ದಿನದ ಸುದ್ದಿ

ತೆರಿಗೆ ಹಣ ಲೂಟಿ : ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

Published

on

ಸುದ್ದಿದಿನ, ಹಾಸನ : ಬಡವರ ಬದುಕು ಕಸಿಯುತ್ತಿರುವ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಹಾಗೂ 40% ಕಮಿಷನ್ ಕಿರುಕುಳಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಬಲಿಪಡೆದ ರಾಜ್ಯ ಸರ್ಕಾರದ ವಿರುದ್ಧ ಹಾಸನ ಜಿಲ್ಲಾ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದರು.

ಈ‌ ಸಂದರ್ಭದಲ್ಲಿ ಮಾತನಾಡಿದ ಅವರು ಜನರ ಶ್ರಮದ ತೆರಿಗೆ ಹಣವನ್ನು ಲೂಟಿ ಮಾಡುತ್ತಿರುವ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜನಜಾಗೃತಿ ಮೂಡಿಸಲು ಇಂದು ಹಾಸನಕ್ಕೆ ಆಗಮಿಸಿದ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು, ಸ್ಥಳೀಯರು ಆತ್ಮೀಯ ಸ್ವಾಗತ ಕೋರುವ ಮೂಲಕ ನಮ್ಮ ಹೋರಾಟಕ್ಕೆ ಪೂರ್ಣ ಬೆಂಬಲ ಸೂಚಿಸಿದರು.
ಹಾಸನದ ಜನತೆಗೆ ನಾನು ಸದಾ ಋಣಿ ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಧ್ರುವ ನಾರಾಯಣ, ರಾಜ್ಯ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಪುಷ್ಪ ಅಮರನಾಥ್, ಮಾಜಿ ಸಚಿವರಾದ ಶಿವರಾಂ, ಮಾಜಿ ಸಂಸದರಾದ ಚಂದ್ರಪ್ಪ, ಮಾಜಿ ಶಾಸಕರಾದ ಗೋಪಾಲಸ್ವಾಮಿ, ಪುಟ್ಟೇಗೌಡ, ಹಾಸನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾದ ಮಂಜುನಾಥ್ ಸೇರಿದಂತೆ ಇನ್ನಿತರ ನಾಯಕರು ಈ ವೇಳೆ ಹಾಜರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version