Connect with us

ದಿನದ ಸುದ್ದಿ

‘ಕಾಶ್ಮೀರಿ ಫೈಲ್ಸ್’ ಗೆ ತೆರಿಗೆ ವಿನಾಯಿತಿ | ಮುಖ್ಯಮಂತ್ರಿಗಳಿಗೆ ಕನ್ನಡದ ಜೇಮ್ಸ್ ನೆನಪಾಗಲಿಲ್ಲವೇ? : ಸಿದ್ದರಾಮಯ್ಯ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಬೆಂಗಳೂರು : ಪ್ರತಿಯೊಬ್ಬ ಕನ್ನಡಿಗನೂ ವೀಕ್ಷಿಸಲು ತುದಿಗಾಲಲ್ಲಿ ನಿಂತಿರುವ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ‘ಜೇಮ್ಸ್’ ಪ್ರದರ್ಶನವನ್ನು ಬಲವಂತದಿಂದ ನಿಲ್ಲಿಸಿ ಕಾಶ್ಮೀರಿ ಫೈಲ್ಸ್ ಚಿತ್ರ ಪ್ರದರ್ಶಿಸಲು ಬಿಜೆಪಿ ಶಾಸಕರು ಮತ್ತು ಕಾರ್ಯಕರ್ತರು ಚಿತ್ರಮಂದಿರಗಳ ಮೇಲೆ ಒತ್ತಡ ಹೇರುತ್ತಿರುವುದು ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೇಮ್ಸ್ ಚಿತ್ರದ ನಿರ್ಮಾಪಕರು ನನ್ನನ್ನು ಭೇಟಿಯಾಗಿ ತಿಳಿಸಿದ ವಿಷಯ ಆಘಾತಕಾರಿಯಾದುದು. ಅವರು ತಿಂಗಳುಗಳ ಹಿಂದೆಯೇ ಚಿತ್ರ ಪ್ರದರ್ಶನಕ್ಕೆ ಚಿತ್ರಮಂದಿರಗಳನ್ನು ಬುಕ್ ಮಾಡಿ ಮುಂಗಡ ಹಣವನ್ನೂ ಪಾವತಿಸಿದ್ದಾರೆ. ಚಿತ್ರ ಹೌಸ್ ಪುಲ್ ಆಗಿ ಓಡುತ್ತಿದ್ದರೂ ಪ್ರದರ್ಶನ ನಿಲ್ಲಿಸುವಂತೆ ಬಲವಂತ ಮಾಡುತ್ತಿರುವುದು ಅನ್ಯಾಯ ಎಂದು ವಿಷಾದ ವ್ಯಕ್ತಪಡಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಕ್ಷಣ ಮಧ್ಯಪ್ರವೇಶಿಸಿ ಜೇಮ್ಸ್ ಚಿತ್ರದ ಪ್ರದರ್ಶನಕ್ಕೆ ತಡೆಯೊಡ್ಡುತ್ತಿರುವುದರ ವಿರುದ್ಧ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು. ಇದಕ್ಕೆ ತಪ್ಪಿದಲ್ಲಿ ಜೇಮ್ಸ್ ಚಿತ್ರ ಪ್ರದರ್ಶನ ನಿಲ್ಲಿಸಲು ನಡೆಯುತ್ತಿರುವ ಹುನ್ನಾರದಲ್ಲಿ ರಾಜ್ಯ ಸರ್ಕಾರವೂ ಷಾಮೀಲಾಗಿದೆ ಎಂದು ತಿಳಿದುಕೊಳ್ಳಬೇಕಾಗುತ್ತದೆ.

ಪುನೀತ್ ರಾಜ್ ಕುಮಾರ್ ಅಗಲಿಕೆಯ ಸಂದರ್ಭದಲ್ಲಿ ಮುಖ್ಯಮಂತ್ರಿಯಾದಿಯಾಗಿ ಸಚಿವರು, ಬಿಜೆಪಿ ಶಾಸಕರು ಮತ್ತು ನಾಯಕರು ಕಣ್ಣೀರು ಸುರಿಸಿದ್ದಾರೆ, ಅಪಾರ ಶೋಕ ವ್ಯಕ್ತಪಡಿಸಿದ್ದಾರೆ. ಆ ಎಲ್ಲ ಭಾವನೆಗಳು ಪ್ರಾಮಾಣಿಕವಾದುದೆಂದು ನಾನು ನಂಬಿದ್ದೇನೆ. ಅದನ್ನು ಸಾಬೀತುಪಡಿಸುವ ಕಾಲ ಈಗ ಬಂದಿದೆ.

ಜೇಮ್ಸ್ ಚಿತ್ರ ಪ್ರದರ್ಶನಕ್ಕೆ ಅಡ್ಡಿ ಉಂಟು ಮಾಡುತ್ತಿರುವುದು ಕೇವಲ ಪುನೀತ್ ರಾಜ್ ಕುಮಾರ್ ಅವರಿಗೆ ಮಾಡುತ್ತಿರುವ ದ್ರೋಹ ಮಾತ್ರವಲ್ಲ ಸಮಸ್ತ ಕನ್ನಡಿಗರಿಗೆ ಮಾಡುತ್ತಿರುವ ಅವಮಾನವೂ ಹೌದು. ಈ ಅನ್ಯಾಯವನ್ನು ಖಂಡಿಸಿ ಕನ್ನಡಿಗರೆಲ್ಲರೂ ಬೀದಿಗೆ ಇಳಿಯುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಂಡರೆ ಒಳಿತು‌ ಎಂದು ಎಚ್ಚರಿಕೆ ನೀಡಿದರು.

ಪುನೀತ್ ರಾಜ್ ಕುಮಾರ್ ಇಡೀ ವಿಶ್ವ ಕೊಂಡಾಡುತ್ತಿರುವ ಕನ್ನಡದ ಹೆಮ್ಮೆಯ ನಟ. ನಟನೆಯಿಂದ ಮಾತ್ರವಲ್ಲ ಸದ್ದಿಲ್ಲದೆ ಮಾಡಿದ ಸಮಾಜಮುಖಿ ಕೆಲಸಗಳಿಂದಲೂ ಜನಮನ ಗೆದ್ದಿರುವ ಅಪರೂಪದ ವ್ಯಕ್ತಿ. ಇವರ ಕೊನೆಯ ಚಿತ್ರವನ್ನು ವೀಕ್ಷಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲು ಜನ ಸಿದ್ಧವಾಗಿದ್ದಾರೆ.

ಕಾಶ್ಮೀರಿ ಫೈಲ್ಸ್ ಇರಲಿ, ಇನ್ನೊಂದಿರಲಿ. ಒಂದು ಚಿತ್ರವನ್ನು ಬಲವಂತದಿಂದ ಪ್ರದರ್ಶನ ಮಾಡಿ ಜನ ನೋಡುವಂತೆ ಒತ್ತಡ ಹೇರುವುದು ಸರಿ ಅಲ್ಲ. ಗಾಂಧೀಜಿ ಬಗ್ಗೆಯೂ ಚಿತ್ರ ಬಂದಿದೆ. ಇತ್ತೀಚೆಗೆ ಜೈಭೀಮ್ ಎಂಬ ಚಿತ್ರವೂ ಬಂದಿದೆ. ಅವುಗಳನ್ನು ನೋಡಬೇಕೆಂದು ಯಾರಾದರೂ ಬಲವಂತ ಮಾಡಿದ್ದಾರಾ?

ಪುನೀತ್ ರಾಜ್ ಕುಮಾರ್ ಜೇಮ್ಸ್ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ ಕನ್ನಡಿಗರೆಲ್ಲರೂ ನೋಡಲು ಪ್ರೊತ್ಸಾಹ ನೀಡಬೇಕಾಗಿತ್ತು. ಕಾಶ್ಮೀರಿ ಫೈಲ್ಸ್ ಎಂಬ ಹಿಂದಿ ಸಿನೆಮಾಕ್ಕೆ ತೆರಿಗೆ ವಿನಾಯಿತಿ ನೀಡುವಾಗ ಕನ್ನಡಿಗನೆಂದು ಹೇಳಿಕೊಳ್ಳುವ ಮುಖ್ಯಮಂತ್ರಿಗಳಿಗೆ ಕನ್ನಡದ ಜೇಮ್ಸ್ ನೆನಪಾಗಲಿಲ್ಲವೇ? ತೆರಿಗೆ ವಿನಾಯಿತಿಗೆ ಈಗಲೂ ಕಾಲ ಮಿಂಚಿಲ್ಲ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending