Connect with us

ದಿನದ ಸುದ್ದಿ

ಬಿವಿಬಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಟೆಕ್‌ಪಾರ್ಕ್ ಉದ್ಘಾಟನೆ | ಆರ್ ಆ್ಯಂಡ್ ಡಿ ಹೊಸನೀತಿ ರೂಪಿಸಲು ಕಾರ್ಯಪಡೆ ರಚನೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ,ಹುಬ್ಬಳ್ಳಿ: ಕರ್ನಾಟಕದ ಸಮಗ್ರ ಅಭಿವೃದ್ಧಿಯಲ್ಲಿ ಯುವಜನರ ಪಾತ್ರ ದೊಡ್ಡದು.ಯುವಕರಲ್ಲಿ ವಿದ್ಯೆ,ವ್ಯಕ್ತಿತ್ವ ನಿರ್ಮಾಣ ಮಾಡುವುದು ಸಂಸ್ಥೆ ,ಸರ್ಕಾರಗಳ ಜವಾಬ್ದಾರಿ. ಕಾಲೇಜಿನ ಹಳೆಯ ವಿದ್ಯಾರ್ಥಿಗಳು ವ್ಯಾಸಂಗ ಮಾಡಿದ ಸಂಸ್ಥೆಗೆ,ಸಮಾಜಕ್ಕೆ ಉತ್ತಮ ಮಾನವ ಸಂಪನ್ಮೂಲವಾಗಿ ಕೊಡುಗೆಗಳನ್ನು ಮರಳಿ ನೀಡಬೇಕು.

ಕೆಎಲ್‌ಇ ಸಂಸ್ಥೆಯ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ವಿವಿಧ ಬಹು ಅಧ್ಯಯನ ಶಿಸ್ತುಗಳಲ್ಲಿ ಮಾದರಿಯಾಗಿ ರೂಪುಗೊಂಡಿದೆ.ಕೃಷಿ,ತೈಲ,ಕೈಗಾರಿಕೆ ಮತ್ತಿತರ ಎಲ್ಲಾ ರಂಗಗಳಲ್ಲಿ ಇಂದು ಆರ್ ಆ್ಯಂಡ್ ಡಿ ಅಗತ್ಯವಾಗಿದೆ. ರಾಜ್ಯದಲ್ಲಿ ಸಾರ್ವಜನಿಕ ಹಾಗೂ ಖಾಸಗಿ ವಲಯದ 180 ಆರ್ ಆ್ಯಂಡ್ ಡಿ ಕೇಂದ್ರಗಳಿವೆ.ಅದಕ್ಕೆ ಹೆಚ್ಚು ಮಹತ್ವ ನೀಡಿ,ಕೈಗಾರಿಕೆ,ಕೃಷಿ,ಆಹಾರ ರಂಗದಲ್ಲಿ ಆರ್ ಆ್ಯಂಡ್ ಡಿ ಬಳಕೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಉದ್ದೇಶಿಸಿದೆ.

ಹೊಸ ಆರ್ ಆ್ಯಂಡ್ ಡಿ ನೀತಿ ರಚನೆಗೆ ಕಾರ್ಯಪಡೆ ಅಧ್ಯಕ್ಷರನ್ನಾಗಿ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಅವರನ್ನು ನೇಮಿಸಲು ಚಿಂತನೆ ನಡೆದಿದೆ.ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಕೆಎಲ್‌ಇ ಟೆಕ್‌ಪಾರ್ಕಿನ ಅಭಿವೃದ್ಧಿಗೆ ಅಗತ್ಯವಾಗಿರುವ ಇನ್ನೂ 2 ಕೋಟಿ ರೂ.ಗಳನ್ನು ಹಳೆಯ ವಿದ್ಯಾರ್ಥಿಗಳ ಸಂಘದ ಮೂಲಕ ಕ್ರೋಢೀಕರಿಸಿ ನೀಡಲಾಗುವುದು. ಸ್ಟಾರ್ಟ್ ಅಪ್‌ಗಳ ಉತ್ತೇಜನಕ್ಕಾಗಿ ಹುಬ್ಬಳ್ಳಿ ಮತ್ತು ಕಲಬುರ್ಗಿಯಲ್ಲಿ ಪ್ರಾದೇಶಿಕ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಲ್ಲಿನ ಕೆಎಲ್‌ಇ ತಾಂತ್ರಿಕ ವಿಶ್ವವಿದ್ಯಾಲಯದ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ 75 ನೇ ವರ್ಷಾಚರಣೆ ಹಾಗೂ ಕೆಎಲ್‌ಇ ಟೆಕ್‌ ಪಾರ್ಕ್ ಉದ್ಘಾಟಿಸಿ ಅವರು ಮಾತನಾಡಿದರು.

ಇಂದು ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಸಂಪೂರ್ಣ ಸ್ವರೂಪವೇ ಬದಲಾಗಿದ್ದು, ಮತ್ತೊಮ್ಮೆ ವಿದ್ಯಾರ್ಥಿಯಾಗಿ ಪ್ರವೇಶಪಡೆಯಲು ಮನಸ್ಸಾಗುತ್ತಿದೆ ಎಂದು ತಮಗೆ ವಿದ್ಯೆ ನೀಡಿದ ಸರಸ್ವತಿ ದೇಗುಲದ ಬಗ್ಗೆ ಮನದುಂಬಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು,ತಮಗೆ ಕಲಿಸಿದ ಪ್ರಾಧ್ಯಾಪಕರು,ಹಿರಿಯ-ಕಿರಿಯ ಸಹಪಾಠಿಗಳನ್ನು, ಹಾಜರಾಗದ ಪ್ರಯೋಗಾಲಯಗಳು,ಪುಸ್ತಕ ಪಡೆಯದಗ್ರಂಥಾಲಯಗಳು,ಹಾಸ್ಟೇಲು,ಕ್ಯಾಂಪಸ್,ಕ್ಯಾಂಟೀನ್ ಎಲ್ಲವನ್ನೂ ವಿನೋದವಾಗಿ ನೆನಪಿಸಿಕೊಂಡರು.

ಮುಖ್ಯಮಂತ್ರಿಯಾಗಿ ಕೈಗೊಳ್ಳುವ ಎಲ್ಲಾ ಜನಪರ ಕಾರ್ಯಗಳಲ್ಲಿ ಬಿವಿಬಿ ಕಾಲೇಜು ಕಲಿಸಿದ ಪಾಠಗಳ ಪಾತ್ರ ಇರುತ್ತದೆ. ಆಡಳಿತದಲ್ಲಿ ತಾಂತ್ರಿಕತೆ,ವೈಜ್ಞಾನಿಕತೆ ತರಲು ಉತ್ಸುಕನಾಗಿದ್ದೇನೆ.ಪ್ರತಿ ಹಂತದಲ್ಲಿಯೂ ನನ್ನ ಜ್ಞಾನವನ್ನು ಪ್ರಸ್ತುತ ಸಂಶೋಧನೆಗಳೊಂದಿಗೆ ತಾಳೆ ಮಾಡಿ ಪರೀಕ್ಷಿಸಿಕೊಳ್ಳುತ್ತಿರುತ್ತೇನೆ.

ಸಾರ್ವಜನಿಕ ಉಪಯೋಗ, ಸಂಕೇತಗಳ ರವಾನೆಗೆ ವೈರ್‌ಲೆಸ್ ತಂತ್ರಜ್ಞಾನ,ಇಲೆಕ್ಟ್ರಿಕಲ್,ಇಲೆಕ್ಟ್ರಾನಿಕ್ಸ್,ಸಾಫ್ಟವೇರ್ ಕ್ಷೇತ್ರಗಳ ಅತ್ಯಾಧುನಿಕ ವಿದ್ಯೆ ,ಸಂಶೋಧನೆಗಳಲ್ಲಿ ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜು ಮಹತ್ವದ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಹಿಂದೆ ನಾನು ವಿದ್ಯಾರ್ಥಿಯಾಗಿದ್ದಾಗ ಕರ್ನಾಟಕ ವಿವಿ ಕುಲಪತಿಗಳಾಗಿದ್ದ ಡಾ.ಡಿ.ಎಂ.ನಂಜುಂಡಪ್ಪ ಅವರ ಕಾಠಿಣ್ಯ,ಶಿಸ್ತು,ಬದ್ಧತೆಯಿಂದ ನಮ್ಮ ವ್ಯಾಸಂಗ ಪೂರ್ಣವಾಗಲು ಸಾಧ್ಯವಾಯಿತು.

ಉತ್ತಮ ಭೂತಕಾಲವಷ್ಟೇ ಅಲ್ಲ ಉಜ್ವಲ ಭವಿಷ್ಯ ರೂಪಿಸಿಕೊಳ್ಳುವುದು ಅಷ್ಟೇ ಮುಖ್ಯ. ರಾಜಕೀಯವೂ ಒಂದು ವಿಜ್ಞಾನವೇ ಆಗಿದೆ ಅಲ್ಲಿಯೂ ವೈಜ್ಞಾನಿಕ ವಿಧಾನಗಳಿವೆ.ತಾಂತ್ರಿಕ ಹಾಗೂ ವೈಜ್ಞಾನಿಕ ಸಂಶೋಧನೆಗಳನ್ನು ರಾಜತಾಂತ್ರಿಕವಾಗಿ ಬಳಸುವುದು ರಾಜಕೀಯ ವಿಜ್ಞಾನವಾಗಿದೆ.

ಎಲ್ಲಾ ದೇಶಗಳು ಈ ನೀತಿ ಪಾಲಿಸಬೇಕು‌.ಕರ್ತವ್ಯವನ್ನು ನೈತಿಕತೆಯ ತಳಹದಿಯೊಂದಿಗರವಕಾಯಕದ ರೀತಿಯಲ್ಲಿ ನಿರ್ವಹಿಸಬೇಕು.ದೇಶದ ಬಡತನ,ಆರೋಗ್ಯ,ಶಿಕ್ಷಣ,ಆರ್ಥಿಕ ಸವಾಲುಗಳನ್ನು ಅರಿಯಲು ನಾವು ಸದಾ ಕಾಲ ಜನರ ನಡುವೆ ಇರಬೇಕು,ಅದೇ ಜನರ,ಜನಪರ ರಾಜಕೀಯವಾಗಿದೆ.
ಪ್ರಧಾನಮಂತ್ರಿಗಳು ಸಕ್ಕರೆ ಕಾರ್ಖಾನೆಗಳಲ್ಲಿ ಇಥೆನಾಲ್ ಉತ್ಪಾದನೆಗೆ ಶೇ.20 ರಷ್ಟು ಅವಕಾಶ ನೀಡಿದ್ದಾರೆ.ಮುರುಗೇಶ್ ನಿರಾಣಿ ಅವರ ಇದರ ಸದುಪಯೋಗ ಪಡೆದವರಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದರು.

ಇದನ್ನೂ ಓದಿ |ಸರ್ಕಾರಿ ನೌಕರರ ವೇತನ ನಿಗದಿಗೆ ನೂತನ ಆಯೋಗ ರಚನೆಯಾಗಲಿದೆ

ಬೃಹತ್ ,ಮಧ್ಯಮ ಕೈಗಾರಿಕೆ ಸಚಿವರಾದ ಮುರುಗೇಶ್ ನಿರಾಣಿ ಮಾತನಾಡಿ,ಬಿ.ವಿ.ಭೂಮರಡ್ಡಿ ಇಂಜಿನಿಯರಿಂಗ್ ಕಾಲೇಜಿನ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿಯವರೊಂದಿಗೆ ಹಂಚಿಕೊಳ್ಳುತ್ತಿರುವುದು, ತವರಿಗೆ ಬಂದಿರುವ ಸಂತಸದ ಭಾವನೆ ಮೂಡಿಸಿದೆ.ಕೆಎಲ್‌ಇ ಸಪ್ತರ್ಷಿಗಳ ಪ್ರಯತ್ನದಿಂದ ಈ ಭಾಗದಲ್ಲಿ ಶಿಕ್ಷಣದ ಕ್ರಾಂತಿಯಾಗಲು,ವಿಶೇಷವಾಗಿ ಮಹಿಳೆಯರು ತಾಂತ್ರಿಕ ಶಿಕ್ಷಣ ಪಡೆಯಲು ಸಾಧ್ಯವಾಗಿದೆ.

3-4 ದಶಕಗಳ ಹಿಂದೆ ಕೇವಲ ಸುಮಾರು 500 ರಿಂದ 600 ವಿದ್ಯಾರ್ಥಿಗಳಿದ್ದ ಈ ಕಾಲೇಜು ಇಂದು ಸಾಕಷ್ಟು ಅಭಿವೃದ್ಧಿ ಹೊಂದಿದೆ.ಸುಮಾರು 6 ಸಾವಿರ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಇಲ್ಲಿನ ವಿದ್ಯಾರ್ಥಿಗಳು ಕೇವಲ ಉದ್ಯೋಗಿಗಳಾಗದೇ ಮತ್ತೊಬ್ಬರಿಗೆ ಕೆಲಸ ನೀಡುವ ಉದ್ಯಮಪತಿಗಳಾಗಬೇಕು .ಸರ್ಕಾರ ಅನೇಕ ಪ್ರೋತ್ಸಾಹಕ ಯೋಜನೆಗಳ ಪ್ರಯೋಜನ ಪಡೆಯಬೇಕು .ಅಕ್ಟೋಬರ್ 15 ರಿಂದ ತಮ್ಮ ನಿರಾಣಿ ಸಮೂಹ ಸಂಸ್ಥೆಗಳ ಉದ್ಯಮ ಘಟಕಗಳು ಪುನರಾರಂಭ ಮಾಡಲಿವೆ.ಕಾಲೇಜಿನ ವಿದ್ಯಾರ್ಥಿಗಳು ಅಲ್ಲಿಗೆ ಭೇಟಿ ನೀಡಿ ಸ್ಫೂರ್ತಿ ಪಡೆಯಲಿ ಎಂದರು.

ಸಮಾರಂಭದ ಅಧ್ಯಕ್ಷತೆವಹಿಸಿದ್ದ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ್ ಕೋರೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಕೆಎಲ್ಇ ಸಂಸ್ಥೆ ಹಾಗೂ ಬಿವಿಬಿ ಇಂಜಿನಿಯರಿಂಗ್ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘದಿಂದ , ಸಂಸ್ಥೆಯ ಹಳೆಯ ವಿದ್ಯಾರ್ಥಿಗಳೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವ ಮುರುಗೇಶ್ ನಿರಾಣಿ ಅವರನ್ನು ಸನ್ಮಾನಿಸಲಾಯಿತು.

ಕೈಮಗ್ಗ,ಜವಳಿ ,ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ್ ಪಾಟೀಲ ಮುನೇನಕೊಪ್ಪ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕೆಎಲ್‌ಇ ತಾಂತ್ರಿಕ ವಿವಿ ಉಪಕುಲಪತಿ ಡಾ.ಅಶೋಕ ಶೆಟ್ಟರ್ ಸ್ವಾಗತಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂದಿನಿಂದ ಏ.3 ರವರೆಗೆ ಸೂಳೆಕೆರೆಗೆ ನೀರು ಬಿಡುಗಡೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ದಾವಣಗೆರೆ: ಭದ್ರಾ ಜಲಾಶಯ ಯೋಜನೆ ವ್ಯಾಪ್ತಿಗೆ ಬರುವ ದೇವರಬೆಳಕೆರೆ ಪಿಕ್‍ಅಪ್ ಅಣೆಕಟ್ಟಿನ ಸ್ಕವರಿಂಗ್ ಸ್ಪೂಯೀಸ್ ಗೇಟ್ ಮುಖಾಂತರ ಜಲಾಶಯದ ಡೆಡ್ ಸ್ಟೋರೇಜ್ ನೀರನ್ನು ಸೂಳೆಕೆರೆ ಹಳ್ಳಕ್ಕೆ ಮಾರ್ಚ್ 28 ರಿಂದ ಏಪ್ರಿಲ್ 3 ರವರೆಗೆ ಪ್ರತಿದಿನ 20 ಕ್ಯೂಸೆಕ್ಸ್‍ಗಳಲ್ಲಿ ಜನ-ಜಾನುವಾರು ಪಕ್ಷಿಗಳಿಗೆ ಕುಡಿಯುವ ನೀರು ಒದಗಿಸಲು ಹಾಗೂ ಅಕ್ಕಪಕ್ಕದ ಗ್ರಾಮಗಳ ಕುಡಿಯುವ ನೀರಿನ ಉದ್ದೇಶಕ್ಕೆ ಬಿಡಲಾಗುತ್ತಿದೆ.

ಈ ವೇಳೆ ಹಳ್ಳಕ್ಕೆ ದನ ಕರಗಳನ್ನು ಇಳಿಸುವುದಾಗಲಿ, ಪಂಪ್‍ಸೆಟ್‍ಗಳಿಂದ ನೀರೆತ್ತುವುದುನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಕನೀನಿನಿ ಕಾರ್ಯಪಾಲಕ ಇಂಜಿನಿಯರ್ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಕೆಗೆ ಇಂದು ಕೊನೆಯ ದಿನ

Published

on

ಸುದ್ದಿದಿನ ಡೆಸ್ಕ್ : ಲೋಕಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.

ನಾಳೆ ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಇದೇ 30 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಇದೇ ವೇಳೆ ಬಿಹಾರದಲ್ಲಿ ನಾಮಪತ್ರ ಸಲ್ಲಿಕೆಗೆ ನಾಳೆ ಕಡೆ ದಿನವಾಗಿದ್ದು, ಈ ತಿಂಗಳ 30 ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಏಪ್ರಿಲ್ 2ರಂದು ನಾಮತ್ರ ಹಿಂಪಡೆಯುವಿಕೆಗೆ ಕೊನೆಯ ದಿನವಾಗಿರುತ್ತದೆ.

ಏಪ್ರಿಲ್ 19 ರಂದು 17 ರಾಜ್ಯಗಳು ಮತ್ತು ನಾಲ್ಕು ಕೇಂದ್ರಾಡಳಿತ ಪ್ರದೇಶಗಳಲ್ಲಿನ 102ಲೋಕಸಭಾ ಕ್ಷೇತ್ರಗಳಿಗೆ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಅದರಂತೆ ತಮಿಳುನಾಡಿನಲ್ಲಿ 39, ರಾಜಸ್ಥಾನದಲ್ಲಿ 12, ಉತ್ತರ ಪ್ರದೇಶದಲ್ಲಿ 8, ಮಧ್ಯಪ್ರದೇಶದಲ್ಲಿ 6, ಉತ್ತರಾಖಂಡ, ಅಸ್ಸಾಂ ಮತ್ತು ಮಹಾರಾಷ್ಟ್ರದಲ್ಲಿ ತಲಾ 5 , ಬಿಹಾರದಲ್ಲಿ 4, ಪಶ್ಚಿಮ ಬಂಗಾಳದಲ್ಲಿ 3, ಅರುಣಾಚಲ ಪ್ರದೇಶ, ಮಣಿಪುರ, ಮೆಘಾಲಯದಲ್ಲಿ ತಲಾ 2 ಮತ್ತು ಛತ್ತೀಸ್‌ಗಢ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ, ತ್ರಿಪುರ, ಅಂಡಮಾನ್-ನಿಕೋಬಾರ್ ದ್ವೀಪಗಳು, ಜಮ್ಮು-ಕಾಶ್ಮೀರ, ಲಕ್ಷದ್ವೀಪ ಮತ್ತು ಪುದುಚೇರಿಯಲ್ಲಿ ತಲಾ ಒಂದು ಕ್ಷೇತ್ರದಲ್ಲಿ ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ.

ಎರಡನೇ ಹಂತದಲ್ಲಿ 89 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ನಾಳೆ ಅಧಿಸೂಚನೆ ಹೊರಡಿಸಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಅಕ್ರಮ ; ಸಾರ್ವಜನಿಕರು ದೂರು ಸಲ್ಲಿಸಲು ಆಯೋಗದಿಂದ ಸಿ-ವಿಜಿಲ್ ಆಪ್ ಅಭಿವೃದ್ಧಿ

Published

on

ಸುದ್ದಿದಿನ ಡೆಸ್ಕ್ : 18ನೇ ಲೋಕಸಭೆಗೆ ಸದಸ್ಯರನ್ನು ಆಯ್ಕೆ ಮಾಡಲು ನಡೆಯಲಿರುವ ಸಾರ್ವತ್ರಿಕ ಚುನಾವಣೆಗೆ ಭಾರತ ಚುನಾವಣಾ ಆಯೋಗ, ಸಕಲ ಸಿದ್ಧತೆಯೊಂದಿಗೆ ಸಜ್ಜಾಗಿದೆ.

ದೇಶದಲ್ಲಿ ಚುನಾವಣೆಗಳನ್ನು ಪಾರದರ್ಶಕವಾಗಿ ಹಾಗೂ ಅತ್ಯಂತ ವಿಶ್ವಾಸಾರ್ಹ ರೀತಿಯಲ್ಲಿ ನಡೆಸುವ ಸಂಕಲ್ಪದೊಂದಿಗೆ ಚುನಾವಣಾ ಆಯೋಗ, ಸಮಸ್ತ ಚುನಾವಣಾ ಪ್ರಕ್ರಿಯೆಗಳನ್ನು ಸುಗಮಗೊಳಿಸಲು ತಂತ್ರಜ್ಞಾನದ ನೆರವನ್ನು ಬಳಸಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ಮತದಾರರು, ಚುನಾವಣಾ ಸಿಬ್ಬಂದಿ ಹಾಗೂ ಆಯೋಗಕ್ಕೆ ನೆರವಾಗುವ ಹಲವು ಆಪ್‌ಗಳನ್ನು ಚುನಾವಣಾ ಆಯೋಗ ಅಭಿವೃದ್ಧಿಪಡಿಸಿದೆ.

ಈ ಪೈಕಿ ಇಂದು ಸಿ-ವಿಜಿಲ್ ಆಪ್ ಬಗ್ಗೆ ಮಾಹಿತಿ.
ದೇಶದಲ್ಲಿ ಚುನಾವಣೆಗಳ ವೇಳೆ ನಡೆಯುವ ಅಕ್ರಮಗಳು, ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳ ಮೇಲೆ ಕಣ್ಣಿಡುವುದು ಕೇವಲ ಚುನಾವಣಾ ಸಿಬ್ಬಂದಿಯ ಕೆಲಸವಲ್ಲ. ಇದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಹೌದು. ಹಾಗಾಗಿ ಚುನಾವಣಾ ಅಕ್ರಮಗಳ ಬಗ್ಗೆ ಸಾರ್ವಜನಿಕರು ಆಯೋಗಕ್ಕೆ ದೂರು ತಲುಪಿಸಲು ಭಾರತ ಚುನಾವಣಾ ಆಯೋಗ ಸಿ-ವಿಜಿಲ್ ಆಪ್ ಅನ್ನು ಅಭಿವೃದ್ಧಿ ಪಡಿಸಿದೆ.

ದೂರುಗಳನ್ನು ಆನ್‌ಲೈನ್ ಮೂಲಕ ಆಯೋಗಕ್ಕೆ ರವಾನಿಸಲು ಈ ಆಪ್ ನೆರವಾಗುವುದು. ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಧ್ವನಿಮುದ್ರಣ, ವಿಡಿಯೋ ಚಿತ್ರದ ತುಣುಕುಗಳು ಮತ್ತು ಫೋಟೊ ಮೊದಲಾದ ದಾಖಲೆಗಳನ್ನು ಸಾರ್ವಜನಿಕರು ಇದರ ಮೂಲಕ ಕಳುಹಿಸಬಹುದು.

ಚುನಾವಣೆಗಳಲ್ಲಿ ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಮಾಡುವ ಖರ್ಚು-ವೆಚ್ಚ, ಮತದಾರರ ಮನವೊಲಿಕೆಗೆ ಆಮಿಷಗಳ ಬಳಕೆ ಮೊದಲಾದ ಅಕ್ರಮಗಳ ಬಗ್ಗೆ ದೂರು ನೀಡಲು ಇದನ್ನು ಬಳಸಬಹುದು. ಒಂದುನೂರು ನಿಮಿಷಗಳಲ್ಲಿ ಚುನಾವಣಾಧಿಕಾರಿಗಳು ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ.

ದೇಶದ ಯಾವ ಮೂಲೆಯಲ್ಲೇ ಆಗಲಿ ನಡೆಯುವ ಚುನಾವಣಾ ಅಕ್ರಮ ಅಥವಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಬಗ್ಗೆ ತಾವು ನೀಡಿದ ದೂರುಗಳನ್ನು ಆಯೋಗ ಪರಿಗಣಿಸಿದೆಯೇ ಎನ್ನುವ ವಿವರಗಳನ್ನು ಸಹ ಸಾರ್ವಜನಿಕರು ಸಿ-ವಿಜಿಲ್-ಆಪ್ ಮೂಲಕ ವೀಕ್ಷಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending