ದಿನದ ಸುದ್ದಿ
ಸಸಿ ಬೆಳೆಸಿದರೆ ಕೃಪಾಂಕ : ತರಳಬಾಳು ಶ್ರೀ ಜಗದ್ಗುರುವರ್ಯರ ಸಲಹೆಗೆ ಸರ್ಕಾರದ ಒಪ್ಪಿಗೆ
ಸುದ್ದಿದಿನ ಡೆಸ್ಕ್ : ಪ್ರತಿಷ್ಠಿತ ಕೇಂದ್ರ ಸರ್ಕಾರದ ಇಂದಿರಾ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿಯನ್ನು 80 ರ ದಶಕದಲ್ಲಿಯೇ ಪಡೆದು ಸಾಮಾಜಿಕ ಅರಣ್ಯೀಕರಣದ ಬಗ್ಗೆ ಭಾಷಣ ಮಾಡದೆ ಸಾವಿರಾರು ಎಕರೆಯ ಮಠದ ಭೂಮಿಯಲ್ಲಿ ಸಸ್ಯ ಕ್ರಾಂತಿ ಮಾಡಿ ಪರಿಸರ ಸಂರಕ್ಷಣೆ ಎಲ್ಲರ ಜವಾಬ್ದಾರಿ ಎಂದು ಮನವರಿಕೆ ಮಾಡಿ, ಲಕ್ಷ ಲಕ್ಷ ಬೀಜದುಂಡೆಗಳನ್ನು ಭೂ ತಾಯಿಯ ಮಡಿಲಿಗೆ ಅರ್ಪಿಸಿ ಕಾಡು ಇದ್ದರೆ ನಾಡು ಎಂಬುದರ ಜಾಗೃತಿ ಮೂಡಿಸಿದವರು ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು.
ಯಾವುದೇ ಖರ್ಚು ಇಲ್ಲದೇ ಸಸಿ ನೆಟ್ಟು ಪೋಷಿಸುವ ಕಾರ್ಯ ಯೋಜನೆಯನ್ನು 25 ವರ್ಷಗಳ ಹಿಂದೆಯೇ ಅಂದಿನ ಮುಖ್ಯ ಮಂತ್ರಿಗಳಾದ ರಾಮಕೃಷ್ಣ ಹೆಗಡೆಯವರಿಗೆ ಶ್ರೀ ಗಳು ಮನವರಿಕೆ ಮಾಡಿಕೊಟ್ಟಿದ್ದರು. ಆದರೆ ಸರ್ಕಾರಕ್ಕೆ ಖರ್ಚು ಮಾಡಿಯೇ ಅಭ್ಯಾಸ ಇರುವಾಗ ವ್ಯಯವಿಲ್ಲದ ಯೋಜನೆಗೆ ಗಮನ ಕೊಡುವ ಮನಸ್ದಿತಿ ಇರಬೇಕಲ್ಲವೇ..? ಇತ್ತೀಚೆಗೆ ಹಿರಿಯ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ ಶ್ರದ್ಧಾಂಜಲಿ ಸಮಾರಂಭಕ್ಕೆ ಆಗಮಿಸಿದ್ದ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವ ಶರಣ ಆರ್. ಶಂಕರ್ ಅವರಿಗೆ ವ್ಯಯವಿಲ್ಲದೇ ವನ ಬೆಳೆಸುವ ಯೋಜನೆಯ ಕುರಿತು ಸಾವಿರಾರು ಜನರರೆದುರು ಪ್ರಸ್ತಾಪಿಸಿದ್ದರು.
ಎಂಟನೇ ತರಗತಿಯ ವಿದ್ಯಾರ್ಥಿಗಳು ಈ ಯೋಜನೆಯಯ ಫಲಾನುಭವಿಗಳಾಗಿರುತ್ತಾರೆ.ಹತ್ತನೇ ತರಗತಿ ಪೂರ್ಣಗೊಳಿಸುವ ಸಮಯಕ್ಕೆ ಪ್ರತಿ ವಿದ್ಯಾರ್ಥಿ 10 ಸಸಿಗಳನ್ನು ನೆಟ್ಟು ಪೋಷಿಸುವ ಜವಾಬ್ದಾರಿಯವಿದ್ಯಾರ್ಥಿಯದ್ದಾಗಿರುತ್ತದೆ.ಸಸಿಗಳ ಉಪಚರಿಕೆ ,ಬೆಳವಣಿಗೆಯ ಆಧಾರದ ಮೇಲೆ ಹತ್ತನೇ ತರಗತಿಯ ಪರೀಕ್ಷೆ ಯಲ್ಲಿ ವಿಶೇಷ ಅಂಕಗಳನ್ನು ವಿದ್ಯಾರ್ಥಿಗಳಿಗೆ ನೀಡುವ ಮೂಲಕ ಪರಿಸರ ಸಂರಕ್ಷಣೆಯ ಅರಿವು ಮತ್ತು ಮಹತ್ವವನ್ನು ಮೂಡಿಸಿದಂತಾಗುವುದು ಎಂಬುದು ಶ್ರೀಗಳ ಆಶಯ.
ಶಿಕ್ಷಣ ಮತ್ತು ಅರಣ್ಯ ಇಲಾಖೆಗಳ ಸಹಯೋಗದಲ್ಲಿ ಈ ಯೋಜನೆ ಕಾರ್ಯನಿರ್ವಹಣೆಯಾಗಬೇಕೆಂಬುದು ಶ್ರೀ ಗಳ ಸೂಚನೆಯಾಗಿತ್ತು.
ಅಂತೆಯೇ ನಿನ್ನೆ ಕಲ್ಬುರ್ಗಿ ಯಲ್ಲಿ ಜರುಗಿದ ಕೃಷಿ ಅರಣ್ಯ ಕಾರ್ಯಗಾರದಲ್ಲಿ ಈ ಯೋಜನೆಯ ಬಗ್ಗೆ ಮಾನ್ಯ ಸಚಿವರು ಪ್ರಸ್ತಾಪಿಸಿ ತರಳಬಾಳು ಶ್ರೀ ಜಗದ್ಗುರುವರ್ಯರ ಅರಣ್ಯ ಮುಖಿ ಯೋಜನೆಗೆ ಒಪ್ಪಿಗೆ ಸೂಚಿಸಿದುದುರ ಬಗ್ಗೆ ಮಾಹಿತಿ ನೀಡಿ ಅರಣ್ಯ ಮತ್ತು ಶಿಕ್ಷಣ ಇಲಾಖೆಗಳ ಅಧಿಕಾರಿಗಳಲ್ಲಿ ಈಗಾಗಲೇ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಂಡಿದ್ದು ಆರೋಗ್ಯ ಪೂರ್ಣ ಸಸಿ ನೆಟ್ಟು ಪೋಷಿಸಿದ ವಿದ್ಯಾರ್ಥಿಗೆ ಮರವೊಂದಕ್ಕೆ 1ಅಂಕ ನೀಡುವುದಾಗಿ ತಿಳಿಸಿದ್ದಾರೆ.ಸಮಾಜ ಮುಖಿ ಮಹಾಗುರುವಿನ ಅರಣ್ಯ ಮುಖಿಯ ಯೋಜನೆಯ ಸಲಹೆಯಂತೆ ಕಾರ್ಯಮುಖಿಯಾದ ಮಾನ್ಯ ಅರಣ್ಯ ಸಚಿವರ ಕೆಲಸಕ್ಕೆ ತುಂಬು ಹೃದಯದ ಅಭಿನಂಧನೆಗಳು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.
ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.
ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ
ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.
ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.
ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.




