ದಿನದ ಸುದ್ದಿ
ಸಹ ಶಿಕ್ಷಕರ ಗ್ರೇಡ್-2 ತಾತ್ಕಾಲಿಕ ಜೇಷ್ಠತಾ ಪಟ್ಟಿ ಪ್ರಕಟ
ಸುದ್ದಿದಿನ,ಚಾಮರಾಜನಗರ: ಮೈಸೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರ ಗ್ರೇಡ್-2 ತಾತ್ಕಾಲಿಕ ಕರಡು ಜೇಷ್ಠತಾ ಪಟ್ಟಿಯನ್ನು ಇಲಾಖೆಯ www.schooleducation.kar.nic.inವೆಬ್‍ಸೈಟ್‍ನಲ್ಲಿ ಪ್ರಕಟಿಸಲಾಗಿದೆ.
ಪ್ರಕಟಿಸಿರುವ ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಸಂಬಂಧಿಸಿದ ಶಿಕ್ಷಕರು ಪರಿಶೀಲಿಸಿಕೊಂಡು ಆಕ್ಷೇಪಣೆಗಳು ಇದ್ದಲ್ಲಿ ಜುಲೈ 20ರೊಳಗೆ ನೇರವಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಹಾಗೂ ಚಾಮರಾಜನಗರ ಕ್ಷೇತ್ರ ಶಿಕ್ಷಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243