ದಿನದ ಸುದ್ದಿ
ಶ್ರೀ ಶಿವಕುಮಾರ ಶ್ರೀಗಳ ಶ್ರದ್ಧಾಂಜಲಿ : ಬೃಹತ್ ರಕ್ತದಾನ ಶಿಬಿರಕ್ಕೆ ಶ್ರೀ ತರಳಬಾಳು ಜಗದ್ಗುರುವರ್ಯರಿಂದ ಚಾಲನೆ
ಸುದ್ದಿದಿನ ಡೆಸ್ಕ್ : ಪೂಜನೀಯ ಶ್ರೀ ತರಳಬಾಳು ಜಗದ್ಗುರು ಲಿಂಗೈಕ್ಯ ಶ್ರೀ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮೀಜಿಯವರ ಸಂಸ್ಮರಣೆಯ ನಿಮಿತ್ತ ಹತ್ತಾರು ಸಮಾಜ ಸೇವಾ ಕಾರ್ಯಕ್ರಮಗಳು ಸಿರಿಗೆರೆಯಲ್ಲಿ ಜರುಗತ್ತಿವೆ.
ಇಂದು ಬೆಳಿಗ್ಗೆ ಎಂ ಬಸವಯ್ಯ ವಸತಿ ಪದವಿ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಿದ್ದು . ಪೂಜನೀಯ ಶ್ರೀ ತರಳಬಾಳು ಜಗದ್ಗುರು 1108 ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರು ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಶುಭ ಕೋರಿದರು. ಶಿಬಿರದಲ್ಲಿ ರಕ್ತದಾನದಿಂದಾಗುವ ಪ್ರಯೋಜನಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುತ್ತಿದ್ದು ಈಗಿನ ವರದಿಗಳಂತೆ ನೂರಕ್ಕೂ ಹೆಚ್ಚು ಜನರು ರಕ್ತದಾನವನ್ನು ಮಾಡಿ ನಿಜವಾದ ನಾಯಕರಾಗಿದ್ದಾರೆ. ಶಿಬಿರದಲ್ಲಿ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಗಳಾದ ಶ್ರೀ ಎಸ್.ಬಿ ರಂಗನಾಥ್, ಎಂ ಬಿ ಆರ್ ಪಿ ಯು ಕಾಲೇಜಿನ ಪ್ರಾಂಶುಪಾಲರಾದ ಪ್ರೋ.ಡಿ.ಎಂ ನಾಗರಾಜ್ ಸೇರಿದಂತೆ ಶಾಲೆ ಕಾಲೇಜುಗಳ ಉಪನ್ಯಾಸಕರು ,ಶಿಕ್ಷಕರು, ಸಾರ್ವಜನಿಕರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401