ದಿನದ ಸುದ್ದಿ

ದಾವಣಗೆರೆ | ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಓರ್ವ ಶಿಕ್ಷಕಿ ಹುದ್ದೆಗೆ ಸಂದರ್ಶನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: 2020-21 ನೇ ಸಾಲಿನಲ್ಲಿ ದಾವಣಗೆರೆ ತಾಲ್ಲೂಕಿನ ದೊಡ್ಡಬಾತಿಯ ಕರ್ನಾಟಕ ಪಬ್ಲಿಕ್ ಶಾಲೆಯ ಪೂರ್ವ ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ ತರಗತಿಯನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮೋದನೆ ದೊರೆತಿದ್ದು, ಪೂರ್ವ ಪ್ರಾಥಮಿಕ ಶಾಲೆಗೆ ಓರ್ವ ಅರ್ಹ ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕಾತಿ ಮಾಡಲು ಜುಲೈ 14 ರಂದು ಬೆಳಿಗ್ಗೆ 11 ಗಂಟೆಗೆ ಸಂದರ್ಶನ ಏರ್ಪಡಿಸಲಾಗಿದೆ.

ಓರ್ವ ಶಿಕ್ಷಕರ ಹುದ್ದೆ ಖಾಲಿ ಇದ್ದು ಮಹಿಳೆಯರಿಗೆ ಮಾತ್ರ ಅವಕಾಶವಿರುತ್ತದೆ. ವಯೋಮಿತಿ 45 ವರ್ಷ ಹಾಗೂ ಮಾಸಿಕ ಸಂಭಾವನೆ ರೂ. 7500 ಇರುತ್ತದೆ. ಅರ್ಜಿ ಸಲ್ಲಿಸುವವರು ಪಿಯುಸಿಯಲ್ಲಿ ಶೇ.50ಬರಷ್ಟು ಅಂಕ ಪಡೆದಿರಬೇಕು ಹಾಗೂ ಡಿಪ್ಲೋಮಾ ಇನ್ ನರ್ಸರಿ ಟೀಚರ್ ಎಜುಕೇಷನ್ ಅಥವಾ ಡಿಪ್ಲೋಮಾ ಇನ್ ಅರ್ಲಿ ಚೈಲ್ಡ್ ಹುಡ್ ಎಜುಕೇಷನ್, ಪ್ರೀ ಸ್ಕೂಲ್ ಎಜುಕೇಷನ್, ಬಿಇಡಿ- ನರ್ಸರಿ ಇವುಗಳಲ್ಲಿ ಯಾವುದಾದರೂ ಒಂದು ಅರ್ಹತೆ ಹೊಂದಿರಬೇಕು.

ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪಿಯುಸಿ ಅಂಕಪಟ್ಟಿ, ಡಿಪ್ಲೋಮಾ ಅಥವಾ ಬಿಇಡಿ ನರ್ಸರಿ ತರಬೇತಿ ಪ್ರಮಾಣಪತ್ರ, ವೃತ್ತಿ ಅನುಭವ ಹೊಂದಿರುವ ಪ್ರಮಾಣಪತ್ರ, ನಿವಾಸಿ ದೃಢೀಕರಣ ಪತ್ರ ಹಾಗೂ ಆಧಾರ್ ಕಾರ್ಡ್ ಪ್ರತಿಗಳನ್ನು ಜುಲೈ 11 ರೊಳಗೆ ಮುಖ್ಯ ಶಿಕ್ಷಕರು, ಪ್ರಾಥಮಿಕ ಶಾಲಾ ವಿಭಾಗ, ಕರ್ನಾಟಕ ಪಬ್ಲಿಕ್ ಶಾಲೆ, ದೊಡ್ಡಬಾತಿ ಇವರಿಗೆ ಈ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ಹಾಗೂ ಸಂದರ್ಶನಕ್ಕೆ ಹಾಜರಾದಾಗ ಕೋವಿಡ್-19 ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು.

ಶಾಲೆಯ 5 ಸದಸ್ಯರ ಆಯ್ಕೆ ಸಮಿತಿಯ ಮೂಲಕ ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಮೊ ಸಂ: 9341460386 ಸಂರ್ಪಕಿಸಬಹುದಾಗಿದೆ ಎಂದು ಕರ್ನಾಟಕ ಪಬ್ಲಿಕ್ ಶಾಲೆ ಪ್ರಾಂಶುಪಾಲರಾದ ಉಷಾ ಕೆ.ಎಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version