ಸಿನಿ ಸುದ್ದಿ
‘ಡಿ ಬಾಸ್’ ತಂಗಿಯಾಗಿ ಅಮೂಲ್ಯ..!
ಸುದ್ದಿದಿನ ಡೆಸ್ಕ್: ಮದುವೆ ಯಾದ ನಂತರ ಅತಿಥಿ ಪಾತ್ರಗಳಿಗಷ್ಟೆ ಸೀಮಿತರಾಗಿದ್ದ ನಟಿ ಅಮೂಲ್ಯ, ಈಗ ನಟ ದರ್ಶನ್ ಚಿತ್ರದಲ್ಲಿ ಮುಖ್ಯ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ.
ತಮಿಳಿನ ‘ವೇದಾಲಂ’ ಸಿನಿಮಾ ಕನ್ನಡಕ್ಕೆ ರೀಮೇಕ್ ಆಗುತ್ತಿದ್ದು, ನಟಿ ಅಮೂಲ್ಯ ಅವರು ದರ್ಶನ್ ಅವರ ತಂಗಿಯಾಗಿ ನಟಿಸುತ್ತಿದ್ದಾರೆ.
ಅಮೂಲ್ಯ ಅವರು ಮುಗುಳು ನಗೆ ಚಿತ್ರದಲ್ಲಿ ಗಣೇಶ್ ಅವರೊಂದಿಗೆ ಲೀಡ್ ರೋಲ್ನಲ್ಲಿ ನಟಿಸಿದ್ದರು. ಮೂವರು ನಾಯಕಿಯರಿದ್ದರಿಂದ ಅಮೂಲ್ಯ ಪಾತ್ರ ಹೈಲೈಟ್ ಆಗಿರಲಿಲಲ್ಲ.
ಈ ಹಿಂದೆ ದರ್ಶನ್ ಅವರ ಪ್ರೊಡಕ್ಷನ್ ನಲ್ಲಿ ಮೂಡಿಬಂದ ‘ಮದುವೆಯ ಮಮತೆಯ ಕರೆಯೋಲೆ’ ಸಿನಿಮಾದಲ್ಲಿ ಅವರು ನಾಯಕಿಯಾಗಿ ನಟಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401
ದಿನದ ಸುದ್ದಿ
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
ಗುರುಪ್ರಸಾದ್ ಮೇಲೆ ಸಾಲು ಸಾಲು ಚೆಕ್‌ಬೌನ್ಸ್ ಕೇಸ್‌ಗಳಿದ್ದವು. ಸಿಕ್ಕ ಸಿಕ್ಕವರ ಬಳಿ ಸಾಲ ಮಾಡಿಕೊಂಡಿದ್ದರು. ಶ್ರೀನಿವಾಸ್ ಗೌಡ ಎಂಬುವರ ಜೊತೆ ಹಣದ ವ್ಯವಹಾರಕ್ಕೆ ಕಿರಿಕ್ ಕೂಡ ಆಗಿತ್ತು. ಗುರುಪ್ರಸಾದ್‌ಗೆ ಅಭಿಮಾನಿಯಾಗಿದ್ದ ಶ್ರೀನಿವಾಸ್ ಗೌಡ 25 ಲಕ್ಷ ಹಣ ನೀಡಿದ್ದರು. ಗುರುಪ್ರಸಾದ್ ಬರವಣಿಗೆ ಮೆಚ್ಚಿ ಜೊತೆಯಲ್ಲೇ ಇದ್ದರು ಶ್ರೀನಿವಾಸ್ ಗೌಡ.
ಹಣ ವಾಪಸ್ ಕೊಡಲಾಗದೇ ಕಿರಿಕ್ ಮಾಡಿಕೊಂಡಿದ್ದರು ನಿರ್ದೇಶಕ ಗುರುಪ್ರಸಾದ್ ಅವರು. ಈ ಬಗ್ಗೆ ಕೋರ್ಟ್ ಮೆಟ್ಟಿಲೇರಿದ್ದ, ಗುರುಪ್ರಸಾದ್ ವಿರುದ್ದ ಕಾನೂನು ಸಮರ ಸಾರಿದ್ದರು. ಅಕ್ಟೋಬರ್ 24ರಂದು ಇದ್ದ ಕೋರ್ಟ್‌ವಿಚಾರಣೆಗೂ ಹಾಜರಾಗಿರಲಿಲ್ಲ ಗುರುಪ್ರಸಾದ್. ಮೆಡಿಕಲ್ ರಿಪೋರ್ಟ್ ನೀಡಿ ವಿಚಾರಣೆ ಮುಂದೂಡಿಸಿಕೊಂಡಿದ್ದರು.
ನಿನ್ನೆ ಅಂದರೆ ನವೆಂಬರ್ 2ಕ್ಕೆ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು. ಶುಭಾಶಯ ಕೋರಲು ಕರೆಮಾಡಿದವರಿಗೂ ನಾಟ್ ರೀಚಬಲ್ ಬಂದಿತ್ತು ಮೊಬೈಲ್.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
ಸುದ್ದಿದಿನಡೆಸ್ಕ್:ಸ್ಯಾಂಡಲ್‌ವುಡ್‌ನ ಖ್ಯಾತ ನಿರ್ದೇಶಕ ʻಮಠʼ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ.
52 ವರ್ಷದ ಕನಕಪುರ ಮೂಲದ ಗುರುಪ್ರಸಾದ್ ಇನ್ನಿಲ್ಲಾ.. ತುಮಕೂರು ರಸ್ತೆಯ ಅಪಾರ್ಟ್‌ಮೆಂಟ್‌ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲದ ಸುಳಿಗೆ ಸಿಲುಕಿದ್ದ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಠ ಸಿನಿಮಾ ಮೂಲಕ ನಿರ್ದೇಶಕರಾಗಿ ಚಂದನವನಕ್ಕೆ ಪಾದಾರ್ಪಣೆ ಮಾಡಿದ್ದರು. ಮಠ, ಎದ್ದೇಳು ಮಂಜುನಾಥ್ ಚಿತ್ರದ ಮೂಲಕ ಮನೆಮಾತಾಗಿದ್ದರು.
ನಿರ್ದೇಶಕ ʻಮಠʼ ಗುರುಪ್ರಸಾದ್ ಅವರು ನವೆಂಬರ್ 02, 1972 ರಂದು ರಾಮನಗರದಲ್ಲಿ ಜನಿಸಿದ್ದರು, ಅಂದರೆ ನಿನ್ನೆ ನಿರ್ದೇಶಕ ಗುರುಪ್ರಸಾದ್ ಹುಟ್ಟುಹಬ್ಬ ಇತ್ತು, ನಿನ್ನೆ ಬರ್ತ್ ಡೇ ವಿಶ್ ಮಾಡಲು ಕರೆಮಾಡಿದವರಿಗೆ ನೋ ಆನ್ಸರ್ ಅಂತ ಬರುತ್ತಿತ್ತು, ನಿರ್ದೇಶಕ ಗುರುಪ್ರಸಾದ್ ಅವರ ಮೊಬೈಲ್ ನಾಟ್ ರೀಚಬಲ್ ಆಗಿತ್ತು, ಗುರುಪ್ರಸಾದ್ ತಮ್ಮ ಜನ್ಮದಿನಕ್ಕೆ ಮುನ್ನವೇ ಜೀವನಕ್ಕೆ ಅಂತ್ಯ ಹಾಡಿಕೊಂಡಿದ್ದಾರೆ. ಬರ್ತಡೇಗೂ ಮುನ್ನವೇ ಡೆತ್ ಡೇ ಮಾಡಿಕೊಂಡ ಗುರುಪ್ರಸಾದ್..!
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕಿಚ್ಚ ಸುದೀಪ್ ತಾಯಿ ನಿಧನ
ಸುದ್ದಿದಿನ,ಡೆಸ್ಕ್:ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಸರೋಜಾ ಕೊನೆಯುಸಿರೆಳೆದರು.
ಅವರ ಪಾರ್ಥಿವ ಶರೀರವನ್ನು ಮಧ್ಯಾಹ್ನ 12 ಗಂಟೆಯ ಸುಮಾರಿಗೆ ಸುದೀಪ್ ಅವರ ಜೆಪಿ ನಗರ ನಿವಾಸಕ್ಕೆ ತರಲಾಗುವುದು. ಅಲ್ಲೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ4 days ago
ಸಿಕ್ಕಾಬಟ್ಟೆ ಸಾಲ, ಸಾಲು ಸಾಲು ಚೆಕ್‌ಬೌನ್ಸ್ ಕೇಸ್ ; ನಿರ್ದೇಶಕ ಗುರುಪ್ರಸಾದ್ ಸಾವಿಗೆ ಕಾರಣವಾಯ್ತಾ..!?
-
ದಿನದ ಸುದ್ದಿ5 days ago
ಚನ್ನಗಿರಿ | ಪ್ರಥಮ ದರ್ಜೆ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ; ಬಹುಮಾನ ವಿತರಣೆ
-
ದಿನದ ಸುದ್ದಿ4 days ago
‘ಮಠ’ ಸಿನೆಮಾ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆ..!
-
ದಿನದ ಸುದ್ದಿ3 days ago
SC-ST | ರೈತರಿಗೆ ಪಶುಸಂಗೋಪನಾ ಚಟಿವಟಿಕೆಗಳ ತರಬೇತಿ
-
ದಿನದ ಸುದ್ದಿ3 days ago
ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಕರ್ನಾಟಕ ಜಾನಪದ ಅಕಾಡೆಮಿಯಿಂದ ಗೌರವ ಪ್ರಶಸ್ತಿ ಪ್ರಕಟ
-
ದಿನದ ಸುದ್ದಿ2 days ago
ಹಿ.ಚಿ ಸಂಭ್ರಮದಲ್ಲಿ ನೆಲಮೂಲ ಸಂಸ್ಕೃತಿಯ ಪ್ರತಿಬಿಂಬದ ಪ್ರತಿನಿಧಿಗಳಿಗೆ ಜನಪದ ರಾಜ್ಯೋತ್ಸವ ಪ್ರಶಸ್ತಿ : ಜನಪದ ಸಿರಿಯ ಜರಗನಹಳ್ಳಿ ಕಾಂತರಾಜು
-
ದಿನದ ಸುದ್ದಿ2 days ago
ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಜಗಳೂರು ಕಾಟಮ್ಮ ; ಸಾಧನೆಯ ಹೆಗ್ಗುರುತುಗಳು