ದಿನದ ಸುದ್ದಿ

ಪ್ರಸಕ್ತ ಶೈಕ್ಷಣಿಕ ವರ್ಷ ನಾಳೆಯಿಂದ ಆರಂಭ; ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಬರಮಾಡಿಕೊಳ್ಳಲು ಸಿದ್ಧತೆ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ರಾಜ್ಯಾದ್ಯಂತ ನಾಳೆಯಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಶೈಕ್ಷಣಿಕ ವರ್ಷ ಆರಂಭವಾಗಲಿದ್ದು, ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಅಳವಡಿಸಿಕೊಳ್ಳಲು ತೀರ್ಮಾನಿಸಲಾಗಿದೆ.

ಮಕ್ಕಳನ್ನು ಬಹಳ ಸಂತೋಷದಿಂದ ಶಾಲೆಗಳಿಗೆ ಬರಮಾಡಿಕೊಳ್ಳಲು ಶಿಕ್ಷಣ ಇಲಾಖೆ ಸಿದ್ಧತೆ ಕೈಗೊಂಡಿದೆ. ಮಕ್ಕಳು ಶಾಲೆಗೆ ಬರುವುದು ಸಂಭ್ರಮದ ಕ್ಷಣ. ಮೊದಲ ಸಲವಂತೂ ಶಾಲೆಗೆ ಕಾಲಿಡುತ್ತಿರುವ ವಿದ್ಯಾರ್ಥಿಗಳಿಗೆ ಶಾಲೆ, ದೇವಸ್ಥಾನ.

ವಿದ್ಯಾಮಂದಿರಕ್ಕೆ ಕಾಲಿಡುವಂತೆ ಸುಂದರವಾದ ಪರಿಸರ ನಿರ್ಮಾಣವಾಗಬೇಕು. ಮಕ್ಕಳು ಶಾಲೆಗೆ ಬರುವಾಗ ಸಂತೋಷದಿಂದ ಬರಬೇಕು. ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಸಿಹಿಯನ್ನು ಹಂಚಬೇಕು ಎಂದು ಅಗತ್ಯ ವ್ಯವಸ್ಥೆ ಮಾಡಲಾಗಿದೆ.

ಸರ್ಕಾರಿ ಶಾಲೆಗಳಲ್ಲಿ ಸಿಹಿಖಾದ್ಯಗಳನ್ನು ಮಾಡಿ ಮಕ್ಕಳಿಗೆ ವಿತರಿಸಲು ಶಿಕ್ಷಣ ಇಲಾಖೆ ಮುಂದಾಗಿದ್ದು, ಶಾಲೆಯ ಮುಖ್ಯ ಶಿಕ್ಷಕರು ಸ್ಥಳೀಯ ಜನಪ್ರತಿನಿಧಿಗಳು ಶಾಲೆಗೆ ಶ್ರಮದಾನ ಮೂಲಕ ಸರ್ಕಾರಿ ಶಾಲೆಯ ಅಭಿವೃದ್ಧಿಯ ಜೊತೆ ಮಕ್ಕಳನ್ನು ಶಾಲೆಗೆ ಖುಷಿಯಿಂದ ಬರುವಂತೆ ನೋಡಿಕೊಳ್ಳುವ ಸಲುವಾಗಿ ಇಲಾಖೆ ಸಿಹಿ ವಿತರಣೆಯನ್ನು ಮಾಡುತ್ತಿದೆ.

ದಾವಣಗೆರೆ ಜಿಲ್ಲೆಯಲ್ಲಿ 587ಕಿರಿಯ ಪ್ರಾಥಮಿಕ 947ಹಿರಿಯ ಪ್ರಾಥಮಿಕ ಮತ್ತು 503ಪ್ರೌಢಶಾಲೆಗಳು ಸೇರಿದಂತೆ ಒಟ್ಟಾರೆ 2 ಸಾವಿರದ 960ಶಾಲೆಗಳು ಮಕ್ಕಳ ಸ್ವಾಗತಕ್ಕೆ ಸಜ್ಜುಗೊಂಡಿದ್ದು, ನಾಳೆಯಿಂದಲೇ ದಾಖಲಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಿ.ಆರ್. ತಿಪ್ಪೇಶಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version