳ ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಬೀದರ್ ಜಿಲ್ಲೆ ಔರಾದ್ ನಲ್ಲಿ ಇಂದು ನಡೆದ ಜನ ಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಅವರು, 23 ಸಾವಿರ ತಾಂಡಗಳನ್ನು ಕಂದಾಯ ಗ್ರಾಮಗಳಾಗಿ ಅಭಿವೃದ್ಧಿಪಡಿಸುವುರದ ಜೊತೆಗೆ ಅಲ್ಲಿ ವಾಸಿಸುತ್ತಿರುವವರಿಗೆ ಹಕ್ಕು ಪತ್ರ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು. ಜನ ಸಂಕಲ್ಪ ಯಾತ್ರೆಯಲ್ಲಿ ನಿರೀಕ್ಷೆಗೂ ಮೀರಿದ ಜನ ಬೆಂಬಲ ವ್ಯಕ್ತವಾಗುತ್ತಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243