ದಿನದ ಸುದ್ದಿ

ಇಂದಿನಿಂದಲೇ ಜಾರಿಗೆ ಬರುವಂತೆ ಕಚ್ಚಾ ಸೆಣಬಿನ ಮೇಲಿನ ಬೆಲೆ ಮಿತಿ ರದ್ದುಗೊಳಿಸಲು ಕೇಂದ್ರ ನಿರ್ಧಾರ

Published

on

ಸುದ್ದಿದಿನ ಡೆಸ್ಕ್ : ಇಂದಿನಿಂದಲೇ ಜಾರಿಗೆ ಬರುವಂತೆ ಕಚ್ಚಾ ಸೆಣಬಿನ ಮೇಲಿನ ಬೆಲೆ ಮಿತಿಯನ್ನು ತೆಗೆದುಹಾಕಲು ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕಳೆದ ವರ್ಷ ಸೆಪ್ಟಂಬರ್ 30ರಂದು ಸೆಣಬು ಕಾರ್ಖಾನೆಗಳು ಮತ್ತು ಇತರೆ ಬಳಕೆದಾರರು ಟಿಡಿ5 ದರ್ಜೆಯ ಸೆಣಬು ಖರೀದಿಸಲು ಪ್ರತಿ ಕ್ವಿಂಟಾಲ್ ಗೆ 6ಸಾವಿರದ 500 ರೂಪಾಯಿ ಬೆಲೆ ಮಿತಿ ನಿಗದಿಪಡಿಸಲಾಗಿತ್ತು. ಕಚ್ಚಾ ಸೆಣಬು ವ್ಯಾಪಾರದ ಮಾರುಕಟ್ಟೆಯ ಎಲ್ಲ ಆಯಾಮಗಳನ್ನು ಪರಿಶೀಲಿಸಿದ ಬಳಿಕ ಈ ನಿರ್ಧಾರ ಕೈಗೊಳ್ಳಲಾಗಿದೆ.

ಈ ದರ ಮಿತಿ ತೆರವಿನಿಂದ ರೈತರು, ಕಾರ್ಖಾನೆಗಳು ಮತ್ತು ಎಂಎಸ್‌ಎಂ ಇ ವಲಯಕ್ಕೆ ಸಹಾಯಕವಾಗಲಿದೆ ಎಂದು ಜವಳಿ ಸಚಿವಾಲಯ ಹೇಳಿದೆ. 40 ಲಕ್ಷ ರೈತರಲ್ಲದೆ, ಸುಮಾರು 7 ಲಕ್ಷ ಜನರು ಸೆಣಬು ವ್ಯಾಪಾರವನ್ನು ಅವಲಂಬಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version