ದಿನದ ಸುದ್ದಿ
ದೇಶದ ಪ್ರಮುಖ ವಿಮಾನ ನಿಲ್ದಾಣಗಳ ಮಾರಾಟಕ್ಕೆ ಸಿದ್ಧತೆ ನಡೆಸಿದ ಕೇಂದ್ರ ಸರಕಾರ
ಸುದ್ದಿದಿನ,ಹೊಸದಿಲ್ಲಿ: ದೇಶದ ಪ್ರಮುಖ ವಿಮಾನ ನಿಲ್ದಾಣಗಳಾದ ಬೆಂಗಳೂರು, ಮುಂಬಯಿ, ದಿಲ್ಲಿ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಿಗೆ ಸಂಬಂಧಿಸಿದ ತನ್ನ ಸಂಪೂರ್ಣ ಪಾಲನ್ನು ಮಾರಾಟ ಮಾಡಲು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಸಿದ್ಧತೆ ನಡೆಸಿದೆ.
ಈ ವಿಮಾನ ನಿಲ್ದಾಣಗಳನ್ನು ಈಗಾಗಲೇ ಖಾಸಗಿ ಕಂಪನಿಗಳು ನಿರ್ವಹಣೆ ಮಾಡುತ್ತಿದ್ದು, ತನ್ನ ಎಲ್ಲ ಷೇರನ್ನೂ ಅವುಗಳಿಗೆ ಮಾರಾಟ ಮಾಡಲು ನಾಗರಿಕ ವಿಮಾನಯಾನ ಸಚಿವಾಲಯ ಮುಂದಾಗಿದೆ. 2022ರಲ್ಲಿ ಆಸ್ತಿಗಳ ಮಾರಾಟದ (ಆಸ್ತಿ ನಗದೀಕರಣ) ಮೂಲಕ 20,000 ಕೋಟಿ ರೂ. ಆದಾಯ ಸಂಗ್ರಹಿಸುವ ಗುರಿಯನ್ನು ಸಚಿವಾಲಯ ಹೊಂದಿದೆ. ಇದಕ್ಕೆ ಪೂರಕವಾಗಿ ವಿಮಾನ ನಿಲ್ದಾಣಗಳ ಷೇರು ವಿಲೇವಾರಿ ನಡೆಯಲಿದೆ.
ಇದನ್ನೂ ಓದಿ | ದಾವಣಗೆರೆ | ರೋಚಕ ಹಣಾಹಣೆಯಲ್ಲಿ ಗೆದ್ದು ಬೀಗಿದ ಪವರ್ ಫೈಟರ್ಸ್
ಕರ್ನಾಟಕ ರಾಜ್ಯದಲ್ಲಿ ಈಗಾಗಲೇ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಗ್ರೂಪ್‌ಗೆ ಹಸ್ತಾಂತರ ಮಾಡಲಾಗಿದ್ದು, ಕಳೆದ ನವೆಂಬರ್‌ನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಅದಾನಿ ಕಂಪನಿ ನಿರ್ವಹಿಸುತ್ತಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243