ದಿನದ ಸುದ್ದಿ
ಬಿಜೆಪಿ ನಾಯಕರಿಗೆ ಗಂಡಸ್ತನ ಇದ್ರೆ ನ್ಯಾಯಾಲಯಕ್ಕೆ ಬರಲಿ; ಟಿ.ಬಿ ಜಯಚಂದ್ರ ಬಹಿರಂಗ ಸವಾಲು
ಚಿಕ್ಕಬಳ್ಳಾಪುರ: ಬಿಜೆಪಿ ನಾಯಕರಿಗೆ ಗಂಡಸ್ತನ ಇದ್ದರೆ ನ್ಯಾಯಾಲಯಕ್ಕೆ ಬರಲಿ ಎಂದು ಮಾಜಿ ಸಚಿವ ಟಿ.ಬಿ ಜಯಚಂದ್ರ ಬಹಿರಂಗ ಸವಾಲು ಹಾಕಿದ್ದಾರೆ.
ಕೊರೋನಾ ನಿಯಂತ್ರಣ ಸಂಬಂಧ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮಾಜಿ ಸಚಿವರು ಬಿಜೆಪಿ ನಾಯಕರ ಧೈರ್ಯದ ಬಗ್ಗೆ ಪ್ರಶ್ನೆ ಮಾಡಿದ್ದಾರೆ. ಕೋವಿಡ್ ವಿಚಾರದಲ್ಲಿ ಸಾವಿರಾರು ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಈ ಕುರಿತು ಪ್ರಶ್ನೆ ಮಾಡಿದರೆ ನಮಗೆ ನೋಟೀಸ್ ಕಳುಹಿಸಲಾಗುತ್ತಿದೆ ಎಂದು ಖಡಕ್ ಆಗಿ ಹೇಳಿದರು.
ಕೋವಿಡ್ ವಿಚಾರವಾಗಿ ಸರ್ಕಾರ 4200 ಕೋಟಿ ರೂ. ಖರ್ಚು ಮಾಡಿದ್ದು, ಅದರಲ್ಲಿ ಸರಿ ಸುಮಾರು ಅರ್ಧದಷ್ಟು ಹಣಕ್ಕೆ ಲೆಕ್ಕವೇ ಇಲ್ಲ. ಈ ಬಗ್ಗೆ ಮಾತನಾಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮಾತನಾಡಿದರೆ ಅವರಿಗೆ ಲೀಗಲ್ ನೋಟಿಸ್ ನೀಡಲಾಗಿದೆ ಎಂದು ಚಿಕ್ಕಬಳ್ಳಾಪುರ ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವಾಗ ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243