ದಿನದ ಸುದ್ದಿ
ಪಠ್ಯ ಪುಸ್ತಕ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಕೂಡಲೇ ವಿಸರ್ಜಿಸಿ : ಕರವೇ ನಾರಾಯಣ ಗೌಡ
ಸುದ್ದಿದಿನ, ಬೆಂಗಳೂರು : ಕರ್ನಾಟಕದ ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು ಬಗೆಹರಿಸಬೇಕು ಎಂದು ಪತ್ರಿಕಾ ಪ್ರಕಟಣೆ ಹೇಳಿಕೆಯಲ್ಲಿ ಮನವಿಮಾಡಿದ್ದಾರೆ.
ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ ಎಂದು ಕಿಡಿಕಾರಿದ್ದಾರೆ.
ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾಗದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಡಿಕೊಂಡು ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕನ್ನಡದ್ರೋಹದ ಕೆಲಸವನ್ನೇ ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ.
ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು ಎಂದು ಸೂಚಿಸಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು ಬಗೆಹರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ.
ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ. ಅವರಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೊತ್ಸಾಹಧನಕ್ಕೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ಕೋರ್ಸುಗಳಾದ ದ್ವಿತೀಯ ಪಿ.ಯು.ಸಿ. ಮತ್ತು ಪದವಿ ,ಸ್ನಾತಕೋತ್ತರ ಪದವಿ ವಾರ್ಷಿಕ ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಗೆ ಪ್ರೊತ್ಸಾಹಧನ ನೀಡಲು ಅನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅಸಕ್ತ ಅಭ್ಯರ್ಥಿಗಳು ಸಮಾಜ ಕಲ್ಯಾಣ ಇಲಾಖಾ www.sw.kar.nic.in ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಿ. ಅರ್ಜಿ ಹಾಕಿದ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಪ್ರಾಂಶುಪಾಲರ ದೃಢೀಕರಣದೊಂದಿಗೆ ಆಯಾ ತಾಲ್ಲೂಕಿನ ವಿದ್ಯಾರ್ಥಿಗಳು ತಮ್ಮ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬೇಕು ಜಂಟಿ ನಿರ್ದೇಶಕಾರಾದ ನಾಗರಾಜ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಸತಿ ಯೋಜನೆ ; ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪಾಲಿಕೆ ವ್ಯಾಪ್ತಿಯಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಹಾಗೂ ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಳ್ಳುವ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ ಉತ್ತರ ಮತ್ತು ದಕ್ಷಿಣ ಕ್ಷೇತ್ರ ವ್ಯಾಪ್ತಿಯಲ್ಲಿರುವ ಶಿಥಿಲವಾಗಿರುವ ಮನೆಗಳು ಹಾಗೂ ಖಾಲಿ ನಿವೇಶನ ಹೊಂದಿರುವವರು ಅರ್ಜಿ ಸಲ್ಲಿಸಬಹುದು.
ವಾಜಪೇಯಿ ವಸತಿ ಯೋಜನೆಯಡಿ ಸಾಮಾನ್ಯದಡಿ 177 ಮನೆಗಳು ಲಬ್ಯವಿದ್ದು ಸಹಾಯಧನವಾಗಿ ರೂ.2.70 ಲಕ್ಷ ಮತ್ತು ಡಾ; ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆಯಡಿ ಪರಿಶಿಷ್ಟ ಪಂಗಡದ 18 ಮನೆಗಳು ಲಭ್ಯವಿದ್ದು ರೂ.3.50 ಲಕ್ಷ ಸಹಾಯಧನ ನೀಡಲಾಗುತ್ತದೆ.
ಆಸಕ್ತರು ಗಂಡ, ಹೆಂಡತಿ ಇಬ್ಬರ ಆಧಾರ್, ರೇಷನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಜಾತಿ ಮತ್ತು ಆದಾಯ ಪತ್ರ, ಬ್ಯಾಂಕ್ ಪಾಸ್ ಬುಕ್, ಚಾಲ್ತಿ ಇ-ಸ್ವತ್ತು, ಇಸಿ ನಕಲು, 2 ಭಾವಚಿತ್ರ ಪ್ರತಿಯೊಂದಿಗೆ ಪಾಲಿಕೆಯಲ್ಲಿ ಅರ್ಜಿ ಸಲ್ಲಿಸಲು ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಅ.9 ರಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಅಹವಾಲು ಸ್ವೀಕಾರ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಎಂ.ಎಸ್ ಕೌಲಾಪೂರೆ ಅವರು ಅಕ್ಟೋಬರ್ 9 ರಂದು ಬೆಳಗ್ಗೆ 11 ರಿಂದ 1 ಗಂಟೆಯವರೆಗೆ ಹೊನ್ನಾಳಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸುವರು.ಸಾರ್ವಜನಿಕರು ವಿವಿಧ ಇಲಾಖೆಗಳಿಗೆ ಸಲ್ಲಿಸಿದ ಅರ್ಜಿಗಳನ್ನು ವಿಲೇ ಮಾಡದೇ ಬಾಕಿ ಇಟ್ಟಿರುವ ಕುರಿತ ದೂರುಗಳನ್ನು ಸಲ್ಲಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಗ್ರಾಮಾಂತರ ಕೈಗಾರಿಕಾ ಇಲಾಖೆಯಿಂದ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಎಂಬ್ರಾಯ್ಡರಿ ಮತ್ತು ಆರಿ ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ6 days ago
ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಗೆ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ
-
ದಿನದ ಸುದ್ದಿ6 days ago
ಗನ್ ಮಿಸ್ ಫೈರ್ | ಬಾಲಿವುಡ್ ನಟ ಗೋವಿಂದ ಆಸ್ಪತ್ರೆಗೆ ದಾಖಲು
-
ದಿನದ ಸುದ್ದಿ6 days ago
ಈ ದಿನ ಅಂತರಾಷ್ಟ್ರೀಯ ಹಿರಿಯ ನಾಗರಿಕರ ದಿನ
-
ದಿನದ ಸುದ್ದಿ6 days ago
ದಿವಾಕರ. ಡಿ ಮಂಡ್ಯ ಅವರಿಗೆ ಪಿ ಎಚ್ ಡಿ ಪದವಿ
-
ದಿನದ ಸುದ್ದಿ6 days ago
ನಾಲ್ಕನೇ ಮದುವೆಗೆ ಸಜ್ಜಾದ್ರು ನಟಿ ವನಿತಾ ವಿಜಯಕುಮಾರ್
-
ದಿನದ ಸುದ್ದಿ6 days ago
ಚಿನ್ನದ ಬೆಲೆ ಇಳಿಕೆ