Connect with us

ದಿನದ ಸುದ್ದಿ

ಹೊನ್ನಾಳಿ : ದಾನಿಹಳ್ಳಿಯಲ್ಲಿ ನವೆಂಬರ್ 1ರಂದು ‘ತರಳಬಾಳು ಜಾನಪದ ಸಂಭ್ರಮ’

Published

on

ಸುದ್ದಿದಿನ ಡೆಸ್ಕ್ : ಬಹುನಿರೀಕ್ಷೆಯ ಹೊಸ ಆಯಾಮದೊಂದಿಗೆ, ಮತ್ತೊಷ್ಟು ಬದಲಾವಣೆಗಳನ್ನು ಮೈ ತುಂಬಿಕೊಂಡು,ಸಾಂಸ್ಕೃತಿಕ ಕನ್ನಿಕೆಯ ಕುವರಿಯಂತಿರುವ “ತರಳಬಾಳು ಜಾನಪದ ಸಿರಿಸಂಭ್ರಮ” 350 ಮಕ್ಕಳು ಸಂಭ್ರಮ ಮತ್ತು ಅಪರಿಮಿತ ಉತ್ಸಾಹದಿ ಜಾನಪದ ಲೋಕಕ್ಕೆ ಸರ್ವರನ್ನು ಕರೆದೊಯ್ಯಲು ಸಜ್ಜಾಗಿದ್ದಾರೆ.

ಕಳೆದ ವರ್ಷದ ಅಭೂತಪೂರ್ವಯಶಸ್ಸಿನ ಮಜಲು ಏರಿ ರಾಜ್ಯ, ಹೊರ ರಾಜ್ಯಗಳ ಎಲ್ಲಾ ಪ್ರತಿಷ್ಠಿತ ವೇದಿಕೆಗಳಲ್ಲಿ ಸಂಭ್ರಮದ ಸ್ಮರಣೀಯ ಸ್ವರ್ಗ ಸೃಷ್ಟಿಸಿ ಎಲ್ಲರ ಜನಮಾನಸದಿ ಮೆಚ್ಚುಗೆ ಗಳಿಸಿದ ಜಾನಪದ ಸಿರಿ ಸಂಭ್ರಮ ಈ ವರ್ಷದ ಪ್ರದರ್ಶನ ನೀಡಲು ಸನ್ನದ್ದವಾಗಿದೆ.

ಇತ್ತೀಚೆಗೆರಾಮಗಿರಿ,ಬಸವಾಪಟ್ಟಣ,ಹೊಳಲ್ಕೆರೆಬಾಡ, ಸಿರಿಗೆರೆ, ವಿಜಯಪುರ ಜಿಲ್ಲೆಯ ಸಾಂಬಾ,ಸೇರಿದಂತೆ ಅನೇಕ ಕಡೆ ಯಶಸ್ವಿ ಪ್ರದರ್ಶನ ನೀಡಿ ಜನ ಮನ್ನಣೆಗಳಿಸಿರುವ ಸಿರಿ ಸಂಭ್ರಮದ ಮುಖ್ಯ ಉದ್ದೇಶವೇ ಆಧುನಿಕತೆಯ ಭರಾಟೆಯ ನಾಗಲೋಟದ ಈ ಕಾಲದಲ್ಲಿ ನಮ್ಮ ಪೂರ್ವಜರ ಸೃಷ್ಟಿ ಮತ್ತು ಸಂಸ್ಕೃತಿಯ ಸೃಜನಶೀಲ ಸಾಂಸ್ಕೃತಿಕ ಜಾನಪದೀಯ ಕಲಾ ಪ್ರಕಾರಗಳು ನಶಿಸಿ ಹೋಗುತ್ತಾ ಇತಿಹಾಸದ ಗರ್ಭಕ್ಕೆ ದಾಖಲಾಗುವ ಅಪಾಯಕಾರಿ ಬೆಳವಣಿಗೆಯನ್ನು ತಡೆಯುವ ಸಾಂಸ್ಕೃತಿಕ ಕೈಂಕರ್ಯವಾಗಿದೆ. ಜತನಿಂದ ಜೊತೆಗಿದ್ದ ಕಲಾ ಸೊಬಗನ್ನು ನಮ್ಮ ಯುವ ಜನಾಂಗಕ್ಕೆ ಪರಿಚಯಿಸುವ ಮೂಲಕ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯನ್ನು ಹಂಚುವ ಆಶಯದಿ ಬೀಜಾಂಕುರವಾಗಿದ್ದೇ “ತರಳಬಾಳು ಜಾನಪದ ಸಿರಿ ಸಂಭ್ರಮ “.

ಕಳೆದ 6 ದಶಕಗಳಿಂದಲೂ ಶರಣ ಸಾಹಿತ್ಯ, ವಚನ ಪ್ರಸಾರ, ನಾಟಕಗಳ ರಚನೆ ಪ್ರದರ್ಶನ, ವೀರಗಾಸೆ ಸ್ಪರ್ಧೆ, ಭಜನೆ ಮೇಳಾ,ಸೋಬಾನೆ ಪದ ಸ್ಪರ್ಧೆ ಹೀಗೆ ಸಾವಿರಾರು ಕಾರ್ಯಕ್ರಮಗಳ ಮೂಲಕ ದೇಶದಾದ್ಯಂತ ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗನ್ನು ದೇಶದಾದ್ಯಂತ ಪ್ರದರ್ಶಸಿ ಅರ್ಥಪೂರ್ಣ ಶರಣ ಸಂದೇಶ ಸಾರಿದ ಹಿರಿಮೆಯ ಹೆಗ್ಗಳಿಕೆ ತರಳಬಾಳು ಕಲಾಸಂಘಕ್ಕಿದೆ. ಪರಮ ಪೂಜನೀಯ #ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಾಂಸ್ಕೃತಿಕ ಸಂಕಲ್ಪದ ಆಶಯ ಮತ್ತು ದಿವ್ಯ ಮಾರ್ಗದರ್ಶನದಂತೆ ನವ ಮನ್ವಂತರದ ಹೊಸತನವೆಂಬಂತೆ ತರಳಬಾಳು ಕಲಾಸಂಘ ಕಳೆದ ವರ್ಷದಿಂದ ಜಾನಪದ ಸಿರಿ ಸಂಭ್ರಮದ ಹೆಸರಲ್ಲಿ ಸಂಸ್ಕೃತಿಯ ರಾಯಭಾರಿಯ ಸ್ಥಾನವನ್ನು ತುಂಬಲು ಯಶಸ್ವಿಯಾಗಿ ದಾಟಿ ಎರಡನೇ ವರ್ಷಕ್ಕೆ ಪಾದಾರ್ಪಣೆ ಮಾಡಿದೆ.

ಈ ವರ್ಷದ ಮುಂದುವರಿದ ಪ್ರದರ್ಶನ ಹೊನ್ನಾಳಿ ತಾಲ್ಲೂಕಿನ ದಾನಿಹಳ್ಳಿಯ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆವರಣದಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆಯ ಸಂಭ್ರಮವನ್ನು ಇಮ್ಮಡಿಯಾಗಿಸುವ ನಿಟ್ಟಿನಲ್ಲಿ ನವೆಂಬರ್ 1 ರ ಗುರುವಾರ ಸಂಜೆ 6:00 ಕ್ಕೆ ಸಾಂಸ್ಕೃತಿಕ ಲೋಕದ ದಿಗ್ದರ್ಶನದ ಅನಾವರಣವಾಗಲಿದೆ. ಅಪರೂಪದ ಸಾಂಸ್ಕೃತಿಕ ಕಲಾವೈಭವಕ್ಕೆ ತಾವೂ ಸಹ ಸಾಕ್ಷಿಯಾಗಬೇಕೆಂಬ ಬಯಕೆ ನಮ್ಮದಾಗಿದ್ದು ಜಾನಪದ ಕಲಾ ಪ್ರಕಾರಗಳ ವೈವಿದ್ಯತೆಯ ಸಂತಸದ ಸ್ವರ್ಗ ಸೃಷ್ಟಿಸುವ ನಮ್ಮ 350 ಮಕ್ಕಳ ಶ್ರಮದ ಸಾಕ್ಷಾತ್ಕಾರವು 25 ನೃತ್ಯ ವೈವಿಧ್ಯಗಳಲ್ಲಿ ಅವಿರ್ಭವಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್ |9986715401

ದಿನದ ಸುದ್ದಿ

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

Published

on

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.

ಜಿಲ್ಲೆಯ ಎಲ್ಲಾ ಬಿಎಲ್‌ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್‌ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.

ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್‌ಒಗಳನ್ನು ಅಥವಾ ಚುನಾವಣಾ ವೆಬ್‌ಸೈಟ್‌ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್‌ವೈಸರ್‌ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.

ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.

1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್‌ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್‌ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್‌, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್‌ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.

ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.

ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.

ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್‌ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

Published

on

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ.

ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ‌.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ1 day ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ3 days ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ4 days ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ5 days ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ1 week ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

ದಿನದ ಸುದ್ದಿ1 week ago

ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ 

ಸುದ್ದಿದಿನ,ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯನ್ನು ಅತ್ಯಂತ ಪಾರದರ್ಶಕವಾಗಿ ಮತ್ತು ವ್ಯವಸ್ಥಿತವಾಗಿ ನಡೆಸಲಾಗುತ್ತಿದ್ದು, ಸಾರ್ವಜನಿಕರು ಯಾವುದೇ ರೀತಿಯ ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ...

ದಿನದ ಸುದ್ದಿ1 week ago

ಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ

ಸುದ್ದಿದಿನ,ದಾವಣಗೆರೆ: ಪ್ರೀತಿಸಿ ವಿವಾಹವಾಗಿದ್ದ ದಂಪತಿ ಜೀವಭಯದಿಂದ ಪೊಲೀಸ್ ರಕ್ಷಣೆ ಕೋರಿ ಠಾಣೆಗೆ ಬಂದಿದ್ದ ವೇಳೆ, ಯುವಕನ ಮೇಲೆ ಚಾಕುವಿನಿಂದ ಹಲ್ಲೆ ನಡೆದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ...

ಅಂಕಣ2 weeks ago

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ....

ದಿನದ ಸುದ್ದಿ2 weeks ago

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಚುರುಕು: ಮನೆ ಮನೆಗೆ ಬಿಎಲ್‍ಒಗಳ ಭೇಟಿ ಪ್ರಾರಂಭ

ಸುದ್ದಿದಿನ,ದಾವಣಗೆರೆ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ದಾವಣಗೆರೆ ಜಿಲ್ಲೆಯಾದ್ಯಂತ ‘ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಎಸ್.ಐ.ಆರ್. ಪ್ರಕ್ರಿಯೆ ಅತ್ಯಂತ ಚುರುಕಿನಿಂದ ಸಾಗುತ್ತಿದೆ. ಜಿಲ್ಲೆಯ ಒಟ್ಟು 7 ವಿಧಾನಸಭಾ...

Trending