ದಿನದ ಸುದ್ದಿ
ಉಗ್ರರ ಮೇಲೆ ಗುಂಡಿನ ದಾಳಿ; ಸೈನಿಕ ಸಾವು, ಮತ್ತೊಬ್ಬನಿಗೆ ಗಾಯ

ಸುದ್ದಿದಿನ ದಾವಣಗೆರೆ: ದಕ್ಷಿಣ ಕಾಶ್ಮೀರದಲ್ಲಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಭಾರತೀಯ ಸೈನಿಕನೊಬ್ಬ ಮೃತಪಟ್ಟಿದ್ದು, ಮತ್ತೊಬ್ಬ ಸೈನಿಕ ಗಾಯಗೊಂಡಿದ್ದಾರೆ. ಕಳೆದೊಂದು ವಾರದಲ್ಲಿ ಎರಡನೇಯ ಪ್ರಕರಣವಾಗಿದೆ.
ಲುರಾಗಮ್ನಲ್ಲಿನ 42 RR ಕ್ಯಾಂಪ್ ಮೇಲೆ ಸ್ನಿಪರ್ ರೈಫಲ್ ನಿಂದ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಸಿಪಾಯಿ ನಾಗಾಮಿ ಲಿಯಾನಾ (Ngamsiamliana) ಹತ್ಯೆಯಾಗಿದ್ದಾರೆ. ಕ್ಯಾಂಪ್ನಲ್ಲಿ ಗಾರ್ಡಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಯೋಧನ ಹಣೆಗೆ ಗುಂಡೇಟು ಬಿದ್ದಿದ್ದು, ಮತ್ತೊಬ್ಬ ಯೋಧನಿಗೆ ಸಣ್ಣ ಗಾಯಗಳಾಗಿವೆ.

ದಿನದ ಸುದ್ದಿ
ಗೃಹಲಕ್ಷ್ಮಿ ಯೋಜನೆಗೆ 1 ಕೋಟಿಗೂ ಹೆಚ್ಚು ಅರ್ಜಿಗಳ ನಿರೀಕ್ಷೆ : ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನ, ಬೆಂಗಳೂರು: ಗೃಹಲಕ್ಷ್ಮೀ ಯೋಜನೆಯಡಿ 1 ಕೋಟಿ 30 ಲಕ್ಷ ಅರ್ಜಿಗಳು ಬರುವ ನಿರೀಕ್ಷೆ ಇದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಬೆಂಗಳೂರಿನಲ್ಲಿಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿನ 898 ನಾಡಕಚೇರಿಗಳೂ ಸೇರಿದಂತೆ ಬಾಪೂಜಿ ಸೇವಾಕೇಂದ್ರ, ಗ್ರಾಮ-2, ಬೆಂಗಳೂರು-1ಮೂಲಕ ನೇರವಾಗಿ ಅರ್ಜಿ ಸಲ್ಲಿಸಬಹುದು. ಸೇವಾಸಿಂಧು ಹಾಗೂ ಇದೇ ಉದ್ದೇಶಕ್ಕಾಗಿ ಅಭಿವೃದ್ಧಿಪಡಿಸಲಾಗುತ್ತಿರುವ ಆಪ್ ಮೂಲಕವೂ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದೆಂದು ಸಚಿವರು ಹೇಳಿದ್ದಾರೆ.
ರಾಜ್ಯ ಸರ್ಕಾರ ಘೋಷಿಸಿರುವ ಗೃಹಲಕ್ಷ್ಮಿ ಯೋಜನೆಯ ಅರ್ಜಿಯ ಕರಡು ಪ್ರತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆ ಅರ್ಜಿ ಇನ್ನೂ ಅಂತಿಮವಾಗಿಲ್ಲ. ಅದರಲ್ಲಿ ಸಾಕಷ್ಟು ಬದಲಾವಣೆಗಳು ಆಗಲಿದ್ದು, ಅಂತಿಮ ಅರ್ಜಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಶಿಷ್ಯವೇತನಕ್ಕೆ ಪರಿಶಿಷ್ಟ ಜಾತಿಯ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಪ್ರಸಕ್ತ ಸಾಲಿಗೆ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಜಿಲ್ಲೆಯ ಪರಿಶಿಷ್ಟ ಜಾತಿ ಕಾನೂನು ಪದವೀಧರರಿಗೆ ಶಿಷ್ಯವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 15 ಕೊನೆಯದಿನವಾಗಿರುತ್ತದೆ. ಆನ್‍ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಸಂಬಂಧಿಸಿದ ತಾಲ್ಲೂಕುಗಳ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ www.sw.kar.nic.in ಅಥವಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರ ಕಚೇರಿ ಸಂಪರ್ಕಿಸಲು ಉಪನಿರ್ದೇಶಕ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹಜ್ಯೋತಿ ಆಗಸ್ಟ್ 1 ರಂದು ಜಾರಿಗೆ ಸಿದ್ಧತೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಸುದ್ದಿದಿನ, ಬೆಂಗಳೂರು: ರಾಜ್ಯದಲ್ಲಿ 200 ಯೂನಿಟ್‌ವರೆಗೆ ಉಚಿತ ವಿದ್ಯುತ್ ನೀಡುವ ’ಗೃಹಜ್ಯೋತಿ’ ಯೋಜನೆ ಆಗಸ್ಟ್ 1 ರಂದು ಹಾಗೂ ಮನೆ ಯಜಮಾನಿಗೆ 2ಸಾವಿರ ರೂಪಾಯಿ ಅವರ ಖಾತೆಗೆ ಹಾಕುವ ’ಗೃಹ ಲಕ್ಷ್ಮಿ’ ಯೋಜನೆಗೆ ಆಗಸ್ಟ್ 17 ಅಥವಾ 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಗೃಹ ಜ್ಯೋತಿ ಯೋಜನೆ ಹಾಗೂ ಗೃಹ ಲಕ್ಷ್ಮಿ ಯೋಜನೆ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದರು.
ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು ಎಂದು ಅವರು ಹೇಳಿದರು. ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗೃಹಜ್ಯೋತಿ, ಉಚಿತ ವಿದ್ಯುತ್ ಯೋಜನೆ ಬಾಡಿಗೆದಾರರಿಗೂ ಅನ್ವಯಿಸುತ್ತಿದ್ದು, ಯೋಜನೆಯ ಅನುಷ್ಠಾನಕ್ಕೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಗೃಹಲಕ್ಷ್ಮಿಯ ಯೋಜನೆಯ ಲಾಭ ಪಡೆಯಲು ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿರುವವರು ಅರ್ಜಿ ಸಲ್ಲಿಸಬಹುದಾಗಿದೆ. ತೆರಿಗೆ ಪಾವತಿಸುವವರು ಹಾಗೂ ಜಿಎಸ್‌ಟಿ ನೋಂದಣಿ ಮಾಡಿಕೊಂಡಿರುವವರು ಈ ಯೋಜನೆಯ ವ್ಯಾಪ್ತಿಗೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಲೈಫ್ ಸ್ಟೈಲ್5 days ago
ರಣ ಬೇಟೆಗಾರ ‘ಕೆನ್ನಾಯಿ’ ವಿನಾಶವಾದ ಕತೆ..!
-
ದಿನದ ಸುದ್ದಿ6 days ago
ನಾಳೆ ದಾವಣಗೆರೆಗೆ ಸಿಎಂ ಸಿದ್ದರಾಮಯ್ಯ
-
ದಿನದ ಸುದ್ದಿ5 days ago
ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ಡಿ.ಇ.ಎಲ್.ಇ.ಡಿ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಜೂನ್ 8 ರಿಂದ ಕೋಳಿ ಸಾಕಾಣಿಕೆ ತರಬೇತಿ ಶಿಬಿರ
-
ದಿನದ ಸುದ್ದಿ7 days ago
ದಾವಣಗೆರೆ | ಶತಮಾನದ ಕೆ.ಆರ್.ಪೇಟೆ ಸರ್ಕಾರಿ ಶಾಲೆಗೆ ಡಿಸಿ ಶಿವಾನಂದ ಕಾಪಶಿ ಭೇಟಿ ; ಕಟ್ಟಡದ ಗುಣಮಟ್ಟದ ವರದಿ ನೀಡಲು ಇಂಜಿನಿಯರ್ಗೆ ಸೂಚನೆ
-
ದಿನದ ಸುದ್ದಿ5 days ago
ಒಡಿಶಾದಲ್ಲಿ ಸಿಲುಕಿರುವ ಕನ್ನಡಿಗರು ಇಂದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ಆಗಮನ
-
ದಿನದ ಸುದ್ದಿ5 days ago
ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ಕ್ರೀಡಾಪಟುಗಳ ಆಯ್ಕೆ