Connect with us

ದಿನದ ಸುದ್ದಿ

ಯಶಸ್ವಿಯಾಗದ 22 ಕೆರೆಗಳ ಏತ ನೀರಾವರಿಯ ಯೋಜನೆ : ತರಳಬಾಳು ಶ್ರೀ ಬೇಸರ

Published

on

ಸುದ್ದಿದಿನ,ಹರಿಹರ : 22 ಕೆರೆಗಳಿಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯು ಹಲವು ಲೋಪದೋಷಗಳಿಂದಾಗಿ ಪರಿಣಾಮಕಾರಿಯಾಗಿ ಯಶಸ್ವಿಯಾಗದೇ ಇರುವುದು ಅತ್ಯಂತ ಬೇಸರ ತಂದಿದೆ ಎಂದು ತರಳಬಾಳು ಜಗದ್ಗುರು ಡಾ .ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ವಿಷಾದ ವ್ಯಕ್ತ ಪಡಿಸಿದರು.

ಹರಿಹರ ನಗರದ ಹೊರವಲಯದಲ್ಲಿರುವ ಜಾಕ್ ವೆಲ್ ಬಳಿ ಯೋಜನೆಯ ಕಾಮಗಾರಿ ಪರಿಶೀಲಿಸಿ ಶ್ರೀಗಳು ಮಾತನಾಡಿದರು.ಪ್ರಾಕೃತಿಕ, ತಾಂತ್ರಿಕ ಹಾಗೂ ಮನುಷ್ಯರ ಸಮಸ್ಯೆಗಳು ಒಟ್ಟಾಗಿ ಸೇರಿಕೊಂಡು 22 ಕೆರೆಗಳ ಏತ ನೀರಾವರಿಯ ಯೋಜನೆ ನಿರೀಕ್ಷಿತ ಪ್ರಗತಿ ಸಾಧಿಸಿಲ್ಲ ಎಂದು ಬೇಸರ ಹೊರಹಾಕಿದರು.

ನದಿಯಲ್ಲಿ ನೀರಿದ್ದರು ಜಾಕ್ ವೆಲ್ ಮೂಲಕ ನೀರು ಬರುತ್ತಿಲ್ಲ. ಕಳೆದ ಬಾರಿ ಮೂರು ಮೋಟರ್ ಅಳವಡಿಸಿದ್ದರಿಂದ ನೀರು ತಕ್ಕಮಟ್ಟಿಗೆ ನೀರು ಕೆರೆಗಳಿಗೆ ಹರಿದಿದೆ. ಆದರೆ ಇದು ಶಾಶ್ವತ ಪರಿಹಾರದ ಕೆಲಸ ಅಲ್ಲ.
ಶಾಶ್ವತ ಪರಿಹಾರ ದೊರಕಬೇಕಾದರೆ ಬೆಂಗಳೂರಿನ ಕರ್ನಾಟಕ ನೀರಾವರಿ ನಿಗಮದ ಅಧಿಕಾರಿಗಳನ್ನು ಕರೆಸಿ ಪರಿಶೀಲನೆ ನಡೆಸುವ ಅಗತ್ಯವಿದೆ ಎಂದರು.

ತಾಂತ್ರಿಕ ತೊಂದರೆ ಸರಿಯಾದಗ ನದಿಯಲ್ಲಿ ನೀರಿನ ಕೊರತೆ ಕಂಡು ಬರುತ್ತದೆ.ಆದ್ದರಿಂದ ಈ ಸ್ಥಳದಲ್ಲಿ ಕೆರೆ ನಿರ್ಮಾಣ ಮಾಡಿದರೆ ಸ್ವತಂತ್ರವಾಗಿ ನೀರು ಎರಡನೇ ಜಾಕ್ ವೆಲ್ ನಲ್ಲಿ ಇರುವಂತಹ ಮೋಟರ್ ಸರಿಯಾಗಿ ಕೆಲಸ ಮಾಡುತ್ತದೆಯೋ , ಇಲ್ಲವೋ ಎಂದು ತಿಳಿಯುತ್ತದೆ. ಈ ಬಗ್ಗೆ ಅಧಿಕಾರಿಗಳ ಬಳಿ ಚರ್ಚಿಸಿದಾಗ ತಾಂತ್ರಿಕ ತೊಂದರೆ ಇದೆ ಎಂಬುದು ಗೊತ್ತಾಗಿದೆ ಎಂದರು. ಈ ಯೋಜನೆಗೆ ಮಾಯಕೊಂಡ ಶಾಸಕರಾದ ಪ್ರೋ.ಲಿಂಗಣ್ಣನವರು 1 ಕೋಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮಲ್ಲಿಕಾರ್ಜುನ್ ಗುಂಗೆಯವರು ಸುಮಾರು 4 ರಿಂದ 5 ಕೋಟಿ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ ಮಾಡಬಹುದು. ಅದನ್ನು ಅವರೇ ಮಾಡಿಸಿಕೊಡುವುದಾಗಿ ತಿಳಿಸಿದ್ದಾರೆ ಎಂದು ಶ್ರೀಗಳು ಮಾಹಿತಿ ನೀಡಿದರು .

ಜಗಳೂರು ತಾಲ್ಲೂಕಿನ 53 ಹಾಗೂ ಭರಮಸಾಗರ ಸುತ್ತಮುತ್ತಲಿನ 41 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಅಂದಿನ ಮುಖ್ಯ ಮಂತ್ರಿ ಸಿದ್ದರಾಮಯ್ಯನವರು 500 ಕೋಟಿ ರೂಗಳನ್ನು ಬಿಡುಗಡೆ ಮಾಡಿದ್ದು, ತದ ನಂತರ ಈಗಿನ ಮುಖ್ಯಮಂತ್ರಿಗಳಾದ ಕುಮಾರ ಸ್ವಾಮಿಯವರು
ಸ್ಪಂದಿಸುವುದಾಗಿ ಹೇಳಿದ್ದಾರೆಂದರು.ಸಂಸದರಾದ ಜಿ.ಎಂ ಸಿದ್ದೇಶ್ವರ್ ಮಾತನಾಡಿ ಮಳೆಗಾಲದಲ್ಲಿ 120 ಟಿ ಎಂ ಸಿ ನೀರು
ತುಂಗಭದ್ರಾ ನದಿಯ ಮೂಲಕ ಸಮುದ್ರ ಪಾಲಾಗಿದೆ. ನಮ್ಮ ಈ ಏತ ನೀರಾವರಿ ಯೋಜನೆಗೆ ಬೇಕಾಗಿರುವುದು 1 ಟಿ ಎಂ ಸಿ ನೀರು ಮಾತ್ರ. ಸಾಕಷ್ಟು ನೀರು ಪೋಲಾಗಿರುವುದು ನೋವು ತಂದಿದೆ ಎಂದರು. ಶ್ರೀಗಳು ಏತ ನೀರಾವರಿ ಯೋಜನೆಯ ಅನುಷ್ಠಾನ ವಿಚಾರದಲ್ಲಿ ಅತ್ಯಂತ ಕಾಳಜಿ ಹೊಂದಿದ್ದಾರೆ. ಶ್ರೀಗಳ ಆಶಯದಂತೆ ಜಗಳೂರು ತಾಲ್ಲೂಕಿನ ಎಲ್ಲಾ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ 330 ಕೋಟಿ ಹಾಗೂ ಭರಮಸಾಗರ ಮತ್ತು ಚಿತ್ರದುರ್ಗ ಎಲ್ಲಾ ತಾಲೂಕುಗಳ ಕೆರೆ ತುಂಬಿಸುವ ಯೋಜನೆಗೆ 600 ಕೋಟಿ ರೂ ಅನುದಾನಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದಕ್ಕಾಗಿ ಸಮಗ್ರ ವರದಿ ತಯಾರಾಗಿದ್ದು ,ಶ್ರೀಗಳ ಸೂಚನೆಯ ಮೇರೆಗೆ ಈ ಯೋಜನೆಯಡಿ ಕೆಲವು ಸಣ್ಣ ಪುಟ್ಟ ಮಾರ್ಪಾಡುಗಳು ಆಗಬೇಕಿದೆ ಎಂದು ಹೇಳಿದರು.

ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಬಿ.ಜೆ ಮಲ್ಲಿಕಾರ್ಜುನ್ ಗುಂಗೆ ಮಾತನಾಡಿ ಈ ಯೋಜನೆಯಲ್ಲಿ ವೆಲ್ಡಿಂಗ್ ಮತ್ತು ವಿದ್ಯುತ್ ವ್ಯತ್ಯಯದಿಂದ
ಲೋಪದೋಷಗಳು ಹುಟ್ಟಿಕೊಂಡಿವೆ.ಇದಕ್ಕೆ ಸ್ಥಳದಲ್ಲಿ ಚೆಕ್ ಡ್ಯಾಮ್ ನಿರ್ಮಾಣ ಮಾಡಿ,ನೀರು ಸರಾಗವಾಗಿ ಜಾಕ್ ವೆಲ್ ಗೆ ಬಂದು ಸೇರುವಂತೆ ವ್ಯವಸ್ಥೆ ಮಾಡಲಾಗುವುದು ಎಂದರು.

ಇದಕ್ಕೆ ಬೇಕಾಗುವ 4 ರಿಂದ 5 ಕೋಟಿ ಹಣವನ್ನು ಬಳಕೆ ಮಾಡಲು ಯಾವುದೇ ತೊಂದರೆ ಬರುವುದಿಲ್ಲ.ಆದರೆ ಟೆಂಡರ್ ಹಂತ ಮಾತ್ರ ನಮ್ಮ ವ್ಯಾಪ್ತಿಗೆ ವ್ಯಾಪ್ತಿಗೆ ಬರುತ್ತದೆ.ಆದರೆ ಹಣ ಬಿಡುಗಡೆ ಮಾಡಲಿಕ್ಕೆ ಸಿ ಎಂ ಬಳಿ ಚರ್ಚೆ ಮಾಡಿ ಶೀಘ್ರವೇ ಕೆಲಸ ಮಾಡಿಸಿಕೊಡುವುದಾಗಾ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ವಿ.ರಾಮಚಂದ್ರ ,ಪ್ರೊ.ಲಿಂಗಣ್ಣ, ಮುಖ್ಯ ಎಂಜಿನಿಯರ್ ಯತೀಶ್ ಚಂದ್ರನ್, ಅಧೀಕ್ಷಕ ಎಂಜಿನಿಯರ್ ದಿವಾಕರ್ ನಾಯಕ್,ಕಾರ್ಯಪಾಲಕ ಎಂಜಿನಿಯರ್ ಜಿ.ಆರ್ ಕೊಟ್ರೇಶ್ ,ಗಂಗಪ್ಪ,ವಿಕಾಸ್ ನಿಂಬಣ್ಣ,ನಾಗರಾಜಪ್ಪ ಕರೆ ನೀರಾವರಿ ಯೋಜನೆಯ ಅಧ್ಯಕ್ಷರಾದ ಡಾ.ಮಂಜುನಾಥ್ ಗೌಡ,ಸುಭಾಷ್ ಚಂದ್ರ ಮುಂತಾದವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಚಿತ್ರದುರ್ಗ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ. ಮಲ್ಲಿಕಾರ್ಜುನ ಹಾಗೂ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ ಇದರ ಕಾರ್ಯನಿರ್ವಾಹಕ ನಿರ್ದೇಶಕರಾದ ಬಿ.ಶಿವಸ್ವಾಮಿ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯ ವಸತಿ ಶಾಲೆಗಳಿಗೆ ಅಧಿಕೃತ ಟೆಂಡರುದಾರರಾದ ಶ್ರೀ ಶಿರಡಿ ಸಾಯಿ ಪ್ರಾವಿಜನ್ ಸ್ಟೋರ್, ಚಿಕ್ಕಬಳ್ಳಾಪುರ ಇವರು ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ವಿತರಣೆ ಮಾಡದೆ ಇರುವ ಅಧಿಕೃತ ಮಾಹಿತಿ ತಿಳಿದು, ಸಮಾಜ ಕಲ್ಯಾಣ ಇಲಾಖೆ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಚಿತ್ರದುರ್ಗ ಇವುಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳ ಪ್ರಾಂಶುಪಾಲರುಗಳಿAದ ಮಾಹಿತಿಹಕ್ಕು ಅಡಿಯಲ್ಲಿ ಪಡೆದ ದೃಢೀಕೃತ ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಆಹಾರ ಸಾಮಾಗ್ರಿ ಸರಬರಾಜಿನಲ್ಲಿ ಹಲವಾರು ಲೋಪದೋಷಗಳು ಕಂಡು ಬಂದಿರುತ್ತವೆ.

ಆದ ಕಾರಣ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ನಾವು ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಪ್ರತ್ಯುತ್ತರವನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದೆ ಇರುವ ಕಾರಣ ದಿನಾಂಕ: 21-04-2026 ರಂದು ಜ್ಞಾಪನವನ್ನು ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಉಪ ನಿರ್ದೇಶಕರು, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ, ಚಿತ್ರದುರ್ಗ ದೂರು ಅರ್ಜಿಗೆ ಸಂಬAಧಿಸಿದAತೆ ತನಿಖಾ ವರದಿಯನ್ನಾಗಲಿ ಅಥವಾ ಪ್ರತ್ಯುತ್ತರವನ್ನಾಗಲಿ ನೀಡಿರುವುದಿಲ್ಲ.

ಈ ಬಗ್ಗೆ ಕಾರ್ಯನಿರ್ವಾಹಕ ನಿರ್ದೇಶಕರು, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘ, ಬೆಂಗಳೂರು ಇವರಿಗೆ ದೂರು ನೀಡಲಾಗಿತ್ತು. ಆದರೆ ಇವರು ಕೂಡ ಯಾವುದೇ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳ ವಿರುದ್ದ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

Published

on

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ಆಶ್ರಯ, ತಾಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲೂಕು ವಿಶ್ವಕರ್ಮ ಸಂಘದ ಜಂಟಿ ವತಿಯಿಂದ ಆಯೋಜಿಸಿರುವ ‘ವಿಶ್ವಕರ್ಮ ಜಯಂತಿ’ ಕಾರ್ಯಕ್ರಮದಲ್ಲಿ ಶಾಸಕರಾದ ಡಿ. ರವಿಶಂಕರ್‌ ಅವರು ಕೃತಿಯನ್ನು ಲೋಕಾರ್ಪಣೆ ಮಾಡಲಿದ್ದಾರೆ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಹಶೀಲ್ದಾರ್‌ ಜಿ. ಸುರೇಂದ್ರ ಮೂರ್ತಿ ಅವರು ವಹಿಸಲಿದ್ದಾರೆ. ತಾಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್‌ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್‌, ಚೇತನ್‌ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲೂಕು ಆಡಳಿತದ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಪ್ರಯುಕ್ತ ವಿಶೇಷ ಪೂಜೆ ನೆರವೇರಲಿದ್ದು, ಬಳಿಕ ಅಲ್ಲಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ತಿಂಗಳ ಅಂತರದಲ್ಲಿ ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆಪ್ಟೆಂಬರ್‌ 17ರಂದು ಕೆ.ಆರ್.ನಗರದಲ್ಲಿ ಕೃತಿ ಬಿಡುಗಡೆಯಾದರೆ, ಸೆಪ್ಟೆಂಬರ್‌ 20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ ಕೃತಿ ಲೋಕಾರ್ಪಣೆಗೊಳ್ಳಲಿದೆ. ಹಾಗೆಯೇ, ನವೆಂಬರ್‌ 22ರಂದು ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಏರ್ಪಡಿಸಿರುವ ಕಾರ್ಯಕ್ರಮದಲ್ಲಿಯೂ ಈ ಕೃತಿ ಬಿಡುಗಡೆಯಾಗಲಿದೆ.

ಮಾನವ ನಾಗರಿಕತೆಯ ಇತಿಹಾಸವನ್ನು ತೆರೆದರೆ, ಅದರ ಪ್ರತಿಯೊಂದು ಪುಟದ ಹಿಂದೆಯೂ ಶ್ರಮಿಸಿದ ಅನಾಮಿಕ ಕೈಗಳು ಕಾಣಿಸುತ್ತವೆ. ಆ ಕೈಗಳು ಕಲ್ಲನ್ನು ಕೆತ್ತಿ ದೇವಸ್ಥಾನವಾಗಿಸಿವೆ, ಕಬ್ಬಿಣವನ್ನು ಬಡಿದು ಆಯುಧವಾಗಿಸಿವೆ, ಮರಕ್ಕೆ ರೂಪ ಕೊಟ್ಟು ಬಾಗಿಲಾಗಿಸಿವೆ, ಮಣ್ಣಿಗೆ ಜೀವ ತುಂಬಿ ಮಡಕೆಯಾಗಿಸಿವೆ; ಹಾಗೆಯೇ ಬಣ್ಣಗಳ ಮೂಲಕ ಅಚ್ಚಳಿಯದ ಭಾವನೆಗಳನ್ನು ಮೂಡಿಸಿವೆ. ಆ ಸೃಷ್ಟಿಶೀಲ ಕೈಗಳಿಗೆ ಬಹುಶಃ ಇತಿಹಾಸದ ಅಧಿಕೃತ ಪುಟಗಳಲ್ಲಿ, ರಾಜ-ಮಹಾರಾಜರ ಕಥೆಗಳ ನಡುವೆ ದೊಡ್ಡ ಅಕ್ಷರಗಳಲ್ಲಿ ಹೆಸರು ಸಿಕ್ಕಿಲ್ಲದಿರಬಹುದು. ಆದರೆ ಅವರು ನಿರ್ಮಿಸಿದ ಕಲೆ, ಶಿಲ್ಪ, ವಾಸ್ತು, ಉಪಕರಣ ಮತ್ತು ಸೌಂದರ್ಯವೇ ನಮ್ಮ ನಾಗರಿಕತೆಯ ಉಸಿರಾಗಿ, ಜೀವಂತ ಸಾಕ್ಷಿಗಳಾಗಿ ಇಂದಿಗೂ ಉಳಿದಿವೆ. ಅಂತಹ ಸೃಜನಶೀಲ ಕೈಗಳ ಸಮೂಹ ಸ್ಮೃತಿಯನ್ನು, ಪರಂಪರೆಯನ್ನು ಮತ್ತು ಇತಿಹಾಸವನ್ನು ಅರಿಯುವ ಅರ್ಥಪೂರ್ಣ ಪ್ರಯತ್ನವನ್ನು ನಿರಾಕಾರ ವಿಶ್ವಕರ್ಮ ಕೃತಿಯಲ್ಲಿ ಲೇಖಕರಾದ ಚಂದ್ರಶೇಖರ ಗಂಧನಹಳ್ಳಿ ಅವರು ಮಾಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ6 days ago

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ...

ದಿನದ ಸುದ್ದಿ2 weeks ago

ಚಿತ್ರದುರ್ಗ | ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಡಿ.ಡಿ ಬಿ.ಮಲ್ಲಿಕಾರ್ಜುನ, ಕ್ರೈಸ್ ಇ.ಡಿ ಬಿ.ಶಿವಸ್ವಾಮಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಚಿತ್ರದುರ್ಗ: ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ವಸತಿ ಶಾಲೆಗಳಿಗೆ (ಕ್ರೈಸ್) ನಿಯಮಾನುಸಾರ ಆಹಾರ ಸಾಮಾಗ್ರಿಗಳನ್ನು ಸರಬರಾಜು ಮಾಡದೆ ವಂಚಿಸುತ್ತಿರುವ ಶ್ರೀ ಶಿರಡಿ ಪ್ರಾವಿಜನ್ ಸ್ಟೋರ್,...

ದಿನದ ಸುದ್ದಿ2 weeks ago

ನಾಳೆ ʼನಿರಾಕಾರ ವಿಶ್ವಕರ್ಮʼ ಕೃತಿ ಬಿಡುಗಡೆ

ಸುದ್ದಿದಿನ,ಬೆಂಗಳೂರು:ಕಾವ್ಯಸ್ಪಂದನ ಪ್ರಕಾಶನವು ಪ್ರಕಟಿಸಿರುವ ಪತ್ರಕರ್ತ, ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ʼನಿರಾಕಾರ ವಿಶ್ವಕರ್ಮʼ ಕೃತಿಯು ಸೆಪ್ಟೆಂಬರ್‌ 17ರಂದು ಬಿಡುಗಡೆಯಾಗಲಿದೆ. ಅಂದು ಬೆಳಗ್ಗೆ 10.30ಕ್ಕೆ ಮೈಸೂರು ಜಿಲ್ಲೆ, ಕೆ.ಆರ್.ನಗರ...

ದಿನದ ಸುದ್ದಿ3 weeks ago

ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!

ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ...

ದಿನದ ಸುದ್ದಿ3 weeks ago

ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!

ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು...

ದಿನದ ಸುದ್ದಿ3 weeks ago

ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು

ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ....

ದಿನದ ಸುದ್ದಿ3 weeks ago

ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!

ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ. http://Visit : www.suddidina.com ಮೇಷ:...

ದಿನದ ಸುದ್ದಿ3 weeks ago

ದೇಶದಲ್ಲಿ ಏಕರೂಪ ರಾಷ್ಟ್ರೀಕೃತ ಶಿಕ್ಷಣ ವ್ಯವಸ್ಥೆ ಜಾರಿಯಾಗಬೇಕು: ಡಾ.ಮೂಡ್ನಾಕೂಡು ಚಿನ್ನಸ್ವಾಮಿ

ಕೆಪಿಸಿಎಲ್ ಹಾಗೂ ಕೆಪಿಸಿಎಲ್ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ನೌಕರರ ಸಂಘದಿಂದ ಅಂಬೇಡ್ಕರ್ ಜಯಂತಿ ಆಚರಣೆ ಎಸ್ಎಸ್ಎಲ್ ಸಿ, ಪಿಯುಸಿಯಲ್ಲಿ ಶೇ. 90ಕ್ಕಿಂತ ಹೆಚ್ಚು ಅಂಕ...

ದಿನದ ಸುದ್ದಿ3 weeks ago

5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!

ಸುದ್ದಿದಿನ, ಬೆಂಗಳೂರು: ಉದ್ಯೋಗಿ ಭವಿಷ್ಯ ನಿಧಿ ಸಂಸ್ಥೆ (EPFO) ಚಂದಾದಾರರಲ್ಲಿ ಬಹುದಿನಗಳಿಂದ ಒಂದು ದೊಡ್ಡ ಗೊಂದಲವಿದೆ. ನಾನು ಕೆಲಸ ಬಿಟ್ಟಿದ್ದೇನೆ, ಕಳೆದ 5 ವರ್ಷಗಳಿಂದ ಪಿಎಫ್ ಖಾತೆಗೆ...

ದಿನದ ಸುದ್ದಿ3 weeks ago

ಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್‌ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!

ಸುದ್ದಿದಿನ, ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಲಕ್ಷಾಂತರ ಬಿಎಂಟಿಸಿ ಪ್ರಯಾಣಿಕರಿಗೆ ಸಾರಿಗೆ ಸಂಸ್ಥೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಇನ್ನು ಮುಂದೆ ಬಸ್‌ಗಾಗಿ ಬಸ್ ನಿಲ್ದಾಣದಲ್ಲಿ ಗಂಟೆಗಟ್ಟಲೆ...

Trending