ದಿನದ ಸುದ್ದಿ
ಹುಬ್ಬಳ್ಳಿ : 10 ಕೋಟಿ ವೆಚ್ಚದಲ್ಲಿ ತರಳಬಾಳು ಸಾಂಸ್ಕೃತಿಕ ಕೇಂದ್ರ ನಿರ್ಮಾಣದ ಸಂಕಲ್ಪ
ಹುಬ್ಬಳ್ಳಿ, ಉಣಕಲ್ : ಹಿರಿಯ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಗಳವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಶಿಕ್ಷಣ ಸಂಸ್ಥೆಗಳು ಮುನ್ನಡೆಯುತ್ತಿದ್ದು , ಗ್ರಾಮೀಣ ಭಾಗದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರು ಹೇಳಿದರು.
ಇಲ್ಲಿನ ಉಣಕಲ್ ನ ಟೀಚರ್ಸ್ ಕಾಲೋನಿಯ
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ದೆಯ ಆಶ್ರಯದ ಆವರಣದಲ್ಲಿ ಶಾಲಾ -ಕಾಲೇಜಿನ ಕಟ್ಟಡದ ಲೋಕಾರ್ಪಣೆ ಮತ್ತು ವಾರ್ಷಿಕೋತ್ಸವದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಹಿರಿಯ ಶ್ರೀಗಳು ಹುಬ್ಬಳ್ಳಿಯಲ್ಲಿ ಈ ಹಿಂದೆ ಜರುಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವದ ಸವಿನೆನಪಿಗೆ ಈ ಶಾಲೆ ಮತ್ತು ಕಾಲೇಜಿನ ಕಟ್ಟಡ ನಿರ್ಮಾಣ ಮಾಡಲಾಗಿದೆ. ಈ ಭಾಗದ ಮಕ್ಕಳಿಗೆ ಉತ್ತಮ ಶಿಕ್ಷಣ ಸಿಗಬೇಕೇಂಬುದೇ ಮೂಲ ಉದ್ದೇಶವಾಗಿದೆ.
ಖಾಲಿ ಇರುವ ಜಾಗದಲ್ಲಿ ಉನ್ನತ ಶಿಕ್ಷಣಕ್ಕೆ ಬೇಕಾದ ಕಟ್ಟಡ ನಿರ್ಮಾಣ ಮಾಡಲಾಗುಲುದು.
ಇಲ್ಲಿನ ಗೋಕುಲ ರಸ್ತೆಯ ಹೊಸ ಬಸ್ ನಿಲ್ದಾಣದ ಪಕ್ಕದಲ್ಲಿ ಸುಮಾರು 10 ಕೋಟಿ ರೂಗಳ ವೆಚ್ಚದಲ್ಲಿ ಅತ್ಯಾಧುನಿಕ ತರಳಬಾಳು ಸಾಂಸ್ಕೃತಿಕ ಕೇಂದ್ರ ನಿರ್ಮಾಣ ಮಾಡುವ ಆಶಯ ನಮ್ಮದಾಗಿದೆ ಎಂದರು.
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಐತಿಹಾಸಿಕ ಹಳೇಬೀಡಿನಲ್ಲಿ 2019 ರ ಫೆಬ್ರುವರಿಯಲ್ಲಿ ನಡೆಯಬೇಕಾಗಿದ್ದ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಮೂಂದೂಡಲಾಗಿದ್ದು ,ಆ ಭಾಗದ ಕೆರೆಗಳಗೆ ನೀರು ತುಂಬಿಸುವ ಯೋಜನೆ ರೂಪಿಸಿದ್ದು ಕೆರೆಗಳಿಗೆ ನೀರು ಹರಿದ ನಂತರ ತರಳಬಾಳು ಹುಣ್ಣಿಮೆ ಮಹೋತ್ಸವವನ್ನು ಆಚರಿಸಲಾಗುವುದು ಸಾಂಕೇತಿಕವಾಗಿ ಸಿರಿಗೆರೆಯಲ್ಲಿ ಸರಳವಾಗಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಿಸಲಾಗುವುದು ಎಂದರು.
ಮಾಜಿ ಸಚಿವ ಎಸ್. ಎಸ್. ಪಾಟೀಲ ಮಾತನಾಡಿ ರಾಜ್ಯ ಸರ್ಕಾರ ರೂಪಿಸಿರುವ ಕೆಲ ಶಿಕ್ಷಣ ನೀತಿಗಳು ಅವೈಜ್ಞಾನಿಕವಾಗಿದ್ದು ಇದರಿಂದ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸಂಕಷ್ಟಕ್ಕೀಡುಮಾಡಿದೆ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿಲ್ಲ, ಶಿಕ್ಷಕರ ಕೊರತೆಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲ ಈ ವಿಚಾರವನ್ನು ಮುಖ್ಯ ಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ಹಾಗೂ ಹಿಂದಿನ ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ನವರ ಗಮನಕ್ಕೆ ತಂದರೂ ಯಾವುದೇ ರೀತಿಯ ಪ್ರಯೋಜನ ಆಗಿಲ್ಲ. ಸರ್ಕಾರ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಖಾಸಗಿ ಶಿಕ್ಷಣ ಸಂಸ್ಥೆಗಳ ಬಲವರ್ಧನೆಗೆ ಬೆಳಗಾವಿ ಅಧಿವೇಶನದಲ್ಲಿ ನಿರ್ಧಾರ ಕೈಗೊಳ್ಳದಿದ್ದರೆ ಹೋರಾಟ ಅನಿವಾರ್ಯವಾಗಲಿದೆ ಎಂದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ನಾಡೋಜ ಡಾ. ಪಾಟೀಲ ಪುಟ್ಟಪ್ಪ ಗ್ರಾಮೀಣ ಭಾಗದ ಶಿಕ್ಷಣಕ್ಕೆ ಒತ್ತು ನೀಡಿ ಶ್ರಮಿಸುತ್ತಿರುವ ತರಳಬಾಳು ಶಿಕ್ಷಣ ಸಂಸ್ಥೆಯ ಕಾಳಜಿ ಶ್ಲಾಘನೀಯವಾಗಿದೆ.ಆಂಗ್ಲ ಮಾಧ್ಯಮದಲ್ಲಿ ಶಿಕ್ಷಣ ಪಡೆದರೆ ಮಾತ್ರ ಉದ್ಯೋಗ ಎನ್ನುವ ಮನಸ್ಥಿತಿ ಜನರಲ್ಲಿ ಮೂಡಿದ್ದು,ಇದರಿಂದ ಹೊರ ಬರಬೇಕಾಗಿದೆ. ನಮ್ಮ ನಾಡು ನುಡಿಗೆ ಮೊದಲ ಆದ್ಯತೆ ನೀಡಬೇಕು ಎಂದರು. ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದರಾಜಯೋಗೀಂದ್ರ ಸ್ವಾಮೀಜಿ ಮಾತನಾಡಿ, ದೇಶದ ಅಭಿವೃದ್ಧಿಗೆ ಉತ್ತಮ ಶಿಕ್ಷಣ ಪ್ರಮುಖವಾಗಿದೆ . ಉತ್ತಮ ಜ್ಞಾನ ಮತ್ತು ಶಿಕ್ಷಣ ವ್ಯವಸ್ಥೆ ಹೊಂದಿದ ದೇಶ ಜಗತ್ತಿನ ಗಮನ ಸೆಳೆಯುವಲ್ಲಿ ಯಶಸ್ವಿಯಾಗುತ್ತದೆ ,
ತರಳಬಾಳು ಶಿಕ್ಷಣ ಸಂಸ್ಥೆ ಉತ್ತರ ಕರ್ನಾಟಕ ಭಾಗದಲ್ಲಿ ಶಿಕ್ಷಣ ಸಂಸ್ಥೆಗಳನ್ನು ಆರಂಭಿಸಬೇಕು ಎಂದು ಹೇಳಿದರು.ತರಳಬಾಳು ಶಿಕ್ಷಣ ಸಂಸ್ಥೆಗೆ ಹೋಗುವ ಮಾರ್ಗವನ್ನು ತರಳಬಾಳು ಮಾರ್ಗ ಹಾಗೂ ಹಳೆಯ ವಿದ್ಯಾರ್ಥಿ ಸಂಘಕ್ಕೆ ಶ್ರೀಗಳು ಚಾಲನೆ ನೀಡಿದರು.
ಸ್ಥಳೀಯ ಸಲಹಾ ಸಂಸ್ಥೆಯ ಅಧ್ಯಕ್ಷ ಎಸ್.ಪಿ.ಸಂಶಿ ಅಧ್ಯಕ್ಷತೆ ವಹಿಸಿದ್ದರು. ಮಣಕವಾಡ ಶ್ರೀ ಸಿದ್ದರಾಮ ದೇವರು, ಶಾಸಕರಾದ ಶ್ರೀ ಬಸವರಾಜ ಬೊಮ್ಮಾಯಿ, ಅಮೃತ ದೇಸಾಯಿ, ಪಾಲಿಕೆ ಸದಸ್ಯ ಅಶ್ವಿನಿ ಮಜ್ಜಿಗೆ ಮಾತನಾಡಿದರು.
ಬಿ ಇ ಒ ಎಸ್. ಎಂ ಹುಡೇದಮನಿ,ಬಿ.ಎಲ್ ಶಿವಳ್ಳಿ,ರಮೇಶ್ ಕೊಪ್ಪದ,ಎಸ್.ಎಂ ಸೋಮನಗೌಡರು,ಎಂ.ಎ ಬಡ್ನಿ,ಐ.ಬಿ ಅಂಚಟಗೇರಿ,ಐ.ಬಿ ಪಾಟೀಲ, ಕಲ್ಲನಗೌಡ ಪಾಟೀಲ, ಬಿ.ಜಿ ಶಿವಕುಮಾರ ಗೌಡ, ಆಂಗ್ಲ ಮಾಧ್ಯಮ ಪ್ರಾಥಮಿಕ ಶಾಲೆ,ಆರ್.ಕೆ. ಕೋಕಾಟೆ,ಪ್ರೌಢಶಾಲೆ ಐ ಜಿ ಹಿರೇಗೌಡರ ಪ ಪೂ ಕಾಲೇಜಿನ ಪದಾಧಿಕಾರಿಗಳು ಇನ್ನಿತರರು ಇದ್ದರು. ಓಂ ನಗರ ಯೋಗಬಂಧುಗಳು ಪ್ರಾರ್ಥನೆ ಸಲ್ಲಿಸಿದರು. ಉಪನ್ಯಾಸಕ ವಿರೇಶ್ ಪಾಟೀಲ ನಿರೂಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಹೊಲಿಗೆ, ವೀಡಿಯೋಗ್ರಫಿ ತರಬೇತಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯಿಂದ ವಿಶೇಷ ಘಟಕ ಯೋಜನೆಯಡಿ ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಹೊಲಿಗೆ ಹಾಗೂ ವಿಡಿಯೋಗ್ರಾಫಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಹೊಲಿಗೆ ತರಬೇತಿಗೆ ಎಸ್.ಎಸ್.ಎಲ್.ಸಿ. ಉತ್ತೀರ್ಣರಾಗಿ 18 ರಿಂದ 40 ವರ್ಷದೊಳಗಿರಬೇಕು. ವಿಡಿಯೋಗ್ರಾಫಿ ತರಬೇತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣ, ಅನುತ್ತೀರ್ಣರಾಗಿದ್ದು 18 ರಿಂದ 40 ವರ್ಷ ವಯೋಮಾನದವರಾಗಿರಬೇಕು.
ಅರ್ಜಿಯನ್ನು ಕಚೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಅಕ್ಟೋಬರ್ 25 ರೊಳಗೆ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ 08192-237480 ದೂರವಾಣಿಗೆ ಸಂಪರ್ಕಿಸಲು ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಚನ್ನಗಿರಿ ತಾಲ್ಲೂಕು ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು
ಸುದ್ದಿದಿನ,ಚನ್ನಗಿರಿ:ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ರಾಜಾನಾಯ್ಕ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬೆಸ್ಕಾಂನಿಂದ ಉಚಿತ ಡಿಜಿಟಲ್ ಮೀಟರ್ ಅಳವಡಿಕೆ
ಸುದ್ದಿದಿನ,ದಾವಣಗೆರೆ:ಜಗಳೂರು ಬೆಸ್ಕಾಂ ಉಪವಿಭಾಗದ ವ್ಯಾಪ್ತಿಯಲ್ಲಿ ಹಳೇ ವಿದ್ಯುತ್ ಮೀಟರ್ಗಳನ್ನು ತೆಗೆದು ಉಚಿತವಾಗಿ ಹೊಸ ಡಿಜಿಟಲ್ ಮೀಟರ್ಗಳನ್ನು ಅಳವಡಿಸಲಾಗುತ್ತಿದ್ದು ಬೆಸ್ಕಾಂ ಗ್ರಾಹಕರ ಬಳಿ ಹಳೆ ಮಾಪಕ ಎಲೆಕ್ಟ್ರೋ ಮೆಕ್ಯಾನಿಲ್ ಬದಲಾಗಿ ಎಲೆಕ್ಟ್ರೋ ಸ್ಟ್ಯಾಟಿಕ್ ಡಿಜಿಟಲ್ ಮಾಪಕ ಅಳವಡಿಸಿಕೊಳ್ಳಲು ಬೆಸ್ಕಾಂ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ಬಹದ್ದೂರ್ ಶಾಸ್ತ್ರಿ ಜನ್ಮದಿನ ; ದೇಶದೆಲ್ಲೆಡೆ ಸ್ಮರಣೆ
-
ದಿನದ ಸುದ್ದಿ6 days ago
ಬಾಪೂಜಿ ಪ್ರಬಂಧ ಸ್ಪರ್ಧೆ ; ಸಚಿವರಿಂದ ವಿಜೇತರಿಗೆ ನಗದು ಬಹುಮಾನ ವಿತರಣೆ
-
ದಿನದ ಸುದ್ದಿ6 days ago
ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲು ಮಾರ್ಗ ಇದೇ ಆರ್ಥಿಕ ವರ್ಷದಲ್ಲಿ ಕಾಮಗಾರಿ ಪ್ರಾರಂಭ ; 2027 ಕ್ಕೆ ಜನವರಿಯೊಳಗೆ ರೈಲು ಸಂಚಾರಕ್ಕೆ ಕ್ರಮ : ಸಚಿವರಾದ ವಿ.ಸೋಮಣ್ಣ
-
ದಿನದ ಸುದ್ದಿ4 days ago
ವಿದ್ಯಾರ್ಥಿಗಳು ಶಿಕ್ಷಣದೊಂದಿಗೆ ಆತ್ಮಸ್ಥೈರ್ಯ ಹೆಚ್ಚಿಸುವ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
-
ದಿನದ ಸುದ್ದಿ2 days ago
ಗುರುಕುಲ ಶಾಲೆಯ ಮಕ್ಕಳೊಂದಿಗೆ ಬೆರೆತ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ
-
ದಿನದ ಸುದ್ದಿ7 days ago
KEA | ನಾಳೆ ಪಿಎಸ್ಐ ಪರೀಕ್ಷೆ, ದಾವಣಗೆರೆಯಲ್ಲಿ ಸುಗಮ ಪರೀಕ್ಷೆ ನಡೆಸಲು ಕಟ್ಟೆಚ್ಚರ ; ಇಲ್ಲಿದೆ ಸಂಪೂರ್ಣ ಮಾಹಿತಿ, ಮಿಸ್ ಮಾಡ್ದೆ ಓದಿ
-
ದಿನದ ಸುದ್ದಿ4 days ago
ಇನ್ನು ನಾಲ್ಕು ದಿನಗಳಲ್ಲಿ ಎರಡು ಕಂತಿನ ಗೃಹಲಕ್ಷ್ಮಿ ಹಣ ಮಹಿಳೆಯರ ಖಾತೆಗೆ
-
ದಿನದ ಸುದ್ದಿ4 days ago
ಗ್ರಂಥಾಲಯ ಇಲಾಖೆಯಿಂದ 2021 ರ ಮೊದಲ ಆವೃತಿಯಲ್ಲಿ ಆಯ್ಕೆಯಾದ ಪುಸ್ತಕಗಳ ಪ್ರಕಟ