Connect with us

ದಿನದ ಸುದ್ದಿ

ನಾಡಿನ ಹಲವು ಕ್ಷೇತ್ರಗಳಿಗೆ ತರಳಬಾಳು ಹಿರಿಯ ಶ್ರೀಗಳ ಕೊಡುಗೆ ಅಪಾರ: ಡಾ. ನಾ ಲೋಕೇಶ ಒಡೆಯರ್

Published

on

ಸುದ್ದಿದಿನ,ದಾವಣಗೆರೆ : ಹಿರಿಯ ಶ್ರೀ ತರಳಬಾಳು ಜಗದ್ಗುರು ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳುವರು ಕಟ್ಟಿ ಬೆಳಸಿದ ಸಂಸ್ಥೆ ಮತ್ತು ತಮ್ಮ ಆದರ್ಶ ವ್ಯಕ್ತಿತ್ವದ ಮೂಲಕ ಪೂಜ್ಯರು ಇಂದಿಗೂ ಎಂದೆಂದಿಗೂ ಜನಮಾನಸದಲ್ಲಿ ಶಾಶ್ವತವಾಗಿ ನೆಲೆಸಿರುತ್ತಾರೆ ಎಂದುವಿಶ್ರಾಂತ ಪ್ರಾಚಾರ್ಯ ಡಾ. ನಾ ಲೋಕೇಶ ಒಡೆಯರ್ ಅಭಿಪ್ರಾಯಪಟ್ಟರು.

ಗುರುವಾರ ನಗರದ ಅನುಭವಮಂಟಪ ಶಾಲಾ ಸಂಕೀರ್ಣದಲ್ಲಿ  ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಸಾಂಸ್ಕೃತಿಕ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಪೂಜ್ಯರು ಕುಳಿತ ಸಿಂಹಾಸನ ಹೂವಿನ ಹಾಸಿಗೆಯಾಗದೆ, ಮುಳ್ಳಿನ ಹಾಸಿಗೆಯಾಗಿತ್ತು. ತಮಗೆ ಒದಗಿದ ಸಂಕಷ್ಟಗಳನ್ನು ಧೈರ್ಯವಾಗಿ ಎದುರಿಸಿ, ಶ್ರೀ ತರಳಬಾಳು ಜಗದ್ಗುರು ಬೃಹನ್ಮಠವನ್ನು ಕರ್ನಾಟಕ ಮಾತ್ರವಲ್ಲದೆ ಇಡೀ ಭಾರತದಲ್ಲಿಯೇ ಮಾದರಿ ಮತ್ತು ಆದರ್ಶ ಮಠವನ್ನಾಗಿ ರೂಪಿಸಿದರು. ಮರುಳಸಿದ್ಧ ಮತ್ತು ಬಸವಾದಿ ಶಿವಶರಣರ ತತ್ತ್ವಗಳಂತೆ ಬಾಳಿದ ಅವರು ತಮ್ಮ ದೂರದೃಷ್ಟಿ ಮತ್ತು ಜಾತ್ಯತೀತ ನಿಲುವಿನಿಂದ ಸರ್ವ ಜನಾಂಗದವರಿಗೂ ಅನುಕರಣೀಯರಾಗಿದ್ದರು.

ಆಡುಮುಟ್ಟದ ಸೊಪ್ಪಿಲ್ಲ ಎಂಬ ಮಾತಿನಂತೆ  ಹಿರಿಯ ಶ್ರೀಗಳು ನಾಡಿನ ಧಾರ್ಮಿಕ, ಸಾಂಸ್ಕೃತಿಕ, ಶೈಕ್ಷಣಿಕ, ಸಾಹಿತ್ಯ, ಸಂಶೋಧನಾ  ಕ್ಷೇತ್ರಗಳಿಗೆ ನೀಡಿದ ಕೊಡುಗೆ ಅಪಾರ ಎಂದು ಡಾ. ನಾ ಲೋಕೇಶ ಒಡೆಯರ್ ನುಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶ್ರೀ ತರಳಬಾಳು ಜಗದ್ಗುರು ಪದವಿ ಪೂರ್ವ ಕಾಲೇಜು ಪ್ರಾಚಾರ್ಯ ಡಾ. ಎಚ್ ಎನ್ ಪ್ರದೀಪ್ ಮಾತನಾಡಿ, ಸ್ವಾತಂತ್ರ್ಯ ಪುರ್ವದಲ್ಲಿಯೇ ಸಾಮಾಜಿಕ ನ್ಯಾಯವನ್ನು ಒದಗಿಸಿದ ಕೀರ್ತಿ ಶಿವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರದು. ಗ್ರಾಮೀಣ ಮಕ್ಕಳಿಗೆ ಶಿಕ್ಷಣ ಸುಲಭವಾಗಿ ಮತ್ತು ಉಚಿತವಾಗಿ ದೊರಕಲು  ನೂರಾರು ಶಾಲಾ ಕಾಲೇಜುಗಳನ್ನು ತೆರೆದು ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯನ್ನು ಮಾಡಿದರು ಎಂದರು.

ತರಳಬಾಳು ಕಲಾ ಸಂಘದ  ಇ. ದೇವರಾಜ್ ಪ್ರಾಸ್ತಾವಿಕ ಮಾತುಗಳನ್ನಾಡಿದರು.  ಸಮಾರಂಭದಲ್ಲಿ  ಪ್ರಾಚಾರ್ಯರಾದ ಶ್ರೀಕುಮಾರ್, ಶಿವಕುಮಾರ ಸುರಕೋಡ್, ಅಧ್ಯಾಪಕ ನಾಗರಾಜ ಸಿರಿಗೆರೆ,  ಮಲ್ಲಿಕಾರ್ಜುನಯ್ಯ, ಎಸ್ ಕೆ ಮೋಹನ, ಎಸ್ ಆರ್ ವಿರೇಶ್ ಮುಂತಾದವರು ಪಾಲ್ಗೊಂಡಿದ್ದರು. ಪ್ರಾರಂಭದಲ್ಲಿ ಕು. ಶ್ರೇಯ ರಮಣಿ ವಚನ ಗೀತೆಯನ್ನು ಹಾಡಿದರು.
ಕನ್ನಡ ಉಪನ್ಯಾಸಕ ಬಿ ಆನಂದ್ ಕಾರ್ಯಕ್ರಮ ನಿರೂಪಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಉಚಿತ ಲ್ಯಾಪ್‍ಟಾಪ್ ಪಡೆಯಲು ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೊಂದಾಯಿತ ಕಾರ್ಮಿಕರ ಮಕ್ಕಳು ಪ್ರಸಕ್ತ ಸಾಲಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ.

ದಾವಣಗೆರೆ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಇವರ ವ್ಯಾಪ್ತಿಯಲ್ಲಿ ನೋಂದಣಿಯಾಗಿರುವ ಕಾರ್ಮಿಕರು ಈ ಸೌಲಭ್ಯವನ್ನು ಪಡೆಯಬಹುದು. ಅರ್ಜಿ ನಮೂನೆಯನ್ನು ಸಂಬಂಧಿಸಿದ ಕಾರ್ಮಿಕ ನಿರೀಕ್ಷಕರ ಕಛೇರಿಯಿಂದ ಪಡೆದು ಅಗತ್ಯ ದಾಖಲೆಗಳೊಂದಿಗೆ ಕಾರ್ಮಿಕ ನಿರೀಕ್ಷಕರಿಗೆ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಯವರ ಕಚೇರಿ ದೂ ಸಂ:08192-237332 ಸಂಪರ್ಕಿಸಲು ಕಾರ್ಮಿಕ ಅಧಿಕಾರಿ ಇಬ್ರಾಹಿಂ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಾಳೆಯಿಂದ ತಮಿಳುನಾಡಿಗೆ ಕಾವೇರಿ ನೀರು ; ಕಾವೇರಿ ನದಿ ನೀರು ಸಮಿತಿ ನಿರ್ದೇಶನ

Published

on

ಸುದ್ದಿದಿನ ಡೆಸ್ಕ್ : ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನದಿ ನೀರು ಸಮಿತಿ ತೀರ್ಪಿನ ಕುರಿತು ಕಾನೂನು ತಜ್ಞರ ಜೊತೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ನಿನ್ನೆ ಹೇಳಿದ್ದಾರೆ.

ತಮಿಳುನಾಡಿಗೆ ನಾಳೆಯಿಂದ (ಸೆಪ್ಟಂಬರ್28) ಅಕ್ಟೋಬರ್ 15ರ ತನಕ ಪ್ರತಿನಿತ್ಯ 3 ಸಾವಿರ ಕ್ಯೂಸೆಕ್‌ನಂತೆ ನೀರು ಹರಿಸುವಂತೆ, ಕಾವೇರಿ ನದಿ ನೀರು ಸಮಿತಿ ನಿನ್ನೆ ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಕಾವೇರಿ ನದಿ ನೀರು ಸಮಿತಿ ವರ್ಚುವಲ್ ಮೂಲಕ ನಡೆದ ಸಭೆಯಲ್ಲಿ ಈ ನಿರ್ದೇಶನ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉತ್ತಮ ಶಿಕ್ಷಕರ ಪ್ರಶಸ್ತಿಗೆ ಸುಮಂಗಳಾ ಮೇಟಿ ಆಯ್ಕೆ

Published

on

ಸುದ್ದಿದಿನ, ಬಳ್ಳಾರಿ : ಸಿರಿಗೇರಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ (ಬಸವನಪೇಟೆ) ಮುಖ್ಯ ಗುರುಗಳಾದ ಶ್ರೀಮತಿ ಸುಮಂಗಳಾ ಮೇಟಿಯವರು 2023-24 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಶಿಕ್ಷಕ ವೃತ್ತಿ ಧರ್ಮ ನೇ ತನ್ನ ಸರ್ವಸ್ವ ಎಂದು ತಿಳಿದುಕೊಂಡಂತಹ ಶ್ರೀಮತಿ ಸುಮಂಗಳಾ ಮೇಟಿಯವರು, ಶಿಕ್ಷಕ ವೃತ್ತಿಯಲ್ಲಿ ಉತ್ತಮ ಕರ್ತವ್ಯ ಹಾಗೂ ಸೇವೆಯನ್ನು ಸಲ್ಲಿಸಿದನ್ನು ಪರಿಗಣಿಸಿ ಈ ಹಿಂದೆಯೇ 2022-23 ನೇ ಸಾಲಿನ ಬಳ್ಳಾರಿ ಜಿಲ್ಲಾ ಮಟ್ಟದ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿ ಪ್ರಶಸ್ತಿ ಪುರಸ್ಕೃತರಾಗಿದ್ದು, ಇವರ ಶಿಕ್ಷಣ ಕ್ಷೇತ್ರದಲ್ಲಿನ ಅಗಾಧವಾದ ಕರ್ತವ್ಯ ಮತ್ತು ಸೇವೆ ನಿಷ್ಠೆಯನ್ನು ಗುರುತಿಸಿದ ಶಾಲಾ ಶಿಕ್ಷಣ ಇಲಾಖೆ ಬಳ್ಳಾರಿ ವತಿಯಿಂದ 2023-24 ನೇ ಸಾಲಿನ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಇದೇ ಸಂದರ್ಭದಲ್ಲಿ ಗ್ರಾಮಸ್ಥರು, ಸಮಸ್ತ ಶಿಕ್ಷಕರ ವರ್ಗದವರು, ಅತಿಥಿ ಶಿಕ್ಷಕರು, ಹಿತೈಷಿಗಳು, ಹಳೆಯ ವಿದ್ಯಾರ್ಥಿ ಬಳಗ, ಶಿಕ್ಷಣ ಪ್ರೇಮಿಗಳು, ಅಭಿಮಾನಿ ಬಳಗ,
ಮುಂತಾದವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending