ದಿನದ ಸುದ್ದಿ

ಮೇ 19 ರಿಂದ ’ಟೆಕ್ ಭಾರತ್ ಮೇಳ’

Published

on

ಸುದ್ದಿದಿನ ಡೆಸ್ಕ್ : ಮೈಸೂರಿನ ಸಿಎಫ್‌ಟಿಆರ್‌ಐ ಸಹಯೋಗದಲ್ಲಿ ಇದೇ 19ರಿಂದ ಮೂರು ದಿನಗಳ ಕಾಲ ’ಟೆಕ್ ಭಾರತ್ ಮೇಳ’ ಆಯೋಜಿಸಲಾಗಿದೆ. ದೇಶದ ವಿವಿಧ ಆಹಾರ ಹಾಗೂ ತಂತ್ರಜ್ಞಾನ ಕಂಪನಿಗಳ ಪ್ರತಿನಿಧಿಗಳು ಮೇಳದಲ್ಲಿ ಭಾಗಿಯಾಗಲಿದ್ದಾರೆ.

ಸಣ್ಣ ರೈತರಿಗೆ ತಿಳುವಳಿಕೆ ನೀಡುವ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗುವುದು. ಈಗಾಗಲೇ ಈ ಬಗ್ಗೆ ಬೆಂಗಳೂರು, ಬೆಳಗಾವಿ ಮತ್ತು ಮೈಸೂರಿನಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದೆ ಎಂದು ಸಿಎಫ್‌ಟಿಆರ್‌ಐ ನಿರ್ದೇಶಿಕಿ ಡಾ. ಶ್ರೀದೇವಿ ಅನ್ನಪೂರ್ಣ ಸಿಂಗ್ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version