ಕ್ರೀಡೆ
ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿ; ಪಿ.ವಿ. ಸಿಂಧು ಸೆಮಿಫೈನಲ್ಸ್ ಪ್ರವೇಶ
ಸುದ್ದಿದಿನ ಡೆಸ್ಕ್ : ಬ್ಯಾಂಕಾಕ್‌ನಲ್ಲಿ ನಡೆಯುತ್ತಿರುವ ಥಾಯ್ಲೆಂಡ್ ಓಪನ್ ಬ್ಯಾಡ್ಮಿಂಟನ್ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಎರಡು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ, ಭಾರತದ ಪಿ.ವಿ. ಸಿಂಧು ಸೆಮಿಫೈನಲ್ಸ್ ಪ್ರವೇಶಿಸಿದ್ದಾರೆ.
ನಿನ್ನೆ ನಡೆದ ಕ್ವಾರ್ಟರ್‌ಫೈನಲ್ ಪಂದ್ಯದಲ್ಲಿ ಸಿಂಧು, ಜಪಾನಿನ ಎರಡನೇ ಶ್ರೇಯಾಂಕಿತ ಆಟಗಾರ್ತಿ ಅಕಾನೆ ಯಮಗುಚಿ ವಿರುದ್ಧ 21-15,20-22,21-13ಅಂಕಗಳಿಂದ ಜಯಗಳಿಸಿ ಮುನ್ನಡೆ ಸಾಧಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243