ದಿನದ ಸುದ್ದಿ
ವರಗುರು ಶ್ರೀ ಶಿವಕುಮಾರರ ಸ್ಮರಣಾಂಜಲಿಗೆ ಇಂದಿನಿಂದ ಚಾಲನೆ

ಸುದ್ದಿದಿನ ಡೆಸ್ಕ್ : ಜಗದೊಳಿತಿಗಾಗಿ ಜನಿಸಿದ ಜಗದ್ಗುರು ನಾಡಿನ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ರಂಗದ ಅದಮ್ಯ ಚೇತನ , ಭಕ್ತರ ಹೃದಯ ಸಿಂಹಾಸನಾಧೀಶ ಲಿಂಗೈಕ್ಯ ಶ್ರೀ ತರಳಬಾಳು ಜಗದ್ಗುರು 1108 ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ 26 ನೇ ಶ್ರದ್ದಾಂಜಲಿ ಸಮಾರಂಭಕ್ಕೆ ಇಂದಿನಿಂದ ಚಾಲನೆ ಸಿಗಲಿದ್ದು ಸೆಪ್ಟಂಬರ್ 24ರವರೆಗೆ ವೈಚಾರಿಕ ವಿಷಯಮಂಡನೆಗಳ ಜೊತೆ ನಾಡಿನ ಅನ್ನದಾತರ ಕಾರ್ಪಣ್ಯಗಳಿಗೆ ಆಸರೆಯಾಗುವ ನಿಟ್ಟಿನಲ್ಲಿ ಹೊಸ ಯೋಜನೆಗಳಿಗೆ ಆಶಯವನ್ನು ತರಳಬಾಳು ಶ್ರೀ ಜಗದ್ಗುರುವರ್ಯರು ವ್ಯಕ್ತಪಡಿಸಲಿದ್ದಾರೆ.
ಕನ್ನಡ ನಾಡಿನ ಸಾಂಸ್ಕೃತಿಕ ಸೊಬಗಿನ ದರ್ಶನವನ್ನು ಯಥಾವತ್ತಾಗಿ ತೆರೆಯ ಮೇಲೆ ಸೃಷ್ಟಿಸುವ ತರಳಬಾಳು ಜಾನಪದ ಸಿರಿಸಂಭ್ರಮದ 350 ಪ್ರತಿಭಾನ್ವಿತ ಮಕ್ಕಳ ಜಾನಪದ ನೃತ್ಯ ಪ್ರಕಾರಗಳ ಪ್ರದರ್ಶನ ಎಲ್ಲರ ಮನ ಸೆಳೆಯುವುದಂತೂ ನಿಶ್ಚಿತ. ಕಾರ್ಯಕ್ರಮದ ನಿಮಿತ್ತ ಶ್ರೀ ಜಗದ್ಗುರುವರ್ಯರ ಲೇಖನಿಯಿಂದ ಹೊರಹೊಮ್ಮಿದ ಅಪರಿಮಿತ ಓದುಗರನ್ನು ಸೃಷ್ಟಿಸಿದ ಜನಪ್ರಿಯ ಮತ್ತು ಸಾಂಧರ್ಭಿಕ ಸಮಸ್ಯೆಗಳಿಗೆ ಉತ್ತರದಂತಿರುವ ಬಿಸಿಲು ಬೆಳದಿಂಗಳು ಅಂಕಣಮಾಲೆಯ ನೂತನ ಪುಸ್ತಕಗಳು ಲೋಕಾರ್ಪಣೆಯಾಗಲಿವೆ.
ಪರಮಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ. ಶ್ರೀ ಶಿವಮೂರ್ತಿಶಿವಾಚಾರ್ಯ ಮಹಾಸ್ವಾಮಿಗಳವರ ಪವಿತ್ರ ದಿವ್ಯ ನೇತೃತ್ವದಿ ಎಲ್ಲಾ ಕಾರ್ಯಕ್ರಮಗಳು ಜರುಗಲಿದ್ದು. ತರಳಬಾಳು ಜಗದ್ಗುರು ಶಾಖಾ.ಶ್ರೀ ಮಠದ ಪೀಠಾಧಿಪತಿಗಳಾದ ಪೂಜ್ಯ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು ಸಾನ್ನಿಧ್ಯ ವಹಿಸಲಿದ್ದಾರೆ.
ಆಗಮಿಸುವ ಲಕ್ಷಾಂತರ ಶರಣ ಬಂಧುಗಳು ಆತಿಥ್ಯಕ್ಕೆ ಸಿರಿಗೆರೆ ಸಜ್ಜಾಗಿದೆ. ಹತ್ತು ಸಾವಿರಕ್ಕೂ ಹೆಚ್ಚು ಭಕ್ತರು ಸಭಾಂಗಣದ ಒಳಗೆ ಕೂತು ಕಾರ್ಯಕ್ರಮ ವೀಕ್ಷಿಸಲು ಆಕರ್ಷಕ ಸಭಾಂಗಣ ನಿರ್ಮಾಣ ಮಾಡಲಾಗಿದೆ. ಊರಿನಲ್ಲಿರುವ ಶ್ರೀ ಸಂಸ್ಥೆಯ ನೂರಾರು ಕಟ್ಟಡಗಳಿಗೆ ಎಲ್ಲಾ ರಸ್ತೆಗಳಿಗೆ ಜಗಮಗಿಸುವ ವಿದ್ಯುತ್ ದೀಪಗಳ ಅಲಂಕಾರ,ಅತ್ಯಾಕರ್ಷಕ ಸ್ವಾಗತ ಕಮಾನುಗಳ ನಿರ್ಮಾಣ, ತಳಿರು ತೋರಣದಿಂದ ಸಿಂಗರಿಸುವ ಕಾರ್ಯಗಳು ಭರದಿಂದ ಸಾಗಿವೆ.ಪ್ರತಿ ದಿನ ಮುಂಜಾನೆ ಶಿವಮಂತ್ರಲೇಖನ,ಸಾಮೂಹಿಕ ಪ್ರಾರ್ಥನೆ ಐಕ್ಯ ಮಂಟಪದ ಆವರಣದಲ್ಲಿ ಜರುಗಲಿವೆ.
ಪ್ರತಿ ದಿನ ಬೆಳಿಗ್ಗೆ 10 ಗಂಟೆಗೆ ಪ್ರಧಾನ ವೇದಿಕೆಯಲ್ಲಿ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆಯ 14 ಜಿಲ್ಲೆಯಲ್ಲಿರುವ ಶಾಲಾ ಕಾಲೇಜಿನ ಮಕ್ಕಳಿಂದ ವಚನ,ಜಾನಪದ ನೃತ್ಯ, ಚಿತ್ರಕಲೆ, ನಾಟಕ ಸೇರಿದಂತೆ ಹತ್ತಾರು ಸಾಂಸ್ಕೃತಿಕ ಸ್ಪರ್ಧೆಗಳುನಡೆಯಲಿವೆ.
ನಾಡಿನ ಮುಖ್ಯ ಮಂತ್ರಿಗಳು,ಮಾಜಿ ಮುಖ್ಯ ಮಂತ್ರಿಗಳು, ಹಾಲಿ ಮತ್ತು ಮಾಜಿ ಸಚಿವರು,ಸಂಸದರು,ಶಾಸಕರು,ಜನಪ್ರತಿನಿಧಿಗಳು,ಸಾಹಿತಿಗಳು,ಚಿಂತಕರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಿ ಭಾಗವಹಿಸಿ ಮಹಾಗುರುವಿಗೆ ಶ್ರದ್ಧಾಭಕ್ತಿಗಳನ್ನು ಸಮರ್ಪಿಸಲಿದ್ದಾರೆ. ಅಪರೂಪದ ಧಾರ್ಮಿಕ ,ಸಾಮಾಜಿಕ, ಸಾಂಸ್ಕೃತಿಕ ಸಂಗಮದ ಈ ಸಮಾರಂಭಕ್ಕೆ ತಾವೂ ಸಾಕ್ಷಿಯಾಗಬೇಕೆಂಬ ಪ್ರೀತಿಯ ಆಶಯ ನಮ್ಮದಾಗಿದೆ.
ದಿನಾಂಕ : 20-09-2018 ರ ಗುರುವಾರ ಇಂದಿನ ಸಂಜೆಯ ಕಾರ್ಯಕ್ರಮದಲ್ಲಿ
ದಿವ್ಯ ನೇತೃತ್ವ: ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.
ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ.
ಮುಖ್ಯ ಅತಿಥಿಗಳು : ಶರಣ ವೆಂಕಟರಮಣಪ್ಪ
ಕಾರ್ಮಿಕ ಮತ್ತು ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವರು. ಕರ್ನಾಟಕ ಸರ್ಕಾರ ಬೆಂಗಳೂರು, ಶರಣ ಎಸ್ ರವೀಂದ್ರನಾಥ ಮಾಜಿ ಸಚಿವರು. ಶಾಸಕರು ದಾವಣಗೆರೆ, ಶರಣ ಮಾಡಾಳು ವಿರೂಪಾಕ್ಷಪ್ಪ ಶಾಸಕರು ಚನ್ನಗಿರಿ, ಶರಣ ಶ್ರೀನಾಥ್ ಎಂ ಜೋಶಿ
ಜಿಲ್ಲಾ ರಕ್ಷಣಾಧಿಕಾರಿಗಳು ಚಿತ್ರದುರ್ಗ,ಶರಣೆ ಜಯಶೀಲ ಕೆ .ಆರ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ದಾವಣಗೆರೆ. ಶರಣ ಶಶಾಂಕ್ ಚಲನಚಿತ್ರ ನಿರ್ದೇಶಕರು ಬೆಂಗಳೂರು.
ದಿನಾಂಕ : 21-09-2018 ರ ಶುಕ್ರವಾರ ಸಂಜೆಯ ಕಾರ್ಯಕ್ರಮದಲ್ಲಿ
ಶರಣ ಬಸವರಾಜ ಹೊರಟ್ಟಿ ಸಭಾಪತಿಗಳು ವಿಧಾನ ಪರಿಷತ್ ಬೆಂಗಳೂರು, ಶರಣ ಎಸ್. ಎಸ್ ಮಲ್ಲಿಕಾರ್ಜುನ್ ಮಾಜಿ ಸಚಿವರು ದಾವಣಗೆರೆ,ಶರಣೆ ಸೌಭಾಗ್ಯ ಬಸವರಾಜನ್ ಅಧ್ಯಕ್ಷರು ಜಿಲ್ಲಾ ಪಂಚಾಯಿತಿ ಚಿತ್ರದುರ್ಗ, ಶರಣ ತಿಪ್ಪಾರೆಡ್ಡಿ ಜೆ.ಹೆಚ್.ಶಾಸಕರು ಚಿತ್ರದುರ್ಗ, ಶರಣ ರಾಮಚಂದ್ರ ಎಸ್.ವಿ. ಶಾಸಕರು ಜಗಳೂರು,ಶರಣ ಬೆಳ್ಳಿ ಪ್ರಕಾಶ್ ಶಾಸಕರು ಕಡೂರು.
ದಿನಾಂಕ : 22-09-2018 ರ ಶನಿವಾರ ಸಂಜೆಯ ಕಾರ್ಯಕ್ರಮದಲ್ಲಿ
ಶರಣ ಶಂಕರ್ ಆರ್ ಅರಣ್ಯ ಸಚಿವರು ಕರ್ನಾಟಕ ಸರ್ಕಾರ ಬೆಂಗಳೂರು,ಶರಣ ಆಂಜನೇಯ ಹೆಚ್ ಮಾಜಿ ಸಚಿವರು,ಶರಣ ರುದ್ರೇಗೌಡರು ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ, ಶರಣ ಸುರೇಶ್ ಡಿ.ಎಸ್. ಶಾಸಕರು ತರೀಕೆರೆ, ಶರಣ ಶ್ರೀ ರಂಗಯ್ಯ ಎಂ.ಕೆ. ಜಿಲ್ಲಾಧಿಕಾರಿಗಳು ಚಿಕ್ಕಮಗಳೂರು, ಶರಣ ರಮೇಶ್ ಡಿ.ಎಸ್. ಜಿಲ್ಲಾಧಿಕಾರಿಗಳು ದಾವಣಗೆರೆ, ಶರಣ ಚೇತನ ಆರ್ ಜಿಲ್ಲಾ ರಕ್ಷಣಾಧಿಕಾರಿಗಳು ದಾವಣಗೆರೆ.
ದಿನಾಂಕ : 23-09-2018 ರ ಭಾನುವಾರ ಬೆಳಗ್ಗೆ 11ಗಂಟೆಗೆ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥಯೆ ಹಿರಿಯ ವಿದ್ಯಾರ್ಥಿಗಳ ಸಮಾವೇಶ.
ದಿವ್ಯ ನೇತೃತ್ವ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.
ಸಮ್ಮುಖ ಸಾನ್ನಿಧ್ಯ : ಡಾ. ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು
ಪಟ್ಟಾಧ್ಯಕ್ಷರು ಶ್ರೀ ತರಳಬಾಳು ಶಾಖಾ ಮಠ ಸಾಣೇಹಳ್ಳಿ
ಮುಖ್ಯಅತಿಥಿಗಳು : ಶರಣ ರವಿಕುಮಾರ.ವಿ. ಸಿವಿಲ್ ನ್ಯಾಯಾಧೀಶರು ಹೊಳಲ್ಕೆರೆ, ಡಾ.ವಿನೋದ್ ಕುಮಾರ್.ವಿ. ಐ ಎ ಎಸ್ ಆಂಧ್ರ ಪ್ರದೇಶ, ಶರಣ ಜಿ .ಎ.ಜಗದೀಶ್ ಎ ಎಸ್ ಪಿ ಹಾವೇರಿ, ಶರಣ ಡಾ.ಶರತ್ ಕುಮಾರ್ ಎನ್.ಎಂ,ವೆಲ್ಲೂರು ಆಂಧ್ರ ಪ್ರದೇಶ. ಶರಣ.ಡಾ.ಭಾಸ್ಕರ್. ಡಿ,ಮದುರೈ ತಮಿಳುನಾಡು.ಶರಣ ಡಾ.ಜಯವರ್ದನ ನರರೋಗ ತಜ್ಞರು ಮೈಸೂರು.ಶರಣ ಡಾ.ನಿರಂಜನ ಮೂರ್ತಿ ಕೆ.ಎಂ ವೈದ್ಯರು ಬೆಂಗಳೂರು. ಶರಣ ಡಾ.ರವಿಕುಮಾರ್ ಜಿ.ವಿ ವೈದ್ಯರು ಬೆಂಗಳೂರು.
ಶರಣ ಡಾ.ಉಮೇಶ್ ಡಿ.ವೈದ್ಯರು ದಾವಣಗೆರೆ.
ಶರಣ ಡಾ.ಅವಿನಾಶ್ ಸಿ.ಬಿ.ವೈದ್ಯರು ಬೆಂಗಳೂರು. ಶರಣ ಲಿಂಗರಾಜ್ ಹೆಚ್.ಕೆ. ಪ್ರಾಚಾರ್ಯರು, ಡಯಟ್, ದಾವಣಗೆರೆ.ಶರಣ ಶೇಖರಪ್ಪ ಹೆಚ್.ಕೆ. ಉಪ ನಿರ್ದೇಶಕರು ಪದವಿ ಪೂರ್ವ ಶಿಕ್ಷಣ ಇಲಾಖೆ ದಾವಣಗೆರೆ. ಶರಣ ಪ್ರಸನ್ನ ಕುಮಾರ್. ಸಿ. ಉಪ ನಿರ್ದೇಶಕರು,ಸಾರ್ವಜನಿಕ ಶಿಕ್ಷಣ ಇಲಾಖೆ ಚಿಕ್ಕಮಗಳೂರು. ಶರಣ ವೀರಣ್ಣ ಜತ್ತಿ ಪ್ರಾಚಾರ್ಯರು ಸಿಟಿಇ ಜಮಖಂಡಿ. ಶರಣ ಮಲ್ಲಿಕಾರ್ಜುನ ಕಬ್ಬೂರು ಪತ್ರಕರ್ತರು ಚಿಕ್ಕಮಗಳೂರು.
ಸಾಂಸ್ಕೃತಿಕ ಕಾರ್ಯಕ್ರಮ
ಮಲ್ಲಿ ಹಗ್ಗ ಮತ್ತು ಮಲ್ಲಗಂಬ ಪ್ರದರ್ಶನ
ತರಳಬಾಳು ಜಾನಪದ ಸಿರಿ ಸಂಭ್ರಮ -2018
ದಿನಾಂಕ : 23-09-2018 ರ ಭಾನುವಾರ ಸಂಜೆ 6 ಗಂಟೆಗೆ.
ಮುಖ್ಯ ಅತಿಥಿಗಳು : ಶರಣ ಬಿ.ಎಸ್ ಯಡಿಯೂರಪ್ಪ ಮಾಜಿ ಮುಖ್ಯ ಮಂತ್ರಿಗಳು ಮತ್ತು ವಿರೋಧಪಕ್ಷದ ನಾಯಕರು ಬೆಂಗಳೂರು. ಶರಣ ಚಂದ್ರಪ್ಪ ಬಿ.ಎನ್
ಲೋಕಸಭಾ ಸದಸ್ಯರು ಚಿತ್ರದುರ್ಗ.ಶರಣ ಎಂ ಚಂದ್ರಪ್ಪ ಶಾಸಕರು ಹೊಳಲ್ಕೆರೆ.ಶರಣ ಎಂ ಲಿಂಗಪ್ಪ ಶಾಸಕರು ಮಾಯಕೊಂಡ. ಶರಣ ಪಾಟೀಲ ಬಿ.ಸಿ ಶಾಸಕರು ಹಿರೇಕೆರೂರ. ಶರಣ ಮೋಹನ್ ಕೊಂಡಜ್ಜಿ
ವಿಧಾನ ಪರಿಷತ್ ಸದಸ್ಯರು ಬೆಂಗಳೂರು. ಶರಣ ಶ್ರೀನಿವಾಸ್ ಜಿ ಕಪ್ಪಣ್ಣ ಸಾಂಸ್ಕೃತಿಕ ಸಂಘಟಕರು ಬೆಂಗಳೂರು. ಶರಣ ಡಾ.ವೇದಮೂರ್ತಿ ಸಿ.ಜಿ
ರಕ್ಷಣಾಧಿಕಾರಿಗಳು( ಡಿ ಸಿ ಆರ್ ಇ ) ಮಂಗಳೂರು.ಶರಣ ಅಣ್ಣಾಮಲೈ.ಕೆ ಜಿಲ್ಲಾ ರಕ್ಷಣಾಧಿಕಾರಿಗಳು ಚಿಕ್ಕಮಗಳೂರು.
ಸಾಂಸ್ಕೃತಿಕ ಸಂಭ್ರಮ
ತರಳಬಾಳು ಜಾನಪದ ಸಿರಿ ಸಂಭ್ರಮ 2018
ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ 350 ಮಕ್ಕಳಿಂದ
24-09-2018 ಸೋಮವಾರ ಬೆಳಿಗ್ಗೆ 11 ಗಂಟೆಗೆ ಶ್ರದ್ದಾಂಜಲಿ ಸಮಾರಂಭ
ದಿವ್ಯ ಸಾನಿಧ್ಯ : ಶ್ರೀ ಮದುಜ್ಜಯನಿ ಸದ್ದರ್ಮ ಸಿಂಹಾಸನಾಧೀಶ ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು.
ಮುಖ್ಯ ಅತಿಥಿಗಳು : ಶರಣ ಹೆಚ್.ಡಿ ಕುಮಾರಸ್ವಾಮಿ ಮುಖ್ಯ ಮಂತ್ರಿಗಳುಕರ್ನಾಟಕ ಸರ್ಕಾರ. ಶರಣ ಶಾಮನೂರು ಶಿವಶಂಕರಪ್ಪ ಶಾಸಕರು ಮಾಜಿ ಸಚಿವರು ದಾವಣಗೆರೆ. ಶರಣ ಈಶ್ವರ ಖಂಡ್ರೆ ಮಾಜಿ ಸಚಿವರು ಕಾರ್ಯಾಧ್ಯಕ್ಷರು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ. ಶರಣ ಜಿ.ಎಂ ಸಿದ್ಧೇಶ್ವರ ಮಾಜಿ ಕೇಂದ್ರ ಸಚಿವರು ಮತ್ತು
ಲೋಕಸಭಾ ಸದಸ್ಯರು ದಾವಣಗೆರೆ. ಶರಣ ಬಸವರಾಜ ಬೊಮ್ಮಾಯಿ ಮಾಜಿ ಸಚಿವರು ಶಾಸಕರು ಶಿಗ್ಗಾಂವಿ. ಶರಣ ಆಯನೂರು ಮಂಜುನಾಥ್ ವಿಧಾನ ಪರಿಷತ್ ಸದಸ್ಯರು ಶಿವಮೊಗ್ಗ. ಶರಣ ಕೆ ಆರ್ ಜಯದೇವಪ್ಪ ಅಧ್ಯಕ್ಷರು ಸಾಧು ಸದ್ದರ್ಮ ಸಮಾಜ ದಾವಣಗೆರೆ. ಶರಣ ಹೆಚ್ .ವಿಶ್ವನಾಥ್ ಶಾಸಕರು ರಾಜ್ಯ ಅಧ್ಯಕ್ಷರು ಜಾತ್ಯಾತೀತ ಜನತಾದಳ ಬೆಂಗಳೂರು. ಶರಣ ಡಾ.ಶಂಕರ್ ಬಿ.ಎಲ್ ಮಾಜಿ ಸಭಾಪತಿ ವಿಧಾನ ಪರಿಷತ್ ಬೆಂಗಳೂರು. ಶರಣ ಭೋಜೇಗೌಡ ಎಸ್ . ಎಲ್. ವಿಧಾನ ಪರಿಷತ್ ಸದಸ್ಯರು
ಚಿಕ್ಕಮಗಳೂರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ

ಸುದ್ದಿದಿನ,ದಾವಣಗೆರೆ:ನಗರದ ಪ್ರತಿಷ್ಠಿತ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ತರಬೇತಿ ಮತ್ತು ಉದ್ಯೋಗ ವಿಭಾಗದಿಂದ ಇತ್ತೀಚಿಗೆ ನಡೆದ ಕ್ಯಾಂಪಸ್ ಸಂದರ್ಶನ ಪ್ರಕ್ರಿಯೆಯಲ್ಲಿ ಜಿಎಂ ಡಿಪ್ಲೋಮೋ ಕಾಲೇಜಿನ ವಿವಿಧ ವಿಭಾಗಗಳಿಂದ 44 ಅಂತಿಮ ವರ್ಷದ ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ.
ಮೆಕ್ಯಾನಿಕಲ್, ಸಿವಿಲ್, ಎಲೆಕ್ಟ್ರಿಕಲ್ ಮತ್ತು ಕಂಪ್ಯೂಟರ್ ಸೈನ್ಸ್ ವಿಭಾಗದಿಂದ ಒಟ್ಟು 44 ಅಂತಿಮ ವರ್ಷದ ವಿದ್ಯಾರ್ಥಿಗಳು ನ್ಯೂಜೈಸಾ ಟೆಕ್ನಾಲಜಿಸ್ ನಲ್ಲಿ ಉದ್ಯೋಗವಕಾಶಕ್ಕೆ ಅರ್ಹತೆ ಪಡೆದಿದ್ದಾರೆ ಎಂದು ತರಬೇತಿ ಮತ್ತು ಉದ್ಯೋಗ ವಿಭಾಗದ ನಿರ್ದೇಶಕರಾದ ತೇಜಸ್ವಿ ಕಟ್ಟಿಮನಿ ಟಿ.ಆರ್. ತಿಳಿಸಿದ್ದಾರೆ.
ಆಯ್ಕೆಯಾದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಜಿಎಂ ಕಾಲೇಜಿನ ಚೇರ್ಮನ್ ಆದ ಜಿ.ಎಂ. ಲಿಂಗರಾಜು, ಜಿಎಂಐಟಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಸಂಜಯ್ ಪಾಂಡೆ ಎಂಬಿ, ಕಾಲೇಜಿನ ಆಡಳಿತ ಅಧಿಕಾರಿಗಳಾದ ವೈ.ಯು. ಸುಭಾಷ್ ಚಂದ್ರ, ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಬಿ.ಎನ್. ಶ್ರೀಧರ್ ಅಭಿನಂದನೆ ಸಲ್ಲಿಸಿದ್ದು, 44 ವಿದ್ಯಾರ್ಥಿಗಳು ಆಯ್ಕೆಯಾಗಿ ಕಾಲೇಜಿಗೆ ಕೀರ್ತಿಯನ್ನು ತಂದಿರುತ್ತಾರೆ ಎಂದು ಹರುಷ ವ್ಯಕ್ತಪಡಿಸಿದ್ದಾರೆ.
ಆಯ್ಕೆಯಾದ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿದ್ದು, ಈ ಸಂಭ್ರಮದಲ್ಲಿ ಜಿಎಂ ಪಾಲಿಟೆಕ್ನಿಕ್ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರಾದ ಸಿ. ನಿಂಗರಾಜು, ಡಿಪ್ಲೋಮೋದ ತರಬೇತಿ ಮತ್ತು ಉದ್ಯೋಗ ವಿಭಾಗದ ಸಂಯೋಜಕರಾದ ಯಾಸ್ಮಿನ್ ಬೇಗಮ್, ಎಲೆಕ್ಟ್ರಿಕಲ್ ವಿಭಾಗದ ಮುಖ್ಯಸ್ಥರಾದ ಕೆ.ಬಿ. ಜನಾರ್ಧನ್, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥರಾದ ಸಿ.ಎನ್. ಸಂದೀಪ್, ಮೆಕಾನಿಕಲ್ ವಿಭಾಗದ ಮುಖ್ಯಸ್ಥರಾದ ಎಂ. ಪ್ರವೀಣ್ ಕುಮಾರ್, ಕೆ. ಗಿರಿಜಾ ಸೇರಿದಂತೆ ಇತರರು ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ:ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಫೆಬ್ರವರಿ 14 ಮತ್ತು 15 ರಂದು ಆಯೋಜಿಸಲಾಗಿದೆ.
ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025

ಸುದ್ದಿದಿನ,ಕಲಬುರಗಿ:ಕಲ್ಯಾಣ ಕರ್ನಾಟಕದ ಕೇಂದ್ರಸ್ಥಾನ ಕಲಬುರಗಿಯಲ್ಲಿ ಇದೇ ಮೊದಲ ಬಾರಿಗೆ ಸರ್ಕಾರದಿಂದ ಕಲಬುರಗಿ ಶರಣಬಸವ ವಿಶ್ವವಿದ್ಯಾಲಯದಲ್ಲಿ ಫೆಬ್ರವರಿ 17 ಮತ್ತು 18 ರಂದು ಎರಡು ದಿನಗಳ ಕಾಲ ಭವಿಷ್ಯದಲ್ಲಿ ಪತ್ರಕರ್ತರಾಗುವ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಮೀಡಿಯಾ ಫೆಸ್ಟ್-2025 ಕಾರ್ಯಕ್ರಮ ಆಯೋಜಿಸಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಲಬುರಗಿ ಉಪನಿರ್ದೇಶಕ ಜಡಿಯಪ್ಪ ಗೆದ್ಲಗಟ್ಟಿ ತಿಳಿಸಿದರು.
ಮಂಗಳವಾರ ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಜಂಟಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಮಾಧ್ಯಮ ಅಕಾಡೆಮಿ, ಶರಣಬಸವ ವಿಶ್ವವಿದ್ಯಾಲಯ ಹಾಗೂ
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕಲಬುರಗಿ ಇವರ ಸಹಯೋಗದೊಂದಿಗೆ ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದ್ದು, ಕಾರ್ಯಾಗಾರ, ನುರಿತ ಪತ್ರಕರ್ತರಿಂದ ಗೋಷ್ಠಿ, ಸ್ಪರ್ಧೆಗಳು ನಡೆಯಲಿವೆ. ಕಲಬುರಗಿ ಮತ್ತು ಬೆಳಗಾವಿ ವಿಭಾಗದ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಪತ್ರಿಕೋದ್ಯಮ ವಿಭಾಗದ ಸುಮಾರು 200 ವಿದ್ಯಾರ್ಥಿಗಳು ಮತ್ತು ಕಾಲೇಜಿನ ಪ್ರಾಧ್ಯಾಪಕರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಪತ್ರಿಕೋದ್ಯಮ ವಿದ್ಯಾರ್ಥಿಗಳ ಪ್ರತಿಭೆ ಪ್ರದರ್ಶನಕ್ಕೆ ವೇದಿಕೆ
ಶರಣಬಸವ ವಿಶ್ವವಿದ್ಯಾಲಯದ ಪತಿಕೋದ್ಯಮ ಮತ್ತು ಸಮೂಹ ಸಂವಹನ ಸ್ನಾತಕೋತ್ತರ ಪದವಿ ವಿಭಾಗದ ಮುಖ್ಯಸ್ಥ ಟಿ.ವಿ.ಶಿವಾನಂದನ್ ಮಾತನಾಡಿ, ಎರಡು ದಿನಗಳ ಕಾಲ ನಡೆಯುವ ಈ ಮಾಧ್ಯಮೋತ್ಸವದಲ್ಲಿ ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ತಮ್ಮ ಪ್ರತಿಭೆ ಪ್ರದರ್ಶಿಸಲು ವೇದಿಕೆ ಒದಗಿಸಲಾಗುತ್ತಿದೆ. ಭವಿಷ್ಯದ ಸ್ಪರ್ಧಾತ್ಮಕ ಪತ್ರಕರ್ತರಲ್ಲಿ ಅತ್ಯುತ್ತಮರನ್ನು ಹೊರತರಲು ಹತ್ತು ಹಲವು ಸ್ಪರ್ಧೆಗಳನ್ನು ವಿನ್ಯಾಸಗೊಳಿಸಿದ್ದು, ಶರಣಬಸವ ವಿಶ್ವವಿದ್ಯಾಲಯದ ಮುಖ್ಯ ಆವರಣದ ವಿವಿಧ ಸ್ಥಳಗಳಲ್ಲಿ ಈ ಸ್ಪರ್ಧೆ ನಡೆಯಲಿವೆ. ಕಾರ್ಯಕ್ರಮ್ಕಕೆ ಆಗಮಿಸುವ ವಿದ್ಯಾರ್ಥಿಗಳಿಗೆ ವಿ.ವಿ.ಯಲ್ಲಿ ವಸತಿ, ಊಟದ ವ್ಯವಸ್ಥೆ ಮಾಡಿದ್ದು, ಸ್ಪರ್ಧೇಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳಿಗೆ ಯಾವುದೇ ಶುಲ್ಕ ಇಲ್ಲ. ಪ್ರವೇಶ ಸಂಪೂರ್ಣ ಉಚಿತ ಇರಲಿದೆ. ಇನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯು ವಿದ್ಯಾರ್ಥಿಗಳ ನೋಂದಣಿ ಕಾರ್ಯ ನಿರ್ವಹಿಸುತ್ತಿದೆ ಎಂದರು.
ವೈಯಕ್ತಿಕ ಸ್ಪರ್ಧೆಗಳು ಮತ್ತು ಗುಂಪು ಸ್ಪರ್ಧೆಗಳು ಎಂದು ಎರಡು ವಿಭಾಗಗಳಾಗಿ ಸ್ಪರ್ಧೇಗಳನ್ನು ವಿಂಗಡಿಸಲಾಗಿದೆ. ವೈಯಕ್ತಿಕ ಸ್ಪರ್ಧೆಗಳಲ್ಲಿ ನೇರ ಪತ್ರಿಕಾಗೋಷ್ಠಿ ವರದಿ ಮಾಡುವಿಕೆ, ಪಿಟಿಸಿ ಮತ್ತು ಟಿವಿ ವರದಿ ಮಾಡುವಿಕೆ, ಸ್ಪಾಟ್ ಛಾಯಾಗ್ರಹಣ, ರೇಡಿಯೋ ಜಾಕಿ, ನುಡಿಚಿತ್ರ, ಜಾಹೀರಾತು ಬರವಣಿಗೆ, ಸಾಮಾಜಿಕ ಮಾಧ್ಯಮದ ವರದಿ ಮಾಡುವಿಕೆ ಮತ್ತು ಮುಖ್ಯಾಂಶಗಳನ್ನು ಬರೆಯುವ ಕಲೆ ಸೇರಿವೆ. ಗುಂಪು ಸ್ಪರ್ಧೆಗಳಲ್ಲಿ ಪ್ರಚಲಿತ ವಿದ್ಯಮಾನಗಳ ಕುರಿತು ರಸಪ್ರಶ್ನೆ, “ನಮ್ಮೂರ ಭಾಷೆ–ವರವಾ?
ಶಾಪವಾ?”
ಚರ್ಚಾ ಸ್ಪರ್ಧೆ ಸೇರಿದೆ ಎಂದರು.
ಕಲ್ಯಾಣ ಕರ್ನಾಟಕ ಮಾಧ್ಯಮೋತ್ಸವದ ಮತ್ತೊಂದು ವೈಶಿಷ್ಟ್ಯವೆಂದರೆ ಉದಯೋನ್ಮುಖ ಪತ್ರಕರ್ತರ ಕೌಶಲ್ಯಗಳನ್ನು ಉತ್ತಮಗೊಳಿಸುವ ಎರಡು ಕಾರ್ಯಾಗಾರಗಳು ಹಮ್ಮಿಕೊಳ್ಳಲಾಗಿದೆ. ಮೊದಲ ಕಾರ್ಯಾಗಾರದಲ್ಲಿ ಹಿರಿಯ ಪತ್ರಕರ್ತ ಹಾಗೂ ನಟ, ನಿರ್ದೇಶಕ ಮತ್ತು ಆಲ್ಮಾ ಮೀಡಿಯಾದ ಸಂಸ್ಥಾಪಕರಾದ ಗೌರೀಶ್ ಅಕ್ಕಿ, ಮಾಧ್ಯಮದ ಸ್ಪರ್ಧಾತ್ಮಕ ಜಗತ್ತನ್ನು ಪ್ರವೇಶಿಸುವ ಹಾಗೂ ಸವಾಲುಗಳನ್ನು ಎದುರಿಸಲು ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದ ವಿದ್ಯಾರ್ಥಿಗಳನ್ನು ಪರಿಣಾಮಕಾರಿಯಾಗಿ ಸಿದ್ಧಪಡಿಸುವ ಕುರಿತು ಮಾತನಾಡಲಿದ್ದಾರೆ. ಎರಡನೇ ಕಾರ್ಯಾಗಾರದಲ್ಲಿ ನಕಲಿ ಸುದ್ದಿಗಳನ್ನು ಹೇಗೆ ಗುರುತಿಸುವುದು ಎಂಬುದರ ಕುರಿತು ಮಣಿಪಾಲ ಉನ್ನತ ಶಿಕ್ಷಣ ಅಕಾಡೆಮಿಯ ಹಿರಿಯ ಪತ್ರಕರ್ತೆ ಹಾಗೂ ಪ್ರಾಧ್ಯಾಪಕಿ ಪ್ರೊ. ಕಾಂಚನ ಕೌರ್ ಮಾತನಾಡಲಿದ್ದಾರೆ ಎಂದು ಕಾರ್ಯಕ್ರಮದ ರೂಪುರೇಷೆ ಕುರಿತು ವಿವರಿಸಿದ ಟಿ.ವಿ.ಶಿವಾನಂದನ್ ಅವರು, ಎರಡು ದಿನಗಳ ಕಾಲ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ನಡೆಯಲಿವೆ ಎಂದರು.
ಫೆಬ್ರವರಿ 17 ರಂದು ಕೆ.ಕೆ.ಆರ್.ಡಿ.ಬಿ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರು ಮೀಡಿಯಾ ಫೆಸ್ಟ್ ಉದ್ಘಾಟಿಸಲಿದ್ದಾರೆ. ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರಪರ್ಸನ್ ಡಾ. ದಾಕ್ಷಾಯಿಣಿ ಅವ್ವಾಜಿ ಮತ್ತು ಸಂಸ್ಥಾನದ 9ನೇ ಪೀಠಾಧಿಪತಿ ಪೂಜ್ಯ ಚಿರಂಜೀವಿ ದೊಡ್ಡಪ್ಪ ಅಪ್ಪಾಜಿಯವರ ದಿವ್ಯ ಸಾನಿಧ್ಯದಲ್ಲಿ ನಡೆಯುವ ಈ ಸಮಾರಂಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷೆ ಆಯೇಷಾ ಖಾನಮ್, ಕೊಪ್ಪಳ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಬಿ. ಕೆ. ರವಿ, ಶರಣಬಸವ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಅನಿಲ್ಕುಮಾರ್ ಬಿಡವೆ, ಗುಲಬರ್ಗಾ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ಶ್ರೀರಾಮುಲು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಅಧ್ಯಕ್ಷ ಬಾಬುರಾವ್ ಯಡ್ರಾಮಿ ಮತ್ತು ಇನ್ನಿತರ ಗಣ್ಯರು ಈ ಮಾಧ್ಯಮೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ.
ಫೆಬ್ರವರಿ 18 ರಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಅವರು ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಲಬುರಗಿಯ ಉತ್ತರ ಮತಕ್ಷೇತ್ರದ ಶಾಸಕಿ ಖನೀಜ್ ಫಾತಿಮಾ, ಕಲಬುರಗಿಯ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಮತ್ತು ಇತರ ಚುನಾಯಿತ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಜರ್ ಆಲಂ ಖಾನ್ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಿದ್ದಾರೆ ಎಂದು ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಭವಾನಿ ಸಿಂಗ್, ಕಲಬುರಗಿ ಘಟಕದ ಜಿಲ್ಲಾಧ್ಯಕ್ಷ ಬಾಬುರಾವ್ ಯಡ್ರಾಮಿ ಇದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days ago
ಫೆಬ್ರವರಿ 17 ಮತ್ತು 18ಕ್ಕೆ ಕಲಬುರಗಿಯಲ್ಲಿ ಮೀಡಿಯಾ ಫೆಸ್ಟ್-2025
-
ದಿನದ ಸುದ್ದಿ3 days ago
ಪತ್ರಕರ್ತರ ಮೇಲೆ ಕೆ.ಎಂ.ಎಫ್ ಅಧ್ಯಕ್ಷ ಭೀಮಾನಾಯ್ಕ್ ಹಲ್ಲೆ, ಕೊಲೆ ಬೆದರಿಕೆ
-
ದಿನದ ಸುದ್ದಿ2 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ
-
ದಿನದ ಸುದ್ದಿ5 days ago
ಸರ್ಕಾರಿ, ಅನುದಾನಿತ, ಕಲ್ಯಾಣ ಕರ್ನಾಟಕದಲ್ಲಿನ ಖಾಲಿ ಇರುವ 25 ಸಾವಿರ ಶಿಕ್ಷಕರ ಹುದ್ದೆಗಳ ಭರ್ತಿಗಾಗಿ ಬಜೆಟ್ನಲ್ಲಿ ಅನುಮೋದನೆಗೆ ಪ್ರಸ್ತಾವನೆ : ಸಚಿವ ಎಸ್.ಮಧು ಬಂಗಾರಪ್ಪ
-
ದಿನದ ಸುದ್ದಿ5 hours ago
ಜಿಎಂ ಡಿಪ್ಲೋಮೋ ಕಾಲೇಜಿನ 44 ವಿದ್ಯಾರ್ಥಿಗಳು ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆ